DAKSHINA KANNADA
ಮಂಗಳೂರು: ವೆಂಕಟರಮಣ ದೇವಳದಲ್ಲಿ ಸಾಮೂಹಿಕ ಬ್ರಹ್ಮೋಪದೇಶ
ಮಂಗಳೂರು: ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪ್ರತಿಷ್ಠಾ ದಶಮಾನೋತ್ಸವ ಪ್ರಯುಕ್ತ ಸಮಾಜದ 18 ವಟುಗಳಿಗೆ ”ಸಾಮೂಹಿಕ ಬ್ರಹ್ಮೋಪದೇಶ ” ಕಾಶೀ ಮಠಾಧೀಶ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ನೆರವೇರಿತು.
ರವಿವಾರ ದೇವತಾ ಪೂಜನೆ, ಉದ್ದಿನಮುಹೂರ್ಥ ಕಾರ್ಯಕ್ರಮಗಳು ಜರಗಿದವು.
ಇಂದು ಕೋಟೇಶ್ವರ ಮೊಕ್ಕಾಂ ನಿಂದ ಶ್ರೀಗಳವರು ಆಗಮಿಸಿ ದೇವರ ದರ್ಶನ ಬಳಿಕ ಶ್ರೀ ದೇವರ ಸನ್ನಿಧಿಯಲ್ಲಿ ವಟುಗಳು ಶ್ರೀಗಳವರ ಅಮೃತ ಹಸ್ತಗಳಿಂದ ಯಜ್ನೋಪವಿತ ಧಾರಣೆ ಬಳಿಕ ರಾಜಾಂಗಣದಲ್ಲಿ ವಟುಗಳಿಗೆ ಶ್ರೀಗಳವರು ಭಿಕ್ಷೆ ಹಾಗೂ ತಪ್ತ ಮುದ್ರಾಧಾರಣೆ ನೀಡಿದರು.
ಬಳಿಕ ಆಶೀರ್ವಚನ ನಡೆಯಿತು. ಈ ಸಂದರ್ಭದಲ್ಲಿ ದೇವಳದ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಸಾಹುಕಾರ್ ಕಿರಣ್ ಪೈ , ಸತೀಶ್ ಪ್ರಭು , ಗಣೇಶ್ ಕಾಮತ್ , ಎಂ . ಜಗನ್ನಾಥ್ ಕಾಮತ್,
ಚಾತುರ್ಮಾಸ ಸಮಿತಿಯ ಚೇರ್ಮನ್ ಮುಂಡ್ಕುರ್ ರಾಮದಾಸ್ ಕಾಮತ್ , ಅಧ್ಯಕ್ಷ ಎಂ . ಪದ್ಮನಾಭ ಪೈ , ತಂತ್ರಿ ಪಂಡಿತ್ ನರಸಿಂಹ ಆಚಾರ್ಯ ಹಾಗೂ ಚಾತುರ್ಮಾಸ ಸಮಿತಿಯ ಪದಾಧಿಕಾರಿಗಳು ಮತ್ತು ನೂರಾರು ಸಮಾಜ ಬಾಂಧವರು ಉಪಸ್ಥಿತರಿದ್ದರು .
DAKSHINA KANNADA
Surathkal: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ- ವಿದ್ಯಾರ್ಥಿನಿಯರು ಗಂಭೀರ..!
ಸುರತ್ಕಲ್: ರಸ್ತೆ ದಾಟುತ್ತಿದ್ದ ವೇಳೆ ರಾಂಗ್ ಸೈಡ್‌ನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗೊಂಡ ಘಟನೆ ಸುರತ್ಕಲ್ ಜಂಕ್ಷನ್ ಬಳಿ ನಡೆದಿದೆ.
ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿನಿ ಗಾಯಗೊಂಡವರು ಎಂದು ತಿಳಿದು ಬಂದಿದೆ. ಇನ್ನೋರ್ವಳ ಸ್ಥಿತಿ ಚಿಂತಾಜನಕವಾಗಿದ್ದು. ಇನ್ನೊಬ್ಬಳಿಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಅಗಮಿಸಿದ ಸುರತ್ಕಲ್ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ
BANTWAL
ವೈನ್ ಶಾಪ್ ಗೆ ಬಂದಿದ್ದ ಆಸಾಮಿ ಮೊಬೈಲ್ ಕದ್ದು ಎಸ್ಕೇಪ್..!!
ಪುತ್ತೂರು: ವೈನ್ ಶಾಪ್ ಗೆ ಬಂದಿದ್ದ ವ್ಯಕ್ತಿಯೋರ್ವ ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ.
ವ್ಯಕ್ತಿಯೋರ್ವ ಗ್ರಾಹಕರ ಸೋಗಿನಲ್ಲಿ ವೈನ್ ಶಾಪ್ ಗೆ ಬಂದಿದ್ದ. ಮೊದಲಿಗೆ ಗ್ರಾಹಕರಂತೆ ಬಂದು ಮದ್ಯ ಖರೀದಿಗೆ ಆರ್ಡರ್ ಮಾಡಿ ಟೇಬಲ್ ನಲ್ಲಿದ್ದ ಮೊಬೈಲ್ ಗೆ ಕನ್ನ ಹಾಕಿದ್ದಾನೆ. ಬಳಿಕ ಶಾಪ್ ನವರು ಬೇರೆ ಕಡೆ ತಿರುಗುವಾಗ ಈಚೆಯಿಂದ ಈ ಕದೀಮ ಮೊಬೈಲ್ ಅನ್ನು ಎಗರಿಸಿ ಬ್ಯಾಗ್ ಗೆ ಹಾಕಿಕೊಂಡು ಪರಾರಿಯಾಗಿದ್ದಾನೆ.
ವೈನ್ ಶಾಪ್ ನಲ್ಲಿರುವ ರಾಜೇಶ್ ಎಂಬವರ ಮೊಬೈಲ್ ಕಳವು ಆಗಿತ್ತು. ಕೂಡಲೇ ಅವರು ಸಿಸಿ ಕ್ಯಾಮರಾ ಚೆಕ್ ಮಾಡಿದ್ದಾರೆ. ಆಗ ಮೊಬೈಲ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BELTHANGADY
ದ.ಕ ದಲ್ಲಿ ಭಾರಿ ಮಳೆ: ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿದ್ದ ಅಂಗಡಿಗಳಿಗೆ ಹಾನಿ..!!
ಧರ್ಮಸ್ಥಳ: ಧರ್ಮಸ್ಥಳದಲ್ಲಿ 3ನೇ ದಿನದ ಲಕ್ಷ ದೀಪೋತ್ಸವದ ವೈಭವ ಒಂದು ಕಡೆಯಾದರೆ, ಇನ್ನೊಂದೆಡೆ ಗುಡುಗು ಸಹಿತ ಬಾರಿ ಮಳೆ ಅವಾಂತರ ತಂದಿದೆ.
ಕೆಲವು ಅಂಗಡಿಗಳಿಗೆ ಬಹಳ ಹಾನಿ ಆಗಿದೆ. ಮಳೆ ಅಂಗಡಿ ಮಾಲೀಕರಿಗೆ ನಷ್ಟವನ್ನುಂಟು ಮಾಡಿದೆ. ಮಳೆಗೆ ಅಂಗಡಿಯೊಳಗಿದ್ದ ಕೆಲವು ವಸ್ತುಗಳು ಮಳೆಗೆ ಕೊಚ್ಚಿಕೊಂಡು ಹೋಗಿದೆ.
ಧರ್ಮಸ್ಥಳ ಶಾಲಾ ಮೈದಾನದಲ್ಲಿ ನಡೆಯುತ್ತಿದ್ದ ವಸ್ತು ಪ್ರದರ್ಶನಕ್ಕೆ ಬಹಳ ಸಮಸ್ಯೆ ಆಗಿದೆ. ಸಭಾಂಗಣದ ಬಳಿ ಹಾಕಿದ್ದ ಕುರ್ಚಿಗಳು ಒದ್ದೆಯಾಗಿದೆ.
- FILM5 days ago
ರಾತ್ರಿ 12.30ಕ್ಕೆ ಆಡಿಷನ್..2.30ಕ್ಕೆ ಆಯ್ಕೆ-ಬೃಂದಾವನ ಸೀರಿಯಲ್ ಹೀರೋ ಕ್ಲಾರಿಟಿ
- FILM4 days ago
ನಮೃತಾ ಗೌಡ ಆವಾಜ್ ಗೆ ಸಂಗೀತಾ ಕಣ್ಣೀರು
- bengaluru7 days ago
Film: ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಟಾಲಿವುಡ್ ಗೆ ಎಂಟ್ರಿ
- bengaluru5 days ago
ಹೈಕೋರ್ಟ್ ಕಲಾಪವನ್ನೂ ಬಿಡದ ಸೈಬರ್ ಹ್ಯಾಕರ್ಸ್-ವಿಡಿಯೋ ಕಾನ್ಫರೆನ್ಸ್ ಆ್ಯಪ್ನಲ್ಲಿ ಅಶ್ಲೀಲ ದೃಶ್ಯ ಅಪ್ಲೋಡ್