ನವದೆಹಲಿ: ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರಂತೆ ‘ಸುಳ್ಳು’ ಪ್ರಕರಣವೊಂದರಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಶೀಘ್ರವೇ ಬಂಧಿಸಲಾಗುತ್ತದೆ ಎಂದು ಬಿಜೆಪಿ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜೈನ್ ಅವರನ್ನು ಸುಳ್ಳು ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ಬಂಧಿಸಲಿದ್ದಾರೆ ಎಂದು ಕೆಲವು ತಿಂಗಳ ಹಿಂದೆಯೇ ನನಗೆ ವಿಶ್ವಾಸಾರ್ಹ ಮೂಲಗಳಿಂದ ವಿಷಯ ತಿಳಿದುಬಂದಿತ್ತು.
ಇದೀಗ ಮತ್ತೊಂದು ಸುಳ್ಳು ಪ್ರಕರಣದಲ್ಲಿ ಮನೀಷ್ ಸಿಸೋಡಿಯಾ ಅವರನ್ನು ಮುಂದಿನ ದಿನಗಳಲ್ಲಿ ಬಂಧಿಸಬಹುದು ಎಂದು ಅದೇ ಮೂಲಗಳಿಂದ ನನಗೆ ಮಾಹಿತಿ ಸಿಕ್ಕಿದೆ’ ಎಂದು ಹೇಳಿದ್ದಾರೆ.