Connect with us

    DAKSHINA KANNADA

    ಮಂಗಳೂರು: ಗುರುಪುರ ಸೇತುವೆಯಿಂದ ನದಿಗೆ ಹಾರಿದ ಯುವಕ-ಮೃತದೇಹಕ್ಕಾಗಿ ಶೋಧ

    Published

    on

    ಮಂಗಳೂರು: ವ್ಯಕ್ತಿಯೊರ್ವರು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಗುರುಪುರದಲ್ಲಿ ನಡೆದಿದೆ.

    ವಾಮಂಜೂರು ಮೂಡುಶೆಡ್ಡೆ ನಿವಾಸಿ ಅರುಣ್ ಪೂಜಾರಿ(38) ಆತ್ಮಹತ್ಯೆಗೆ ಶರಣಾದವರು.


    ವೃತ್ತಿಯಲ್ಲಿ ಪೈಂಟರ್ ಆಗಿರುವ ಅರುಣ್ ಗುರುವಾರ ರಾತ್ರಿ 8:30 ರ ಸುಮಾರಿಗೆ ಗುರುಪುರ ಸೇತುವೆಯ ಮೇಲೆ ತನ್ನ ದ್ವಿಚಕ್ರ ವಾಹನ ನಿಲ್ಲಿಸಿ ನದಿಗೆ ಹಾರಿದ್ದರು.

    ವಿಚ್ಛೇದಿತನಾಗಿರುವ ಅರುಣ್ ಅವರಿಗೆ ಓರ್ವ ಮಗಳಿದ್ದಾಳೆ.

    ಅರುಣ್ ನದಿಗೆ ಹಾರುವುದನ್ನು ಕಂಡ ಸ್ಥಳೀಯರು ತಕ್ಷಣ ಪೋಲೀಸ್ ಠಾಣೆಗೆ ಮಾಹಿತಿ ರವಾನಿಸಿದ್ದರು. ಸ್ಥಳಕ್ಕೆ ಧಾವಿಸಿದ ಬಜಪೆ ಪೊಲೀಸರು ಮೃತದೇಹದ ಹುಡುಕಾಟದ ಕಾರ್ಯಾಚರಣೆ ನಡೆಸಿದ್ದರು.

    ಆದರೆ ರಾತ್ರಿಯಾದುದರಿಂದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಶುಕ್ರವಾರ ಬೆಳಿಗ್ಗೆ ಮತ್ತೆ ಕಾರ್ಯಾಚರಣೆ ಮುಂದುವರಿದಿದೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವು

    Published

    on

    ತೆಲಂಗಾಣ: ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವನ್ನಪ್ಪಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯ ಚಿಂತಕಣಿಲ್ಲಿ ಶುಕ್ರವಾರ ನಡೆದಿದೆ.

    ಅಂಜಲಿ ಕಾರ್ತಿಕಾ (9) ಮೃ*ತ ಬಾಲಕಿ. ಮೊಬೈಲ್​​​ನಲ್ಲಿ ಆಟವಾಡುತ್ತಿರುವ ವೇಳೆ ಚಾರ್ಜ್ ಖಾಲಿಯಾಗಿದ್ದು, ಅಂಜಲಿ ಮೊಬೈಲ್ ಚಾರ್ಜ್ ಮಾಡಲು ಹೋಗಿದ್ದಾಳೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿದ್ದು, ಬಾಲಕಿ ಕುಸಿದು ಬಿದ್ದಿದ್ದಾಳೆ.

    ಕುಸಿದು ಬಿದ್ದು ಒದ್ದಾಡುತ್ತಿರುವ ಬಾಲಕಿಯನ್ನು ಗಮನಿಸಿದ ಆಕೆಯ ಪೋಷಕರು ತಕ್ಷಣ ಗ್ರಾಮದ ಖಾಸಗಿ ವೈದ್ಯರ ಬಳಿ ಕರೆದೊಯ್ದಿದ್ದಾರೆ. ಆದರೆ ಬಾಲಕಿ ಅದಾಗಲೇ ಮೃ*ತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

    ಬಾಲಕಿ ಆಟವಾಡುತ್ತಿದ್ದಂತೆ ಒದ್ದೆ ಕೈಯಲ್ಲಿ ಹೋಗಿ ವಿದ್ಯುತ್ ಸ್ಪರ್ಶಿಸಿರುವುದೇ ಸಾವಿಗೆ ಕಾರಣ ಎಂದು ತಿಳಿದುಬಂದಿದೆ. ಕೆಲ ಹೊತ್ತಿನ ಹಿಂದೆ ಮನೆಯಲ್ಲಿ ಕುಣಿದು ಕುಪ್ಪಳಿಸುತ್ತಾ ಆಟವಾಡುತ್ತಿದ್ದ ಬಾಲಕಿ ಏಕಾಏಕಿ ಪ್ರಾ*ಣ ಕಳೆದುಕೊಂಡಿರುವುದನ್ನು ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

    ಮೃ*ತ ಬಾಲಕಿ ಅಂಜಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿ. ತಂದೆ ರಾಮಕೃಷ್ಣ ದೂರಿನ ಮೇರೆಗೆ ಎಸ್‌ಎಸ್‌ಐ ನಾಗುಲ್ಮೀರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Continue Reading

    DAKSHINA KANNADA

    ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ

    Published

    on

    ಚಾರ್ಮಾಡಿ: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಆದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ.

    ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಚಾರ್ಮಾಡಿಘಾಟ್‌ನ 10ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು ಚಾರ್ಮಾಡಿ ಘಾಟ್​ನಿಂದ ಕೊಟ್ಟಿಗೆಹಾರದವರೆಗೂ ವಾಹನಗಳು ನಿಂತಲ್ಲೇ ನಿಂತಿದ್ದವು. ಬಳಿಕ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಯ್ತು.

    ಅತ್ತ ಮಂಗಳೂರಿಗೆ ತೆರಳುವವರನ್ನು ಪೊಲೀಸರು ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲೇ ವಾಹನಗಳನ್ನು ತಡೆದು ವಾಪಸ್ ಕಳಿಸಿದ್ದಾರೆ. ಅತ್ತ ಉಜಿರೆ ಬಳಿಯೂ ಚಾರ್ಮಾಡಿ ಘಾಟ್ ಪ್ರವೇಶ ನಿರ್ಬಂಧಿಸಲಾಗಿತ್ತು.

    Continue Reading

    DAKSHINA KANNADA

    ಅರ್ಜುನ್​ ಪತ್ತೆಗೆ ಸೇನೆಗೆ ಸಹಾಯ..! ಶಿರೂರಿಗೆ ಈಶ್ವರ ಮಲ್ಪೆಗೆ ಬುಲಾವ್..!

    Published

    on

    ಅಂಕೋಲ: ಶಿರೂರು ಗುಡ್ಡ ಕುಸಿತ ಪ್ರಕರಣ ಸಂಭವಿಸಿ ಇಂದಿಗೆ 12 ದಿನವಾಗಿದೆ. ನಾಪತ್ತೆಯಾದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ನದಿಯ ದಡದಲ್ಲಿ ಈಗಾಗಲೇ ಹುಡುಕಾಟ ಮುಗಿದಿದ್ದು, ಲಾರಿ ಮತ್ತು ಚಾಲಕ ಅರ್ಜುನ್​ ನದಿಯೊಳಗೆ ಇದ್ದಾರೆ ಎಂದು ಹೇಳಲಾಗುತ್ತಿದೆ. ಅತ್ತ ಗೋಕಾಕ್ ನಿಂದ ಬಂದ ಪೋಕ್ಲೈನ್ ತನ್ನ ಕೆಲಸ ಮುಗಿಸಿದ್ದು, ವಾಪಾಸ್ ಆಗುತ್ತಿದೆ.

    ಇಂದು ಅರ್ಜುನ್​ಗಾಗಿ ಮುಳುಗು ತಜ್ಞರಿಂದ ಹುಡುಕಾಟ ನಡೆಯಲಿದೆ. ಈಶ್ವರ್ ಮಲ್ಪೆ ತಂಡ ಇಂದು ಶಿರೂರಿಗೆ ಬರಲಿದ್ದು, ಅರ್ಜುನ್​​ಗಾಗಿ ಹುಡುಕಾಡಲಿದ್ದಾರೆ. ಜಿಲ್ಲಾಡಳಿತದ ಮನವಿ ಮೇರೆಗೆ ಮುಳುಗು ತಜ್ಞರ ತಂಡ ಶಿರೂರಿಗೆ ಆಗಮಿಸಲಿದ್ದಾರೆ.

     

    ಗಂಗಾವಳಿ ನದಿಯಲ್ಲಿ ನೀರಿನ ವೇಗ ಹೆಚ್ಚಿರುವ ಹಿನ್ನಲೆಯಲ್ಲಿ, ನೀರಿನೊಳಗೆ ಹೋಗಲು ನೌಕಾದಳದ ಮುಳುಗು ತಜ್ಞರು ಹಿಂದೇಟು ಹಾಕಿದ್ದಾರೆ. ಈ ವೇಳೆ ಶಾಸಕ ಸತೀಶ್ ಸೈಲ್ ಸ್ಥಳೀಯ ಮೀನುಗಾರ ಹಾಗೂ ಈಶ್ವರ್ ಮಲ್ಪೆ ಸಹಾಯ ಕೇಳಿದ್ದಾರೆ.

    ಇಂದು ಅರ್ಜುನ್​ ಮತ್ತು ಲಾರಿ ಪತ್ತೆಯಾದರೆ ನದಿಯ ಕೆಳಗೆ ಸುಮಾರು 20 ಅಡಿ ಆಳದಲ್ಲಿರುವ ಲಾರಿ ಮೇಲಕ್ಕೆ ಎತ್ತಲು ಪ್ರಯತ್ನ ನಡೆಯಲಿದೆ.

    Continue Reading

    LATEST NEWS

    Trending