Friday, July 1, 2022

ಮಾಸ್ಕ್ ಧರಿಸದ ಕೂಲಿಕಾರ್ಮಿಕರ ದಂಡವನ್ನು ತಾವೇ ಭರಿಸಿ ಮಾನವೀಯತೆ ಮೆರೆದ ಅಧಿಕಾರಿಗಳು…!!

ಕಡಬ ಎಪ್ರಿಲ್ 29: ಮಾಸ್ಕ್ ಹಾಕಿಲ್ಲವೆಂದು ಬಡ ಕೂಲಿಕಾರ್ಮಿಕನೊಬ್ಬನಿಗೆ ದಂಡ ವಿಧಿಸಿದ್ದ ಅಧಿಕಾರಿಗಳು, ಕೊನೆಗೆ ತಾವೆ ದಂಡದ ಮೊತ್ತವನ್ನು ಕಟ್ಟಿದ ಘಟನೆ ಕಡಬದಲ್ಲಿ ನಡೆದಿದೆ.


ಕೂಲಿ ಕೆಲಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದ ದಂಪತಿ ಕಡಬ ಬಸ್ ನಿಲ್ದಾಣದಲ್ಲಿ ನಿಂತಿದ್ದ ವೇಳೆ ಮಾಸ್ಕ್ ಧರಿಸಿರಲಿಲ್ಲ. ಇದನ್ನು ಗಮನಿಸಿದ ಕಡಬ ಪಟ್ಟಣ ಪಂಚಾಯತ್ ನ ಕೊರೋನಾ ವಾರಿಯರ್‌ ತಂಡದ ಅಧಿಕಾರಿಯೋರ್ವರು 100 ರೂ. ದಂಡ ವಿಧಿಸಿ ಜಿಲ್ಲಾಡಳಿತದ ರಶೀದಿಯನ್ನೂ ನೀಡಿದ್ದಾರೆ.


ಈ ವೇಳೆ ಹಣವಿಲ್ಲವೆಂದು ಪರಿ ಪರಿಯಾಗಿ ಬೇಡಿಕೊಂಡ ಕೂಲಿ ಕಾರ್ಮಿಕ ಕೊನೆಗೆ ತನ್ನ ಕೈಯಲ್ಲಿದ್ದ 10 ರೂ. ವನ್ನು ಅಧಿಕಾರಿಯ ಕೈಗಿತ್ತಿದ್ದಾರೆ. ಆದರೆ 100 ರೂಪಾಯಿ ರಶೀದಿಯನ್ನು ನೀಡಿದ ಅಧಿಕಾರಿ ಬೇರೆ ದಾರಿ ಕಾಣದೆ ತನ್ನ ಕೈಯಿಂದ ಉಳಿದ 90 ರೂಪಾಯಿ ಸೇರಿಸಿ ಸರಕಾರಕ್ಕೆ ಪಾವತಿಸಿ ಮಾನವೀಯತೆ ಮೆರೆದಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಪಂಚಾಯತ್ ಅಧಿಕಾರಿಯವರು ಮಾಸ್ಕ್ ಧರಿಸದ ಕಾರಣ ನಾವು ಅನಿವಾರ್ಯವಾಗಿ ದಂಡ ವಿಧಿಸಲೇ ಬೇಕಾಗುತ್ತದೆ. ಆದರೆ ಸಾರ್ವಜನಿಕರ ಬಳಿ ಹಣ ಇಲ್ಲ ಎಂಬ ವಿಚಾರ ನಮ್ಮ ಗಮನಕ್ಕೆ ಬರುವುದಿಲ್ಲ. ಹಣ ನೀಡಿದ ನಂತರ ರಶೀದಿ ನೀಡೋಣ ಎಂದರೆ ಯಾರೂ ತಮ್ಮ ಬಳಿ ಹಣ ಇರುವ ಬಗ್ಗೆ ಹೇಳೋದು ಇಲ್ಲ. ದಂಡ ಬರೆದು ರಶೀದಿ ನೀಡಿದರೆ ಇಂತಹ ಸ್ಥಿತಿ ಎದುರಾಗುತ್ತಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

Hot Topics

ನೂಪುರ್‌ ಶರ್ಮಾ ಇಡೀ ದೇಶದ ಕ್ಷಮೆಯಾಚಿಸಬೇಕು ಎಂದ ಸುಪ್ರೀಂ ಕೋರ್ಟ್‌

ನವದೆಹಲಿ: ಶರ್ಮಾ ಅವರ ಹಿಡಿತವಿಲ್ಲದ ನಾಲಿಗೆ ಇಡೀ ದೇಶಕ್ಕೇ ಬೆಂಕಿ ಹಚ್ಚಿದೆ. ದೇಶದ ಭದ್ರತೆಗೇ ಆತಂಕ ಉಂಟುಮಾಡಿದೆ. ಶರ್ಮಾ ಅವರು ಇಡೀ ದೇಶದ ಕ್ಷಮೆಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ ಇಂದು ತರಾಟೆಗೆ ತೆಗೆದುಕೊಂಡಿದೆ.ಪ್ರವಾದಿ...

ಕನ್ಹಯ್ಯಾಲಾಲ್ ಹತ್ಯೆ ಪ್ರಕರಣ: ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಜೈಪುರ: ದೇಶಾದ್ಯಂತ ಸುದ್ದಿಯಾದ ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ತೇಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಾದ ಮೊಹಮ್ಮದ್ ರಿಯಾಜ್ ಅಖ್ತರ್ ಮತ್ತು ಮೊಹಮ್ಮದ್ ಗೌಸ್ ಉದಯಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು...

ಟೈಲರ್ ಕನ್ನಯ್ಯ ಲಾಲ್ ಕೊಲೆಗೈದವರಿಗೆ ಮರಣದಂಡನೆ ವಿಧಿಸಿ: ಶಾಸಕ ಕಾಮತ್‌ ಆಗ್ರಹ

ಮಂಗಳೂರು: ರಾಜಸ್ಥಾನದ ಉದಯಪುರದಲ್ಲಿ ಬಡ ಟೈಲರ್ ಕನ್ನಯ್ಯ ಲಾಲ್ ಹತ್ಯೆಗೈದು ಪ್ರಧಾನಮಂತ್ರಿಗಳಿಗೆ ಬೆದರಿಕೆಯೊಡ್ಡಿದ ಹಂತಕರಿಗೆ ಮರಣ ದಂಡನೆ ವಿಧಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಕುಕೃತ್ಯ ಎಸಗುವವರಿಗೆ ಎಚ್ಚರಿಕೆಯ ಸಂದೇಶ ನೀಡಬೇಕೆಂದು ಮಂಗಳೂರು...