Sunday, May 22, 2022

ಮಾವಿನಕಾಯಿ ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ: ಚೆಲ್ಲಾಪಿಲ್ಲಿಯಾದ ಮಾವು

ಮಂಡ್ಯ: ಮಾವಿನಕಾಯಿಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಮದ್ದೂರು ಪಟ್ಟಣದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುರಸಭೆ ಕಚೇರಿ ಬಳಿ ಪಲ್ಟಿಯಾಗಿ, ರಸ್ತೆ ತುಂಬೆಲ್ಲಾ ಮಾವಿನ ಕಾಯಿ ಚೆಲ್ಲಿದೆ.


ಮೈಸೂರಿನ ಎಪಿಎಂಸಿ ಮಾರುಕಟ್ಟೆಯಿಂದ ಬುಧವಾರ ಮಾವಿನಕಾಯಿ ಲೋಡ್​ ಮಾಡಿಕೊಂಡು ಆಂಧ್ರಪ್ರದೇಶದ ಚಿತ್ತೂರಿಗೆ ಲಾರಿ ಹೋಗುತ್ತಿತ್ತು.

ಮಾರ್ಗಮಧ್ಯೆ ಮದ್ದೂರಲ್ಲಿ ಕಾರನ್ನು ಹಿಂದಿಕ್ಕುವ ಭರದಲ್ಲಿ ಹೋದ ಲಾರಿ ನಿಯಂತ್ರಣ ತಪ್ಪಿ ರಸ್ತೆಬದಿಗೆ ಪಲ್ಟಿಯಾಗಿದೆ. ರಸ್ತೆಬದಿ ಮಾವಿನ ಕಾಯಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.

ಚಾಲಕ ಮತ್ತು ಕ್ಲೀನರ್​ ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳಕ್ಕೆ ಮದ್ದೂರು ಸಂಚಾರಿ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದರು. ಸಂಚಾರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ದೈವಸ್ಥಾನಕ್ಕೆ ಕನ್ನ ಹಾಕಿದ ಮಣಿಪಾಲದ ಭಾಸ್ಕರ..!

ಉಡುಪಿ: ಹಿರೇಬೆಟ್ಟು ದೈವಸ್ಥಾನ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಹಿರೇಬೆಟ್ಟು ಭಾಸ್ಕರ ಶೆಟ್ಟಿ (49) ಬಂಧಿತ ಆರೋಪಿ. 10 ದಿನಗಳ ಹಿಂದೆ ಬಾಳಕಟ್ಟು ಬೀಡುಮನೆ ದೈವಸ್ಥಾನಕ್ಕೆ ನುಗ್ಗಿದ ಆರೋಪಿ...

ಏಕಲವ್ಯ ಪ್ರಶಸ್ತಿ ವಿಜೇತ ಕಬಡ್ಡಿ ಆಟಗಾರ ಉದಯ್ ಚೌಟ ಇನ್ನಿಲ್ಲ

ಬಂಟ್ವಾಳ: ಏಕಲವ್ಯ ಪ್ರಶಸ್ತಿ ವಿಜೇತ ಕಬಡ್ಡಿ ಆಟಗಾರ, ಉದಯ್ ಚೌಟ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.ಬಂಟ್ವಾಳ ತಾಲೂಕು ಮಾಣಿಯ ಬದಿಗುಡ್ಡೆ ನಿವಾಸಿಯಾಗಿರುವ ಉದಯ್ ಚೌಟ ಕಬಡ್ಡಿ ಕ್ಷೇತ್ರದಲ್ಲಿ ತಮ್ಮದೇ ಆದ ಹೆಸರು ಮಾಡಿದ್ದರು.ಅಲ್ಲದೇ ದ.ಕ...

ಮನಪಾ ವ್ಯಾಪ್ತಿಯಲ್ಲಿ 1 ಕೋಟಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

ಮಂಗಳೂರು: ಮಹಾನಗರ ಪಾಲಿಕೆಯ ಕದ್ರಿ ದಕ್ಷಿಣ ವಾರ್ಡಿನಲ್ಲಿ 1 ಕೋಟಿ ವೆಚ್ಚದಲ್ಲಿ ರಾಜಕಾಲುವೆಯ ಆಯ್ದ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.ಈ ಕುರಿತು ಮಾತನಾಡಿದ ಅವರು, ಕದ್ರಿ...