Saturday, September 18, 2021

ಜು.30ರಿಂದ ಮರವೂರು ಸೇತುವೆ ಸಂಚಾರಕ್ಕೆ ಮುಕ್ತ

ಮಂಗಳೂರು: ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿದ ಮರವೂರು ಸೇತುವೆಯ ಕುಸಿದ ಪಿಲ್ಲರ್‌ನ್ನು ಯಥಾಸ್ಥಿತಿಗೆ ತಂದು ಸೇತುವೆ ದುರಸ್ತಿ ಕೆಲಸ ಬಹುತೇಕ ಪೂರ್ತಿಯಾಗಿದೆ. ಜು.30ರಿಂದ ಲಘು ವಾಹನ ಸಂಚಾರಕ್ಕೆ ಮುಕ್ತಗೊಳಿಸುವ ನಿರೀಕ್ಷೆಯಿದೆ.

ಪಿಡಬ್ಲ್ಯೂಡಿ ಇಲಾಖೆಯ ತಜ್ಞ ಇಂಜಿನಿಯರ್‌ಗಳ ಸಲಹೆಯಂತೆ  ಸೇತುವೆಯ ಪಿಲ್ಲರ್‌ ಅನ್ನು ಹೈಡ್ರೋಲಿಕ್‌ ಜ್ಯಾಕ್‌ ಬಳಸಿ ಮೇಲಕ್ಕೆತ್ತಿ ಯಥಾಸ್ಥಿತಿಗೆ ತರಲಾಗಿತ್ತು. ಇದೀಗ ದುರಸ್ತಿ ಕೆಲಸ ಬಹುತೇಕ ಪೂರ್ಣಗೊಂಡಿದೆ.

ಗುರುವಾರ ತಜ್ಞರ ಉಪಸ್ಥಿತಿಯಲ್ಲಿ ಸೇತುವೆ ವಾಹನ ಸಂಚಾರಕ್ಕೆ ಯೋಗ್ಯ ವಾಗಿದೆಯೇ ಎಂದು ಪರೀಕ್ಷಿಸಲು ರೋಡ್ ಟೆಸ್ಟ್ ನಡೆಸಲಾಗುತ್ತದೆ. ಈ ಪರೀಕ್ಷೆ ಯಶಸ್ವಿಯಾದರೆ ಶುಕ್ರವಾರದಿಂದಲೇ ಲಘು ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಘನ ವಾಹನ ಸಂಚಾರಕ್ಕೆ ಇನ್ನೂ ಸ್ಪಷ್ಟತೀರ್ಮಾನ ಮಾಡಲಾಗಿಲ್ಲ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...