Connect with us

BELTHANGADY

ಮರೋಡಿ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ, ಸಿರಿಗಳ ಜಾತ್ರೆ ಸಂಪನ್ನ..

Published

on

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆ.5ರಂದು ಆರಂಭಗೊಂಡ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆಯು ಗುರುವಾರ ಸಂಪನ್ನಗೊಂಡಿತು.  

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆ.5ರಂದು ಆರಂಭಗೊಂಡ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆಯು ಗುರುವಾರ ಸಂಪನ್ನಗೊಂಡಿತು.   

ಕ್ಷೇತ್ರದ ತಂತ್ರಿ ಬಾಲಕೃಷ್ಣ ಪಾಂಗಣ್ಣಾಯ ಮತ್ತು ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಪ್ರಸಾದ್‌ ನೇತೃತ್ವದಲ್ಲಿ ವಿವಿಧ ವೈದಿಕ ವಿಧಿವಿಧಾನಗಳು ನಡೆದವು.

ಬುಧವಾರ ಬೆಳಿಗ್ಗೆ ಆಶ್ಲೇಷಬಲಿ, ಮಹಾಪೂಜೆ (ತುಲಾಭಾರ ಸೇವೆ), ಚೂರ್ಣೋತ್ಸವ, ದರ್ಶನ ಬಲಿ, ಬಟ್ಟಲುಕಾಣಿಕೆ, ಪ್ರಸಾದ ವಿತರಣೆ, ಪಲ್ಲಪೂಜೆ ಹಾಗೂ ಮಹಾ ಅನ್ನಸಂತರ್ಪಣೆ ನಡೆಯಿತು.

ರಾತ್ರಿ ಬಲಿಉತ್ಸವ, ಸಿರಿಗಳ ಜಾತ್ರೆ, ಕುಮಾರ ದರ್ಶನ, ಕೊಡಮಣಿತ್ತಾಯ ದೈವದ ನೇಮೋತ್ಸವ, ದೈವದೇವರ ಭೇಟಿ, ಅವಭೃತ ಸ್ನಾನ, ಧ್ವಜಾವರೋಹಣ, ಮಹಾಪೂಜೆ ನಡೆಯಿತು.

ಸಾಂಸ್ಕೃತಿಕ ವೇದಿಕೆಯಲ್ಲಿ ಹಳೆಯಂಗಡಿ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾ ಪೋಷಿತ ಯಕ್ಷಗಾನ ಮಂಡಳಿಯಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರ ಭಾಗವತಿಗೆಯೊಂದಿಗೆ ‘ನಾಗ ಸಂಜೀವನ’ಯಕ್ಷಗಾನ ಪ್ರದರ್ಶನಗೊಂಡಿತು. ಫೆ.9 ರಂದು ಸಂಪ್ರೋಕ್ಷಣೆ, ಮಂಗಳಾ ಪ್ರಸಾದ ವಿತರಣೆ ನಡೆಯಿತು.

ಫೆ.6ರಂದು ತೋರಣ ಮುಹೂರ್ತ, ಧ್ವಜಾರೋಹಣ, ದೊಡ್ಡ ರಂಗಪೂಜೆ, ವ್ಯಾಘ್ರ ಚಾಮುಂಡಿ, ರಕ್ತೇಶ್ವರಿ, ಮೈಸಂದಾಯ ದೈವಗಳಿಗೆ ಗಗ್ಗರ ಸೇವೆ, ಕುಣಿತಾ ಭಜನೆ, ಅನ್ನಸಂತರ್ಪಣೆ ನಡೆಯಿತು. ನಂತರ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಬೆದ್ರ ಪಿಂಗಾರ ಕಲಾವಿದರಿಂದ ‘ಭರಣಿ ಕೃತಿಕೆ’ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಂಡಿತು.

ಫೆ 7ರಂದು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ, ಮಹಾಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ, ರಾತ್ರಿ ಉತ್ಸವ ಬಲಿ, ಮಹಾಪೂಜೆ, ಶ್ರೀ ಭೂತಬಲಿ, ಕವಾಟ ಬಂಧನ, ಪಟ್ಟದ ಪಂಜುರ್ಲಿ ಮತ್ತು ಕಲ್ಕುಡ ದೈವಗಳ ಕೋಲ, ಕುಣಿತ ಭಜನೆ ನಡೆಯಿತು.

ಫೆ.8ರಂದು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ಕ್ಷೇತ್ರಕ್ಕೆ ಭೇಟಿ ನೀಡಿ, ಪ್ರಸಾದ ಸ್ವೀಕರಿಸಿದರು. ಶಾಸಕ ಹರೀಶ್‌ ಪೂಂಜ, ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಆಡಳಿತ ಮಂಡಳಿ ಕಾರ್ಯದರ್ಶಿ ಜಯಂತ ಕೋಟ್ಯಾನ್‌, ಜೀರ್ಣೋದ್ಧಾರ ಸಮಿತಿ ಮುಂಬೈ ಘಟಕದ ಅಧ್ಯಕ್ಷ ನಾರಾಯಣ ಸುವರ್ಣ ಕನರೊಟ್ಟು, ಮೊಕ್ತೇಸರರಾದ ರತ್ನಾಕರ ಬುಣ್ಣಾನ್‌, ಎಂ.ಎಸ್‌.ಪೂಜಾರಿ, ವಿಜಯಕುಮಾರ್ ಬಂಗ, ಎಂ.ಅಣ್ಣಪ್ಪ ಹೆಗ್ಡೆ, ಸುಜಯ ಹೆಗ್ಡೆ, ಸುರೇಂದ್ರ ಪೂಜಾರಿ ಮತ್ತಿತರರು ಇದ್ದರು.

BELTHANGADY

ಮುಂದಿನ ನಾಲ್ಕು ದಿನ ಕರಾವಳಿಯಲ್ಲಿ ಮಳೆಯ ಸಿಂಚನ..! ಹವಾಮಾನ ಇಲಾಖೆ ಮುನ್ಸೂಚನೆ

Published

on

ಮಂಗಳೂರು: ಕಳೆದ ಕೆಲವು ದಿನಗಳಿಂದ ಸುಡು ಬಿಸಿಲಿಗೆ ಬಸವಳಿದು ಜನರು ಕಂಗಾಲಾಗಿದ್ದು, ಕೆಲವೊಂದು ಕಡೆ ವರುಣನ ಕೃಪೆಗಾಗಿ ಜನರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪೂಜಾ ಕಾರ್ಯಗಳನ್ನು ನೆರವೇರಿಸುತ್ತಿದ್ದಾರೆ.

rain

ಈ ನಡುವೆ ಬಿಸಿ ಶಾಖದಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ ಜನರು ನಿನ್ನೆ ಕೆಲವೆಡೆ ಸುರಿದ ಮಳೆಯಿಂದಾಗಿ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಇನ್ನು ಬೆಂಗಳೂರಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಅಲ್ಲಲ್ಲಿ ಅಲ್ಪಾ ಸ್ವಲ್ಪ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ ರಾಜ್ಯದ ​ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ.

ಮುಂದೆ ಓದಿ..; ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕಾಮಕಾಂಡ?

ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ. ಅದರಲ್ಲೂ ಬೆಂಗಳೂರಿನಲ್ಲಿ ಗುಡುಗು, ಮಿಂಚಿನ ಜತೆಗೆ ಅಲ್ಲಲ್ಲಿ ಚದುರಿದ ಮಳೆ ಬೀಳುವ ಸಂಭವವಿದೆ. ಮೇ 6 ಮತ್ತು 7 ರಂದು ಸಾಧಾರಣ ಅಥವಾ ಅದಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಬಿಸಿಗಾಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Continue Reading

BELTHANGADY

ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

Published

on

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.

gangadhar

ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ

ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.

gangadhar

ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು  ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

Continue Reading

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

LATEST NEWS

Trending