Connect with us

DAKSHINA KANNADA

ಮಂಗಳೂರು: ‘ಬ್ಯಾರಿ ತಾಲೀಮು ಜಲ್ಸ್ -2022’

Published

on

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಎಮ್.ಜಿ.ಎಮ್ ತಾಲೀಮು ಸ್ಫೋಟ್ಸ್ (ರಿ) ಗುರುಪುರ ಇದರ ಸಹಕಾರದಲ್ಲಿ “ಬ್ಯಾರಿ ತಾಲೀಮು ಜಲ್ಸ್ -2022 “ಕಾರ್ಯಕ್ರಮವು ಗುರುಪುರ ಕೈಕಂಬದಲ್ಲಿ ಯಶಸ್ವಿಯಾಗಿ ನಡೆಯಿತು.


ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬ್ಯಾರಿ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಮಾತನಾಡಿ, ಸರ್ಕಾರ ಬದಲಾದಾಗ ಅಕಾಡೆಮಿ ಅಧ್ಯಕ್ಷರು ಬದಲಾಗ್ತಾರೆ. ಆದರೆ ಅಕಾಡೆಮಿ ಪಕ್ಷದ್ದಾಗಿರುವುದಿಲ್ಲ. ಸರ್ಕಾರದ ಅಕಾಡೆಮಿ ಆಗಿರುತ್ತದೆ. ನಾನು ಈವರೆಗೂ ಅಕಾಡೆಮಿಯಲ್ಲಿ ರಾಜಕೀಯ ಮಾಡಿಲ್ಲ’ ಎಂದರು.

ಎಸ್.ವೈ.ಎಸ್ ಯುನಿಟ್, ಗುರುಪುರ ಕೈಕಂಬದ ಅಧ್ಯಕ್ಷ ಎಮ್.ಹೆಚ್. ಮೊಹಿಯುದ್ದೀನ್ ಹಾಜಿ ಅಡ್ಡೂರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಗುರುಪುರ ಗ್ರಾಮ ಪಂಚಾಯತ್ ನ ಅಧ್ಯಕ್ಷ ಯಶವಂತ ಶೆಟ್ಟಿ , ಬಹುಭಾಷಾ ಕವಿ ಮಹಮ್ಮದ್ ಬಡ್ಡೂರು, ಗಂಜಿಮಠ ಗ್ರಾಮ ಪಂಚಾಯತ್ ನ ಅಧ್ಯಕ್ಷ ನೋಣಯ್ಯ ಕೋಟ್ಯಾನ್ , ಗುರುಪುರ ಗ್ರಾಮ ಪಂಚಾಯತ್ ಸದಸ್ಯ ರಾಜೇಶ್ ಕುಮಾರ್ , ಗ್ರಾಮ ಪಂಚಾಯತ್ ಸದಸ್ಯ ಎ.ಕೆ ರಿಯಾಜ್,

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಪುರಸ್ಕೃತ ಲಯನ್ ಇ.ಕೆ.ಎ ಸಿದ್ದೀಕ್ ಅಡ್ಡೂರು, ಇಬ್ರಾಹಿಂ ಸಮಾಜ ಸೇವಕ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಯು.ಪಿ.ಇಬ್ರಾಹಿಂ ಬಜ್ಪೆ, ಅಖಿಲ ಭಾರತ ಬ್ಯಾರಿ ಪರಿಷತ್ ನ ಅಧ್ಯಕ್ಷ ಜಿ.ಎಮ್ .ಶಾಹುಲ್ ಹಮೀದ್ ಹಾಜಿ ಮೆಟ್ರೋ, ಸಮಾಜ ಸೇವಕರು ಹಾಗೂ ಉದ್ಯಮಿ ಗುರುಪುರ ಅಬ್ದುಲ್ ಲತೀಫ್,


ಮದರಸ ಮ್ಯಾನೇಜ್ ಮೆಂಟ್ ಗುರುಪುರ ರೇಂಜ್ ನ ಅಧ್ಯಕ್ಷ ಹಾಗೂ ಸಮಾಜ ಸೇವಕ ನೌಶಾದ್ ಹಾಜಿ, ಆದರ್ಶ್ ಗ್ರೂಪ್ ಆಫ್ ಇನ್ಸಿಟ್ಯೂಷನ್ ನಿರ್ದೇಶಕ ಹಾಗೂ ಸಮಾಜ ಸೇವಕ ಆಸಿಫ್ ಸೂರಲ್ಪಾಡಿ , ಉಮ್ಮಗ್ ಒರು ಅಗ ಸಂಸ್ಥೆಯ ಅಧ್ಯಕ್ಷ ಮುಸ್ತಫ ಇಂಜಿನಿಯರ್ ದೆಮ್ಮಲೆ ಅಡ್ಡೂರು, ತಕ್ವಿಯತುಲ್ ಇಸ್ಲಾಂ ಮದರಸದ ಅಧ್ಯಕ್ಷ ಅನ್ಸಾರ್ ಇಂಜಿನಿಯರ್ ಅದ್ಯಪಾಡಿ, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.


ವಿಶೇಷ ಆಹ್ವಾನಿತರಾಗಿ ಚಲನಚಿತ್ರ ನಿರ್ದೇಶಕ ಇಸ್ಮಾಯಿಲ್ ಮೂಡುಶೆಡ್ಡೆ, ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ ಫ್ಲೋರಾ ಕ್ಯಾಸ್ಟಲಿನೋ, ಸಮಾಜ ಸೇವಕ, ಉದ್ಯಮಿ ಎಮ್. ಎಸ್ ಶೇಖ್ ಮೋನು ಅಡ್ಡೂರು, ಎದುರು ಪದವು ಜುಮ್ಮಾ ಮಸೀದಿಯ ಅಧ್ಯಕ್ಷ ಹನೀಫ್, ಉದ್ಯಮಿ ಎಮ್ ಜಿ ಅಬ್ದುಲ್ ಬಶೀರ್ ಗುರುಪುರ, ಫ್ರೆಂಡ್ಸ್ ಸರ್ಕಲ್ ಕೆ ಗುರುಪುರ ಕೈಕಂಬ ಇದರ ಅಧ್ಯಕ್ಷ ಅಬ್ದುಲ್ಲಾ ಮೇಫಾ, ಐಡಿಯಲ್ ಮರ್ಕಜ್ ಕೈಕಂಬ ಇಸ್ಮಾಯಿಲ್ ಬಶೀರ್, ಸಮಾಜ ಸೇವಕ, ಉದ್ಯಮಿ ಎ.ಕೆ. ಹಾರೀಸ್ ಅಡ್ಡೂರು,


ಸಮಾಜ ಸೇವಕ ಅಡ್ಡೂರು ಡಿ.ಎಸ್.ರಫೀಕ್, ಮೋದಿ ಪರಿವಾರ್ ರಿಕ್ಷಾ ಚಾಲಕರು ಕೈಕಂಬ ಇದರ ಅಧ್ಯಕ್ಷ ಸತೀಶ್ ಜೋಗಿ ಮಟ್ಟಿ, ಅಬ್ದುಲ್ ಕಾದರ್ ಎನ್ ಕೆ ನಡುಗುಡ್ಡೆ, ಬಾಮಿ ಆಂಗ್ಲಮಾಧ್ಯಮ ಶಾಲೆ ತೆಂಕುಳಿಪಾಡಿಯ ಗುರುಪುರದ ನಿಕಟಪೂರ್ವ ಪ್ರಾಂಶುಪಾಲ ಹೆಚ್ ನಾಸಿರ್ ಮಾಸ್ಟರ್ ಹಿರೇಬಂಡಾಡಿ,

ಎಸ್.ವೈ.ಎಸ್ ಯುನಿಟ್ ಗುರುಪುರ ಕೈಕಂಬದ ನಿರ್ದೇಶಕ ಹಂಝ ಕೈಕಂಬ, ಎಮ್.ಜೆ. ಎಮ್ . ತಾಲೀಮು ಸ್ಫೋಟ್ಸ್ (ರಿ) ಗುರುಪುರದ ಕಾರ್ಯದರ್ಶಿ ಎಂ.ಜಿ ಅಬ್ದುಲ್ ಸಲಾಂ ಗುರುಪುರ, ಅನ್ಸಾರ್, ಇನ್ ಬಾಕ್ಸ್ ಮೂಡಬಿದಿರೆ,
ಬದ್ರುದ್ದೀನ್ ,ಇನ್ ಬಾಕ್ಸ್ ಮೂಡಬಿದಿರೆ ಇವರುಗಳು ಭಾಗವಹಿಸಿದರು. ಬಳಿಕ ಅಕಾಡೆಮಿ ವತಿಯಿಂದ ವಿಕಾಯ ಕೈಕಂಬ ಎಸ್ ಕೆಎಸ್ ಎಸ್ ಎಫ್ ಗುರುಪುರ ಕೈಕಂಬ (ಸಮಾಜ ಸೇವೆ), ಸಹಾಯ್ ಎಸ್ ಎಸ್ ಎಫ್ ಗುರುಪುರ ಕೈಕಂಬ (ಸಮಾಜ ಸೇವೆ), ಮಹಮ್ಮದ್ ಕುಂಞ (ಗುರುಕುಲ ಪ್ರಶಸ್ತಿ ವಿಜೇತರು),

ಮುಝಮ್ಮಿಲ್ ನೂಯಿ (ಸಮಾಜಸೇವೆ), ಎ.ಕೆ.ಇಮ್ರಾನ್ ಅಡ್ಡೂರು (ಸಮಾಜ ಸೇವೆ), ಅಬ್ದುಲ್ ಜಲೀಲ್ ಅಡ್ಡೂರು (ಸಮಾಜ ಸೇವೆ), ಕಲಂದರ್ ಬಜ್ಪೆ (ಸಾಹಿತಿ ಕವಿ ಚಿಂತಕರು), ತಾಜುದ್ದೀನ್ ಅಮ್ಮುಂಜೆ (ಸಾಹಿತಿ ಗಾಯಕರು), ಝಕರೀಯ ಅಡ್ಡೂರು (ಸೌಹಾರ್ದತೆ), ಅರ್ಫರಾಝ್ ಉಳ್ಳಾಲ (ಗಾಯಕರು), ಇಸ್ಮಾಯಿಲ್ ಮೂಡುಶೆಡ್ಡೆ (ಚಲನಚಿತ್ರ ನಿರ್ದೇಶಕರು), ಫ್ರೆಂಡ್ಸ್ ಸರ್ಕಲ್ ಕೈಕಂಬ (ಸಮಾಜ ಸೇವೆ),

ಎಮ್ ಎಚ್ ಮುಹಿಯ್ಯದ್ದೀನ್ ಅಡ್ಡೂರು (ಸಮಾಜ ಸೇವೆ), ಅಝೀಝ್ ಕಂದಾವರ (ಸಮಾಜ ಸೇವೆ ), ಮಯ್ಯದ್ದೀ ಉಳಾಯಿಬೆಟ್ಟು (ಧಾರ್ಮಿಕ )ಇವರನ್ನು ಸನ್ಮಾನಿಸಲಾಯಿತು. ತದನಂತರ ಎಮ್.ಜಿ.ಎಮ್ ತಾಲೀಮು ಸ್ಫೋರ್ಟ್ಸ್ ಕ್ಲಬ್ ಗುರುಪುರ ಇವರಿಂದ ತಾಲೀಮು ಪ್ರದರ್ಶನ ಯಶಸ್ವಿಯಾಗಿ ನಡೆಯಿತು.

ಹಸನಬ್ಬ ಮೂಡಬಿದಿರೆ ಇವರಿಂದ ಬ್ಯಾರಿ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಿತು. ಮಹಮ್ಮದ್ ಕುಂಞ ಸ್ವಾಗತಿಸಿದರು. ಕಾರ್ಯಕ್ರಮದ ಸದಸ್ಯ ಸಂಚಾಲಕ ಅಕಾಡೆಮಿಯ ಸದಸ್ಯರಾದ ಶಂಶೀರ್ ಬುಡೋಳಿ ಕಾರ್ಯಕ್ರಮ ನಿರೂಪಿಸಿ ಧನ್ಯವಾದಗೈದರು.

DAKSHINA KANNADA

ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!

Published

on

ಮಂಗಳೂರು: ಮಂಗಳೂರು ಸಬ್ ಜೈಲಿನಲ್ಲಿದ್ದ ಕೇರಳ ಮೂಲದ ಖೈದಿಯೊಬ್ಬ ಆಸ್ಪತ್ರೆಯಲ್ಲೇ ಕುಣಿಕೆಗೆ ಕೊರಳೊಡ್ಡಿ ಜೀವಾಂತ್ಯಗೊಳಿಸಿದ್ದಾನೆ. ಕೊಣಾಜೆಯ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2022 ರಲ್ಲಿ ಈತ ಬಂಧಿತನಾಗಿದ್ದ . ಕೇರಳ ಮೂಲದವನಾಗಿದ್ದ ಮಹಮ್ಮದ್ ನೌಫಲ್ ಜೀವಾಂತ್ಯಗೊಳಿಸಿದ ಖೈದಿಯಾಗಿದ್ದಾನೆ. ಕೆಲ ಸಮಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಈತನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಏಪ್ರಿಲ್ 25 ರಂದು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಯ ಸೆಲ್ ವಾರ್ಡ್ ಗೆ ದಾಖಲಿಸಲಾಗಿತ್ತು. ಸೆಲ್ ವಾರ್ಡನಲ್ಲಿ ಇರುವಾಗಲೇ ಈತ ಜೀವಾಂತ್ಯಗೊಳಿಸಿದ್ದಾನೆ. ಈತನನ್ನು ಉಳಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಗಳ ನಡೆಸಿದರಾದ್ರೂ ಸಾದ್ಯವಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

 

Continue Reading

DAKSHINA KANNADA

15 ಸಾವಿರ ಸಂಬಳ..! ಮನೆಯಲ್ಲಿ ಕಂತೆ ಕಂತೆ ನೋಟು..! ED ಅಧಿಕಾರಿಗಳೇ ಶಾಕ್..!

Published

on

ಮಂಗಳೂರು ( ಜಾರ್ಖಂಡ್‌ ): ಆತ ತಿಂಗಳಿಗೆ 15 ಸಾವಿರ ಸಂಬಳ ಪಡೆಯುವ ಒಬ್ಬ ಸಾಮಾನ್ಯ ನೌಕರ. ಆದ್ರೆ ಆತನ ಮನೆಗೆ ಇಡಿ ದಾಳಿ ಮಾಡಿ ಬರೋಬ್ಬರಿ 30 ಕೋಟಿ ಹಣವನ್ನು ಜಪ್ತಿ ಮಾಡಿದೆ. ಇದು ಜಾರ್ಖಂಡ್‌ನಲ್ಲಿ ನಡೆದ ಘಟನೆಯಾಗಿದ್ದು, ಹತ್ತು ಸಾವಿರ ಲಂಚ ಪ್ರಕರಣದ ಸಂಬಂಧ ತನಿಖೆ ನಡೆಸಿದ್ದ ಇಡಿ  ಸಾಮಾನ್ಯ ನೌಕರನ ಮನಗೆ ದಾಳಿ ಮಾಡಿತ್ತು. ಅಲ್ಲಿ ಅಡಗಿಸಿಟ್ಟಿದ್ದ ಹಣ ನೋಡಿ ಇಡಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಹಣ ಎಣಿಸಲು ಮೆಷಿನ್ ಹಾಗೂ ಹೆಚ್ಚುವರಿ ನೌಕರರನ್ನು ಮನೆಗೆ ಕರೆಸಿಕೊಂಡಿದ್ದಾರೆ.

ನೌಕರನ ಮನೆಗೆ ಲಂಚದ ಹಣ…!

ಜಾರ್ಖಂಡ್‌ ನ ಸಚಿವ ಅಲಂಗೀರ್ ಆಲಂ ಅವರ ಖಾಸಗಿ ಕಾರ್ಯದರ್ಶಿ ಮನೆ ಮೇಲೆ ರಾಂಚಿಯ ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಅಲಂಗೀರ್ ಆಲಂ ಅವರ ಸಚಿವಾಲಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಅಲ್ಲಿನ ಲಂಚದ ಹಣ ನೌಕರನ ಮನೆಗೆ ಹೋಗುತ್ತದೆ ಅನ್ನೋ ಮಾಹಿತಿ ಸಿಕ್ಕಿತ್ತು. ಹೀಗಾಗಿ ಸಚಿವರ ಆಪ್ತ ಕಾರ್ಯದರ್ಶಿಯ ಅಡಿಯಲ್ಲಿ ಮಾಸಿಕ 15 ಸಾವಿರಕ್ಕೆ ಕೆಲಸ ಮಾಡುತ್ತಿದ್ದ ನೌಕರನ ಮನೆಗೆ ದಾಳಿ ಮಾಡಿದಾಗ ಇಷ್ಟೊಂದು ಪ್ರಮಾಣದ ಹಣ ಪತ್ತೆಯಾಗಿದೆ.

ವಿಡಿಯೋ ನೋಡಿ :

ಹತ್ತು ಸಾವಿರ ಲಂಚದ ಹಿಂದೆ ಬಿದ್ದಿದ್ದ ಇಡಿ..!

ಕಳೆದ ವರ್ಷ ಹತ್ತು ಸಾವಿರ ರೂಪಾಯಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಇಂಜೀನಿಯರ್ ಮನೆ ಮೇಲೆ ಇಡಿ ದಾಳಿ ನಡೆಸಿತ್ತು. ಈ ವೇಳೆ ಇಂಜೀನಿಯರ್ ಅವರ ಹೇಳಿಕೆಯನ್ನು ದಾಖಲಿಸಿದಾಗ ಲಂಚದ ಹಣ ಸಚಿವರಿಗೆ ತಲುಪಿಸಲಾಗುತ್ತದೆ ಎಂಬ ಸ್ಪೋಟಕ ಹೇಳಿಕೆ ನೀಡಿದ್ದರು. ಬಳಿಕ ಜಾರ್ಖಂಡ್‌ನ ಗ್ರಾಮೀಣ ಅಭಿವೃದ್ದಿ ಸಚಿವ ಅಲಂಗೀರ್ ಆಲಂ ಹಾಗೂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಹೆಸರು ಮುನ್ನಲೆಗೆ ಬಂದಿತ್ತು . ಹೀಗಾಗಿ ಸಂಜೀವ್‌ ಲಾಲ್ ಅವರ ಬಳಿ ನೌಕರನಾಗಿದ್ದ ವ್ಯಕ್ತಿಯ ಮನೆಗೆ ದಾಳಿ ಮಾಡಲಾಗಿದೆ.

ಇದನ್ನೂ ಓದಿ : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು..!

ಜಾರ್ಖಂಡ್ ಕಾಂಗ್ರೆಸ್ ಸರ್ಕಾರದ ಸಚಿವ…!

ಅಲಂಗೀರ್ ಆಲಂ ಜಾರ್ಖಂಡ್‌ನ ಪಾಕುರ್ ಕ್ಷೇತ್ರದಿಂದ ನಾಲ್ಕು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈಗ ಸರ್ಕಾರದಲ್ಲಿ ಸಂಸದೀಯ ವ್ಯವಹಾರ ಮತ್ತು ಗ್ರಾಮೀಣಾಭಿವೃದ್ದಿ ಸಚಿವರಾಗಿದ್ದಾರೆ. ಈ ಹಿಂದೆ 2006 ರಿಂದ 2009 ರ ವರೆಗೆ ಅವರು ಸ್ಪೀಕರ್ ಕೂಡಾ ಆಗಿದ್ದರು. 2023ರ ಡಿಸೆಂಬರ್‌ ತಿಂಗಳಲ್ಲಿ ಜಾರ್ಖಂಡ್‌ನ ಕಾಂಗ್ರೆಸ್‌ ರಾಜ್ಯಸಭಾ ಸದಸ್ಯ ಉದ್ಯಮಿ ಧೀರಜ್ ಸಾಹು ಮನೆ ಮೇಲೂ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಮನೆಯಲ್ಲಿ 350 ಕೋಟಿಯಷ್ಟು ಹಣ ಪತ್ತೆಯಾಗಿತ್ತು. ಈ ವೇಳೆ ಧೀರಜ್ ಸಾಹು ಅದು ಮದ್ಯದ ವ್ಯವಹಾರದ ಹಣವಾಗಿದ್ದು, ಅದಕ್ಕೂ ಪಕ್ಷಕ್ಕೂ ಸಂಬಂಧ ಇಲ್ಲ ಎಂದು ಹೇಳಿದ್ದರು.

Continue Reading

DAKSHINA KANNADA

ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು..!

Published

on

ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳದ ನಾವೂರು ಎಂಬಲ್ಲಿ ಭಾನುವಾರ(ಎ.5) ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಮತ್ತು ಇಲಿಯಾಸ್ ಅವರ ಪುತ್ರಿ ಮರಿಯಮ್ ನಾಶೀಯಾ (14 )ಮೃತಪಟ್ಟ ಬಾಲಕಿಯರು.

nethravathi river

ಮುಂದೆ ಓದಿ..; ಬರ್ಬರ ಹತ್ಯೆಯಾದ ಬ್ಯೂಟಿ ಕ್ವೀನ್.!! ಮುಳುವಾಯಿತಾ ಇನ್ಸ್ಟಾಗ್ರಾಮ್ ಪೋಸ್ಟ್‌..! ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ

ಮೂಲತಃ ನಾವೂರ ನಿವಾಸಿಯಾದ ಇಲಿಯಾಸ್ ಅವರು ಇತ್ತೀಚಿಗೆ ಉಳ್ಳಾಲದಲ್ಲಿ ಮನೆ ಕಟ್ಟಿಸಿದ್ದರು. ನಿನ್ನೆ  ನಾವೂರು ಮೈಂದಾಳದಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ಸಂಜೆ ವೇಳೆ ಮನೆಯವರ ಜತೆಗೆ ನಾವೂರಿನ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತೆರಳಿದ್ದರು. ಈ ವೇಳೆ ಮನೆ ಮಂದಿ ಇರುವಾಗಲೇ ಮಕ್ಕಳು ನೀರಿನಲ್ಲಿ ಆಟ ಆಡುತ್ತಾ ಇದ್ದರು. ಈ ಸಂದರ್ಭದಲ್ಲಿ ಇಬ್ಬರು ಮಕ್ಕಳು ಏಕಾ ಏಕಿ ನೀರಿನಲ್ಲಿ ಮುಳುಗಿದ್ದಾರೆ. ನೀರಿನಲ್ಲಿ ಮುಳುಗುವುದನ್ನು ಕಣ್ಣಾರೆ ಕಂಡರೂ ಈಜು ಬಾರದ ಕಾರಣ ಮಕ್ಕಳನ್ನು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

 

 

Continue Reading

LATEST NEWS

Trending