Saturday, August 13, 2022

ಮಂಗಳೂರು: ಕೆನರಾ ಹೈಸ್ಕೂಲ್ ‌ಅಸೋಸಿಯೇಶನ್ ಅಧ್ಯಕ್ಷ ಅಣ್ಣಪ್ಪ ಪೈ ವಿಧಿವಶ

ಮಂಗಳೂರು: ಕೆನರಾ ಹೈಸ್ಕೂಲ್ ‌ಅಸೋಸಿಯೇಶನ್ ಅಧ್ಯಕ್ಷ ಅಣ್ಣಪ್ಪ ಪೈ (74) ಅವರು ಬೆಂಗಳೂರಿನಲ್ಲಿ ನಿನ್ನೆ ದೈವಾಧೀನರಾಗಿದ್ದಾರೆ.


ಸಾಹುಕಾರ್ ಬಾಬಾ ಪೈ ಮನೆತನದವರಾದ ಅಣ್ಣಪ್ಪ ಪೈ ರಾಘವೇಂದ್ರ ರಂಗ ಪೈ ಅವರ ಸುಪುತ್ರರಾಗಿದ್ದು ಖ್ಯಾತ ಸಂಸ್ಥೆ ಮಾಡರ್ನ್ ಕಿಚನ್ ಇದರ ಪಾಲುದಾರರಾಗಿ, ಪರೋಪಕಾರಿಯಾಗಿ ಮತ್ತು ಸಮಾಜದ ಸೇವಾ ಚಟುವಟಿಕೆಗಳಲ್ಲಿ ತೊಡಗಿ ಜನಪರ ಕಾಳಜಿಯನ್ನು ಹೊಂದಿದ್ದರು.

ಅಷ್ಟೇ ಅಲ್ಲದೆ ಜಿಲ್ಲಾ ಸಣ್ಣ ಕೈಗಾರಿಕಾ ಅಸೋಸಿಯೇಶನ್ ಅಧ್ಯಕ್ಷರಾಗಿ, ರೋಟರಿ ಕ್ಲಬ್ ಅಧ್ಯಕ್ಷರಾಗಿ, ಮಾರ್ಡನ್ ಕಿಚನ್ & ಪ್ರೆಸ್ಟೋ ಬ್ರಾಂಡಿನ ಉತ್ಪನ್ನಗಳ ಯಶಸ್ಸಿನ ಹಿಂದಿನ ಪ್ರೇರಣಾ ಶಕ್ತಿಯಾಗಿದ್ದರು.

ಅವರು ಪತ್ನಿ, ಇಬ್ಬರು ಪುತ್ರರಾದ ಒರೆಕಲ್ ಕಂಪೆನಿಯ ಅರವಿಂದ ಪೈ, ಡೆಲಿವರಿ ಲಾಜಿಸ್ಟಿಕ್ ನಿರ್ದೇಶಕ ಅಜಿತ್ ಪೈ ಹಾಗೂ ಅಪಾರ ಸಂಖ್ಯೆಯ ಬಂಧು, ಮಿತ್ರರನ್ನು ಅಗಲಿದ್ದಾರೆ.

ಗುರುವಾರ ಮಧ್ಯಾಹ್ನ ಮಂಗಳೂರಿನಲ್ಲಿರುವ ಅವರ ಸ್ವಗೃಹದಲ್ಲಿ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ.

LEAVE A REPLY

Please enter your comment!
Please enter your name here

Hot Topics

ಆ.15ರಂದು ಸಾರ್ವಜನಿಕರ ವೀಕ್ಷಣೆಗೆ ಪಿಲಿಕುಳ ತೆರೆದಿರುತ್ತದೆ

ಮಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಮೃಗಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ತಾರಾಲಯ, ಲೇಕ್ ಗಾರ್ಡನ್, ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕೃತಿ ಗ್ರಾಮವು ಸಾರ್ವಜನಿಕರ ವೀಕ್ಷಣೆಗೆ ಆ.15ರಂದು ತೆರೆಯಲಾಗುವುದು ಎಂದು...

ದ.ಕದಲ್ಲಿರುವ ಅಪಾಯಕಾರಿ ಕಾಲುಸಂಕಗಳ ಪಟ್ಟಿ ನೀಡಲು ಡಿಸಿ ಆರ್ಡರ್

ಮಂಗಳೂರು: ದ.ಕ ಜಿಲ್ಲೆಯಲ್ಲಿ ಯಾವ ಯಾವ ಕಡೆಯಲ್ಲೆಲ್ಲಾ ಅಪಾಯಕಾರಿ ಕಾಲುಸಂಕಗಳಿವೆಯೋ ಅದರ ಪಟ್ಟಿ ಮಾಡುವಂತೆ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಎಲ್ಲಾ ನಗರ ಹಾಗೂ ಗ್ರಾಮೀಣ ಸ್ಥಳೀಯ ಆಡಳಿತ ಸಂಸ್ಥೆಗಳಿಗೆ...

ಬಂಟ್ವಾಳ: ವಿಶ್ವ ಹಿಂದೂ ಪರಿಷದ್, ಬಜರಂಗದಳದಿಂದ ರಕ್ಷಾಬಂಧನ

ಬಂಟ್ವಾಳ: ವಿಶ್ವ ಹಿಂದೂ ಪರಿಷದ್, ಬಜರಂಗದಳ, ಜೈ ಶ್ರೀರಾಮ್ ಶಾಖೆ ಕುಂಟಾಲಫಲ್ಕೆ ಪೆರಿಯಾರು ದೋಟ ಘಟಕದ ವತಿಯಿಂದ ಇತ್ತೀಚೆಗೆ ರಕ್ಷಾಬಂಧನ ಕಾರ್ಯಕ್ರಮ ನಡೆಯಿತು.ಶ್ರೀ ದೇವಿ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯೋಗೀಶ್...