Connect with us

    DAKSHINA KANNADA

    ಅ.18 ರಂದು ಟೋಲ್‌ಗೇಟ್ ತೆರವು ನೇರ ಕಾರ್ಯಾಚರಣೆ ನಡೆಸಲು ತೀರ್ಮಾನ

    Published

    on

    ಮಂಗಳೂರು: ಟೋಲ್‌ಗೇಟ್ ತೆರವು ದಿನಾಂಕ ಪ್ರಕಟಿಸಲು ಒತ್ತಾಯಿಸಿ ಇತ್ತೀಚೆಗೆ ನಡೆದ ಸಾಮೂಹಿಕ ಧರಣಿ ಹಾಗೂ ಟೋಲ್ ತೆರವು ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರಾಜ್ಯ ಸರಕಾರ ಸದನದಲ್ಲಿ ಪ್ರಕಟಿಸಿದ ಹೇಳಿಕೆಗಳ ಕುರಿತ ಸಭೆಯು ಸುರತ್ಕಲ್ ನ ಸ್ನೇಹ ಹೊಟೇಲ್ ಸಭಾಂಗಣದಲ್ಲಿ ನಡೆಯಿತು.

    ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್ ಸಮಿತಿ ಸಭೆಯು ಸಾಮೂಹಿಕ ಧರಣಿಯ ಯಶಸ್ಸಿಗೆ ಕಾರಣಕರ್ತರಾದ ಸಮಾನ ಮನಸ್ಕ ಸಂಘಟನೆಗಳು ಹಾಗೂ ಜನತೆಗೆ ಸಭೆಯು ಧನ್ಯವಾದಗಳನ್ನು ಸಮರ್ಪಿಸಿತು.


    ಟೋಲ್ ಗೇಟ್ ತೆರವಿಗೆ ಸಂಬಂಧಿಸಿ ಹೆದ್ದಾರಿ ಪ್ರಾಧಿಕಾರ, ರಾಜ್ಯ ಸರಕಾರ ದಿನಾಂಕ ಪ್ರಕಟಿಸಲು ಮುಂದಾಗದಿರುವುದರ ಕುರಿತು ಸಭೆಯಲ್ಲಿ ಆಕ್ಷೇಪ ವ್ಯಕ್ತವಾಯಿತು.

    ಹೋರಾಟ ತೀವ್ರಗೊಳಿಸದಿದ್ದಲ್ಲಿ ತೆರವು ಪ್ರಕ್ರಿಯೆ ನಿಧಾನಗೊಳ್ಳುವ, ನೆನಗುದಿಗೆ ಬೀಳುವ ಸಾಧ್ಯತೆ ಕುರಿತು ಆತಂಕ ವ್ಯಕ್ತವಾಯಿತು.

    ಕೊಟ್ಟ ಮಾತಿನಂತೆ ತಕ್ಷಣ ಟೋಲ್ ಸಂಗ್ರಹ ಸ್ಥಗಿತಗೊಳ್ಳಿಸುವಂತೆ ರಾಜ್ಯ ಸರಕಾರ ಹಾಗೂ ಹೆದ್ದಾರಿ ಪ್ರಾಧಿಕಾರಕ್ಕೆ ಸಭೆ ಆಗ್ರಹಿಸಿತು.

    ಈ ಹಿನ್ನಲೆಯಲ್ಲಿ ಸಾಮೂಹಿಕ ಧರಣಿಯ ಘೋಷಣೆಯಂತೆ ಅಕ್ಟೋಬರ್ 18 ರ ದಿನದಂದು ಸುರತ್ಕಲ್ ಟೋಲ್ ಗೇಟ್ ತೆರವುಗೊಳಿಸಲು ನೇರ ಕಾರ್ಯಾಚರಣೆ ನಡೆಸಲು ದೃಢ ನಿರ್ಧಾರ ಕೈಗೊಳ್ಳಲಾಯಿತು.

    ಸಭೆಯ ಅಧ್ಯಕ್ಷತೆಯನ್ನು ಖ್ಯಾತ ನ್ಯಾಯವಾದಿ ದಿನೇಶ್ ಹೆಗ್ಡೆ ಉಳೆಪಾಡಿ ವಹಿಸಿದ್ದರು. ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ಮಾಜಿ ಉಪ ಮೇಯರ್ ಪುರುಷೋತ್ತಮ ಚಿತ್ರಾಪುರ, ಹಿರಿಯ ದಲಿತ ನಾಯಕ ಎಂ ದೇವದಾಸ್, ಮಾಜಿ ಕಾರ್ಪೊರೇಟರ್ ರೇವತಿ ಪುತ್ರನ್, ಸಾಮಾಜಿಕ ಮುಂದಾಳು ಎಮ್ ಜಿ ಹೆಗ್ಡೆ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ರಾಲ್ಪಿ ಡಿ ಕೋಸ್ತ ಹೆಜಮಾಡಿ,

    ದಲಿತ ಸಂಘರ್ಷ ಸಮಿತಿಯ ರಘು ಎಕ್ಕಾರು, ಕುಳಾಯಿ ನಾಗರಿಕ ಸಮಿತಿಯ ಗಂಗಾಧರ ಬಂಜನ್, ಡಿವೈಎಫ್ಐ ನ ಬಿ ಕೆ ಇಮ್ತಿಯಾಜ್, ಶ್ರೀನಾಥ್ ಕುಲಾಲ್, ಮಕ್ಸೂದ್ ಬಿಕೆ, ಕಾಂಗ್ರೆಸ್ ಮುಂದಾಳು ವಸಂತ ಬರ್ನಾಡ್, ಮೂಲ್ಕಿ ನಗರ ಪಂಚಾಯತ್ ಸದಸ್ಯ ಯೋಗೀಶ್ ಕೋಟ್ಯಾನ್,

    ಗ್ರಾಪಂ‌ ಸದಸ್ಯರಾದ ಸತೀಶ್ ಕೋಟ್ಯಾನ್, ಅಬ್ದುಲ್ ಅಜೀಜ್, ನಿಸಾರ್ ಬಜ್ಪೆ, ಸಿರಾಜ್ ಬಜ್ಪೆ, ಹೋರಾಟ ಸಮಿತಿಯ ಹರೀಶ್ ಪೇಜಾವರ, ರಾಜೇಶ್ ಶೆಟ್ಟಿ ಪಡ್ರೆ, ರಮೇಶ್ ಟಿ ಎನ್, ರಾಜೇಶ್ ಪೂಜಾರಿ ಕುಳಾಯಿ, ಸತೀಶ್ ಕರ್ಕೇರ ಹೆಜಮಾಡಿ ಮತ್ತಿತರರು ಉಪಸ್ಥಿತರಿದ್ದರು.

     

    DAKSHINA KANNADA

    ಬೆಂ*ಕಿಗೆ ಆಹುತಿಯಾದ ಹಡಗಿನಿಂದ ಅಪಾಯವಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸ್ಪಷ್ಟನೆ

    Published

    on

    ಮಂಗಳೂರು : ಮಂಗಳೂರು ಕರಾವಳಿಯ ಸಮುದ್ರದಲ್ಲಿ ಬೆಂ*ಕಿಗೆ ಆಹುತಿಯಾದ ವಿದೇಶಿ ಹಡಗಿನಿಂದ ಮಂಗಳೂರು ಕರಾವಳಿಗೆ ಯಾವುದೇ ಆತಂಕ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.

    ಜುಲೈ 19 ರಂದು ಗುಜರಾತ್‌ನಿಂದ ಕೊಲೊಂಬೋಕ್ಕೆ ತೆರಳುತ್ತಿದ್ದ ಸರಕು ಸಾಗಟದ ಹಡುಗು ಬೆಂ*ಕಿಗೆ ಆಹುತಿಯಾಗಿತ್ತು. ತಕ್ಷಣ ಕೋಸ್ಟ್‌ಗಾರ್ಡ್ ತಂಡ ನಿರಂತರ ನಲುವತ್ತು ಗಂಟೆ ಪ್ರಯತ್ನ ನಡೆಸಿ ಬೆಂಕಿ ನಂದಿಸುವ ಕೆಲಸವಾಗಿತ್ತು. ಬಳಿಕ ಹಡಗನ್ನು ಮಂಗಳೂರು ಕರಾವಳಿಯ 30 ನಾಟಿಕಲ್ ದೂರದಲ್ಲಿ ನಿಲ್ಲಿಸಲಾಗಿತ್ತು. ಇದರಿಂದ ತೈಲ ಸೋರಿಕೆ ಆಗುವ ಆತಂಕವನ್ನು ಹಲವರು ವ್ಯಕ್ತಪಡಿಸಿದ್ದರು.

    ಇದನ್ನೂ ಓದಿ : 5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    ಹಡಗು ಮುಳುಗಡೆಯಾಗುವ ಭೀತಿ ಇದ್ದು ಹಾಗಾದಲ್ಲಿ ಹಡಗಿನಲ್ಲಿರುವ ತೈಲ ಸೋರಿಕೆ ಆಗಬಹುದು ಎಂದು ಸುದ್ದಿಯಾಗಿತ್ತು. ಆದ್ರೆ, ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ಅಂತಹ ಯಾವುದೇ ಅಪಾಯ ಇಲ್ಲ ಎಂದು ಹೇಳಿದ್ದಾರೆ. ಅಂತಹ ಅವ*ಘಡ ನಡೆದಲ್ಲಿ ಅದನ್ನು ಎದುರಿಸಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಹಾಗೂ ಕೋಸ್ಟ್‌ಗಾರ್ಡ್‌ ಮತ್ತು ಕರಾವಳಿ ಕಾವಲು ಪಡೆ ಸನ್ನದ್ಧವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    LATEST NEWS

    Trending