Thursday, February 9, 2023

ಲೋಕಾಯುಕ್ತ ದಾಳಿ ವೇಳೆ ಸಿಕ್ಕಿಬಿದ್ದ ಮನಪಾ ಅಧಿಕಾರಿ: 4 ವರ್ಷ ಜೈಲು-1 ಕೋ. ದಂಡ ವಿಧಿಸಿದ ಕೋರ್ಟ್

ಮಂಗಳೂರು: ಮಹಾನಗರ ಪಾಲಿಕೆಯ ಅಧಿಕಾರಿಯು ಆದಾಯಕ್ಕಿಂತ ಅಧಿಕ ಪ್ರಮಾಣದ ಆಸ್ತಿ ಹೊಂದಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆತನನ್ನು ಬಂಧಿಸಿದ್ದರು. ಈ ಬಗ್ಗೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಅಧಿಕಾರಿಗೆ ಶಿಕ್ಷೆ ಪ್ರಕಟಿಸಿದೆ.


ಮಂಗಳೂರು ಮನಪಾ ಹಿರಿಯ ನೈರ್ಮಲ್ಯ ನಿರೀಕ್ಷಕ ಶಿವಲಿಂಗ ಕೊಂಡಗುಳಿ ಅವರಿಗೆ ನ್ಯಾಯಾಲಯವು 4 ವರ್ಷಗಳ ಸಾದಾ ಸಜೆ ಹಾಗೂ 1 ಕೋಟಿ ರೂ. ದಂಡ ವಿಧಿಸಿ ಆದೇಶಿಸಿದೆ.

2013ರಲ್ಲಿ ಲೋಕಾಯುಕ್ತ ದಾಳಿ ವೇಳೆ ಸಿಕ್ಕಿಬಿದ್ದ ಅಧಿಕಾರಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಒಂದು ಕೋಟಿ ರೂಪಾಯಿ ದಂಡ ವಿಧಿಸಿದೆ.

ಆದಾಯಕ್ಕಿಂತ ಅಧಿಕ ಪ್ರಮಾಣದ ಆಸ್ತಿ ಹೊಂದಿರುವ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಇವರಿಗೆ ಈ ಶಿಕ್ಷೆ ವಿಧಿಸಲಾಗಿದೆ.

ಆರೋಪಿ ಶಿವಲಿಂಗ ಕೊಂಡಗುಳಿ ಆದಾಯಕ್ಕಿಂತ ಅಧಿಕ ಪ್ರಮಾಣದ ಆಸ್ತಿ ಹೊಂದಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು 2013ರ ಫೆಬ್ರವರಿ 15ರಂದು ದಾಳಿ ನಡೆಸಿ ಬಂಧಿಸಿದ್ದರು. ಈ ಬಗ್ಗೆ ಲಂಚ ವಿರೋಧಿ ಕಾಯ್ದೆ 1988ರ ಅನ್ವಯ ಪ್ರಕರಣ ದಾಖಲಿಸಲಾಗಿತ್ತು.
ಅಂದಿನ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಉಮೇಶ್ ಜಿ. ಶೇಟ್ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆಯನ್ನು 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ನಡೆಸಿದ್ದು, ಶಿವಲಿಂಗ ಕೊಂಡಗುಳಿ ಮೇಲಿನ ಆರೋಪ ಸಾಬೀತಾಗಿದೆ.

ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಬಿ.ಬಿ.ಜಕಾತಿ ಅವರು ಆರೋಪಿಗೆ ನಾಲ್ಕು ವರ್ಷಗಳ ಸಾದಾ ಸಜೆ ಹಾಗೂ 1 ಕೋಟಿ ರೂ. ದಂಡ ವಿಧಿಸಿದ್ದಾರೆ. ಆರೋಪಿ ದಂಡ ತೆರಲು ವಿಫಲನಾದಲ್ಲಿ ಮತ್ತೆ ಒಂದು ವರ್ಷ ಸಾದಾ ಸಜೆ ಅನುಭವಿಸಬೇಕೆಂದು ಆದೇಶಿಸಲಾಗಿದೆ.

ಸರ್ಕಾರದ ಪರವಾಗಿ ಕರ್ನಾಟಕ ಲೋಕಾಯುಕ್ತ ವಿಶೇಷ ಸಾರ್ವಜನಿಕ ಅಭಿಯೋಜಕರಾದ ರವೀಂದ್ರ ಮುನ್ನಿಪಾಡಿ ವಾದಿಸಿದ್ದಾರೆ‌.

LEAVE A REPLY

Please enter your comment!
Please enter your name here

Hot Topics

ಭೂಕಂಪಕ್ಕೆ ನಲುಗಿದ ಟರ್ಕಿ-ಸಿರಿಯಾ: 15,000 ದಾಟಿದ ಮೃತರ ಸಂಖ್ಯೆ-ಏರುತ್ತಲೇ ಇದೆ ಸಾವಿನ ಲೆಕ್ಕ..!

ಟರ್ಕಿ: ಭೂಕಂಪದಿಂದ ನಲುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 15,000ಕ್ಕೆ ಏರಿಕೆಯಾಗಿ. ಈ ಪೈಕಿ ಟರ್ಕಿಯಲ್ಲಿ ಒಂದರಲ್ಲಿಯೇ 12,391 ಮಂದಿ ಸಾವನ್ನಪ್ಪಿದ್ದರೆ, ಸಿರಿಯಾದಲ್ಲಿ 2,992 ಮಂದಿ ಸಾವನ್ನಪ್ಪಿದ್ದಾರೆ.ಈ ಅಂಕಿ...

ಸುರತ್ಕಲ್ ವ್ಯಾಪ್ತಿಯಲ್ಲಿ ಲಘು ಅಪಘಾತ: ಇತ್ತಂಡಗಳ ಮಧ್ಯೆ ಹೊಯ್‌ಕೈ- ಮಾತಿನ ಚಕಮಕಿ..!

ಮಂಗಳೂರು : ಮಂಗಳೂರು ಹೊವಲಯದ  ಸುರತ್ಕಲ್ ಠಾಣಾ ವ್ಯಾಪ್ತಿಯ ಗಣೇಶ್ ಪುರ ಎಂಬಲ್ಲಿ ಬುಧವಾರ ರಾತ್ರಿ ಬೈಕ್- ಕಾರ್ ನಡುವೆ ಲಘು ಅಪಘಾತ ಸಂಭವಿಸಿದ್ದು, ಇದರಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗಿ ಕೆಲ ಕಾಲ...

ಚಾರ್ಮಾಡಿಯಲ್ಲಿ ಶಿಕಾರಿಗಳ ಗುಂಡೇಟಿಗೆ ಕಡವೆ ಬಲಿ..!

ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್‌ನ ಮಲಯಮಾರುತ ಬಳಿ ನಿನ್ನೆ ನಡೆದಿದೆ.ಬೆಳ್ತಂಗಡಿ : ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ...