Connect with us

DAKSHINA KANNADA

Manglore: ಒಡಿಯೂರು ಗುರುದೇವ ಬಳಗದ ಪದಾಧಿಕಾರಿಗಳ ಪದಗ್ರಹಣ 

Published

on

ಒಡಿಯೂರು ಶ್ರೀ ಗುರುದೇವ ಹಾಗೂ ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಮಂಗಳೂರು ವಲಯದ ಪದಗ್ರಹಣ ಕಾರ್ಯಕ್ರಮ ಮಂಗಳೂರು ಕೊಡಿಯಾಲುಬೈಲ್ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ಬುಧವಾರ ನಡೆಯಿತು.

ಮಂಗಳೂರು: ಒಡಿಯೂರು ಶ್ರೀ ಗುರುದೇವ ಹಾಗೂ ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಮಂಗಳೂರು ವಲಯದ ಪದಗ್ರಹಣ ಕಾರ್ಯಕ್ರಮ ಮಂಗಳೂರು ಕೊಡಿಯಾಲುಬೈಲ್ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ಬುಧವಾರ ನಡೆಯಿತು.

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿದರು.

ಬಳಿಕ ಎಲ್ಲರೂ ಅವರವರ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಿದರೆ ಸಮಾಜ ಪರಿವರ್ತನೆಯಾಗಲು ಸಾಧ್ಯ.

ಇಲ್ಲಿ ಎಲ್ಲರೂ ಸೇವಕರು, ಸೇವೆಯೇ ವಿಶಿಷ್ಟವಾಗಿದೆ. ದೀನದಲಿತರ ಸೇವೆ ಭಗವಂತನ ಸೇವೆಯಾಗಿದೆ.

ಆದ್ದರಿಂದ ಮನುಷ್ಯರ ಸೇವೆ ಮಾಡಿದರೆ ಭಗವಂತನ ಪ್ರೀತಿಗೆ ಪಾತ್ರವಾಗುತ್ತೇವೆ ಎಂದರು.

ಮಂಗಳೂರು ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಮಾತನಾಡಿ ಮಣ್ಣನ್ನು ಮುಟ್ಟದ ಎಷ್ಟೋ ಮಕ್ಕಳು ನಗರದಲ್ಲಿ ಇದ್ದಾರೆ.

ಈ ನಿಟ್ಟಿನಲ್ಲಿ ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಪರಿಸರ ಕಾಳಜಿಯ ಕಾರ್ಯಕ್ರಮವನ್ನು ಮಾಡುತ್ತಿದ್ದಾರೆ ಎಂದರು.

ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮಂಗಳೂರು ವಲಯದ ನೂತನ ಅಧ್ಯಕ್ಷರಾಗಿ ಜಿತೇಂದ್ರ ಕೊಟ್ಟಾರಿ, ಕಾರ್ಯಾಧ್ಯಕ್ಷ ರಾರನಾಥ ಶೆಟ್ಟಿ ಬೋಳಾರ, ಪ್ರಧಾನ ಕಾರ್ಯದರ್ಶಿಎ.ಕೃಷ್ಣ ಶೆಟ್ಟಿ ತಾರೆಮಾರ್ ಹಾಗೂ ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ, ಮಂಗಳೂರು ವಲಯದ ಅಧ್ಯಕ್ಷರಾಗಿ ನಿವೇದಿತಾ ಎನ್.ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ರವಿಪ್ರಭಾ ಶೆಟ್ಟಿ, ಕೋಶಾಧಿಕಾರಿ ಬಬಿತಾ ಶೆಟ್ಟಿ ಮತ್ತು ಪದಾಧಿಕಾರಿಗಳ ಪದಗ್ರಹಣ ನಡೆಯಿತು.

ನೂತನ ಪದಾಧಿಕಾರಿಗಳಿಗೆ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಶಾಲು ಹಾಕಿ ಗೌರವಿಸಿದರು.

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಪರಮಪೂಜ್ಯ ಸಾಧ್ವೀ ಶ್ರೀ ಶ್ರೀ ಮಾತಾನಂದಮಯೀ, ಮಂಗಳೂರು ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ, ಮಂಗಳೂರು ಅಬೀಶ್ ಬಿಲ್ಡರ್ಸ್ ಮಾಲಕ ಪುಷ್ಪರಾಜ್ ಜೈನ್, ಅರಕೆಬೈಲು ಅಂಬಾಮಹೇಶ್ವರಿ ಭಜನಾ ಮಂದಿರದ ಅಧ್ಯಕ್ಷ ಎ.ಸೀತಾರಾಮ, ಚಿಲಿಂಬಿ ಸಾಯಿಮಂದಿರ ಶ್ರೀ ಸಾಯಿಶಕ್ತಿ ಕಲಾಬಳಗದ ಸಂಚಾಲಕಿ ಶ್ರೀಮತಿ ಲಾವಣ್ಯ ವಿಶ್ವಾಸ್ ದಾಸ್, ಸರ್ವಾಣಿ ಬಿ.ಶೆಟ್ಟಿ, ಅಸೋಕ್ ಕುಮಾರ್ ಬಿಜೈ, ಒಡಿಯೂರು ಶ್ರೀ ಗುರುದೇವ ಸೇವಾ ಬಳಗದ ಸ್ಥಾಪಕಾಧ್ಯಕ್ಷ ಸಿ.ಎ ರಾಮಮೋಹನ ರೈ, ಅಧ್ಯಕ್ಷರು ಜಯಂತ .ಜೆ.ಕೋಟ್ಯಾನ್, ಕಾರ್ಯದರ್ಶಿ ದಿನಕರ ಶೆಟ್ಟಿ, ಕೋಶಾಧಿಕಾರಿ ಜನಾರ್ದನ ರೈ ಮೊದಲಾದವರು ಉಪಸ್ಥಿತರಿದ್ದರು.

ಗ್ರಾಮ ವಿಕಾಸ ಯೋಜನೆ ಸದಸ್ಯರು ಪ್ರಾರ್ಥಿಸಿ, ನಿಕಟಪೂರ್ವ ಅಧ್ಯಕ್ಷ ಜಯಂತ್ ಕೋಟ್ಯಾನ್ ಸ್ವಾಗತಿಸಿದರು.

ಪ್ರಧಾನ ಕಾರ್ಯದರ್ಶಿ ಎ. ಕೃಷ್ಣ ಶೆಟ್ಟಿ ತಾರೆಮಾರ್ ವಂದಿಸಿ, ಕದ್ರಿ ನವನೀತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Click to comment

Leave a Reply

Your email address will not be published. Required fields are marked *

DAKSHINA KANNADA

ಮಂಗಳೂರು : ‘ಮಹೇಶ್’ ಬಸ್ ಮಾಲೀಕ ಆತ್ಮಹತ್ಯೆ..!

Published

on

ಮಂಗಳೂರು: ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತರನ್ನು ಮಹೇಶ್ ಬಸ್ ಮಾಲೀಕ  ಪ್ರಕಾಶ್ ಶೇಖ ಎಂದು ಗುರುತಿಸಲಾಗಿದೆ. ಅವರು ಕದ್ರಿ ಕಂಬಳ ಸಮೀಪ ಇರುವ ಅಪಾರ್ಟ್ ಮೆಂಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಹೇಶ್ ಹೆಸರಿನಲ್ಲಿ ಹಲವಾರು ಸಿಟಿ ಬಸ್ ಗಳು ದಿನನಿತ್ಯ ಸಂಚರಿಸುತ್ತಿದ್ದು, ಜನಮನ್ನಣೆ ಪಡೆದಿದೆ.

ಬಸ್ ಉದ್ಯಮದ ಬಗ್ಗೆ ಭಾರೀ ಪ್ರೀತಿ ಇಟ್ಟುಕೊಂಡಿದ್ದ ಪ್ರಕಾಶ್ ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ಆಪ್ತ ಬಳಗಕ್ಕೆ ಶಾಕ್ ನೀಡಿದೆ.  ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ಮೇಯರ್‌ ಫೋನ್‌ ಇನ್‌ : ಮಂಗಳೂರು ನಗರದ 8 ಕಡೆ ಬಸ್ ಬೇ ನಿರ್ಮಾಣ- ಸುಧೀರ್ ಶೆಟ್ಟಿ

Published

on

ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯಲ್ಲಿ ಒಟ್ಟು 53 ಪ್ರದೇಶಗಳಲ್ಲಿ ಬಸ್ಸು ತಂಗುದಾಣ ನಿರ್ಮಿಸಲು ಮಂಗಳೂರು ಪೊಲೀಸ್ ಕಮಿಷನರ್‌ ಪ್ರಸ್ತಾವನೆ ಸಲ್ಲಿಸಿದ್ದು, ಪ್ರಸ್ತುತ 8 ಪ್ರದೇಶಗಳಲ್ಲಿ ಬಸ್‌ ಬೇ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ತಿಳಿಸಿದ್ದಾರೆ.

ಮೇಯರ್ ಕಚೇರಿಯಲ್ಲಿ ಶನಿವಾರ ನಡೆದ ಮೇಯರ್ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು.

ಮೊದಲ ಹಂತದಲ್ಲಿ ನಾಗರಿಕರಿಂದ ಹೆಚ್ಚು ಬೇಡಿಕೆ ಇರುವ ಬಿಜೈ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣ ಸಮೀಪ, ಲೇಡಿಹಿಲ್‌, ಕಂಕನಾಡಿ ಜಂಕ್ಷನ್‌, ಬಂಟ್ಸ್ ಹಾಸ್ಟೇಲ್ ಸೇರಿದಂತೆ ಒಟ್ಟು 8 ಕಡೆಗಳಲ್ಲಿ ಬಸ್ ಬೇ ನಿರ್ಮಿಸಲಾಗುವುದು.

ಬಳಿಕ ಹಂತ ಹಂತವಾಗಿ ಉಳಿದೆಡೆ ಬಸ್ ಬೇ ನಿರ್ಮಿಸಲಾಗುವುದು ಎಂದರು. ನಗರದಲ್ಲಿ 53 ಬಸ್ಸು ತಂಗುದಾಣಕ್ಕೆ ಪೊಲೀಸರು ಪ್ರಸ್ತಾವನೆ ಸಲ್ಲಿಸಿದ್ದರೂ ಅಧಿಕಾರಿಗಳುಮಾತ್ರ ಕಡತದಲ್ಲೇ ಬಾಕಿ ಇರಿಸಿದ್ದು, ಮನಪಾ ಆಡಳಿತದ ಸಭೆಗೆ ಹಾಜರುಪಡಿಸದಿರುವುದು ಗಮನಕ್ಕೆ ಬಂತು.

ಕೂಡಲೇ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ ಪ್ರಸ್ತಾವನೆಯನ್ನು ಮುಂದಿನ ಸಭೆಗೆ ಹಾಜರುಪಡಿಸುವಂತೆ ಸೂಚನೆ ನೀಡಿದರು.

ಬೀದಿ ಬದಿ ವ್ಯಾಪಾರಸ್ಥರು ನಗರದ ಅನೇಕ ಕಡೆಗಳಲ್ಲಿ ರಸ್ತೆ ಹಾಗೂ ಫುಟ್ಪಾತ್‌ ಅತಿಕ್ರಮಣ ನಡೆಸಿದ್ದಾರೆ.

ಅಗಲಗೊಂಡರಸ್ತೆಯಲ್ಲಿ ವಾಹನಗಳನ್ನು ಪಾರ್ಕ್‌ ಮಾಡಲಾಗುತ್ತಿದೆ.

ಈ ಬಗ್ಗೆ ಪಾಲಿಕೆ ಕ್ರಮ ವಹಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.

Continue Reading

bengaluru

ಬೆಂಗಳೂರಿನಲ್ಲಿ ಮೊತ್ತ ಮೊದಲ ಬಾರಿಗೆ ನಡೆಯುವ ಕಂಬಳಕ್ಕೆ ಡೇಟ್ ಫಿಕ್ಸ್-ಅಶೋಕ್ ಕುಮಾರ್ ರೈ

Published

on

ಮಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಥಮ ಬಾರಿಗೆ ಹೊನಲು ಬೆಳಕಿನ ಕರಾವಳಿಯ ಜಾನಪದ ಕ್ರೀಡೆ ಕಂಬಳ ನ. 25 ಮತ್ತು 26ರಂದು  ನಡೆಯಲಿದೆ ಎಂದು ಬೆಂಗಳೂರು ಕಂಬಳ ಸಮಿತಿಯ ಸಂಘಟಕ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.

ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯ ಮಂತ್ರಿ ಸೇರಿದಂತೆ ರಜನಿಕಾಂತ್, ಐಶ್ವರ್ಯ ರೈ ಸೇರಿದಂತೆ ಸಿನಿಮಾ ಕ್ಷೇತ್ರದ ನಟ ನಟಿಯರು ಭಾಗವಹಿಸಲಿದ್ದಾರೆ.

ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ನಡೆಯುವ ಈ ಕಂಬಳ ಕೂಟದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಸೇರಿದಂತೆ ವಿವಿಧ ಜಿಲ್ಲೆಗಳ ಸುಮಾರು 130 ಜೊತೆ ಕೋಣಗಳು ಅದರ ಮಾಲಕರು ಭಾಗವಹಿಸಲಿದ್ದಾರೆ ಎಂದರು.

ಇದರ ಜೊತೆ 125 ಸ್ಟಾಲ್ ಗಳಲ್ಲಿ ಕರಾವಳಿಯ ತಿಂಡಿ ತಿನಿಸುಗಳು ಗ್ರಾಹಕರಿಗೆ ದೊರೆಯಲಿದೆ.

ಸುಮಾರು 7 ರಿಂದ 8 ಲಕ್ಷ ಜನರು ಇದನ್ನು ವೀಕ್ಷಿಸುವ ನಿರೀಕ್ಷೆ ಇದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಉಡುಪಿ, ದಕ್ಷಿಣ ಕನ್ನಡ ಕಂಬಳ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಕಂಬಳ ಸಮಿತಿ ಪದಾಧಿಕಾರಿಗಳಾದ ರೋಹಿತ್ ಹೆಗ್ಡೆ, ಬಾರ್ಕೂರು ಶಾಂತರಾಮ ಶೆಟ್ಟಿ, ಲೋಕೇಶ್ ಶೆಟ್ಟಿ, ಚಂದ್ರಹಾಸ ಸನಿಲ್, ಮುರಳಂಧರ ರೈ, ವಿಜಯಕುಮಾರ್ ಜೈನ್ ಉಪಸ್ಥಿತರಿದ್ದರು.

Continue Reading

LATEST NEWS

Trending