Connect with us

    LATEST NEWS

    ನೃತ್ಯ ಮಾಡಲು ನಿರಾಕರಿಸಿದ ನೃತ್ಯಗಾರ್ತಿಯರ ಮೇಲೆ ಸಾಮೂಹಿಕ ಅತ್ಯಾಚಾ*ರ

    Published

    on

    ಮಂಗಳೂರು/ಉತ್ತರ ಪ್ರದೇಶ : ಇತ್ತೀಚೆಗೆ ಅಪಹರಣ ಪ್ರಕರಣಗಳು ಹೆಚ್ಚುತ್ತಿದ್ದು, ಈ ಬಗ್ಗೆ ಆಕ್ರೋಶ ಕೇಳಿ ಬರುತ್ತಿದೆ. ಆದರೂ ಅತ್ಯಾಚಾ*ರ ಪ್ರಕರಣಗಳು ನಿಂತಿಲ್ಲ. ಇದೀಗ ಉತ್ತರ ಪ್ರದೇಶದಲ್ಲಿ ಅಂತಹುದ್ದೇ ಮತ್ತೊಂದು ಪ್ರಕರಣ ದಾಖಲಾಗಿದೆ.

    8 ಮಂದಿ ಯುವಕರು ನೃತ್ಯ ಮಾಡಲು ನಿರಾಕರಿಸಿದ ಯುವತಿಯರ ಮೇಲೆ ಅತ್ಯಾಚಾ*ರ ಎಸಗಿರುವ ಅಮಾನವೀಯ ಘಟನೆ ನಡೆದಿದೆ.

    ಅಪಹರಿಸಿ ಕೃ*ತ್ಯ :

    ಆರ್ಕೆಸ್ಟ್ರಾ ನಡೆಯುತ್ತಿದ್ದ ಸಂದರ್ಭದಲ್ಲಿಆರೋಪಿಗಳು ನೃತ್ಯಗಾರ್ತಿಯರ ಹಣೆಗೆ ಬಂದೂಕಿಟ್ಟು ಅಪಹರಿಸಿ 10 ಕಿ.ಮೀ ದೂರಕ್ಕೆ ಕರೆದೊಯ್ದಿದ್ದಾರೆ. 2 ಜನ ನೃತ್ಯಗಾರ್ತಿಯರು ಬರ್ತ್ ಡೇ ಪಾರ್ಟಿಯಲ್ಲಿ ನೃತ್ಯ ಮಾಡಲು ನಿರಾಕರಿಸಿದ್ದಕ್ಕೆ ಸಾಮೂಹಿಕ ಅತ್ಯಾಚಾ*ರ ಎಸಗಿದ ಘಟನೆ ಉತ್ತರ ಪ್ರದೇಶದ ಖುಷಿನಗರದಲ್ಲಿ ನಡೆದಿದೆ.

    ಆರೋಪಿಗಳಲ್ಲಿ ಒಬ್ಬನ ಮನೆಗೆ ಕರೆದೊಯ್ದು ಯುವತಿಯರ ಬಳಿ ನೃತ್ಯ ಮಾಡುವಂತೆ ಒತ್ತಾಯಿಸಿದಾಗ ಅವರ ನಿರಾಕರಣೆಯ ಸಹಿಸದೆ ಕುಡಿದ ಮತ್ತಿನಲ್ಲಿ ಅತ್ಯಾಚಾ*ರವೆಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.. ಅಪರಾಧಕ್ಕೆ ಬಳಸಿದ್ದ ಎರಡು ಎಸ್ ಯು ವಿ ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.  ಎಲ್ಲಾ ಆರೋಪಿಗಳು 30 ವರ್ಷಕ್ಕಿಂತ ಕೆಳ ವಯಸ್ಸಿನವರಾಗಿದ್ದಾರೆ.  ಆರೋಪಿಗಳನ್ನು ವಶಕ್ಕೆ ಪಡೆದಿದ್ದು ,ಯುವತಿಯರ ವೈದ್ಯಕೀಯ ಪರೀಕ್ಷಾ ವರದಿಗಾಗಿ ಕಾಯಲಾಗುತ್ತಿದೆ.

    ಎನ್ ಕೌಂಟರ್ ನಡೆಸಿ ಅರೆಸ್ಟ್ :

    ಸಪ್ಟೆಂಬರ್ 8 ರಾತ್ರಿ ಘಟನೆ ಕುರಿತು ಪೋಲಿಸರಿಗೆ ದೂರು ಬಂದಿತ್ತು. ನಾಗೇಂದ್ರ ಯಾಧವ್, ಆಸನ್ ಸಂಗ್, ಖ್ರಿಶ್ ತಿವಾರಿ, ಅರ್ಥಕ್ ಸಿಂಗ್ ಮತ್ತು ವಿವೆಕ್ ಸೇಠ್ ಎಂದು ಗುರುತಿಸಲಾಗಿದೆ. ಇತರ ಇಬ್ಬರು ಆರೋಪಿಗಳಾದ ನಿಸಾರ್ ಅನ್ಸಾರಿ ಮತ್ತು ಆದಿತ್ಯ ಸಾಹ್ನಿ ಸೆಪ್ಟೆಂಬರ್ 10 ರಂದು ಪೋಲಿಸರು ನಡೆಸಿದ ಎನ್ಕೌಂಟರ್ನಲ್ಲಿ ಸಿಕ್ಕಿಬಿದ್ದರು. ಇಬ್ಬರ ಕಾಲಿಗೂ ಗುಂಡು ತಗುಲಿದ್ದು ಪ್ರಥಮ  ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಬಿಡುಗಡೆ ಮಾಡಿ ವಿಚಾರಣೆ ನಡೆಸಿದ ಬಳಿಕ ತಮ್ಮ ಎಲ್ಲಾ ವಿಷಯವನ್ನು ಬಹಿರಂಗಪಡಿಸಿದ್ದಾರೆ.

    DAKSHINA KANNADA

    ಕೈಕಂಬ : ಕೆಲಸ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವು

    Published

    on

    ಕೈಕಂಬ : ಕುಪ್ಪೆಪದವು ಫಾಸ್ಟ್‌ಫುಡ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಅಶೊಕ್ (33) ಹೃದಯಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಶನಿವಾರ(ಅ. 12) ಸಂಭವಿಸಿದೆ.


    ಪುತ್ತೂರು ತಾಲೂಕಿನ ಕರಾಯ ಮರಿಪಾಡಿ ನಿವಾಸಿ ಅಶೋಕ್, ಸಹೋದರ ಸಂಬಂಧಿ ಗಿರೀಶ್ ನಡೆಸುತ್ತಿರುವ ಫಾಸ್ಟ್‌ಫುಡ್‌ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ಬೆಳಿಗ್ಗೆ ಎಂದಿನಂತೆ ಕೆಲಸ ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿದ್ದರೂ, ಗಂಭೀರವಾಗಿ ಪರಿಗಣಿಸಿರಲಿಲ್ಲ.
    ಮಧ್ಯಾಹ್ನ ವೇಳೆ ಹೋಟೇಲ್‌ನಲ್ಲಿ ಕುಸಿದು ಬಿದ್ದರು. ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾದರೂ , ವೈಧ್ಯರ ಸಲಹೆಯಂತೆ ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.
    ದುರಾದೃಷ್ಟವಶಾತ್ ದಾರಿ ಮಧ್ಯೆ ಅಶೋಕ್ ಕೊನೆಯುಸಿರೆಳೆದರು. ಮೃತರು ಪತ್ನಿ ಹಾಗೂ ಒಂದು ವರ್ಷದ ಮಗುವನ್ನು ಅಗಲಿದ್ದಾರೆ.
    ಬಜಪೆ ಪೊಲೀಸ್ ಠಾಣೆಯಲ್ಲಿ ಅಸ್ವಾಭವಿಕ ಪ್ರಕರಣ ದಾಖಲಾಗಿದೆ.

    Continue Reading

    DAKSHINA KANNADA

    ‘ಮಂಗಳೂರು ದಸರಾ’ ವೈಭವದ ಆಕರ್ಷಕ ಶೋಭಾಯಾತ್ರೆ

    Published

    on

    ಮಂಗಳೂರು: ನಗರವೆಲ್ಲ ಬೆಳಕಿನ ಶೃಂಗಾರದಿಂದ ಕಂಗೊಳಿಸುತ್ತಿದ್ದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಶೋಭಾಯಾತ್ರೆ ಸಹಸ್ರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ರವಿವಾರ ಸಂಜೆ ಆರಂಭಗೊಂಡು, ಸೋಮವಾರ ಮುಂಜಾನೆಯವರೆಗೆ ವೈಭವದಿಂದ ನೆರವೇರಿತು.

    ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ನಡೆದ ಭವ್ಯ ಶೋಭಾ ಯಾತ್ರೆಯನ್ನು ಮಳೆಯ ನಡುವೆಯೂ ಸಹಸ್ರಾರು ಜನರು ಕಣ್ತುಂಬಿಕೊಂಡರು. ಕುದ್ರೋಳಿ ಕ್ಷೇತ್ರದಲ್ಲಿ ನವರಾತ್ರಿ ಅಂಗವಾಗಿ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು, ಶ್ರೀ ಶಾರದಾ ಮಾತೆ, ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿಗ್ರಹ ಸಹಿತ ವರ್ಣರಂಜಿತ ಮೆರವಣಿಗೆ ನಡೆಯಿತು.

     

    ನಿನ್ನೆ (ಅ.13) ಸಂಜೆ ಶ್ರೀ ಕ್ಷೇತ್ರ ಕುದ್ರೋಳಿಯಿಂದ ಹೊರಟ ದಸರಾ ಮೆರವಣಿಗೆ ಮಣ್ಣಗುಡ್ಡೆ ಮಾರ್ಗವಾಗಿ ಲೇಡಿಹಿಲ್‌, ನಾರಾಯಣ ಗುರು ವೃತ್ತ, ಲಾಲ್‌ಬಾಗ್‌, ಬಲ್ಲಾಳ್‌ಬಾಗ್‌, ಪಿ.ವಿ.ಎಸ್‌. ವೃತ್ತ, ಕೆ.ಎಸ್‌. ರಾವ್‌ ರಸ್ತೆ, ಹಂಪನಕಟ್ಟೆ, ವಿ.ವಿ. ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ ಗಣಪತಿ ಹೈಸ್ಕೂಲ್‌ ಮಾರ್ಗವಾಗಿ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಕಾರ್‌ಸ್ಟ್ರೀಟ್‌, ಅಳಕೆ ಮೂಲಕ ಮತ್ತೆ ಶ್ರೀ ಕ್ಷೇತ್ರ ತಲುಪಿತು. ಮಂಗಳೂರು ನಗರದಲ್ಲಿ ಸುಮಾರು 9 ಕಿ.ಮೀ. ವ್ಯಾಪ್ತಿಯಲ್ಲಿ ಮೆರವಣಿಗೆ ಸಾಗಿಬಂತು.
    ನವದುರ್ಗೆಯರ ಮತ್ತು ಶಾರದಾ ಮಾತೆಯ ಮೂರ್ತಿಗಳನ್ನು ಇಂದು ಬೆಳಗ್ಗೆ ಕ್ಷೇತ್ರದ ಪುಷ್ಕರಿಣಿಯಲ್ಲಿ ಜಲ ಸ್ತಂಭನಗೊಳಿಸಲಾಯಿತು. ದಸರಾ ಶೋಭಾಯಾತ್ರೆ ಆರಂಭಕ್ಕೂ ಮುನ್ನ ಕುದ್ರೋಳಿಯ ಶ್ರೀ ಶಾರದೆಯ ಸನ್ನಿಧಿಯಲ್ಲಿ ಹಲವು ಮಂದಿ ಸೇವಾಕರ್ತರನ್ನು ಕ್ಷೇತ್ರದ ಪರವಾಗಿ ಜನಾರ್ದನ ಪೂಜಾರಿ ಅವರು ಗೌರವಿಸಿದರು.


    ಮುಂದಿನ ವರ್ಷ ಚಿನ್ನದ ವೀಣೆ:
    ಕಾರ್ಯಕ್ರಮದಲ್ಲಿ ಮಾತನಾಡಿದ ಜನಾರ್ದನ ಪೂಜಾರಿ, ಮಂಗಳೂರು ದಸರಾ ಜನರಿಂದಲೇ ಆಚರಿಸುವ ದಸರಾ. ಇದರ ಯಶಸ್ಸಿಗೆ ಕ್ಷೇತ್ರದಲ್ಲಿ ನೆಲೆಸಿರುವ ದೇವರು ಕಾರಣ. ಪ್ರತಿವರ್ಷ ಮಂಗಳೂರು ದಸರಾದ ವೈಭವವನ್ನು ಜಗತ್ತು ನೋಡುತ್ತದೆ. ದೇವರ ಕೃಪೆಯಿಂದ ಹೀಗೆ ವೈಭವದಿಂದ ಮುಂದುವರಿಯುತ್ತಿದೆ. ಈ ಬಾರಿ ಶಾರದೆಯ ವೀಣೆಯನ್ನು ಪುತ್ರ ಸಂತೋಷ್‌ ಅವರು ಬೆಳ್ಳಿಯಿಂದ ಮಾಡಿಸಿದ್ದಾರೆ. ಮುಂದಿನ ಬಾರಿ ದೇವರು ಅವಕಾಶ ನೀಡಿದರೆ ಚಿನ್ನದ ವೀಣೆಯನ್ನು ಪುತ್ರನ ಮೂಲಕ ಒದಗಿಸಲಾಗುವುದು ಎಂದು ಹೇಳಿದರು.
    ವಿವಿಧ ತಂಡಗಳ ಮೆರುಗು:
    ಅಲಂಕೃತ ಕೊಡೆಗಳು, ಜಾನಪದ ಕಲಾ ತಂಡಗಳು, ಭಜನ ತಂಡ, ವಾದ್ಯ-ಬ್ಯಾಂಡ್‌ ತಂಡಗಳು, ವಿವಿಧ ಹುಲಿ ವೇಷ ತಂಡಗಳ ಪ್ರದರ್ಶನ ಹಾಗೂ ವಿವಿಧ ಕಲಾ ಪ್ರಕಾರಗಳು ಶೋಭಾಯಾತ್ರೆಗೆ ಮೆರುಗು ನೀಡಿದವು. ವಿವಿಧ ಸಂಘ ಸಂಸ್ಥೆಗಳು ಪ್ರವರ್ತಿಸಿದ ಹಲವು ಧಾರ್ಮಿಕ-ಸಾಂಸ್ಕೃತಿಕ ಸ್ತಬ್ಧಚಿತ್ರಗಳು ಮೆರವಣಿಗೆಯ ರಂಗು ಹೆಚ್ಚಿಸಿತು. ನೃತ್ಯ ರೂಪಕ, ದೇಶದ ಪರಂಪರೆ ಬಿಂಬಿಸುವ ಟ್ಯಾಬ್ಲೋಗಳು ಮತ್ತು ವಿವಿಧ ಕಲಾ ಪ್ರಕಾರಗಳು ಆಕರ್ಷಣೆಯನ್ನು ಹೆಚ್ಚಿಸಿದವು. ದಸರಾ ಮೆರವಣಿಗೆ ಸಾಗಿ ಬಂದ ರಸ್ತೆಯ ಇಕ್ಕೆಲಗಳಲ್ಲಿಯೂ ಜನ ಜಾತ್ರೆಯೇ ನೆರೆದಿತ್ತು. ಮೆರವಣಿಗೆ ದಾರಿಯಲ್ಲಿ ಸಂಗೀತ ರಸಮಂಜರಿ ಮತ್ತಿತರ ಕಾರ್ಯಕ್ರಮ ಮನಸೂರೆಗೊಳಿಸಿತು.

     

     

    Continue Reading

    DAKSHINA KANNADA

    ಸುಳ್ಯ – ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ, ಕೊಲೆ ಯತ್ನ; ಮಹಿಳೆ ಸ್ಥಿತಿ ಗಂಭೀರ

    Published

    on

    ಸುಳ್ಯ:  ರಾತ್ರಿ ಮಲಗಿರುವಾಗ ಮಹಿಳೆ ಮೇಲೆ ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ, ಕೊಲೆಗೆ ಯತ್ನಿಸಿರುವ ಘಟನೆ ನಡೆದಿರುವುದು ತಿಳಿದು ಬಂದಿದೆ.


    ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲರ್ಪೆ ಜಯಭಾರತಿ (56) ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ ಭಾವ ಶಂಕರ ಅವರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.
    ಗಂಭೀರ ಗಾಯಗೊಂಡ ಮಹಿಳೆಯನ್ನು ಸಂಬಂಧಿಕರು ಸುಳ್ಯದ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಬೆಂಕಿ ಹಚ್ಚಿರುವ ವ್ಯಕ್ತಿಗೂ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೌಟುಂಬಿಕ ವಿವಾದದ ಹಿನ್ನಲೆಯಲ್ಲಿ ಕೃತ್ಯ ಎಸಗಿರುವ ಬಗ್ಗೆ ಶಂಕಿಸಲಾಗಿದೆ.
    ಬೆಳ್ಳಾರೆ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಅಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

    Continue Reading

    LATEST NEWS

    Trending