DAKSHINA KANNADA
Mangalore: ನಿವೇಶನ ರಹಿತರಿಗೆ ಮನೆ ನಿವೇಶನ ಒದಗಿಸಲು ಒತ್ತಾಯ- ಸಿಪಿಐಎಂ
ಮಂಗಳೂರು ಮಹಾನಗರ ಪಾಲಿಕೆ ವಸತಿ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿರುವ ಸಾವಿರಾರು ಫಲಾನುಭವಿ ನಿವೇಶನರಹಿತರಿಗೆ ಕೂಡಲೇ ಮನೆ ನಿವೇಶನ ಒದಗಿಸಿಕೊಡಬೇಕೆಂದು ಮಂಗಳೂರು ಮಹಾನಗರ ಪಾಲಿಕೆ ಆಡಳಿತವನ್ನು ಹಾಗೂ ಶಾಸಕ ವೇದವ್ಯಾಸ ಕಾಮತ್ ರನ್ನು ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮಿತಿಯು ಒತ್ತಾಯಿಸಿದೆ.
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವಸತಿ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿರುವ ಸಾವಿರಾರು ಫಲಾನುಭವಿ ನಿವೇಶನರಹಿತರಿಗೆ ಕೂಡಲೇ ಮನೆ ನಿವೇಶನ ಒದಗಿಸಿಕೊಡಬೇಕೆಂದು ಮಂಗಳೂರು ಮಹಾನಗರ ಪಾಲಿಕೆ ಆಡಳಿತವನ್ನು ಹಾಗೂ ಶಾಸಕ ವೇದವ್ಯಾಸ ಕಾಮತ್ ರನ್ನು ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮಿತಿಯು ಒತ್ತಾಯಿಸಿದೆ.
ಭೂಮಿಗೆ ವಿಪರೀತ ಬೆಲೆ ಏರಿಸುವ ಮೂಲಕ ಭೂದಂಧೆಯಾಗಿ ಮಾರ್ಪಡಿಸಿರುವ ಮಂಗಳೂರು ನಗರದಲ್ಲಿ ಬಡವರು ಹಾಗೂ ಆರ್ಥಿಕವಾಗಿ ಹಿಂದುಳಿದ ಜನತೆ ಭೂಮಿ ಖರೀದಿಸಿ ಮನೆ ನಿರ್ಮಿಸುವುದು ಕನಸಿನ ಮಾತಾಗಿದೆ.
ನಗರ ಪಾಲಿಕೆ ಅಸ್ತಿತ್ವಕ್ಕೆ ಬಂದ ನಂತರ ಕಳೆದ 40 ವರ್ಷಗಳಲ್ಲಿ ಒಂದೇ ಒಂದು ತುಂಡು ಭೂಮಿಯನ್ನು ನಿವೇಶನ ರಹಿತರಿಗೆ ನೀಡದೆ ಸತಾಯಿಸಿದೆ ಮಾತ್ರವಲ್ಲ ಪ್ರತೀ ವರುಷ ವಸತಿ ಯೋಜನೆಯ ಹೆಸರಲ್ಲಿ ಅರ್ಜಿಗಳನ್ನು ಪಡೆದು ನಿವೇಶನವನ್ನು ನೀಡದೆ ವಂಚಿಸಿದೆ.
ಹೀಗೆ ಪಾಲಿಕೆ ಆಡಳಿತ ನಿವೇಶನ ನೀಡದೆ ವಂಚಿಸಿದ ಬಡ ಹಿಂದುಳಿದ ವರ್ಗದ ಕುಟುಂಬಗಳನ್ನು ಸಿಪಿಐಎಂ ಪಕ್ಷದ ನೇತೃತ್ವದಲ್ಲಿ ಹೋರಾಟ ಸಮಿತಿಗಳನ್ನು ರೂಪಿಸಿ ಕಳೆದ 10 ವರ್ಷಗಳ ಹಿಂದೆ ಸಂಘಟಿಸಿದ ಪ್ರಬಲ ಚಳುವಳಿಯ ಹಿನ್ನೆಲೆಯ ಭಾಗವಾಗಿ ಜಿಲ್ಲಾಡಳಿತ ಹಾಗು ಮನಪಾ ಹಲವಾರು ಕಡೆಗಳಲ್ಲಿ ಕನಿಷ್ಟ ನಿವೇಶಗಳನ್ನು ಗುರುತಿಸಿ G+3 ಮಾದರಿಯಲ್ಲಿ ಮನೆ ನಿರ್ಮಿಸಿ ಕೊಡುವುದಾಗಿ ಆಶ್ವಾಸನೆ ನೀಡಿತ್ತು.
ಮಾತ್ರವಲ್ಲದೆ ಶಕ್ತಿನಗರದಲ್ಲಿ ನಿವೇಶನ ಕಾದಿರಿಸಿ ಗುದ್ದಲಿ ಪೂಜೆಯನ್ನೂ ಕೈಗೊಂಡ ಪಾಲಿಕೆ ಆಡಳಿತ ಈವರೆಗೆ ವಸತಿ ಕಾಮಗಾರಿಗಳನ್ನು ಕೈಗೊಳ್ಳದೆ ಬಡವರನ್ನು ವಸತಿ ಯೋಜನೆ ಹೆಸರಲ್ಲಿ ವಂಚಿಸಿದೆ.
ಇನ್ನು ಚುನಾವಣೆಯಲ್ಲಿ ಗೆದ್ದ ಬಿಜೆಪಿಯ ಶಾಸಕ ವೇದವ್ಯಾಸ ಕಾಮತ್ ರವರು ಅದೇ ಶಕ್ತಿನಗರದ ಜಾಗ ಅರಣ್ಯ ಇಲಾಖೆಗೆ ಸೇರಿದ್ದು ಅಂತ ತಕರಾರು ಎಬ್ಬಿಸಿ ಅದನ್ನೂ ಇಲ್ಲದ ಹಾಗೆ ಮಾಡಿ ನಿವೇಶನರಹಿತರ ಆಶಾಗೋಪುರವನ್ನೇ ನಾಶ ಮಾಡಿರುತ್ತಾರೆ.
ಬಿಜೆಪಿ ಸರಕಾರದ ಅವಧಿಯ ಕಳೆದ 5 ವರ್ಷಗಳಲ್ಲಿ ನಿವೇಶನರಹಿತರಿಗಾಗಿ ಎಳ್ಳಷ್ಟೂ ಕಾಳಜಿಯಾಗಲಿ ಕನಿಷ್ಟ ನ್ಯಾಯ ಒದಗಿಸಲಾಗದ ಬಿಜೆಪಿ ಸರಕಾರ, ಹಾಗು ಸ್ಥಳೀಯ ಶಾಸಕ ವೇದವ್ಯಾಸ ಕಾಮತ್ ಮತ್ತು ಪಾಲಿಕೆ ಆಡಳಿತ ಬಡಜನ ವಿರೋಧಿಯಾಗಿ ವರ್ತಿಸಿದೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಸರಕಾರ, ಪಾಲಿಕೆ ಆಡಳಿತ ಹಾಗೂ ಸ್ಥಳೀಯ ಶಾಸಕ ವೇದವ್ಯಾಸ ಕಾಮತ್ ಈ ಬಗ್ಗೆ ಕೂಡಲೇ ಎಚ್ಚೆತ್ತು ನಿವೇಶನ ರಹಿತರಿಗೆ ಮನೆ ನಿವೇಶನ ಒದಗಿಸಿ ಕೊಡುವಲ್ಲಿ ಸೂಕ್ತ ಕ್ರಮಕೈಗೊಳ್ಳಲು ಮುಂದಾಗಬೇಕು.
ಇಲ್ಲದಿದ್ದಲ್ಲಿ ನಿವೇಶನ ರಹಿತರ ಪರವಾಗಿ ಪ್ರಬಲ ಚಳುವಳಿಯನ್ನು ರೂಪಿಸಲು ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮಿತಿಯು ನಿರ್ಧರಿಸಿದೆ ಎಂದು ಸಿಪಿಐಎಂ ಪಕ್ಷದ ಕಾರ್ಯದರ್ಶಿ ಸಂತೋಷ್ ಬಜಾಲ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
DAKSHINA KANNADA
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆ
ಮಂಗಳೂರು: ಮಂಗಳೂರು ಸೊಬೆಸ್ಟಿಯನ್ ಹಾಲ್ ನಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆಯಾಗಿದ್ದಾರೆ.
ಸಂಚಾಲಕರಾಗಿ ಕರುಣಾಕರ್ ಕಾನಂಗಿ ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಬಂಟ್ವಾಳ, ಕೋಶಾಧಿಕಾರಿಯಾಗಿ ನವೀನ್ ರೈ ಪಂಜಳ, ಉಪಾಧ್ಯಕ್ಷರಾಗಿ ರಮೇಶ್ ಕಲಾ ಶ್ರೀ ಮಂಗಳೂರು, ಜಯಕರ್ ಸುವರ್ಣ ಉಡುಪಿ, ಜೊತೆ ಕಾರ್ಯದರ್ಶಿ ಹರೀಶ್ ಪಿ ಕೋಟ್ಯಾನ್ ಮುಲ್ಕಿ, ಹೆರಿಕ್ ಡಿಸೋಜ ಬ್ರಹ್ಮಾವರ, ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್ ಕಾಪು, ರಮೇಶ್ ಹೊಸಬೆಟ್ಟು ಸುರತ್ಕಲ್, ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್ ಮೂಡಬಿದ್ರಿ, ಕ್ರೀಡಾ ಕಾರ್ಯದರ್ಶಿ ರಂಜಿತ್ ಕುಂದಾಪುರ, ಭಾರದ್ವಾಜ್ ಬೆಳ್ತಂಗಡಿ, ಸಾಂಸ್ಕೃತಿಕ ಕಾರ್ಯದರ್ಶಿ ಚಿದಾನಂದ್ ಉಳ್ಳಾಲ ಮಾಧ್ಯಮ ಕಾರ್ಯದರ್ಶಿ ಹರೀಶ್ ರಾವ್ ಆಯ್ಕೆಯಾಗಿದ್ದಾರೆ.
ಈ ಚುನಾವಣಾ ಪ್ರಕ್ರಿಯೆಯನ್ನು ಎಸ್ ಕೆಪಿಎ ಯ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಆನಂದ್ ಬಂಟ್ವಾಳ್ ಅವರು ನಡೆಸಿಕೊಟ್ಟರು.
DAKSHINA KANNADA
ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನ-ಇಬ್ಬರು ಅರೆಸ್ಟ್..!
ಉಳ್ಳಾಲ: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಯನ್ನು ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಹೊರವಲಯದ ಉಳ್ಳಾಲ ಸಮೀಪದ ಸಿಗ್ರೌಂಡ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಸ್ತಿಕಟ್ಟೆ ಆಝಾದನಗರದ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪುರ ದ ಸಮೀರ್ ಎಂಬವರನ್ನು ಬಂಧಿಸಲಾಗಿದೆ.
ಈ ಇಬ್ಬರು ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ 14ಗ್ರಾಂ ಎಂಡಿಎಂಎ ಮಾರಾಟ ಮಾಡಲು ಯತ್ನಿಸುವ ಸಂದರ್ಭ ಮಾಹಿತಿ ಪಡೆದ ಉಳ್ಳಾಲ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿಗಳನ್ನು ಬಂಧಿಸಿ, 14 ಗ್ರಾಂ ಎಂಡಿಎಂಎ ಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಳೆದ ಎರಡು ದಿನಗಳ ಹಿಂದಷ್ಟೇ ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಬಳಿಯಿಂದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.
ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ, ಪಿಎಸ್ಐ ಶೀತಲ್ ಹಾಗೂ ಸಿಬ್ಬಂದಿಗಳಾದ ರಂಜಿತ್, ಅಕ್ಬರ್, ಅಶೋಕ್, ಮಂಜು, ವೆಂಕಟೇಶ್ ಭಾಗವಹಿಸಿದ್ದರು.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.
DAKSHINA KANNADA
ಮನೆಯ ಯಜಮಾನನ್ನು ಕಟ್ಟಿ ಹಾಕಿ ನಗ, ನಗದು ದರೋಡೆ- 6 ಜನ ಬಂಧನ..!
ಪುತ್ತೂರು: ಮನೆ ಬಾಗಿಲು ಮುರಿದು ಮನೆಯೊಳಗೆ ನುಗ್ಗಿದ ದರೋಡೆಕೋರರ ತಂಡವೊಂದು ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದು ದರೋಡೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಡಗನ್ನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ಸೆ. 7ರಂದು ನಡೆದಿದ್ದು, ಇದೀಗ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸುಧೀರ್ ಪೆರುವಾಯಿ, ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಗಳಾದ ಪಚ್ಚಂಬಳ ರವಿ, ಕಿರಣ್, ವಸಂತ, ಫಸಲ್, ನಿಝಾರ್ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಕ್ರಿಮಿನಲ್ ಹಿನ್ನಲೆಯುಳ್ಳ ಆರೋಪಿಗಳಾಗಿದ್ದಾರೆ.
ಪಚ್ಚಂಬಳ ರವಿಯು ಮಂಗಳೂರಿನ ತಾಲೂಕು ಪಂಚಾಯತ್ ಅಧ್ಯಕ್ಷ ಜಬ್ಬಾರ್ ಹತ್ಯೆಯ ಆರೋಪಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದ ಆರೋಪಿಯಾಗಿದ್ದಾನೆ.
ಪೆರೋಲ್ ಮೂಲಕ ಜೈಲಿನಿಂದ ಹೊರಗೆ ಬಂದು ಕಳ್ಳವು ಕೃತ್ಯ ನಡೆಸಿದ್ದಾನೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಕಾರು, ಚಿನ್ನ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಡಗನ್ನೂರು ಗ್ರಾಮಪಂಚಾಯತ್ ನ ಮಾಜಿ ಸದಸ್ಯರಾಗಿರುವ ಗುರುಪ್ರಸಾದ್ ರೈ ಯವರ ಮನೆಯಲ್ಲಿ ಈ ದರೋಡೆ ಕೃತ್ಯ ನಡೆದಿತ್ತು.
ನಸುಕಿನ ಜಾವ ಸುಮಾರು 2 ಗಂಟೆಗೆ ಮನೆಯ ಮುಂದಿನ ಬಾಗಿಲ ಮೂಲಕ ಮನೆಯೊಳಗೆ ನುಗ್ಗಿದ ಸುಮಾರು 8 ಜನರಿದ್ದ ಮುಸುಕುಧಾರಿಗಳ ತಂಡ ಗುರುಪ್ರಸಾದ್ ಅವರನ್ನು ಕಟ್ಟಿ ಹಾಕಿ, ಕುತ್ತಿಗೆಗೆ ಚಾಕು ಹಿಡಿದು ಕಪಾಟಿನಲ್ಲಿದ್ದ ಸುಮಾರು 40 ಸಾವಿರ ರೂಪಾಯಿ ಮತ್ತು ಸುಮಾರು 15 ಪವನ್ ನಷ್ಟು ಚಿನ್ನವನ್ನು ದರೋಡೆ ಮಾಡಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ವಿಶೇಷ ತಂಡ ರಚಿಸಿ ತನಿಖೆಗೆ ಆದೇಶಿಸಿದ್ದರು.
- FILM7 days ago
Film: ಹಂದಿ ಮಾಂಸ ಸೇವಿಸಿದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು ಶಿಕ್ಷೆ..!
- bangalore6 days ago
ಹುಡುಗಿ ಚೇಂಜ್ ಆದ್ರೂ ಡ್ರೆಸ್ ಚೇಂಜ್ ಆಗಿಲ್ಲ ಅಲ್ವಾ ಶೆಟ್ರೇ?
- bengaluru5 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA5 days ago
ಮುಂದಿನ ವರ್ಷದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್- ಮಧು ಬಂಗಾರಪ್ಪ