Connect with us

kerala

ಮಂಜೇಶ್ವರ: ಗುಡ್ಡ ಕುಸಿಯುವ ಭೀತಿಯಲ್ಲಿ ವರ್ಕಾಡಿ ಗ್ರಾಮ ನಿವಾಸಿಗಳು.!!

Published

on

ಮಂಜೇಶ್ವರ: ನಿರಂತರ ಮಳೆಯಿಂದಾಗಿ ಅಲ್ಲಲ್ಲಿ ಭೂ ಕುಸಿತ ಉಂಟಾಗುತ್ತಿದ್ದು, ಈಗಾಗಲೇ ಹಲವಾರು ಕಡೆಗಳಲ್ಲಿ ಭಾರಿ ಹಾನಿ ಸಂಭವಿಸಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ವರ್ಕಾಡಿ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟಿರುವ ಬಾಕ್ರಬೈಲು ಎಂಬಲ್ಲಿನ ಕಜೆ ಪ್ರದೇಶದಲ್ಲಿ ಈ ಬಿರುಕು ಕಂಡು ಬಂದಿದೆ.

ಬಿರುಕು ಬಿಟ್ಟಿರುವ ಈ ಗುಡ್ಡದ ಕೆಳ ಭಾಗದಲ್ಲಿ ಕೆಲವು ಮನೆಗಳಿದ್ದು, ನಿವಾಸಿಗಳಲ್ಲಿ ಆತಂಕ ಎದುರಾಗಿದೆ. ಸ್ಥಳೀಯರು ಭೂಮಿ ಬಿರುಕು ಬಿಟ್ಟು ಒಂದು ಭಾಗ ಜಾರಿರುವ ಬಗ್ಗೆ ಸ್ಥಳೀಯ ಪಂಚಾಯತ್‌ಗೆ ಮಾಹಿತಿ ನೀಡಿದ್ದಾರೆ. ಸದ್ಯ ಸ್ಥಳ ಪರಿಶೀಲನೆ ನಡೆಸಿರುವ ಪಂಚಾಯತ್ ಅಧಿಕಾರಿಗಳು ಉನ್ನತ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಎರಡು ದಿನಗಳಿಂದ ಮಳೆ ಕೊಂಚ ವಿರಾಮ ನೀಡಿದ್ದು, ಮತ್ತೆ ಮಳೆ ಆರಂಭವಾದಲ್ಲಿ ಈ ಭಾಗದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

kerala

ವಿದ್ಯಾರ್ಥಿ ಖಾ*ಸಗಿ ಅಂಗಕ್ಕೆ ಮೆಣಸಿನ ಪುಡಿ ಹಾಕಿ, ಐರನ್ ಬಾಕ್ಸ್ ನಿಂದ ಬರೆ ; ಶಿಕ್ಷಕ ಅರೆಸ್ಟ್

Published

on

ಮಂಗಳೂರು/ಕೇರಳ : ಶಿಕ್ಷಕನೊಬ್ಬ ವಿದ್ಯಾರ್ಥಿಯ ಖಾ*ಸಗಿ ಅಂಗಕ್ಕೆ ಮೆಣಸಿನ ಪುಡಿ ಹಾಕಿ, ಐರನ್ ಬಾಕ್ಸ್ ನಿಂದ ಬರೆ ಎಳೆದ ಅಪರೂಪದ ದುರ್ಘಟನೆ ಉತ್ತರ ಕೇರಳದಲ್ಲಿ ನಡೆದಿದೆ.

ಪೊಲೀಸರ ಪ್ರಕಾರ, ಮದರಸಾ ಮೂಲದ ಶಿಕ್ಷಕನು ಬಾಲಕನ ಖಾ*ಸಗಿ ಭಾ*ಗಕ್ಕೆ ಮೆಣಸಿನ ಪುಡಿ ಹಚ್ಚಿ ಬಳಿಕ . ಐರನ್ ಬಾಕ್ಸ್ ನಿಂದ ಬರೆ ಎಳೆದಿದ್ದಾನೆ ಎಂದಿದ್ದಾರೆ. ಆರೋಪಿ ಮಲಪ್ಪುರಂ ಜಿಲ್ಲೆಯ ತಾನೂರ್ ಮೂಲದ ಉಮೈರ್ ಅಶ್ರಫಿ ಎಂದು ಗುರುತಿಸಲಾಗಿದೆ.

ಈ ಘಟನೆಯ ಕುರಿತು ವಿದ್ಯಾರ್ಥಿಯು ಪೊಲೀಸರಿಗೆ ದೂರು ನೀಡಿದ್ದು, ತನಿಖೆಯ ವೇಳೆ ಅಶ್ರಫಿ ಕೇರಳ ರಾಜ್ಯದಿಂದ ಪರಾರಿಯಾಗಿರುವುದು ತಿಳಿಯಿತು. ಕರ್ನಾಟಕ ಮತ್ತು ತಮಿಳುನಾಡಿನ ವಿವಿಧ ಸ್ಥಳಗಳಲ್ಲಿ ಅಡಗಿಕೊಂಡಿದ್ದ ಆತನಿಗಾಗಿ ಪೊಲೀಸ್ ಅಧಿಕಾರಿಗಳು ಹುಡುಕಾಟ ನಡೆಸಿದ್ದರು. ತಮಿಳುನಾಡಿನ ಕೊಯಮತ್ತೂರಿನಿಂದ ಅಶ್ರಫಿ ತನ್ನ ತವರು ಜಿಲ್ಲೆಗೆ ಮರಳಲಿದ್ದಾನೆ ಎಂಬ ಸುಳಿವಿನ ಮೇರೆಗೆ ಪೊಲೀಸ್ ತಂಡ ಗುರುವಾರ (ನ.7) ತಾನೂರಿನಲ್ಲಿ ಬೀಡುಬಿಟ್ಟಿದ್ದು, ಶೋಧ ಕಾರ್ಯ ನಡೆಸಿದೆ. ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದ ಅಶ್ರಫಿಯನ್ನು ಕೊನೆಗೂ ಬಂಧಿಸಲಾಯಿತು.

ಇದನ್ನೂ ಓದಿ : ಪುಟ್ಟ ಮಗುವಿನ ಕೈ ಮುರಿದ ಕ್ರೂ*ರಿ ಟೀಚರ್ !!

ಶಿಕ್ಷಕನ ಬಂಧನದ ಬಳಿಕ, ಕನ್ನವಂ ಪೊಲೀಸರು ಆತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಿದ್ದಾರೆ. ಯಾಕಾಗಿ ಹಾಗೆ ಮಾಡಿದ? ಅವನ ಉದ್ದೇಶವೇನು? ಎಂಬುವುದು ತನಿಖೆಯ ಬಳಿಕ ತಿಳಿದು ಬರಬೇಕಷ್ಟೇ. ಆತನನ್ನು ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಶುಕ್ರವಾರ (ನ.8) ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Continue Reading

kerala

ಕುಂಬ್ಳೆ: ಎದೆಹಾಲು ಕುಡಿದು ಇಹ*ಲೋಕ ತ್ಯಜಿಸಿದ ಹಸುಳೆ ..!

Published

on

ಕಾಸರಗೋಡು: ಸ್ತನ್ಯಪಾನ ಮಾಡುತ್ತಿದ್ದಾಗ ಹಾಲು ಗಂಟಲಲ್ಲಿ ಸಿಲುಕಿ ಹಸುಗುಸು ಉ*ಸಿರು ಚೆ*ಲ್ಲಿದ ಘಟನೆ ಗುರುವಾರ ಕುಂಬ್ಳೆಯ ಹೇರೂರು ವೆಂಕೂಮೂಲೆಯಲ್ಲಿ ನಡೆದಿದೆ.

ಸಫೀಯತ್‌ ನೈಫ್‌ ಮೃ*ತ ಶಿಶು ಎಂದು ಗುರುತಿಸಲಾಗಿದೆ.

ಮುಂಜಾನೆ 4 ಗಂಟೆ ಸರಿಸುಮಾರಿಗೆ ಮಗು ಅತ್ತಿದ್ದು, ತಾಯಿ ಹಾಲುಣಿಸಿ ಮಗುವನ್ನು ಮಲಗಿಸಿದ್ದಳು. ಬಳಿಕ ಬೆಳಗ್ಗೆ ಮಗು ಎಚ್ಚರಗೊಂಡಿರಲಿಲ್ಲ.

ಕಂಗಾಲಾದ ಮನೆಯರು ಕೂಡಲೇ ಮಗುವನ್ನು ಕುಂಬಳೆಯ ಜಿಲ್ಲಾ ಸಹಕಾರಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಷ್ಟರೊಳಗೆ ಕಂದಮ್ಮನ ಉ*ಸಿರು ನಿಂತಿತ್ತು. ಹಾಲು ಗಂಟಲಲ್ಲಿ ಸಿಲುಕಿರುವ ಕಾರಣ ಮಗು ಸಾ*ವಿಗೀಡಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Continue Reading

kerala

ಕಾಸರಗೋಡು : ಎಡನೀರು ಶ್ರೀಗಳ ಮೇಲೆ ಪುಂಡರ ದಾಳಿ ; ಅವಾಚ್ಯ ಶಬ್ಧಗಳಿಂದ ನಿಂದಿಸಿ ಅವಮಾನ

Published

on

ಕಾಸರಗೋಡು : ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ಸೋಮವಾರ (ನ.4) ದಂದು ಬೋವಿಕಾನ – ಇರಿಯಣ್ಣಿ ಮಾರ್ಗ ಮಧ್ಯೆ ನಡೆದಿದೆ.

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುವಾಗ ಈ ಘಟನೆ ನಡೆದಿದ್ದು, ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳ ವಾಹನವನ್ನು ಪುಂಡರ ತಂಡವೊಂದು ತಡೆದು ಶ್ರೀಗಳಿಗೆ ಅವಮಾನ ಮಾಡಿದೆ. ಇರಿಯಣ್ಣಿಯಿಂದಲೇ ಹಿಂಬಾಲಿಸಿದ ಬಂದ ದುಷ್ಕರ್ಮಿಗಳು ಬಾವಿಕೆರೆ ಎಂಬಲ್ಲಿ ದೊಣ್ಣೆಯಿಂದ ಕಾರಿನ ಗಾಜು ಹೊಡೆದರು ಮಾತ್ರವಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿ ಅಟ್ಟಹಾಸ ಮೆರೆದಿದ್ದಾರೆ.

ಸ್ವಾಮೀಜಿ ಮೇಲಿನ ದಾಳಿಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಕೇರಳ ಸರ್ಕಾರವನ್ನು ಆಗ್ರಹಿಸಲಾಗಿದೆ. ಅಲ್ಲದೆ ಎಡನೀರು ಸಂಸ್ಥಾನದ ಸ್ವಾಮೀಜಿಗಳ ವಾಹನದ ಮೇಲಾದ ಆದ ದಾಳಿ ಸಮಸ್ತ ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದೆ ಎಂದು ಹಿಂದೂಪರ ಸಂಘಟನೆಗಳು ಕೆಂಡಕಾರಿವೆ.

ಘಟನಾ ಸಂದರ್ಭ ಸ್ವಾಮೀಜಿಯವರು ಕಾರು ನಿಲ್ಲಿಸದೇ ಶಾಂತರಾಗಿ ಮುಂದುವರಿದಿದ್ದು ಕಾಸರಗೋಡು ಪೋಲಿಸರು ಮಾಹಿತಿ ಪಡೆದು ಪ್ರಕರಣ ದಾಖಲು ಮಾಡಿ ತನಿಖೆ ನಡೆಸುತ್ತಿದ್ದಾರೆ.

Continue Reading

LATEST NEWS

Trending

Exit mobile version