Connect with us

DAKSHINA KANNADA

ಮಂಜನಾಡಿ ಗ್ಯಾಸ್ ಸ್ಪೋ*ಟ ಪ್ರಕರಣ : ಮತ್ತೋರ್ವ ಬಾಲಕಿ ಸಾ*ವು, ಕುಟುಂಬಕ್ಕೆ ಯು.ಟಿ.ಖಾದರ್ ಸಾಂತ್ವನ

Published

on

ಉಳ್ಳಾಲ : ಡಿಸೆಂಬರ್ 8 ರಂದು ಉಳ್ಳಾಲದ ಮಂಜನಾಡಿಯಲ್ಲಿ ನಡೆದಿದ್ದ ಗ್ಯಾಸ್ ಸ್ಫೋ*ಟ ಪ್ರಕರಣದಲ್ಲಿ ಸಾ*ವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ರಾತ್ರಿ ಮನೆಯವರು ಮಲಗಿದ್ದ ವೇಳೆ ನಡೆದಿದ್ದ ಗ್ಯಾಸ್ ಸ್ಪೋ*ಟದಿಂದ ತಾಯಿ ಹಾಗೂ ಮೂವರು ಮಕ್ಕಳು ಗಂಭೀ*ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಡಿಸೆಂಬರ್ 13 ರಂದು ತಾಯಿ ಖುಬ್ರಾ ಮೃ*ತಪಟ್ಟಿದ್ದರೆ, ಡಿಸೆಂಬರ್ 26 ರಂದು ಹಿರಿಯ ಪುತ್ರಿ ಝುಲೇಖ ಮೆಹದಿಯಾ ಇಹಲೋಕ ತ್ಯಜಿಸಿದ್ದರು.

ಇದೀಗ ಕೊನೆಯ ಪುತ್ರಿ 9 ವರ್ಷ ಪ್ರಾಯದ ಫಾತಿಮತ್ ಮಾಯಿಝ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ.  ಇನ್ನೊಂದು ಹೆಣ್ಣು ಮಗು ಮಝಿಯಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಯು.ಟಿ.ಖಾದರ್ ಸಾಂತ್ವನ:

ಗಾ*ಯಾಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಸ್ಪೀಕರ್ ಯು.ಟಿ ಖಾದರ್ ಭೇಟಿ ನೀಡಿದ್ದಾರೆ. ಮನೆಯಲ್ಲಿ ಇದ್ದ ಹೆಚ್ಚುವರಿ ಗ್ಯಾಸ್ ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆ ಆಗಿ ಈ ಸ್ಪೋ*ಟ ಸಂಭಿಸಿದೆ ಎಂದು ಮೇಲ್ನೋಟಕ್ಕೆ ಗೊತ್ತಾಗಿತ್ತು. ಗ್ಯಾಸ್ ಏಜನ್ಸಿ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : 147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಹೊಸ ದಾಖಲೆ ನಿರ್ಮಿಸಿದ ಬುಮ್ರಾ !

ಘಟನೆ ನಡೆದ ಮನೆಗೆ ಸ್ಪೀಕರ್ ಖಾದರ್  ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಈ ಘಟನೆಯ ಪರಿಹಾರದ ವಿಚಾರವಾಗಿ ಯಾರೂ  ರಾಜಕೀಯ ಮಾಡಬಾರದು ಅಂತ ಮನವಿ ಮಾಡಿದ್ದಾರೆ. ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗಿದೆ . ಚಿಕಿತ್ಸೆಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನೂ ಮಾಡಲಾಗಿದೆ ಎಂದು ಖಾದರ್ ಹೇಳಿದ್ದಾರೆ.

 

DAKSHINA KANNADA

ಭೀ*ಕರ ಅ*ಪಘಾ*ತಕ್ಕೊಳಗಾಗಿ ದ್ವಿಚಕ್ರ ಸವಾರ ಸಾ*ವು

Published

on

ಉಳ್ಳಾಲ: ಲಾರಿಗೆ ದ್ವಿಚಕ್ರ ವಾಹನವೊಂದು ಡಿ*ಕ್ಕಿ ಹೊಡೆದ ಪರಿಣಾಮ ವಾಹನ ಸವಾರ ಸ್ಥಳದಲ್ಲೇ ಮೃ*ತಪಟ್ಟ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಸಂಕೋಲಿಗೆ ಬಳಿ ನಿನ್ನೆ (ಡಿ.31) ತಡರಾತ್ರಿ ಸಂಭವಿಸಿದೆ.

ದೇರಳಕಟ್ಟೆ ಸಮೀಪದ ಪನೀರ್‌ ನಿವಾಸಿ ಅಝರ್ ಮೃ*ತ ವ್ಯಕ್ತಿ ಎಂದು ತಿಳಿದು ಬಂದಿದೆ.

ಮೃ*ತ ವ್ಯಕ್ತಿ ಸ್ಕೂಟರ್ ನಲ್ಲಿ ಬರುತ್ತಿದ್ದಾಗ ಕೇರಳ ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಈ ಸಂದರ್ಭ ರಸ್ತೆಗೆ ಎಸೆಯಲ್ಪಟ್ಟ ಸವಾರನ ಮೇಲೆ ಲಾರಿ ಚಲಿಸಿದ ಪರಿಣಾಮ ಸ್ಥಳದಲ್ಲೇ ಸಾ*ವನ್ನಪ್ಪಿದ್ದಾನೆ. ಅಝರ್‌ನ ಮೃ*ತದೇಹವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

BELTHANGADY

ಹೊಸ ವರ್ಷಾಚರಣೆ ಹಿನ್ನೆಲೆ: ಧರ್ಮಸ್ಥಳದಲ್ಲಿ ಭಕ್ತ ಸಾಗರ

Published

on

ಮಂಗಳೂರು: ಹೊಸ ವರ್ಷಾರಂಭ ಸಂದರ್ಭದಲ್ಲಿ ಕರ್ನಾಟಕ ಕರಾವಳಿಯ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದು ಬಂದಿದೆ. ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನ ಹಾಗೂ ಧರ್ಮಸ್ಥಳ ಮಂಜುನಾಥೇಶ್ವರ ದೇಗುಲಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಭಕ್ತರು ದೇಗುಲಗಳಿಗೆ ಆಗಮಿಸಿ ದೇವರ ದರ್ಶನ ಪಡೆದು ಹೊಸ ವರ್ಷದ ದಿನಾರಂಭ ಮಾಡುತ್ತಿದ್ದಾರೆ.

ಕದ್ರಿ ಮಂಜುನಾಥ ದೇಗುಲಕ್ಕೆ ಬೆಳ್ಳಗ್ಗಿನಿಂದಲೂ ನೂರಾರು ಭಕ್ತರು ಆಗಮಿಸುತ್ತಿದ್ದಾರೆ. ದೇವಳದ ಕೆರೆಯಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿದ್ದಾರೆ. ದೇವಳದ ಮುಂದೆ ಕಲಶ ಸ್ನಾನ ಮಾಡುತ್ತಿದ್ದಾರೆ. ಕದ್ರಿ ದೇವಳದಲ್ಲಿ ಕಲಶ ಸ್ನಾನ ಸೇವೆ ಸಾಕಷ್ಟು ಪ್ರಸಿದ್ಧಿ ಪಡೆದಿದೆ.

ಹೊಸ ವರ್ಷಾರಂಭದ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಭಕ್ತ ಸಾಗರವೇ ನೆರೆದಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರ ದಂಡು ಮಂಜುನಾಥ ಸ್ವಾಮಿಯ ದರ್ಶನಕ್ಕೆ ಮುಗಿಬಿದ್ದಿದೆ. ಬೆಂಗಳೂರು ಹಾಗೂ ಉತ್ತರ ಕರ್ನಾಟಕ ಭಾಗದಿಂದ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಸದ್ಯ ದೇವಸ್ಥಾನದ ಕ್ಯೂ ಸೆಂಟರ್ನಲ್ಲಿ ಭಾರೀ ಜನಜಂಗುಳಿ ಏರ್ಪಟ್ಟಿದೆ.

ದೇವಸ್ಥಾನದ ಮುಂಭಾಗದಲ್ಲಿಯೂ ಭಾರೀ ಸಂಖ್ಯೆಯಲ್ಲಿ ಭಕ್ತ ಸಮೂಹ ಸೇರಿದ್ದು, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ.

Continue Reading

DAKSHINA KANNADA

ಭೀ*ಕರ ರಸ್ತೆ ಅ*ಪಘಾತ ; ಯಕ್ಷಗಾನ ಯುವ ಕಲಾವಿದ ಸಾ*ವು

Published

on

ಮಂಗಳೂರು : ಭೀ*ಕರ ರಸ್ತೆ ಅ*ಪಘಾತದಲ್ಲಿ ವಿಟ್ಲ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಯೋರ್ವ ಮೃ*ತಪಟ್ಟ ಘಟನೆ ಅರ್ಕುಳ ಬಳಿ ನಿನ್ನೆ (ಡಿ.31) ನಡೆದಿದೆ.

ಪ್ರವೀತ್ ಆಚಾರ್ಯ (22) ಮೃ*ತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ದೇಲಂತಬೆಟ್ಟು ನಿವಾಸಿ ಯಕ್ಷಗಾನ ಕಲಾವಿದ ಮೇಳದಲ್ಲಿ ಸ್ತ್ರೀವೇಷಧಾರಿಯಾಗಿದ್ದ ಪ್ರವೀತ್‌ ನಿನ್ನೆ (ಡಿ.31) ಬಜಪೆ ಬಳಿಯ ಮೂಡುಕೆರೆ ಕಂದಾವರ ಬೈಲಿನಲ್ಲಿ ನಿಗದಿಯಾಗಿದ್ದ ಮೇಳದ ಯಕ್ಷಗಾನಕ್ಕೆ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಮೂಡುಕೆರೆ ಫ್ರೆಂಡ್ಸ್ ಸರ್ಕಲ್ ಇವರ ಹೊಸವರ್ಷದ ಅಂಗವಾಗಿ “ಕಥೆಗಾರ್ತಿ ಕಲ್ಪನ” ಪ್ರಸಂಗ ನಡೆಯಬೇಕಿತ್ತು. ಕಲ್ಪನ ಪಾತ್ರದಾರಿ ಅಪಘಾತಕ್ಕೆ ಬಲಿಯಾದ ಹಿನ್ನಲೆ, “ಕಲ್ಜಿಗದ ಸತ್ಯ” ಎಂಬ ಪ್ರಸಂಗವನ್ನು ಆಡಲಾಯಿತು. ಕಲಾವಿದನ ಅಗಲಿಕೆಯ ಸುದ್ಧಿ ತಿಳಿದು ಊರಿನವರ ಸಮ್ಮುಖದಲ್ಲಿ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಇದನ್ನೂ ಓದಿ : ನ್ಯೂ ಇಯರ್‌ ಪಾರ್ಟಿಗೆ ಗೋವಾಗೆ ತೆರಳುತ್ತಿದ್ದಾಗ ಅಪಘಾತ – 10 ಮಂದಿಗೆ ಗಾಯ

 

ಪ್ರವೀತ್ ವಿಟ್ಲ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಯಾಗಿದ್ದು, ಸಸಿಹಿತ್ಲು ಭಗವತೀ ಯಕ್ಷಗಾನ ಮೇಳದ ಕಲಾವಿದನಾಗಿದ್ದ. ಸಸಿಹಿತ್ಲು ಮೇಳದ ಭರವಸೆಯ ಯುವ ಕಲಾವಿದ ಪ್ರವೀತ್ ಆಚಾರ್ಯ ಎಲ್ಲರೊಂದಿಗೆ ಬೆರೆಯುತ್ತಾ, ಸದಾ ಕ್ರಿಯಾಶೀಲತೆಯಿಂದ ಹಿರಿಯರನ್ನು ಗೌರವಿಸುತ್ತಾ, ಕಿರಿಯರೊಂದಿಗೆ ಸ್ನೇಹಿತನಂತೆ ಇರುತ್ತಿದ್ದ ಕಲಾವಿದನ ಅ*ಗಲುವಿಕೆ ಸಸಿಹಿತ್ಲು ಮೇಳಕ್ಕೆ ಬರಸಿಡಿಲು ಬಡಿದಂತಾಗಿದೆ.

Continue Reading

LATEST NEWS

Trending

Exit mobile version