Tuesday, July 27, 2021

ಮದುವೆ ಆಸೆ ತೋರಿಸಿ ಅಮಾಯಕ ಯುವಕರ ಲೂಟಿಗಿಳಿದ ಸುಹಾಸಿನಿ ಬೆನ್ನು ಬಿದ್ದ ಆಂಧ್ರ ಪೊಲೀಸ್..!

ಆಂಧ್ರಪ್ರದೇಶ: ಹಣದ ಆಸೆಗೆ ಮೊದಲ ಗಂಡನ ಜೊತೆ ಸೇರಿಕೊಂಡು ಯುವಕರಿಗೆ ಮದುವೆಯ ಆಸೆ ತೋರಿಸಿ ಮಹಿಳೆಯೊಬ್ಬಳು ವಂಚನೆ ಮಾಡುತ್ತಿದ್ದ ಪ್ರಕರಣ ಆಂಧ್ರಪ್ರದೇಶದಲ್ಲಿ ವರದಿಯಾಗಿದೆ. ವಂಚನೆ ಮಾಡಿದ ಮಹಿಳೆ ಸುಹಾಸಿನಿ ಎಂದು ಗುರುತಿಸಲಾಗಿದೆ.

ಈಕೆ ತಾನು ಅನಾಥೆ ಎಂದು ಹೇಳಿಕೊಂಡು, ಮದುವೆಯ ಹೆಸರಿನಲ್ಲಿ ಜನರನ್ನು ಮೋಸ ಮಾಡುತ್ತಿದ್ದಳು. ಇನ್ನು 2019ರಲ್ಲಿ ವಿನಯ್ ಎಂಬವರ ಜೊತೆ ಸುಹಾಸಿನಿ ಮದುವೆಯಾಗಿದ್ದಾಳೆ. ಈ ಬಳಿಕ ಆತನಿಂದ 10 ಲಕ್ಷ ನಗದು ಮತ್ತು 5 ಲಕ್ಷ ರೂ. ಮೌಲ್ಯದ ಚಿನ್ನ ತೆಗೆದುಕೊಂಡು ತನ್ನ ಮೊದಲ ಗಂಡನೊಂದಿಗೆ ಪರಾರಿಯಾಗಿದ್ದಾಳೆ.

ಘಟನೆ ನಡೆದ ನಂತರ ವಿನಯ್ ಪೊಲೀಸರಿಗೆ ದೂರು ನೀಡಿದ್ದಾರೆ. ತನಿಖೆ ವೇಳೆ, ಸುಹಾಸಿನಿ ಈ ರೀತಿಯಲ್ಲಿ ಅನೇಕರಿಗೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಸದ್ಯ ಆಕೆಗಾಗಿ ಆಂಧ್ರಪ್ರದೇಶ ಪೊಲೀಸರು ಬಲೆ ಬೀಸಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...