ಮಂಗಳೂರು: ರಷ್ಯಾ ಉಕ್ರೇನ್ ಮೇಲೆ ಯುದ್ಧ ಘೋಷಣೆ ಮಾಡಿದ್ದು ಈಗಾಗಲೇ ಭಾರತ ಸೇರಿದಂತೆ ಹಲವು ದೇಶಗಳು ಅಲರ್ಟ್ ಆಗಿವೆ. ಜಿಲ್ಲಾಧಿಕಾರಿ ಈಗಾಗಲೇ ಉಕ್ರೇನ್‌ನಲ್ಲಿ ನೆಲೆಸಿರುವ ಜಿಲ್ಲೆಯ ಜನರ ಮಾಹಿತಿ ನೀಡಿ ಎಂದು ಘೋಷಿಸಿದ್ದಾರೆ.
ಈ ಹಿನ್ನೆಲೆ ಉಕ್ರೇನ್‌ನಲ್ಲಿ ಮಂಗಳೂರು ಮೂಲದ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಮಂಗಳೂರಿನ ಪಡೀಲ್ ನಿವಾಸಿ ಕ್ಲಾಟನ್ ಎಂಬ ವಿದ್ಯಾರ್ಥಿ ಉಕ್ರೇನ್‌ನಲ್ಲಿದ್ದು ಈಗಾಗಲೇ ತನ್ನ ಹೆತ್ತವರಿಗೆ ಕರೆ ಮಾಡಿ ಮಾತನಾಡಿದ್ದಾರೆ.
ಈತ ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದ್ದು ಆತನ ಪೋಷಕರು ದ.ಕ ಜಿಲ್ಲಾಡಳಿತವನ್ನು ಸಂಪರ್ಕಿಸಿದ್ದು ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಅವರಿಗೆ ಮಾಹಿತಿ ನೀಡಿದ್ದಾರೆ.
ಅದಲ್ಲದೆ ಮಂಗಳೂರಿನ ದೇರೇಬೈಲ್ ನಿವಾಸಿಯಾಗಿರುವ ಅನೈನಾ ಅನ್ನ ಎಂಬ ವೈದ್ಯಕೀಯ ವಿದ್ಯಾರ್ಥಿನಿ ಕೂಡ ಉಕ್ರೇನ್‌ನಲ್ಲಿದ್ದಾರೆ.
ಅವರು ಕೂಡ ತಾನು ಸುರಕ್ಷಿತ ಜಾಗದಲ್ಲಿರುವ ಬಗ್ಗೆ ತನ್ನ ಪೋಷಕರಿಗೆ ಮಾಹಿತಿ ನೀಡಿದ್ದು ಈ ಬಗ್ಗೆ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ.