ಮೈಸೂರು: ಮಂಗಳೂರು ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ನಿನ್ನೆ ಸಂಜೆ ನಡೆದ ಆಟೋ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರ ತಂಡ ಮಂಗಳೂರು ಮೂಲದ ಇಬ್ಬರನ್ನು ವಶಕ್ಕೆ ಪಡೆದಿದೆ.
ಮೈಸೂರಿನ ಲೋಕನಾಯಕ ನಗರದ ಮನೆಯೊಂದರ ಮೇಲೆ ದಾಳಿ ನಡೆಸಿರುವ ಸಿಸಿಬಿ ಮತ್ತು ಮೇಟಗಳ್ಳಿ ಠಾಣೆ ಪೊಲೀಸರು ಇಬ್ಬರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ.
ನಿನ್ನೆ ಆಟೋದಲ್ಲಿ ಪ್ರಯಾಣಿಸಿದ್ದ ಶಂಕಿತ ವ್ಯಕ್ತಿಗೆ ಮೊಬೈಲ್ ನೀಡಿದ್ದ ಎನ್ನಲಾದ ವ್ಯಕ್ತಿಯನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಈತ 10ಕ್ಕೂ ಹೆಚ್ಚು ಮೊಬೈಲ್ ಗಳನ್ನು ಆತ ಶಂಕಿತ ಭಯೋತ್ಪಾದಕನಿಗೆ ನೀಡಿದ್ದಾನೆ ಎನ್ನಲಾಗಿದೆ.
ಮಂಗಳೂರು ಪೊಲೀಸರು ತಂಡವು ಮೈಸೂರಿಗೆ ಬಂದಿದ್ದು, ಇಲ್ಲಿ ಜಂಟಿ ಕಾರ್ಯಾಚರಣೆ ಕೈಗೊಂಡು ವಿಚಾರಣೆ ನಡೆಸುತ್ತಿದೆ.