Connect with us

    LATEST NEWS

    ಇನ್ಸ್ಟಾಗ್ರಾಮ್ ಗೆಳೆಯನಿಗೆ ನ*ಗ್ನ ಸಂದೇಶ ಕಳುಹಿಸಿದ ವಿವಾಹಿತೆ; ಆಮೇಲೆ ಆಗಿದ್ದೇನು ಗೊತ್ತಾ ??

    Published

    on

    ಮಂಗಳೂರು/ಬೆಂಗಳೂರು : ವಿವಾಹಿತ ಮಹಿಳೆಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವಕನನ್ನು ನಂಬಿ ನ*ಗ್ನ ವೀಡಿಯೋ, ಫೋಟೋಗಳನ್ನು ಕಳುಹಿಸಿದ್ದು, ಕೊನೆಗೆ ಆತ ಬ್ಲಾಕ್ ಮೇಲ್ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಸಾಮಾಜಿಕ ಜಾಲತಾಣವನ್ನು ಕೇವಲ ನಮಗೆ ಮನೋರಂಜನೆಗಾಗಿ ಹಾಗೂ ಒಳ್ಳೆಯ ಉದ್ದೇಶಕ್ಕಾಗಿ ಬಳಸಬೇಕು. ಆದರೆ ಇತ್ತೀಚಿಗೆ ಅದರ ತದ್ವಿರುದ್ಧವಾಗಿ, ಅ*ನೈತಿಕ ಚಟುವಟಿಕೆಗಳಿಗೆ ಸಾಮಾಜಿಕ ಜಾಲತಾಣ ದುರ್ಬಳಕೆ ಆಗುತ್ತಿದೆ.

    ಬೆಂಗಳೂರಿನ ವಿವಾಹಿತ ಮಹಿಳೆಗೆ ಕಳೆದ ಮೂರು ವರ್ಷಗಳ ಹಿಂದೆ ಅಭಿಷೇಕ್ ನಾಯಕ್ ಎನ್ನುವ ಯುವಕನ ಪರಿಚಯವಾಗಿದ್ದಾನೆ. ಬಳಿಕ ಆ ಪರಿಚಯ ಪರಸ್ಪರ ಸ್ನೇಹಕ್ಕೆ ತಿರುಗಿ ತುಂಬಾ ಆತ್ಮೀಯವಾಗಿ ತಮ್ಮ ತಮ್ಮ ನಂಬರ್ ಗಳನ್ನು ಬದಲಾಯಿಸಿಕೊಂಡು ಯುವಕನು ಮಹಿಳೆಯ ವೈವಾಹಿಕ ಜೀವನದ ಹಾಗೂ ಪರಿಸ್ಥಿತಿ ಲಾಭವನ್ನು ಪಡೆದುಕೊಂಡು ಸಹಾಯ ಮಾಡುವ ನೆಪದಲ್ಲಿ ಆಕೆಯೊಡನೆ ಪದೇಪದೆ ವಿಡಿಯೊ ಕಾಲ್‌, ವಾಯ್ಸ್‌ ಮೆಸೇಜ್ ಮಾಡುತ್ತಿದ್ದ. ಈ ಕಾರಣಗಳಿಂದಾಗಿ ಯುವಕನನ್ನು ನಂಬಿದ ಮಹಿಳೆ, ನ*ಗ್ನವಾಗಿ ವಿಡಿಯೊ ಕಾಲ್‌ಗಳನ್ನು ಮಾಡುತ್ತಾ ನ*ಗ್ನ ಫೋಟೋಗಳನ್ನೂ ಕಳುಹಿಸಿದ್ದಾಳೆ. ಬಳಿಕ ಕೆಲವು ವರ್ಷಗಳ ನಂತರ ಇಬ್ಬರ ಮಧ್ಯೆ ಜಗಳ ಉಂಟಾಗಿದೆ.

    ಈ ವೇಳೆ ಆಕೆಯೊಡನೆ ಮಾತನಾಡಿದ ಹಲವು ವಿಡಿಯೋಗಳನ್ನು ಹಾಗೂ ನ*ಗ್ನ ಚಿತ್ರಗಳನ್ನು ಇಟ್ಟುಕೊಂಡು ಮಹಿಳೆಗೆ ಬ್ಲಾಕ್ ಮೇಲ್ ಮಾಡಿದ ಯುವಕ ಆಕೆಯಿಂದ ತನಗೆ ಬೇಕಾದಾಗ ಚಿನ್ನಾಭರಣ ಹಾಗೂ ಅನೇಕ ಬಾರಿ ಹಣವನ್ನು ಪೀಕಿದ್ದಾನೆ. ನಂತರ ಅಭಿಷೇಕ್ ಇನ್ನಷ್ಟು ಹಣಕ್ಕೆ ಬೇಡಿಕೆ ಇಟ್ಟಾಗ ಮಹಿಳೆ ಆಗಲ್ಲ ಎದ್ದಿದ್ದಾಳೆ. ಹಾಗಾಗಿ ಮಹಿಳೆಯ ಮನೆಯವರಿಗೆ ವಿಡಿಯೋ ಕಾಲ್ ಮಾಡಿರುವ ವಿಡಿಯೋಗಳು ಹಾಗೂ ನ*ಗ್ನ ಚಿತ್ರಗಳೆಲ್ಲವನ್ನೂ ಕಳುಹಿಸಿದ್ದಾನೆ.

    ಪತ್ನಿಯ ಅ*ಕ್ರಮ ಸಂಬಂಧ ಕಂಡು ಪತಿ ಸಿಟ್ಟಾಗಿ, ಆಕೆ ಹಾಗೂ ಮಗುವನ್ನು ಮನೆಯಿಂದ ಹೊರ ಹಾಕಿದ್ದಾನೆ. ಹೀಗಾಗಿ ಆಕೆ ತಂಗಿ ಮನೆಗೆ ಹೋಗಿದ್ದಾರೆ. ಹೀಗಾಗಿ ಮಹಿಳೆಯ ದೂರಿನ ಅನ್ವಯ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯು 2012ರಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಒಬ್ಬರನ್ನು ಮದುವೆಯಾಗಿದ್ದು, ಆರಂಭದಲ್ಲಿ ಎಲ್ಲವೂ ಚೆನ್ನಾಗಿತ್ತು. ಕಳೆದ ನಾಲ್ಕು ವರ್ಷಗಳಿಂದ ದಂಪತಿಗಳ ಮಧ್ಯ ವೈಮನಸ್ಸು ಇತ್ತು. ಈಗ ಅವರಿಗೆ 11 ವರ್ಷದ ಮಗಳಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    Baindooru

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    LATEST NEWS

    ಭಜನಾ ಗುರು ಅಶೋಕ್ ನಾಥ್ ಕಳಸಬೈಲ್ ಗೆ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’

    Published

    on

    ಮೂಡುಬಿದಿರೆ: 2024 ರ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’ ಗೆ ಭಜನಾ ಗುರು ಅಶೋಕ್ ನಾಥ್ ಕಳಸಬೈಲ್ ಆಯ್ಕೆಯಾಗಿದ್ದಾರೆ.

    ಕಲಾಭೂಮಿ ಪ್ರತಿಷ್ಠಾನ ರಿ. ಬೆಂಗಳೂರು ಇದರ ವತಿಯಿಂದ ಇದೇ ನವೆಂಬರ್ 29ರಂದು ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ, ಜನಪದ ಮತ್ತು ಜನಪದ ಸೇವೆಯಲ್ಲಿ ಗುರುತಿಸಿ ನೀಡಲ್ಪಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಯನ್ನು, ಕುಣಿತ ಭಜನೆ, ಸಂಗೀತ, ಕ್ರೀಡೆ, ಪರಿಸರ ಮತ್ತು ನೃತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಕುಣಿತ ಭಜನಾ ಗುರು ಅಶೋಕ್ ನಾಯ್ಕ ಕಳಸಬೈಲು ಇವರಿಗೆ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದೆಂದು ಕಲಾಭೂಮಿ ಪ್ರತಿಷ್ಠಾನವು ಪ್ರಕಟಣೆಯಲ್ಲಿ ತಿಳಿಸಿದೆ.

    ಅಶೋಕ್ ನಾಯ್ಕರವರು ನಮ್ಮ ಕುಡ್ಲ ವಾಹಿನಿಯ ನೃತ್ಯ ಭಜನೆ ಸೀಸನ್ 1 ಹಾಗು ಸೀಸನ್ 2 ರಲ್ಲಿ ಹಲವು ತಂಡಗಳೊಂದಿಗೆ ಭಾಗವಹಿಸಿದ್ದಾರೆ. ಇವರಿಗೆ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’ ಲಭಿಸಿದ ಈ ಸಂಧರ್ಭದಲ್ಲಿ ನಮ್ಮ ಕುಡ್ಲ ವಾಹಿನಿಯು ಶುಭಾಶಯ ಕೋರುತ್ತಿದೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    LATEST NEWS

    Trending