ಗಾಂಜಾ ಸಾಗಾಟ ಪತ್ತೆ ಹಚ್ಚಿದ ಉಡುಪಿ ಪೊಲೀಸರು :43 ಸಾವಿರದ ಸೊತ್ತು ವಶ..!
ಉಡುಪಿ : ಗಾಂಜಾ ಸಾಗಿಸುತ್ತಿದ್ದ ಯುವಕನನ್ನು ಮಾಲು ಸಮೇತ ಉಡುಪಿ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರದ ಕೋಡಿ ಎಂಬಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.
ಮೊಹಮ್ಮದ್ ಅಬ್ದುಲ್ ರೆಹಮಾನ್ (24) ಬಂಧಿತ ಆರೋಪಿ. ಆರೋಪಿ ಮೊಹಮ್ಮದ್ ಅಬ್ದುಲ್ ರೆಹಮಾನ್, ಮಸೂದ್ ಯಾನೆ ಚಿನ್ನು ಎಂಬವನಿಂದ ಗಾಂಜಾ ತೆಗೆದುಕೊಂಡು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಈ ವೇಳೆ ಖಚಿತ ಮಾಹಿತಿ ಪಡೆದ ಉಡುಪಿ ಡಿಸಿಐಬಿ ಇನ್ಸ್‌ಪೆಕ್ಟರ್ ಮಂಜಪ್ಪ ಡಿ.ಆರ್ ಪೊಲೀಸರ ತಂಡ ದಾಳಿ ನಡೆಸಿ ಆರೋಪಿಯನ್ನು ಕುಂದಾಪುರ ಕೋಡಿ ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿ ಮೊಹಮ್ಮದ್ ಅಬ್ದುಲ್ ರೆಹಮಾನ್‌ನಿಂದ 33 ಸಾವಿರ ಮೌಲ್ಯದ ಗಾಂಜಾ ಹಾಗೂ 10,000 ರೂಪಾಯಿ ಮೌಲ್ಯದ ಮೊಬೈಲ್ ಪೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ..