Connect with us

kerala

ಕಾಸರಗೋಡು: ನ್ಯಾಯಾಲಯದ ಬಿಗಿ ಪೊಲೀಸ್‌ ಬಂದೋಬಸ್ತಿನಲ್ಲಿ ಮಾವೋವಾದಿಯ ಕಮಾಂಡರ್‌

Published

on

ಕಾಸರಗೋಡು: ನ್ಯಾಯವಾದಿ ಎಸ್‌.ಪಿ. ಖಾಲಿದ್‌ ಅವರ ಕುತ್ತಿಗೆಗೆ ಚಪ್ಪಲಿ ಹಾರ ಹಾಕಿ ಬೆದರಿಕೆ ಒಡ್ಡಿದ ಪ್ರಕರಣದ ಆರೋಪಿ ಮಾವೋವಾದಿಯ ಕಬನಿ ದಳ ಕಮಾಂಡರ್‌ ಕಲ್ಪೆಟ್ಟಾ ನಿವಾಸಿ ಸೋಮನ್‌ನನ್ನು ಪೊಲೀಸರು ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್‌ ನ್ಯಾಯಾಲಯ (ದ್ವಿತೀಯ) ದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತಿನಲ್ಲಿ ಹಾಜರುಪಡಿಸಲಾಯಿತು.

ಅಕ್ರಮವಾಗಿ ಅಧ್ಯಕ್ಷರ ಕಚೇರಿಗೆ ನುಗ್ಗಿ ಕುತ್ತಿಗೆಗೆ ಚಪ್ಪಲಿ ಹಾರ ಹಾಕಿದ ಪ್ರಕರಣ ನಡೆದಿತ್ತು. ಕಾನೂನು ಉಲ್ಲಂಘಿಸಿ ಕಟ್ಟಡವೊಂದಕ್ಕೆ ಲೈಸನ್ಸ್‌ ನೀಡಲಾಗಿದೆ ಎಂದು ಆರೋಪಿಸಿ ಸೋಮನ್‌ ಸಹಿತ ಒಂದು ತಂಡ ನಗರಸಭಾ ಅಧ್ಯಕ್ಷರ ಕಚೇರಿಗೆ ಅಕ್ರಮವಾಗಿ ಪ್ರವೇಶಿಸಿ ಚಪ್ಪಲಿ ಹಾರ ಹಾಕಿ ಪರಾರಿಯಾಗಿತ್ತು.

 

ಕಳೆದ ಜುಲೈ 28ರಂದು ಶೊರ್ನೂರು ರೈಲು ನಿಲ್ದಾಣ ಪರಿಸರದಿಂದ ಸೋಮನ್‌ನನ್ನು ನಕ್ಸಲ್‌ ನಿಗ್ರಹ ದಳ ಬಂಧಿಸಿತ್ತು. ಆತನನ್ನು ವಿಯೂರ್‌ ಸೆಂಟ್ರಲ್‌ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿತ್ತು. ಸೋಮನ್‌ ವಿರುದ್ಧ ಕಾಸರಗೋಡು, ಕಣ್ಣೂರು, ಕಲ್ಲಿಕೋಟೆ, ಮಲಪ್ಪುರಂ ಮತ್ತು ಪಾಲ್ಘಾಟ್ ಜಿಲ್ಲೆಯಲ್ಲಿ ಮಾವೋವಾದಿ ಚಟುವಟಿಕೆಗಳಿಗೆ ಸಂಬಂಧಿಸಿ ಒಟ್ಟು 66 ಪ್ರಕರಣಗಳು ದಾಖಲಾಗಿವೆ.

kerala

ದಾರಿ ತಪ್ಪಿಸಿದ ಗೂಗಲ್‌ ಮ್ಯಾಪ್‌ : ರಂಗ ಕಲಾವಿದರಿಬ್ಬರ ದಾ*ರುಣ ಸಾವು..!

Published

on

ಕೇರಳ : ರಂಗಭೂಮಿ ಕಲಾವಿದರನ್ನು ಹೊತ್ತು ಸಾಗುತ್ತಿದ್ದ ಮಿನಿ ಬಸ್ವೊಂದು ಅ*ಪಘಾತಕ್ಕೆ ಒಳಗಾಗಿ, ಇಬ್ಬರು ದಾ*ರುಣವಾಗಿ ಸಾವನ್ನಪ್ಪಿದ ಘಟನೆ ಕಣ್ಣೂರಿನ ಸಮೀಪದ ಕೆಲಕಮ್  ಬಳಿ ನಿನ್ನೆ (ನ.15) ಬೆಳಿಗ್ಗೆ ಸಂಭವಿಸಿದೆ.

ರಂಗಭೂಮಿಯ ಪ್ರಮುಖ ನಟಿಯರಾಗಿ ಗುರುತಿಸಿಕೊಂಡಿದ್ದ ಕಾಯಂಕುಲಂನ ಅಂಜಲಿ ಮತ್ತು ಕರುನಾಗಪಲ್ಲಿಯ ಜೆಸ್ಸಿ ಮೋಹನ್ ಸಾ*ವನ್ನಪ್ಪಿರುವ ದು*ರ್ದೈವಿಗಳು.

ಮಿನಿ ಬಸ್ ಚಾಲಕ ಗೂಗಲ್ ಮ್ಯಾಪ್ ಸಹಾಯದಿಂದ ಬಸ್ ಚಲಾಯಿಸುತ್ತಿದ್ದರು. ರಸ್ತೆ ಮಾರ್ಗ ಕಡಿದಾಗಿದ್ದರಿಂದ ಅ*ನಾಹುತ ನಡೆದಿದೆ. ಘಟನೆಯಲ್ಲಿ 9 ಮಂದಿ ಗಾ*ಯಗೊಂಡಿದ್ದು, ಮತ್ತೋರ್ವರ ಸ್ಥಿತಿ ಗಂ*ಭೀರವಾಗಿದೆ. ಅ*ಪಘಾತದ ಶಬ್ಧ ಕೇಳಿದ ಕೂಡಲೇ ಸ್ಥಳೀಯರು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು.

‘ಕಯಂಕುಮಂ ದೇವ ಕಮ್ಯೂನಿಕೇಷ’ನ್ ರಂಗಭೂಮಿ ಗುಂಪು ಕಡನ್ನಪಲ್ಲಿಯಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಬಸ್ ವಯನಾಡ್‌ನ ಸುಲ್ತಾನ್ ಬಥೇರಿ ಕಡೆ ಸಾಗುತ್ತಿತ್ತು. ಪೆರಿಯಾ ಚೂರ್ಮದ ನೆಡುಂಪೊಲ್ಲಿ- ವಾಡಿ ರಸ್ತೆ ಬಂದ್ ಆಗಿದ್ದ ಕಾರಣ ಕೊಟ್ಟಿಯೂರು ಬಾಯ್ಸ್ ಟೌನ್ ರಸ್ತೆ ಮಾರ್ಗವಾಗಿ ಕೆಲಕಮ್ ಪರ್ಯಾಯ ಮಾರ್ಗವನ್ನು ಮ್ಯಾಪ್ ತೋರಿಸಿದೆ. ಮಲಯಂಪಡಿಯಲ್ಲಿ ಕಡಿದಾದ ಎಸ್ ತಿರುಗಳಿಂದಾಗಿ ಮಿನಿ ಬಸ್ ಅ*ಪಘಾತಕ್ಕೀಡಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾ*ಯಗೊಂಡವರನ್ನು ಕಾಯಂಕುಲಂನ ಉನ್ನಿ, ಉಮೇಶ್, ಸುರೇಶ್ ಮತ್ತು ಶಿಬು, ಎರ್ನಾಕುಲಂನ ಬಿಂಧು, ಕಲ್ಲುವತುಕ್ಕಲ್ನ ಚೆಲ್ಲಪ್ಪನ್ ಮತ್ತು ಕೊಲ್ಲಂನ ಶ್ಯಾಮ್ ಹಾಗೂ ಅಥಿರುಂಗಲ್ನ ಸುಭಾಶ್ ಎಂದು ಗುರುತಿಸಲಾಗಿದ್ದು, ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Continue Reading

kerala

ವಿದ್ಯಾರ್ಥಿ ಖಾ*ಸಗಿ ಅಂಗಕ್ಕೆ ಮೆಣಸಿನ ಪುಡಿ ಹಾಕಿ, ಐರನ್ ಬಾಕ್ಸ್ ನಿಂದ ಬರೆ ; ಶಿಕ್ಷಕ ಅರೆಸ್ಟ್

Published

on

ಮಂಗಳೂರು/ಕೇರಳ : ಶಿಕ್ಷಕನೊಬ್ಬ ವಿದ್ಯಾರ್ಥಿಯ ಖಾ*ಸಗಿ ಅಂಗಕ್ಕೆ ಮೆಣಸಿನ ಪುಡಿ ಹಾಕಿ, ಐರನ್ ಬಾಕ್ಸ್ ನಿಂದ ಬರೆ ಎಳೆದ ಅಪರೂಪದ ದುರ್ಘಟನೆ ಉತ್ತರ ಕೇರಳದಲ್ಲಿ ನಡೆದಿದೆ.

ಪೊಲೀಸರ ಪ್ರಕಾರ, ಮದರಸಾ ಮೂಲದ ಶಿಕ್ಷಕನು ಬಾಲಕನ ಖಾ*ಸಗಿ ಭಾ*ಗಕ್ಕೆ ಮೆಣಸಿನ ಪುಡಿ ಹಚ್ಚಿ ಬಳಿಕ . ಐರನ್ ಬಾಕ್ಸ್ ನಿಂದ ಬರೆ ಎಳೆದಿದ್ದಾನೆ ಎಂದಿದ್ದಾರೆ. ಆರೋಪಿ ಮಲಪ್ಪುರಂ ಜಿಲ್ಲೆಯ ತಾನೂರ್ ಮೂಲದ ಉಮೈರ್ ಅಶ್ರಫಿ ಎಂದು ಗುರುತಿಸಲಾಗಿದೆ.

ಈ ಘಟನೆಯ ಕುರಿತು ವಿದ್ಯಾರ್ಥಿಯು ಪೊಲೀಸರಿಗೆ ದೂರು ನೀಡಿದ್ದು, ತನಿಖೆಯ ವೇಳೆ ಅಶ್ರಫಿ ಕೇರಳ ರಾಜ್ಯದಿಂದ ಪರಾರಿಯಾಗಿರುವುದು ತಿಳಿಯಿತು. ಕರ್ನಾಟಕ ಮತ್ತು ತಮಿಳುನಾಡಿನ ವಿವಿಧ ಸ್ಥಳಗಳಲ್ಲಿ ಅಡಗಿಕೊಂಡಿದ್ದ ಆತನಿಗಾಗಿ ಪೊಲೀಸ್ ಅಧಿಕಾರಿಗಳು ಹುಡುಕಾಟ ನಡೆಸಿದ್ದರು. ತಮಿಳುನಾಡಿನ ಕೊಯಮತ್ತೂರಿನಿಂದ ಅಶ್ರಫಿ ತನ್ನ ತವರು ಜಿಲ್ಲೆಗೆ ಮರಳಲಿದ್ದಾನೆ ಎಂಬ ಸುಳಿವಿನ ಮೇರೆಗೆ ಪೊಲೀಸ್ ತಂಡ ಗುರುವಾರ (ನ.7) ತಾನೂರಿನಲ್ಲಿ ಬೀಡುಬಿಟ್ಟಿದ್ದು, ಶೋಧ ಕಾರ್ಯ ನಡೆಸಿದೆ. ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದ ಅಶ್ರಫಿಯನ್ನು ಕೊನೆಗೂ ಬಂಧಿಸಲಾಯಿತು.

ಇದನ್ನೂ ಓದಿ : ಪುಟ್ಟ ಮಗುವಿನ ಕೈ ಮುರಿದ ಕ್ರೂ*ರಿ ಟೀಚರ್ !!

ಶಿಕ್ಷಕನ ಬಂಧನದ ಬಳಿಕ, ಕನ್ನವಂ ಪೊಲೀಸರು ಆತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಿದ್ದಾರೆ. ಯಾಕಾಗಿ ಹಾಗೆ ಮಾಡಿದ? ಅವನ ಉದ್ದೇಶವೇನು? ಎಂಬುವುದು ತನಿಖೆಯ ಬಳಿಕ ತಿಳಿದು ಬರಬೇಕಷ್ಟೇ. ಆತನನ್ನು ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಶುಕ್ರವಾರ (ನ.8) ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Continue Reading

kerala

ಕುಂಬ್ಳೆ: ಎದೆಹಾಲು ಕುಡಿದು ಇಹ*ಲೋಕ ತ್ಯಜಿಸಿದ ಹಸುಳೆ ..!

Published

on

ಕಾಸರಗೋಡು: ಸ್ತನ್ಯಪಾನ ಮಾಡುತ್ತಿದ್ದಾಗ ಹಾಲು ಗಂಟಲಲ್ಲಿ ಸಿಲುಕಿ ಹಸುಗುಸು ಉ*ಸಿರು ಚೆ*ಲ್ಲಿದ ಘಟನೆ ಗುರುವಾರ ಕುಂಬ್ಳೆಯ ಹೇರೂರು ವೆಂಕೂಮೂಲೆಯಲ್ಲಿ ನಡೆದಿದೆ.

ಸಫೀಯತ್‌ ನೈಫ್‌ ಮೃ*ತ ಶಿಶು ಎಂದು ಗುರುತಿಸಲಾಗಿದೆ.

ಮುಂಜಾನೆ 4 ಗಂಟೆ ಸರಿಸುಮಾರಿಗೆ ಮಗು ಅತ್ತಿದ್ದು, ತಾಯಿ ಹಾಲುಣಿಸಿ ಮಗುವನ್ನು ಮಲಗಿಸಿದ್ದಳು. ಬಳಿಕ ಬೆಳಗ್ಗೆ ಮಗು ಎಚ್ಚರಗೊಂಡಿರಲಿಲ್ಲ.

ಕಂಗಾಲಾದ ಮನೆಯರು ಕೂಡಲೇ ಮಗುವನ್ನು ಕುಂಬಳೆಯ ಜಿಲ್ಲಾ ಸಹಕಾರಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಷ್ಟರೊಳಗೆ ಕಂದಮ್ಮನ ಉ*ಸಿರು ನಿಂತಿತ್ತು. ಹಾಲು ಗಂಟಲಲ್ಲಿ ಸಿಲುಕಿರುವ ಕಾರಣ ಮಗು ಸಾ*ವಿಗೀಡಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Continue Reading

LATEST NEWS

Trending

Exit mobile version