Connect with us

DAKSHINA KANNADA

ಮಂಗಳೂರು ಕ್ಯಾಥೋಲಿಕ್ ಧರ್ಮಪ್ರಾಂತ್ಯದ ಪಾದ್ರಿ ಬೆಂಜಮಿನ್ ಡಿಸೋಜಾ ನಿಧನ

Published

on

ಮಂಗಳೂರು: ರಾಜ್ಯದ ಬೀದರ್ ಪರಿಸರದಲ್ಲಿ ಅಂತರ್ ಧರ್ಮೀಯ ಸಂವಾದಕ್ಕೆ ಹೆಸರಾಗಿದ್ದ ಮಂಗಳೂರು ಧರ್ಮ ಪ್ರಾಂತ್ಯದ ಧರ್ಮ ಗುರು ರೆ. ಫಾ. ಬೆಂಜಮಿನ್ ಡಿಸೋಜಾ (84) ಅವರು ಅಸೌಖ್ಯದಿಂದ ಇಂದು ಮಂಗಳೂರಿನ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.


ಮೂಲತಃ ಕಾಸರಗೋಡು ಜಿಲ್ಲೆಯ ಕಯ್ಯಾರ್ ನ ಕೊಕ್ಕೆಚಾಲ್ ನಿವಾಸಿಯಾಗಿದ್ದ ಅವರು ಧಾರ್ಮಿಕ ಶಿಕ್ಷಣ ಮತ್ತು ತರಬೇತಿಯ ಬಳಿಕ 1964 ಡಿಸೆಂಬರ್ 2 ರಂದು ಗುರು ದೀಕ್ಷೆಯನ್ನು ಪಡೆದಿದ್ದರು. ಬಳಿಕ ಮಂಗಳೂರಿನ ಆಂಜೆಲೋರ್ ಚರ್ಚ್ ನಲ್ಲಿ ಸಹಾಯಕ ಗುರುಗಳಾಗಿ ಹಾಗೂ ಅರ್ವಾ, ವೇಣೂರು, ಫೆರಾರ್, ಬಾರ್ಕೂರು ಮತ್ತು ತಲ್ಲೂರ್ ಚರ್ಚ್ನಲ್ಲಿ ಪ್ರಧಾನ ಗುರುಗಳಾಗಿ ಸೇವೆ ಸಲ್ಲಿಸಿದ್ದರು.

1980ರಲ್ಲಿ ಅವರು ಬೀದರ್ ಜಿಲ್ಲೆಯ ಬಾಲ್ಕಿಗೆ ಸೇವೆ ಸಲ್ಲಿಸಲು ತೆರಳಿದ್ದರು. 2009- 2014 ತನಕ ಗುಲ್ಬರ್ಗ ಧರ್ಮ ಪ್ರಾಂತ್ಯ ವ್ಯಾಪ್ತಿಯ ಬೀದರ್ ಜಿಲ್ಲೆಯ ಬಸವ ಕಲ್ಯಾಣದಲ್ಲಿ ಸತ್ಯಾನುಭವ ಅಂತರ್ ಧರ್ಮೀಯ ಸಂವಾದ ಕೇಂದ್ರದ ನಿರ್ದೇಶಕರಾಗಿ 5 ವರ್ಷ ಸೇವೆ ಸಲ್ಲಿಸಿದ್ದರು.

ಈ ಸಂದರ್ಭದಲ್ಲಿ ಅವರು ಅನೇಕ ಅಂತರ್ ಧರ್ಮೀಯ ಸಂವಾದ ಕಾರ್ಯಕ್ರಮಗಳನ್ನು ಸಂಘಟಿಸಿ ಸಮಾಜದಲ್ಲಿ ಶಾಂತಿ, ಸಾಮರಸ್ಯ ಕಾಪಾಡಲು ಶ್ರಮಿಸಿದ್ದರು.

2017ರಲ್ಲಿ ಅವರು ಸಕ್ರಿಯ ಸೇವಾ ಕಾರ್ಯಗಳಿಂದ ನಿವೃತ್ತರಾಗಿ ಮಂಗಳೂರಿನ ಜಪ್ಪುವಿನಲ್ಲಿರುವ ನಿವೃತ್ತ ಧರ್ಮಗುರುಗಳ ನಿವಾಸ ಜುಜೆ ವಾಝ್ ಹೋಮ್ ನಲ್ಲಿ ವಾಸ್ತವ್ಯ ಮಾಡುತಿದ್ದರು. ಅವರು ಕಯ್ಯಾರ್ ನಿಂದ ಧರ್ಮಗುರು ಆದ ಮೊದಲ ವ್ಯಕ್ತಿಯಾಗಿದ್ದು, ಅವರ ಅಂತ್ಯ ಕ್ರಿಯೆ ಕಯ್ಯಾರ್ ಕ್ರೈಸ್ಟ್ ದ ಕಿಂಗ್ ಚರ್ಚ್ ನಲ್ಲಿಆಗಸ್ಟ್ 10 ರಂದು ಬೆಳಗ್ಗೆ 10.30 ಕ್ಕೆ ನೆರವೇರಲಿದೆ. 1964 ರಲ್ಲಿ ಪೋಪ್ 6 ನೇ ಪಾವ್ಲ್ ಅವರು ಭಾರತಕ್ಕೆ ಭೇಟಿ ನೀಡಿ ಮುಂಬಯಿನಲ್ಲಿ ನಡೆದ ಐತಿಹಾಸಿಕ ಇಂಟರ್ ನ್ಯಾಷನಲ್ ಯೂಕರಿಸ್ಟಿಕ್ ಸಮ್ಮೇಳನದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಗುರು ದೀಕ್ಷೆ ಪಡೆದಿದ್ದ ಮಂಗಳೂರಿನ 9 ಮಂದಿ ಧರ್ಮ ಗುರುಗಳಲ್ಲಿ ಫಾ| ಬೆಂಜಮಿನ್ ಅವರು ಒಬ್ಭರಾಗಿದ್ದರು.

DAKSHINA KANNADA

ನಾಲ್ಕು ತಿಂಗಳ ಮಗುವಿಗೆ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿದ ಅಜ್ಜಿ..! ಅಜ್ಜಿ ಮಾಡಿದ ಎಡವಟ್ಟಿಗೆ ಕೋಮಾಗೆ ಜಾರಿದ ಮಗು !!

Published

on

ಮಂಗಳೂರು/ಇಟಲಿ: ಇಟಲಿಯಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ಅಜ್ಜಿಯೊಬ್ಬರು ನಾಲ್ಕು ತಿಂಗಳ ಮಗುವಿಗೆ ಕುಡಿಯುವ ಹಾಲಿನಲ್ಲಿ ಆಲ್ಕೋಹಾಲ್‌ ಬೆರೆಸಿರುವ ಘಟನೆ ನಡೆದಿದೆ.

feed

ಮೊಮ್ಮಗು ಕುಡಿಯುವ ಹಾಲಿಗೆ ಅಜ್ಜಿ ತಪ್ಪಾಗಿ ಆಲ್ಕೋಹಲ್ ಬೆರೆಸಿದ್ದಾರೆ. ಮಗು ಅರ್ಧ ಹಾಲು ಕುಡಿದ ಬಳಿಕ ಮಗು ಅಳಲು ಆರಂಭಿಸಿದೆ. ಅಜ್ಜಿಗೆ ಅನುಮಾನ ಬಂದು ತಾನು ಕುಡಿಸಿದ ಹಾಲಿನ ವಾಸನೆಯನ್ನು ತೆಗೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಆಲ್ಕೋಹಾಲ್‌ ಮಿಶ್ರಣ ಹಾಕಿರುವುದು ಬೆಳಕಿಗೆ ಬಂದಿದೆ.  ಇದರಿಂದ ಆಘಾತಕ್ಕೊಳಗಾದ ವೃದ್ಧೆ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಮುಂದೆ ಓದಿ..; ಜೀವಾಂತ್ಯವಾದ ಕಾಂತಾಬಾರೆ-ಬೂದಬಾರೆ ಜನ್ಮಕ್ಷೇತ್ರದ ಮರ..! ಇತಿಹಾಸದ ಜೀವಂತ ಸಾಕ್ಷಿಯ ಅಂತ್ಯ..!

ಕೋಮಾಗೆ ಜಾರಿದ ಮಗು:

ಅದಾಗಲೇ ಮಗುವಿನ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕೋಮ ಸ್ಥಿತಿಗೆ ಜಾರಿತ್ತು. ಬಳಿಕ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಮಗುವಿಗೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಮಗುವಿನ ಆರೋಗ್ಯವನ್ನು ಸಂಪೂರ್ಣ ಪರಿಶೀಲಿಸಿದ ಬಳಿಕ ಅಜ್ಜಿ ವಿರುದ್ಧ ಪ್ರಕರಣ ದಾಖಲಿಸಲು ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

 

Continue Reading

DAKSHINA KANNADA

ಚಲಿಸುತ್ತಿದ್ದಾಗ ಒಡೆದ ಬಸ್ಸಿನ ಗಾಜು; ಇಬ್ಬರು ಮಕ್ಕಳು, ಚಾಲಕನಿಗೆ ಗಾ*ಯ

Published

on

ವಿಟ್ಲ : ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಹೊಡೆದಿದೆ.

ಇದನ್ನೂ ಓದಿ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗು ಸಣ್ಣಪುಟ್ಟವಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿರುವ ಬಾಲಕ ಕೇರಳದ ಚೆರ್ಕಳ ನೆಲ್ಲಿಕಟ್ಟೆ ನಿವಾಸಿ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

 

Continue Reading

DAKSHINA KANNADA

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

Published

on

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ.

accident

accident

ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ಮುಂದೆ ಓದಿ..; ಪ್ರಾಂಶುಪಾಲೆ, ಶಿಕ್ಷಕಿ ನಡುವೆ ಹೊಯ್‌ ಕೈ..!! ವೀಡಿಯೋ ವೈರಲ್

accident

Continue Reading

LATEST NEWS

Trending