LATEST NEWS
ಮಂಜನಾಡಿ ಗ್ಯಾಸ್ ದುರಂತ: ವಿದ್ಯಾರ್ಥಿಗಳಿಗಾಗಿ ದಿನಾ ಆಸ್ಪತ್ರೆಗೆ ತೆರಳಿ ದೈರ್ಯ ತುಂಬಿದ್ದ ಶಿಕ್ಷಕ ಸಂತೋಷ್
Published
5 days agoon
By
NEWS DESK2ಕೊಣಾಜೆ: ಶಿಕ್ಷಕರೆಂದರೆ ಕೇವಲ ಬೋಧಕರು ಮಾತ್ರವಲ್ಲ ಹೃದಯವಂತರೂ ಹೌದು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ತನ್ನಲ್ಲಿರುವ ಜ್ಞಾನವನ್ನು ಧಾರೆಯೆರೆಯುವ ಶಿಕ್ಷಕರು ವಿದ್ಯಾರ್ಥಿಗಳ ಬದುಕಿಗಾಗಿ ಮಾನವೀಯತೆಯನ್ನೂ ಮೆರೆದಿರುವ ಉದಾಹರಣೆಗಳೂ ಇವೆ. ಇದಕ್ಕೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಮೊಂಟೆಪದವು ಇಲ್ಲಿಯ ಮುಖ್ಯೋಪಾಧ್ಯಾಯ ರಾದ ಸಂತೋಷ್ ಅವರು ಸಾಕ್ಷಿಯಾಗಿದ್ದಾರೆ.
ಡಿ.8ರಂದು ಮಂಜನಾಡಿಯಲ್ಲಿ ಗ್ಯಾಸ್ ದುರಂತ ಸಂಭವಿಸಿ ತಾಯಿ ಹಾಗೂ ಮೂವರು ಮಕ್ಕಳು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಗಂಭೀರ ಗಾಯಗೊಂಡ ಒಂಭತ್ತನೇ ತರಗತಿಯ ಮೆದಿಯಾ, ಏಳನೆ ತರಗತಿಯ ಮಾಝಿಯಾ ಮತ್ತು ನಾಲ್ಕನೇ ತರಗತಿಯ ಮಾಯಿಝ ಅವರು ಸಂತೋಷ್ ಅವರು ಮುಖ್ಯೋಪಾಧ್ಯಾಯರಾಗಿರುವ ಮೊಂಟೆಪದವು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಾಗಿದ್ದರು.
ಮಂಜುನಾಡಿಯ ಗ್ಯಾಸ್ ಸ್ಪೋಟ ದುರಂತದ ನೋವಿನ ನಡುವೆಯೂ ಮಾನವೀಯ ಸಂದೇಶ ನೀಡುವ ಕೆಲಸವನ್ನು ಮೊಂಟೆಪದವು ಸರ್ಕಾರಿ ಶಾಲೆಯ ಶಿಕ್ಷಕರು ಮಾಡಿದ್ದಾರೆ. ದುರಂತದಲ್ಲಿ ತಮ್ಮದೇ ಶಾಲೆಯ ಮೂವರು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿರುವುದು ಕಂಡು ಇಡೀ ಶಿಕ್ಷಕ ವೃಂದವೇ ಕಣ್ಣೀರಿಟ್ಟಿದೆ. ಮುಖ್ಯ ಶಿಕ್ಷಕ ಸಂತೋಷ್ ಅವರಂತು ಘಟನೆ ನಡೆದ ದಿನದಿಂದ ಆಸ್ಪತ್ರೆಯನ್ನು ಬಿಟ್ಟು ಕದಲದೆ ಮಕ್ಕಳ ಆರೋಗ್ಯ ವಿಚಾರಿಸಿ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.
ಮಕ್ಕಳ ಚೇತರಿಕೆಗಾಗಿ ಶಾಲೆಯಲ್ಲಿ ನಿತ್ಯ ವಿಶೇಷ ಪ್ರಾರ್ಥನೆ ಸಲ್ಲಿಸುವುದರ ಜೊತೆಗೆ ಮಕ್ಕಳ ಚಿಕಿತ್ಸೆಗೆ ಲಕ್ಷಕ್ಕೂ ಅಧಿಕ ಹಣ ಹೊಂದಿಸಿ ಆಸ್ಪತ್ರೆಗೆ ನೀಡಿದ್ದಾರೆ. ಆದ್ರೆ ವಿಧಿಯಾಟದಲ್ಲಿ ಮೊದಲು ತಾಯಿ ಬಳಿಕ ಇಬ್ಬರು ಮಕ್ಕಳು ಇಹಲೋಕ ತ್ಯಜಿಸಿದ್ದಾರೆ. ಈ ವೇಳೆ ಕುಟುಂಬದ ಸದಸ್ಯರಷ್ಟೇ ನೊಂದುಕೊಂಡವರು ಮುಖ್ಯೋಪಾದ್ಯಾಯ ಸಂತೋಷ್. ಅಗಲಿದವರ ಅಂತಿಮ ಯಾತ್ರೆಯಲ್ಲಿ ಭಾಗಿಯಾಗಿ ಅವರ ಧಪನ ಮುಗಿದ ಬಳಿಕವೂ ಮೂವರ ಖಬರ್ ಬಳಿ ನಿಂತು ಕಣ್ಣೀರಿಟ್ಟಿದ್ದಾರೆ.
ಶಾಲಾ ಶಿಕ್ಷಕಿಯರಾದ ಪ್ರಮಿಳಾ ಮತ್ತು ಆಶಾ ಮಕ್ಕಳ ದಾಖಲೆ ಪತ್ರಗಳನ್ನು ಬೆಂಕಿಗೆ ಆಹುತಿಯಾದ ಮನೆಯಿಂದ ಜಾಗೃತೆಯಾಗಿ ಎತ್ತಿಟ್ಟಿದ್ದಾರೆ. ಶಿಕ್ಷಣ ಇಲಾಖೆ, ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗಳಿಗೆ ಅಲೆದಾಡಿ ಮಕ್ಕಳ ಚಿಕಿತ್ಸೆಗೆ ಇಲಾಖೆಯಿಂದ ಸಹಕಾರಕ್ಕಾಗಿ ಪ್ರಯತ್ನ ಪಟ್ಟಿದ್ದಾರೆ. ಇನ್ನು ಶಾಲೆಯಲ್ಲಿ ಈ ಮಕ್ಕಳ ಸಹಪಾಠಿಗಳು ಪ್ರತಿದಿನ ಕಣ್ಣೀರಿಟ್ಟಿದ್ದು, ಚಿಕಿತ್ಸೆ ಫಲಕಾರಿಯಾಗಲಿ ಅಂತ ದೇವರಲ್ಲಿ ಪ್ರಾರ್ಥಿಸಿದ್ದಾರೆ. ಆದ್ರೆ ವಿಧಿಯಾಟದಲ್ಲಿ ಯಾವುದೂ ಫಲಿಸದೆ ಸುಟ್ಟ ಗಾಯದಿಂದ ನರಳಾಡಿದ ತಾಯಿ ಹಾಗೂ ಇಬ್ಬರು ಮಕ್ಕಳು ಇಹಲೋಕದ ಯಾತ್ರೆಯನ್ನು ಮುಗಿಸಿದ್ದಾರೆ. ಶಾಲೆಯಲ್ಲಿ ಕಲಿಯುವ ಪ್ರತಿಯೊಂದು ಮಕ್ಕಳೂ ನಮ್ಮ ಮನೆಯ ಮಕ್ಕಳ ಎಂಬ ರೀತಿಯಲ್ಲಿ ಪ್ರೀತಿಸುವ ಇಂತಹ ಶಿಕ್ಷಕರನ್ನು ಪಡೆದ ಈ ಮಕ್ಕಳು ನಿಜಕ್ಕೂ ದನ್ಯರು ಅಂತ ಊರಿನ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
LATEST NEWS
ರೋಹಿತ್ ಶರ್ಮಾ ಅವರ ಹೆಂಡತಿಗೆ ಕಳುಹಿಸಲಾದ ಸಂದೇಶವನ್ನು ಅಳಿಸಿ ಹಾಕಿದ ಆರ್.ಅಶ್ವಿನ್ !
Published
8 hours agoon
06/01/2025By
NEWS DESK3ಮಂಗಳೂರು/ಮುಂಬೈ: ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೇಹ್ ಅವರ ಖಾತೆಯೊಂದಿಗೆ ಆರ್ ಅಶ್ವಿನ್ ವಿಚಿತ್ರವಾದ ಸಂವಹನ ನಡೆಸಿದ್ದರು.
ಹಿರಿಯ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಇತ್ತೀಚೆಗೆ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದರು. ಈ ಬಗ್ಗೆ ಹಿರಿಯ ಕ್ರಿಕೆಟಿಗರು ಅಪಸ್ವರಗಳನ್ನು ತೆಗೆದಿದ್ದರು. ಆದರೆ ಅಶ್ವಿನ್ ಅವರು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೇಹ್ ಅವರ ಖಾತೆಯೊಂದಿಗೆ ವಿಚಿತ್ರವಾದ ಸಂವಹನ ನಡೆಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ನಿನ್ನೆ ಮುಕ್ತಾಯಗೊಂಡ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸಿಡ್ನಿ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಈ ಸರಣಿಯನ್ನು 1-3 ರಿಂದ ಸೋತಿದರಿಂದ್ದ, @Nishitha018 ಎಂಬ ಎಕ್ಸ್ ನಲ್ಲಿನ ಬಳಕೆದಾರರು ಮೈಕ್ರೋ ಬ್ಲಾಗಿಂಗ್ ಪ್ಲಾಟ್ ಫಾರ್ಮ್ ಬಳಸಿ ಪ್ರೋಫೈಲ್ ನಲ್ಲಿ ರಿತಿಕಾ ಅವರ ಹೆಸರು ಮತ್ತು ಫೋಟೋ ಎಡಿಟ್ ಮಾಡಿ ಹಾಕಿದ್ದರು. ಇದರಲ್ಲಿ, “ಆಸ್ಟ್ರೇಲಿಯಾದವರು ನಮ್ಮನ್ನು ಸ್ವಚ್ಛಗೊಳಿಸಬಹುದು ಎಂದು ಭಾವಿಸಿದ್ದಾರೆ” ಎಂದು ಕಾಮೆಂಟ್ ಹಾಕಿದ್ದಾರೆ.
ಇದನ್ನೂ ಓದಿ: ಟೀಂ ಇಂಡಿಯಾಗೆ ಮತ್ತೊಂದು ಆಘಾತ; ನಿವೃತ್ತಿ ಘೋಷಿಸಿದ ಸ್ಟಾರ್ ಆಲ್ ರೌಂಡರ್
ಇದು ರಿತಿಕಾ ಅವರ ಅಧಿಕೃತ ಖಾತೆ ಎಂದು ತಿಳಿದು, “ಹಾಯ್ ರಿತಿಕಾ, ಹೇಗಿದ್ದೀರಿ? ನಿಮ್ಮ ಚಿಕ್ಕ ಮಗುವಿಗೆ ಮತ್ತು ಕುಟುಂಬಕ್ಕೆ ನಮಸ್ಕಾರಗಳು”, ಎಂದು ಅಶ್ವಿನ್ ಪ್ರತಿಕ್ರಿಯಿಸಿದ್ದಾರೆ.
ಇದಕ್ಕೆ ರಿತಿಕಾ ಅವರ ಹೆಸರಿನ ಬಳಕೆದಾರ, “ನಾನು ಚೆನ್ನಾಗಿದ್ದೇನೆ ಆಶ್ವಿನ್ ಅಣ್ಣ” ಎಂದು ಬಳಕೆದಾರರು ಉತ್ತರಿಸಿದರು.
ಇದರಿಂದ ಅನುಮಾನಗೊಂಡ ಅಶ್ವಿನ್ ತನ್ನ ಸಂದೇಶವನ್ನು ತಕ್ಷಣ ಅಳಿಸಲು ಪ್ರಯತ್ನಿಸಿದರು. ಆದರೆ ಅದು ಸಾಧ್ಯವಾಗಲಿಲ್ಲ. ಆದರೆ ಅಶ್ವಿನ್ ಅವರು ಮಾಡಿದ ಕಾಮೆಂಟ್ ಈಗ ಸಖತ್ ವೈರಲ್ ಆಗುತ್ತಿದ್ದು, ನೆಟ್ಟಿಗರು ಸಖತ್ ಟಾಂಗ್ ಕೊಡುತ್ತಿದ್ದಾರೆ.
ಇತ್ತೀಚೆಗೆ ರೋಹಿತ್ ಶರ್ಮಾ ದಂಪತಿಗಳು ನವೆಂಬರ್ ನಲ್ಲಿ ‘ಅಹಾನ್’ ಎಂಬ ಗಂಡು ಮಗುವನ್ನು ಬರಮಾಡಿಕೊಂಡರು. ಇದರಿಂದ ಪರ್ತ್ ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ದದ ಟೆಸ್ಟ್ ಸರಣಿಯ ಆರಂಭಿಕ ಪಂದ್ಯವನ್ನು ತಪ್ಪಿಸಿಕೊಂಡಿದ್ದರು. ಅವರ ಅಲಭ್ಯತೆಯಿಂದಲೂ ಭಾರತ ತಂಡ ಪರ್ತ್ ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿತ್ತು.
ಕೊನೆಯ ನಿರ್ಣಾಯಕ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಅವರು ತಮ್ಮ ಕಳಪೆ ಫಾರ್ಮ್ ನಿಂದಾಗಿ ತಂಡದಿಂದ ಹೊರಗುಳಿಯಲು ನಿರ್ಧರಿಸಿದರು. ಆದಾಗ್ಯೂ ಈ ಪಂದ್ಯದಲ್ಲಿ ಭಾರತ 6 ವಿಕೆಟ್ ಗಳಿಂದ ಸೋತಿದ್ದು, ಸರಣಿಯನ್ನು 1-3 ಅಂತರದಿಂದ ಕಳೆದುಕೊಂಡಿತು.
LATEST NEWS
ಶಿಕ್ಷಕಿಗೆ ನೋಟ್ಸ್ ತೋರಿಸುವಾಗ ಕುಸಿದುಬಿ*ದ್ದು ಮೂರನೇ ತರಗತಿ ವಿದ್ಯಾರ್ಥಿನಿ ಸಾ*ವು
Published
10 hours agoon
06/01/2025By
NEWS DESK4ಮಂಗಳೂರು/ಚಾಮರಾಜನಗರ : ಇತ್ತೀಚೆಗೆ ಹೃದಯಾ*ಘಾತ ಪ್ರಕರಣಗಳು ಹೆಚ್ಚುತ್ತಿವೆ. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರೂ ಹೃದಯಾ*ಘಾತಕ್ಕೆ ಬ*ಲಿಯಾಗುತ್ತಿದ್ದಾರೆ. ಇದೀಗ ಮತ್ತೊಂದು ಪ್ರಕರಣ ನಡೆದಿದೆ.
ಶಿಕ್ಷಕಿಗೆ ನೋಟ್ಸ್ ತೋರಿಸುವಾಗ ಕುಸಿದುಬಿ*ದ್ದು ಮೂರನೇ ತರಗತಿ ವಿದ್ಯಾರ್ಥಿನಿ ಇಹಲೋಕ ತ್ಯಜಿಸಿರುವ ಘಟನೆ ಚಾಮರಾಜನಗರದ ಸೇಂಟ್ ಫ್ರಾನ್ಸಿಸ್ ಶಾಲೆಯಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಬದನಗುಪ್ಪೆ ಗ್ರಾಮದ ನಿವಾಸಿ ಲಿಂಗರಾಜು, ಶ್ರುತಿ ದಂಪತಿಯ ಏಕೈಕ ಪುತ್ರಿ ತೇಜಸ್ವಿನಿ ಮೃ*ತ ಬಾಲಕಿ.
ಇದನ್ನೂ ಓದಿ : ಇಬ್ಬರು ಮಕ್ಕಳನ್ನು ಕೊಂ*ದು ನೇ*ಣಿಗೆ ಶರಣಾದ ದಂಪತಿ
ತೇಜಸ್ವಿನಿ ಎಂದಿನಂತೆ ಶಾಲೆಗೆ ಹೋಗಿದ್ದು, ತರಗತಿಯಲ್ಲಿ ಶಿಕ್ಷಕಿಗೆ ನೋಟ್ಸ್ ತೋರಿಸಲು ನಿಂತಿದ್ದಳು. ಈ ವೇಳೆ ಕುಸಿದುಬಿದ್ದಿದ್ದಾಳೆ. ಅಲ್ಲೇ ಮೂತ್ರ ವಿಸರ್ಜನೆ ಮಾಡಿಕೊಂಡಿದ್ದಾಳೆ. ತಕ್ಷಣ ಆಕೆಯನ್ನು ಶಾಲಾ ಸಿಬ್ಬಂದಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅಷ್ಟರಲ್ಲಾಗಲೇ ತೇಜಸ್ವಿನಿ ಕೊ*ನೆಯುಸಿರೆಳೆದಿದ್ದಳು ಎಂದು ತಿಳಿದುಬಂದಿದೆ. ಇದ್ದೊಬ್ಬ ಮಗಳನ್ನು ಕಳೆದುಕೊಂಡ ತಂದೆ – ತಾಯಿ ಶೋಕಸಾಗರದಲ್ಲಿ ಮುಳುಗಿದ್ದಾರೆ.
ಮಂಗಳೂರು : ಹಿರಿಯ ವಿದ್ಯಾರ್ಥಿಗಳ ಸಂಘದ ‘ದಶಮ ಸಂಭ್ರಮ’ ಕಾರ್ಯಕ್ರಮವು ಡಾ. ಪಿ. ದಯಾನಂದ ಪೈ -ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿಯಲ್ಲಿ ಜನವರಿ 3 ರಂದು ನಡೆದಿದೆ.
ಹಿರಿಯ ವಿದ್ಯಾರ್ಥಿಗಳ ಸಂಘದ ದಶಮಾನೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆದಿದ್ದು, ಲೋಗೋ ಅನಾವರಣ ಹಾಗೂ ಸ್ತಾತಕೋತ್ತರ ವಿದ್ಯಾರ್ಥಿಗಳಿಗೆ ನೆಟ್/ಕೆ.ಸೆಟ್ ಪರೀಕ್ಷೆಯ ಪೂರ್ವ ತಯಾರಿಯನ್ನು ಏರ್ಪಡಿಸಲಾಗಿತ್ತು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಡಿಪು ಇಲ್ಲಿನ ಸಮಾಜ ಶಾಸ್ತ್ರ ವಿಭಾಗದ ಸಹ ಪ್ರಾದ್ಯಪಕ, ಮಂಗಳೂರು ವಿಶ್ವವಿದ್ಯಾನಿಲದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕರಾಗಿರುವ ಡಾ. ಶೇಷಪ್ಪ ಕೆ. ಲೋಗೋ ಅನವಾರಣಗೊಳಿಸುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಗಾಂದಿನಗರ ಮಂಗಳೂರು ಇಲ್ಲಿನ ವಾಣಿಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಕರಾಗಿರುವ ಶ್ರೀ. ಯತೀನ್ ಸಂಪನ್ಮೂಲ ವ್ಯಕ್ತಿಯಾಗಿ ಹಾಜರಿದ್ದರು. ದಯಾನಂದ ಕಾಲೇಜಿನ ಪ್ರಾಂಶುಪಾಲರಾದ ಫ್ರೊ. ಜಯಕರ ಭಂಡಾರಿ ಎಂ. ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಐಕ್ಯೂಎಸಿಯ ಸಂಯೋಜಕ ದೇವಿಪ್ರಸಾದ್, ಸ್ತಾತಕೋತ್ತರ ವಿಭಾಗದ ಸಂಯೋಜಕ ಡಾ. ಲೋಕೇಶನಾಥ್, ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯೋಜಕರಾಗಿರುವ ನಾಗರಾಜ್ ಎಂ. , ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಧೀರಜ್ ಕುಮಾರ್ ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ತುಷಾರ್ ಕೆ. ವೇದಿಯಲ್ಲಿ ಉಪಸ್ಥಿತರಿದ್ದರು.
LATEST NEWS
ಇಬ್ಬರು ಮಕ್ಕಳನ್ನು ಕೊಂ*ದು ನೇ*ಣಿಗೆ ಶರಣಾದ ದಂಪತಿ
ದೆಹಲಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಬಂಪರ್ ಗ್ಯಾರೆಂಟಿ !
ಬಾಯ್ ಫ್ರೆಂಡ್ ಗಾಗಿ ಹುಡುಗಿಯರಿಬ್ಬರ ಬೀದಿ ಜಗಳ
ಸೆಂಟ್ರಿಂಗ್ ಮರದ ತುಂಡು ಬಿದ್ದು ಬಾಲಕಿ ಸಾವು ಕೇಸ್: ಎಂಜಿನಿಯರ್ ಪೊಲೀಸ್ ವಶಕ್ಕೆ
ಬರ್ತ್ಡೇ ದಿನದಂದೇ ಹಾಸ್ಟೆಲ್ ಕಟ್ಟಡದಿಂದ ಬಿದ್ದು ‘IIM’ ವಿದ್ಯಾರ್ಥಿ ಸಾವು
ಪತ್ರಕರ್ತನ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಪೊಲೀಸ್ ವಶಕ್ಕೆ
Trending
- DAKSHINA KANNADA5 days ago
ಬೊಜ್ಜು ಕರಗಿಸಲು ವ್ಯಾಯಾಮದ ಅಗತ್ಯ ಇಲ್ಲ : ಮಾತ್ರೆ ತಿಂದರೆ ಸಾಕು..!
- DAKSHINA KANNADA3 days ago
ಜಮೀನು ಮಾಲೀಕರಿಗೆ ಸಿಹಿ ಸುದ್ದಿ ನೀಡಿದ ಸುಪ್ರೀಂ ಕೋರ್ಟ್..!
- BIG BOSS3 days ago
2ನೇ ಮದುವೆಗೆ ಸಜ್ಜಾದ ಬಿಗ್ ಬಾಸ್ ಮಾಜಿ ಸ್ಪರ್ಧಿ ವರ್ತೂರು ಸಂತೋಷ್; ಹುಡುಗಿ ಯಾರು ಗೊತ್ತಾ..?
- LATEST NEWS6 days ago
ಮೈಸೂರು: ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಚಿರತೆ ಪ್ರತ್ಯಕ್ಷ; ಉದ್ಯೋಗಿಗಳಿಗೆ ಮನೆಯಿಂದ ಕೆಲಸಕ್ಕೆ ಸೂಚನೆ