DAKSHINA KANNADA
ದಾಂಪತ್ಯದಲ್ಲಿ ಬಿರುಕು: ಕಾನೂನು ಸೇವಾ ಪ್ರಾಧಿಕಾರದ ಮಧ್ಯಸ್ಥಿಕೆಯಿಂದ ಕುಟುಂಬದಲ್ಲಿ ಆನಂದ ಸಾಗರ
Published
3 years agoon
By
Adminಮಂಗಳೂರು: ಕಳೆದ ಅಕ್ಟೋಬರ್ ನಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯಗಳಿಂದ ಬೇರ್ಪಟ್ಟಿದ್ದ ದಂಪತಿ ಹಾಗೂ ಮಕ್ಕಳು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮಧ್ಯಸ್ಥಿಕೆಯಲ್ಲಿ ಒಂದಾದ ಘಟನೆ ಮಂಗಳವಾರ ನಡೆದಿದೆ.
ಕುಟುಂಬ ಜೀವನದಲ್ಲಿ ಕಂಡು ಬಂದ ಹಲವಾರು ಉದ್ವಿಗ್ನತೆಗಳು, ಸಮಸ್ಯೆಗಳಿಂದ ಮನನೊಂದಿದ್ದ ನಾರಾಯಣ್ (48) (ಹೆಸರು ಬದಲಾಯಿಸಲಾಗಿದೆ) ಹಾಗೂ ಸರಳ (46) (ಹೆಸರು ಬದಲಾಯಿಸಲಾಗಿದೆ).
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ನಡೆಸಿದ ಕೌನ್ಸೆಲಿಂಗ್ ನಲ್ಲಿ ಸಂಸಾರದ ಪ್ರಾಮುಖ್ಯತೆಯನ್ನು ಅರಿತುಕೊಂಡ ಪತಿ ಪತ್ನಿಯರಿಬ್ಬರು ಮನಪರಿವರ್ತನೆಯಿಂದಾಗಿ ಮತ್ತೆ ಒಂದಾಗಿದ್ದಾರೆ.
ಮಂಗಳೂರಿನ ಮರಕಡದ ನಿವಾಸಿಗಳಾದ ದಂಪತಿಗಳು ವೈಮನಸ್ಸಿನಿಂದ ನೊಂದು ಬೇರೆ ಬೇರೆಯಾಗಲು ನಿಶ್ಚಯಿಸಿದ್ದರು. ನಾರಾಯಣ್ ಬಿ.ಫಾರ್ಮ್ ಓದಿಕೊಂಡು ಮೆಡಿಕಲ್ ಶಾಪ್ ಹೊಂದಿದ್ದರು.
ಹೆಂಡತಿ ಸರಳ ಇಬ್ಬರು ಮಕ್ಕಳ ಹೆಸರಲ್ಲಿ ತಾನು ದುಡಿದ ಹಣದಲ್ಲಿ ಡೆಪೋಸಿಟ್ ಇಟ್ಟಿದ್ದರು. ತಮ್ಮ ದಾಂಪತ್ಯದಲ್ಲಿ ಅದ ಭಿನ್ನಾಭಿಪ್ರಾಯಗಳು ಅವರನ್ನು ಘರ್ಷಣೆಗೆ ನೂಕಿತ್ತು.
ಮುಂದಿನ ಜೀವನ ಜಂಟಿಯಾಗಿ ನೂಕುವುದು ಅವರಿಬ್ಬರಿಗೂ ಕಠಿಣವೆನಿಸಿತು. ಸವಾಲುಗಳನ್ನು ಎದುರಿಸಲಾಗದೆ ಇಬ್ಬರು ನಿರ್ಧಾರದಿಂದ ಪರಸ್ಪರ ದೂರವಾದರು.
ಸರಳ ತನ್ನ ಮಕ್ಕಳ ಜೊತೆಗೆ ಉಡುಪಿಯಲ್ಲಿ ಪ್ರತ್ಯೇಕವಾಗಿ ಜೀವನ ಸಾಗಿಸಿದರು. ಆದರೆ ತನಗೆ ಬದುಕಲು ಕಷ್ಟವಾದಾಗ, ಮಕ್ಕಳ ಶಿಕ್ಷಣಕ್ಕೆ ಪೂರಕವಾಗಿ ಆರ್ಥಿಕ ಸಮಸ್ಯೆ ಕಂಟಕವಾದಾಗ ಸಹಾಯ ಕೋರಿ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದರು.
ಅರ್ಜಿಯನ್ನು ಪರಿಶೀಲಿಸಿದ ಪ್ರಾಧಿಕಾರವು ಇಬ್ಬರನ್ನು ಕಚೇರಿಗೆ ಕರೆತಂದು 4 ಬಾರಿ ಕೌನ್ಸೆಲಿಂಗ್ ಗೆ ಒಳಪಡಿಸಿದರು. ಇಬ್ಬರನ್ನೂ ಒಟ್ಟಿಗೆ ಬಾಳುವಂತೆ ಮನಪರಿವರ್ತನೆ ಮಾಡಲಾಯಿತು.
ನೆಮ್ಮದಿಯ ಬದುಕಿಗೆ ಬೇಕಾದ ಮೂಲಭೂತ ಅಂಶಗಳ ಬಗ್ಗೆ, ಮಕ್ಕಳ ಶಿಕ್ಷಣದ ಪ್ರಾಮುಖ್ಯತೆ ಬಗ್ಗೆ, ಇದರಿಂದ ಮಕ್ಕಳ ಹಾಗೂ ಅವರ ಭವಿಷ್ಯದ ಮೇಲೆ ಆಗುವಂತಹ ಪರಿಣಾಮಗಳ ವಿವರವಾದ ಮಾಹಿತಿಯನ್ನು ನೀಡಲಾಯಿತು.
ಈ ಮಾಹಿತಿ ಗಾಢವಾದ ಪರಿಣಾಮವನ್ನು ಬೀರಿದ್ದು, ವಿವಾಹ ವಾರ್ಷಿಕೋತ್ಸವದ ಶುಭ ದಿನದಂದೇ ಮತ್ತೆ ಒಂದಾಗಿ ಜೀವನ ನಡೆಸಲು ತಯಾರಾಗಿದ್ದಾರೆ.
ಈ ಉತ್ತಮ ಕಾರ್ಯದಲ್ಲಿ ಭಾಗಿಯಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಮುರಲೀಧರ ಪೈ.ಬಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪೃಥ್ವಿರಾಜ್ ವರ್ಣೀಕರ್ ಅವರು ಅತ್ಯಂತ ಅಲ್ಪ ಅವಧಿಯಲ್ಲಿ ದಂಪತಿಗಳನ್ನು ಒಂದುಗೂಡಿಸಿದ್ದಾರೆ.
ಇವರ ಈ ಕಾರ್ಯದಿಂದ ದಂಪತಿಗಳಿಬ್ಬರು ಖುಷಿಯಾಗಿದ್ದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವನ್ನು ಶ್ಲಾಘಿಸಿದ್ದಾರೆ.
bangalore
ಕ್ರಿಸ್ಮಸ್ ಸ್ಪೆಷಲ್ ಆಫರ್; ಮಂಗಳೂರು – ಬೆಂಗಳೂರು ವಿಶೇಷ ರೈಲು ಸಂಚಾರ
Published
4 hours agoon
22/12/2024ಮಂಗಳೂರು : ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬೆಂಗಳುರು – ಮಂಗಳೂರು ನಡುವೆ ಡಿಸೆಂಬರ್ 23 ಹಾಗೂ 27 ರಂದು ವಿಶೇಷ ರೈಲು ಸಂಚರಿಸಲಿದೆ. ಮತ್ತೆ ಪುನಃ ಅದೇ ರೈಲು (06506) ಡಿಸೆಂಬರ್ 24 ಮತ್ತು 28 ರಂದು ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಮಧ್ಯಾಹ್ನ 1:00 ಗಂಟೆಗೆ ಹೊರಟು, ಅದೇ ದಿನ ರಾತ್ರಿ 10.30 ಕ್ಕೆ ಯಶವಂತಪುರ ತಲುಪಲಿದೆ.
ಕೆಲಸದ ನಿಮಿತ್ತ ಮಂಗಳೂರಿನ ಹಲವು ಜನ ಬೆಂಗಳೂರಿನಲ್ಲಿ ವಾಸವಿದ್ದಾರೆ. ಇದೀಗ ಕ್ರಿಸ್ಮಸ್ ಹಬ್ಬ ಸಮೀಪಿಸುತ್ತಿದ್ದು, ಊರಿಗೆ ಮರಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಅವರಿಗೆಲ್ಲಾ ಅನುಕೂಲವಾಗಲೆಂದು ಈ ವಿಶೇಷ ರೈಲು ಸಂಚಾರವನ್ನು ಅಳವಡಿಸಿದ್ದು, ಹಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಇದರ ಫಲಾನುಭವಿಗಳಾಗಲಿದ್ದಾರೆ.
ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ. ಪ್ರಯಾಣಿಕರು ಅಧಿಕೃತ (www.enquiry.indianrail.gov.in) ವೆಬ್ಸೈಟ್ಗೆ ಭೇಟಿ ನೀಡಿ. NTES ಅಪ್ಲಿಕೇಶನ್ ಬಿಳಸಿ ಅಥವಾ 139 ನಂಬರಗೆ ಡಯಲ್ ಮಾಡುವ ಮೂಲಕ ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ/ನಿರ್ಗಮನ ಸಮಯ ಮತ್ತು ಇತರ ಮಾಹಿತಿಯನ್ನು ವಡೆದುಕೊಳ್ಳಬಹುದು.
DAKSHINA KANNADA
ಮೂಲ್ಕಿ: ವಿವಿಧ ರಂಗಗಳ ಸಾಧಕರಿಗೆ ‘ಅರಸು ಕಂಬಳ’ ಪ್ರಶಸ್ತಿ ಪ್ರದಾನ
Published
22 hours agoon
21/12/2024ಮೂಲ್ಕಿ: ಮೂಲ್ಕಿ ಅರಸು ಕಂಬಳ ಸಂದರ್ಭ ಮೂಲ್ಕಿ ಸೀಮೆ ವ್ಯಾಪ್ತಿಯ ವಿವಿಧ ರಂಗಗಳ 14 ಮಂದಿ ಸಾಧಕರಿಗೆ ಮತ್ತು ಸಂಘ ಸಂಸ್ಥೆಗಳಿಗೆ ಅರಮನೆಯ ಧರ್ಮ ಚಾವಡಿಯಲ್ಲಿ ಅರಸು ಪ್ರಶಸ್ತಿ ನೀಡಿ ಗೌರವಿಸುವ ಕಾರ್ಯಕ್ರಮ ಡಿ. 22ರಂದು ಮಧ್ಯಾಹ್ನ 12ಕ್ಕೆ ನಡೆಯಲಿದೆ ಎಂದು ಅರಸರಾದ ದುಗ್ಗಣ್ಣ ಸಾವಂತರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮೂಲ್ಕಿ ಅರಮನೆ ಟ್ರಸ್ಟ್ ಮತ್ತು ಹಳೆಯಂಗಡಿಯ ಪ್ರಿಯ ದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಸಹಭಾಗಿತ್ವದಲ್ಲಿ ಕಾಠ್ಯಕ್ರಮ ನಡೆ. ಯಲಿದೆ. ಶ್ರೀ ಅರುಣಾನಂದ ತೀರ್ಥ ಸ್ವಾಮೀ ಜಿ (ಸಾಧನಾ ಪ್ರಶಸ್ತಿ) ದಿ। ಎಚ್. ನಾರಾಯಣ ಸನಿಲ್ (ಮರಣೋತ್ತರ-ಸಮಾಜ ಸೇವೆ ಮತ್ತು ಶಿಕ್ಷಣ, ಸಹಕಾರಿ) ದಿ। ಎನ್. ಬಾಬು ಶೆಟ್ಟಿ (ಮರಣೋತ್ತರ-ಸಮಾಜ ಸೇವೆ), ಮೀರಾ ಬಾಯಿ ಕೆ. (ಶಿಕ್ಷಣ), ಎಚ್. ಶಕುಂತಳಾ ಭಟ್ (ಸಾಹಿತ್ಯ) ವಾಲ್ಟರ್ ಡಿ’ಸೋಜಾ (ಕೃಷಿ ಮತ್ತು ಪರಿಸರ), ಡಾ। ಹಸನ್ ಮುಬಾರಕ್ (ವೈದ್ಯಕೀಯ), ಸೀತಾರಾಮ್ ಕುಮಾರ್ ಕಟೀಲು (ಯಕ್ಷಗಾನ), ಪರಮಾನಂದ ಸಾಲ್ಯಾನ್ (ಸಾಹಿತ್ಯ), ಶಿವ ಸಂಜೀವಿನಿ ಸುರಗಿರಿ (ಸಂಘ ಸಂಸ್ಥೆ), ಮಾಧವ ಶೆಟ್ಟಿಗಾರ್ ಮತ್ತು ಚಂದ್ರಕುಮಾರ್ (ಸಾಮಾಜಿಕ ಕ್ಷೇತ್ರ) ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ತೋಕೂರು (ಸಂಘಸಂಸ್ಥೆ) ವಿನಾಯಕಯಕ್ಷಗಾನ ಫೌಂಡೇಶನ್ ಕೆರೆಕಾಡು (ಯಕ್ಷಗಾನ ತಂಡ) ಇವರಿಗೆ ಪ್ರಶಸ್ತಿ ನೀಡಲಾಗುವುದು.
ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಆಳದಂಗಡಿ ಅರಮನೆಯ ತಿಮ್ಮಣ್ಣ ಅರಸರಾದ ಡಾ। ಪದ್ಮಪ್ರಸಾದ್ ಅಜಿಲರು, ದ.ಕ. ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿವೃತ್ತ ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ಪಿ. ಮುಂತಾದವರು ಉಪಸ್ಥಿತರಿರುವರು ಎಂದರು. ಅರಮನೆಟ್ರಸ್ಟ್ನ ಗೌತಮ್ ಜೈನ್, ಪ್ರಿಯದರ್ಶಿನಿ ಸೊಸೈಟಿಯ ಅಧ್ಯಕ್ಷ ವಸಂತ್ ಬೆರ್ನಾಡ್ ಹಾಗೂ ಸಿಇಒ ಸುದರ್ಶನ್ ಉಪಸ್ಥಿತರಿದ್ದರು.
DAKSHINA KANNADA
ಅತಿ ವೇಗ ತಂದಿಟ್ಟ ಪ್ರಾ*ಣಾಪಾಯ; ಬಸ್ಗೆ ಡಿ*ಕ್ಕಿ ಹೊ*ಡೆದು ಬೈಕ್ ಸವಾರ ಸಾ*ವು
Published
1 day agoon
21/12/2024ಮಂಗಳೂರು: ಹೆಲ್ಮೆಟ್ ಧರಿಸದ ದ್ವಿಚಕ್ರ ಸವಾರರೊಬ್ಬರು ರಸ್ತೆ ಅ*ಪಘಾ*ತದಲ್ಲಿ ಮೃ*ತಪಟ್ಟ ಘಟನೆ ಕಾನ ಕುಳಾಯಿ ಗುಡ್ಡೆ ಜಂಕ್ಷನ್ನಲ್ಲಿ ನನ್ನೆ (ಡಿ.20) ರಾತ್ರಿ ನಡೆದಿದೆ.
ಮೃ*ತರನ್ನು ಕಾನ ನಿವಾಸಿ ರೆಮ್ಮಿ (38) ಎಂದು ಗುರುತಿಸಲಾಗಿದೆ.
ಕುಳಾಯಿಯಲ್ಲಿ ಟ್ಯೂಶನ್ಗೆ ತೆರಳಿದ್ದ ಮಗಳನ್ನು ಕರೆತರಲೆಂದು ರೆಮ್ಮಿ ತನ್ನ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಸಂಚರಿಸುತ್ತಿದ್ದ. ಕುಳಾಯಿಗುಡ್ಡೆ ಜಂಕ್ಷನ್ ಬಳಿ ವಾಹನಗಳ ತಪಾಸಣೆಯಲ್ಲಿ ನಿರತರಾಗಿದ್ದ ಮಂಗಳೂರು ಉತ್ತರ ಸಂಚಾರ ಪೊಲೀಸರು ರೆಮ್ಮಿಯನ್ನು ಎಚ್ಚರಿಸಿದ್ದರೂ ಗಮನಿಸದ ರೆಮ್ಮಿ ಸುರತ್ಕಲ್ ಕಡೆಗೆ ಅತಿ ವೇಗದಿಂದ ತನ್ನ ದ್ವಿಚಕ್ರ ವಾಹನವನ್ನು ತಿರುಗಿಸಿದಾಗ ಎದುರುರಿನಿಂದ ಬರುತ್ತಿದ್ದ ಖಾಸಗಿ ಸಿಟಿ ಬಸ್ ಡಿ*ಕ್ಕಿ ಹೊಡೆದಿತ್ತು.
ಇದನ್ನೂ ಓದಿ : ಪುತ್ತೂರು: ಬಸ್-ಬೈಕ್ ಅಪಘಾತ, ಬೈಕ್ ಸವಾರ ಸಾ*ವು
ಅ*ಪಘಾ*ತದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ರೆಮ್ಮಿ ಗಂ*ಭೀರ ಗಾ*ಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃ*ತಪಟ್ಟಿದ್ದಾರೆ. ಅ*ಪಘಾ*ತ ನಡೆದ ಬೆನ್ನಲ್ಲೇ ಸ್ಥಳದಲ್ಲಿ ಜಮಾಯಿಸಿದ ಸಾರ್ವಜನಿಕರು ಪೊಲೀಸರ ಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.
LATEST NEWS
ಮಹತ್ವದ ನಿರ್ಧಾರ ಕೈಗೊಂಡ ಬೈಡನ್: 4.3 ಶತಕೋಟಿ ಡಾಲರ್ ವಿದ್ಯಾರ್ಥಿ ಸಾಲ ಮನ್ನಾ
ಅರೆಸ್ಟ್ ವಾರೆಂಟ್ ಬೆನ್ನಲ್ಲೇ ಮಾಜಿ ಕ್ರಿಕೆಟರ್ ರಾಬಿನ್ ಉತ್ತಪ್ಪ ಸ್ಪಷ್ಟನೆ !
ಬಾರತೀಯ ಕಾರ್ಮಿಕರೊಂದಿಗೆ ಕುವೈತ್ನಲ್ಲಿ ಮೋದಿ ಸಂವಾದ
ತೆಲಂಗಾಣ ಸರ್ಕಾರದಿಂದ ಟಾಲಿವುಡ್ಗೆ ಭಾರೀ ದೊಡ್ಡ ಹೊಡೆತ !!
ಕ್ರಿಸ್ಮಸ್ ಸ್ಪೆಷಲ್ ಆಫರ್; ಮಂಗಳೂರು – ಬೆಂಗಳೂರು ವಿಶೇಷ ರೈಲು ಸಂಚಾರ
ಕಾನ್ ಸ್ಟೆಬಲ್ ಮನೆಯಲ್ಲಿ ಭರ್ಜರಿ ಬೇಟೆಯಾಡಿದ ಲೋಕಾಯುಕ್ತ ಪೊಲೀಸರು !
Trending
- BIG BOSS6 days ago
ಡ್ರೋನ್ ಪ್ರತಾಪ್ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯ; ವಿಚಾರಣೆಯಲ್ಲಿ ಪೊಲೀಸರಿಗೆ ಸಿಕ್ತು ಮಹತ್ವದ ಮಾಹಿತಿ
- DAKSHINA KANNADA7 days ago
ಕ್ಯಾಟ್ಕದ ನೂತನ ಅಧ್ಯಕ್ಷರಾಗಿ ಲಂಚುಲಾಲ್ ಅವಿರೋಧವಾಗಿ ಆಯ್ಕೆ
- BIG BOSS7 days ago
ದಿಢೀರ್ ನಿರ್ಧಾರ ಕೈಗೊಂಡ ಗೋಲ್ಡ್ ಸುರೇಶ್; ಕಿಚ್ಚ ಸುದೀಪ್ ಶಾಕ್ !
- LATEST NEWS4 days ago
ದಹಿ ಪುರಿ ಚಾಟ್ಸ್ ಬದಲು ಪೂರಿ, ಮೊಸರು ಕಳುಹಿಸಿಕೊಟ್ಟ ರೆಸ್ಟೋರೆಂಟ್