Tuesday, January 31, 2023

ಮಂಗಳೂರು: ತಲೆನೋವು ಬಾಧೆಗೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡ ಕಾಲೇಜು ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು

ಮಂಗಳೂರು: ತಲೆನೋವು ಬಾಧೆಗೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡ ಕಾಲೇಜು ವಿದ್ಯಾರ್ಥಿನಿಯೋರ್ವಳು ಆಸ್ಪತ್ರೆಗೆ ದಾಖಲಾಗಿ ಜೀವನ್ಮರಣ ಹೋರಾಟ ನಡೆಸುತ್ತಿರುವ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.


ಕುಮ್ಡೆಲು ನಿವಾಸಿಯಾಗಿರುವ ಈಕೆ ಮಂಗಳೂರು ಖಾಸಗಿ ಕಾಲೇಜಿನ ಅಪ್ರಾಪ್ತ ವಿದ್ಯಾರ್ಥಿನಿಯಾಗಿದ್ದಾಳೆ.

ಬಡ ಕುಟುಂಬದ ವಿದ್ಯಾರ್ಥಿನಿಯಾದ ಈಕೆಯ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಈಕೆಯು ಕೂಡಾ ಅತಿಯಾದ ತಲೆನೋವಿನಿಂದ ಬಳಲುತ್ತಿದ್ದಳು.

ಒಂದು ಕಡೆಯಿಂದ ತಾಯಿಯ ಅನಾರೋಗ್ಯ, ಇನ್ನೊಂದು ಕಡೆಯಿಂದ ಮೈಗ್ರೇನ್‌ ಸಮಸ್ಯೆ ಇವೆಲ್ಲವೂಗಳ ಜೊತೆ ಅತಿಯಾದ ಬಡತನದಿಂದ ಬೇಸತ್ತ ವಿದ್ಯಾರ್ಥಿನಿ ಮಾತ್ರೆ ಸೇವಿಸಿದ್ದಾಳಾ ? ಅಥವಾ ಕಾಲೇಜಿನಲ್ಲಿ ಏನಾದರೂ ಸಮಸ್ಯೆ ಗಳಿತ್ತಾ ? ಎಲ್ಲವೂ ಪೋಲೀಸ್ ತನಿಖೆಯಿಂದ ಬಯಲಾಗಬೇಕಾಗಿದೆ.

ಸದ್ಯ ವಿದ್ಯಾರ್ಥಿನಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶೀಘ್ರವಾಗಿ ಗುಣಮುಖವಾಗಿ ಬರಲಿ ಎಂಬುದು ಎಲ್ಲರ ಹಾರೈಕೆಯಾಗಿದೆ. ಸದ್ಯ ಸ್ಪಷ್ಟವಾದ ಯಾವುದೇ ಕಾರಣ ತಿಳಿದು ಬಂದಿಲ್ಲ.

LEAVE A REPLY

Please enter your comment!
Please enter your name here

Hot Topics

ಮಂಗಳೂರು : ಫಾರಿನ್ ಕರೆನ್ಸಿ ಕೊಡುವ ನೆಪದಲ್ಲಿ 4 ಲಕ್ಷ ಎಗರಿಸಿ  ಪರಾರಿ..!

ಮಂಗಳೂರು : ವಿದೇಶಿ ಕರೆನ್ಸಿ ಕೊಡುವ ನೆಪದಲ್ಲಿ ನಾಲ್ಕು ಲಕ್ಷ ಹಣವನ್ನು ಲಪಟಾಯಿಸಿ ವಂಚಕ ಪರಾರಿಯಾದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.ಸೌದಿ ಅರೇಬಿಯಾದ ಕರೆನ್ಸಿ ಕೊಡುವುದಾಗಿ ನಂಬಿಸಿ 4 ಲಕ್ಷ ರೂ. ಪಡೆದುಕೊಂಡು...

ಮಂಗಳೂರು: ಪಾಳುಬಾವಿಗೆ ಬಿದ್ದ 4 ಬೃಹತ್ ಹೆಬ್ಬಾವುಗಳ ರಕ್ಷಣೆ..!

ಮಂಗಳೂರು ನಗರದ ಕೊಟ್ಟಾರದ ಪೃಥ್ವಿ ಅಪಾರ್ಟ್‌ಮೆಂಟ್ ಬಳಿಯ ಪಾಳು ಬಾವಿಗೆ ಬಿದ್ದಿದ್ದ ನಾಲ್ಕು ಬೃಹತ್ ಗಾತ್ರದ ಹೆಬ್ಬಾವುಗಳನ್ನು ಪರಿಸರ ಪ್ರೇಮಿಗಳು ರಕ್ಷಿಸಿದ್ದಾರೆ.ಮಂಗಳೂರು: ಮಂಗಳೂರು ನಗರದ ಕೊಟ್ಟಾರದ ಪೃಥ್ವಿ ಅಪಾರ್ಟ್‌ಮೆಂಟ್ ಬಳಿಯ ಪಾಳು...

ಕಾರವಾರ : ಕಾಡುಹಂದಿ ಮಾಂಸ ಎಂದು ನಂಬಿಸಿ ನಾಯಿ ಮಾಂಸ ಮಾರಾಟ..! ಇಬ್ಬರ ಬಂಧನ

ಕಾಡುಹಂದಿ ಮಾಂಸ ಎಂದು ನಂಬಿಸಿ ಊರು ಹಂದಿ, ನಾಯಿ ಮಾಂಸ ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳನ್ನು ಹಿಡಿದು ಸಾರ್ವಜನಿಕರು ಥಳಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಕಾರವಾರ:...