Connect with us

DAKSHINA KANNADA

ಮಂಗಳೂರು: ‘ಗೋವಿಗಾಗಿ ಮೇವು’ ಮೆರವಣಿಗೆ ವೇಳೆ ಕೋಮು ಘರ್ಷಣೆಗೆ ಪ್ರಚೋದನೆ ಆರೋಪ-ದೂರು ದಾಖಲು

Published

on

ಮಂಗಳೂರು: ಉಳ್ಳಾಲದಲ್ಲಿ ನಡೆದ ಗೋವಿಗಾಗಿ ಮೇವು ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಮುಂದೆ ನಿಂತು ಅಶಾಂತಿಗೆ ಯತ್ನಿಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.


ನವೆಂಬರ್ 6 ರಂದು ಸಂಜೆ 4.30 ರ ವೇಳೆಗೆ ಕುತ್ತಾರು ಮದನಿನಗರ ಜುಮಾ ಮಸೀದಿ ಎದುರುಗಡೆ ವಾಹನಗಳನ್ನು ನಿಲ್ಲಿಸಿದ ಕಿಡಿಗೇಡಿಗಳು ಮುಸ್ಲಿಂ ಬಾಂಧವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಬಾವುಟವನ್ನು ಪ್ರದರ್ಶಿಸಿ ಶಾಂತಿಭಂಗ ಹಾಗೂ ಘರ್ಷಣೆಗೆ ಪ್ರಚೋದಿಸಿದ್ದಾರೆ.

ಕದ್ರಿ ದೇವಸ್ಥಾನದಿಂದ ಪಜೀರು ಗೋವನಿತಾಶ್ರಯದವರೆಗೆ ಗೋವಿಗಾಗಿ ಮೇವು ಕಾರ್ಯಕ್ರಮದ ಪ್ರಯುಕ್ತ ಕದ್ರಿಯಿಂದ ಪಜೀರು ಗೋವನಿತಾಶ್ರಯ ತನಕ ವಿ.ಹಿಂ.ಪ ಮೆರವಣಿಗೆಯನ್ನು ಆಯೋಜಿಸಿತ್ತು.


ಈ ನಡುವೆ ಮೆರವಣಿಗೆಯಲ್ಲಿದ್ದ ಕೆಲ ಕಿಡಿಗೇಡಿಗಳು ಮದನಿನಗರ ಮಸೀದಿ ಎದುರುಗಡೆ ವಾಹನಗಳನ್ನು ನಿಲ್ಲಿಸಿ ದುಷ್ಕೃತ್ಯ ಎಸಗಿದ್ದಾರೆ ಎಂದು ಉಳ್ಳಾಲ ಬ್ಲಾಕ್ ಅಲ್ಪಸಂಖ್ಯಾತರ ಸಮಿತಿ ಆರೋಪಿಸಿ, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ನಿಯೋಗದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಆಲ್ವಿನ್ ಡಿಸೋಜ, ತಾ.ಪಂ ಮಾಜಿ ಅಧ್ಯಕ್ಷ ಮೋನು ಮಲಾರ್, ಮುನ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ ಆರ್ ಕೆ.ಸಿ ಅಝೀಝ್, ಮುನ್ನೂರು ಗ್ರಾ.ಪಂ ಸದಸ್ಯರಾದ ನವೀನ್, ಸಿರಾಜ್, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಝಕರಿಯಾ ಮಲಾರ್ , ಉಳ್ಳಾಲ ಯುವಕಾಂಗ್ರೆಸ್ ಅಧ್ಯಕ್ಷ ಫಿರೋಝ್ ಮಲಾರ್, ನೌಶೀದ್ ಮದನಿನಗರ, ಇಂಟಕ್ ನ ಸಿದ್ದೀಖ್, ಸಿರಾಜ್ ಮೊದಲಾದವರು ಉಪಸ್ಥಿತರಿದ್ದರು.

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending