DAKSHINA KANNADA
ಮಂಗಳೂರು : ಕೆ ಎಸ್ ರಾವ್ ರಸ್ತೆಯ ಲಾಡ್ಜ್ ಒಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ..!
Published
2 years agoon
By
Adminಮಂಗಳೂರು ನಗರದ ಕೆ ಎಸ್ ರಾವ್ ರಸ್ತೆಯಲ್ಲಿನ ಲಾಡ್ಜ್ ಒಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಗಳೂರು : ಮಂಗಳೂರು ನಗರದ ಕೆ ಎಸ್ ರಾವ್ ರಸ್ತೆಯಲ್ಲಿನ ಲಾಡ್ಜ್ ಒಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡವರು ಮೈಸೂರಿನ ವಾಣಿ ವಿಲಾಸದವರೆಂದು ತಿಳಿದು ಬಂದಿದ್ದು , ಪಕ್ಕದಲ್ಲೇ ಡೆತ್ ನೋಟು ಕೂಡ ಪತ್ತೆಯಾಗಿದೆ ಎನ್ನಲಾಗಿದೆ.
ಮೃತರನ್ನು ಮೈಸೂರಿನ ವಾಣಿ ವಿಲಾಸ ಬಡಾವಣೆಯ ದೇವೆಂದ್ರಪ್ಪ(48) , ಅವರ ಪತ್ನಿ ನಿರ್ಮಲಾ(37) ,ಮತ್ತು ಅವರ ಅವಳಿ ಮಕ್ಕಳಾದ ಚೈತ್ರಾ(9) ಮತ್ತು ಚೈತನ್ಯ(9) ಎಂದು ಗುರುತ್ತಿಸಲಾಗಿದೆ.
ಮಾರ್ಚ್ 27 ರಂದು ಮೈಸೂರಿನಿಂದ ಮಂಗಳೂರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಬಂದು ಲಾಡ್ಜ್‌ನಲ್ಲಿ ರೂಂ ಮಾಡಿ ಉಳಿದುಕೊಂಡಿದ್ದರು.
ಫ್ಯಾಮಿಲಿ ರೂಂ ಪಡಕೊಂಡಿದ್ದರಿಂದ ಆಗಾಗ ಬಂದು ಲಾಡ್ಜ್ ಸಿಬಂದಿಗಳು ತೊಂದರೆ ಕೊಡ್ತಾ ಇರಲಿಲ್ಲ, ಫೋನಿನಲ್ಲೇ ಆಹಾರವನ್ನು ತರಿಸಿ ಸೇವಿಸುತ್ತಿದ್ದು ಕಳೆದ 2 ದಿನಗಳಿಂದ ರೂಂ ನಿಂದ ಆಚೆ ಅವರು ಬಂದಿರಲಿಲ್ಲ.
ಇಂಟರ್ ಕಾಮ್ ನಲ್ಲಿ ಕಾಲ್ ಮಾಡಿದ್ರೂ ರಿಸೀವ್ ಮಾಡ್ತಾ ಇರಲಿಲ್ಲ. ಆದ್ರೆ ರೂಮಲ್ಲಿ ಟಿವಿ ಸೌಂಡ್ ಕೇಳ್ತಾ ಇದ್ದರಿಂದ ಸಿಬಂದಿಗಳು ತೊಂದರೆ ಕೊಟ್ಟಿರಲಿಲ್ಲ.
ಆದರೆ ಇಂದು ಬೆಳಗ್ಗೆ ಅನುಮಾನ ಬಂದು ರೂಂ ಪರಿಶೀಶಿಸಿದಾಗ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿತ್ತು.
ಪೊಲೀಸರ ಪ್ರಕಾರ ಮಾರ್ಚ್ 28 ಕ್ಕೆ ಕುಟುಂಬ ಆತ್ಮಹತ್ಯೆಗೆ ಶರಣಾಗಿತ್ತು ಎಂದು ತಿಳಿದು ಬಂದಿದೆ.
ಆರ್ಥಿಕ ಮುಗ್ಗಟ್ಟಿನಿಂದ ಈ ಕುಟುಂಬ ಮಂಗಳೂರಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮಂಗಳೂರು ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ.
ದೇವೇಂದ್ರಪ್ಪ ಪತ್ನಿ ಮತ್ತು ಮಕ್ಕಳಿಗೆ ಮೊದಲು ವಿಷ ಉಣಿಸಿ ಬಳಿಕ ತಾನು ನೇಣಿಗೆ ಕೊರಳೊಡ್ಡಿದ್ದಾನೆ. ಸಾವಿಗೂ ಮುನ್ನ ಡೆತ್ ನೋಟನ್ನು ಬರೆದಿದ್ದು ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂದರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಮೃತರ ಕುಟುಂಬಸ್ಥರನ್ನು ಸಂಪರ್ಕಿಸುವ ಪ್ರಯತ್ನ ನಡೆಸಲಾಗುತ್ತಿದೆ.
DAKSHINA KANNADA
ಮಸ್ಕತ್ ನಲ್ಲಿ ಬಿರುವ ಜವನೆರ್ ಸಂಯೋಜನೆಯ ಕ್ರೀಡಾಕೂಟ
Published
1 hour agoon
25/11/2024By
NEWS DESK4ಮಂಗಳೂರು/ಮಸ್ಕತ್ : ಬಿರುವ ಜವನೆರ್ ಮಸ್ಕತ್ ಆಯೋಜಿಸಿದ ಕರ್ನಾಟಕ ಪ್ರೀಮಿಯಾರ್ ಲೀಗ್ ನ 2024 ನೇ ಸಾಲಿನ ಕ್ರೀಡಾಕೂಟ ಮಸ್ಕತ್ ನ ಅಲ್ ಹೈಲ್ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದ ಉದ್ಘಾಟನೆಯನ್ನು ಓಮನ್ ಕ್ರಿಕೆಟ್ ನ ಟಿ20 ತಂಡದ ನಾಯಕ ವಿನಾಯಕ್ ಶುಕ್ಲ ನೆರವೇರಿಸಿದರು.
ಈ ಸಂದರ್ಭ ಉತ್ತಮ್ ಕೋಟ್ಯಾನ್, ಮುಸ್ತಫಾ, ರಮಾನಂದ್ ಬಂಗೇರ, ಚಂದ್ರಕಾಂತ್ ಕೋಟ್ಯಾನ್, ದಾಮೋದರ್ ಶೆಟ್ಟಿ, ಪದ್ಮಾಕರ್ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು.
ಪುದರ್ ದೀತಿಜಿ ನಾಟಕದ ಪೋಸ್ಟರ್ ಬಿಡುಗಡೆ :
ಇದೇ ಸಂದರ್ಭದಲ್ಲಿ ಜನವರಿ 10 ರಂದು ಮಸ್ಕತ್ ನ ಆಲ್ ಫಾಜಾಜ್ ಹೋಟೆಲ್ ನಲ್ಲಿ ನಡೆಯಲಿರುವ ಕಾಪಿಕಾಡ್ ಅವರ ಚಾ ಪರ್ಕ ತಂಡದ ” ಪುದರ್ ದೀತಿಜಿ ” ನಾಟಕದ ಪೋಸ್ಟರ್ ಬಿಡುಗಡೆ ಹಾಗೂ ಪ್ರಚಾರ ಅಭಿಯಾನಕ್ಕೆ ಡಾ. ದೇವದಾಸ್ ಕಾಪಿಕಾಡ್ ಹಾಗೂ ಅರ್ಜುನ್ ಕಾಪಿಕಾಡ್ ಚಾಲನೆ ನೀಡಿದರು.
DAKSHINA KANNADA
‘ಕಾಂತಾರ ಚಾಪ್ಟರ್ – 1’ ಗೆ ವಿ*ಘ್ನ; ಬಸ್ ಪ*ಲ್ಟಿಯಾಗಿ 6 ಮಂದಿ ಗಂ*ಭೀರ !
Published
6 hours agoon
25/11/2024ಉಡುಪಿ : ರಿಷಬ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಕಾಂತಾರ ಸಿನಿಮಾ ಕಲಾವಿದರಿದ್ದ ಬಸ್ ಪ*ಲ್ಟಿಯಾಗಿದ್ದು, ಆರು ಮಂದಿ ಗಂ*ಭೀರ ಗಾ*ಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಮುದೂರಿನಲ್ಲಿ ನಡೆದಿದೆ.
ಕರಾವಳಿ ಭಾಗದ ಬೇರೆ ಬೇರೆ ಕಡೆಗಳಲ್ಲಿ ‘ಕಾಂತಾರ ಚಾಪ್ಟರ್ 1’ ಸಿನಿಮಾಗೆ ಶೂಟಿಂಗ್ ಮಾಡಲಾಗುತ್ತಿದೆ. ವಿವಿಧ ಕಲಾವಿದರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮುದೂರಿನಲ್ಲಿ ಚಿತ್ರೀಕರಣ ಮುಗಿಸಿ ಕಲಾವಿದರು ಕೊಲ್ಲೂರಿಗೆ ಹೋಗುತ್ತಿದ್ದ ವೇಳೆ ಅ*ಪಘಾತ ಸಂಭವಿಸಿದೆ. ‘ಹೊಂಬಾಳೆ ಫಿಲ್ಮ್ಸ್’ ಮೂಲಕ ವಿಜಯ್ ಕಿರಗಂದೂರು ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಿಷಬ್ ಶೆಟ್ಟಿ ಅವರು ನಿರ್ದೇಶನ ಮಾಡುವುದರ ಜೊತೆಗೆ ಮುಖ್ಯ ಭೂಮಿಕೆಯಲ್ಲೂ ನಟಿಸುತ್ತಿದ್ದಾರೆ. ‘ಕಾಂತಾರ’ ಚಿತ್ರದ ಪ್ರೀಕ್ವೆಲ್ ಆಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಡಿಬರುತ್ತಿದೆ. ಬಸ್ ಪ*ಲ್ಟಿ ಆಗಿದ್ದರಿಂದ ಚಿತ್ರತಂಡದಲ್ಲಿ ಬೇಸರ ಆವರಿಸಿದೆ.
ಪಲ್ಟಿಯಾದ ಹಿನ್ನಲೆ ಚಾಲಕನ ಮೇಲೆ ಹಲ್ಲೆಗೆ ವಾಹನದಲ್ಲಿದ್ದ ಹುಡುಗರು ಮುಂದಾಗಿದ್ದಾರೆ . ಬಸ್ ನಲ್ಲಿ ಹುಡುಗರು ವಾಹನ ಚಾಲಕ ನಿರ್ಲಕ್ಷದಿಂದ ವಾಹನ ಚಲಾಯಿಸಿದ್ದಾನೆ ಎಂದು ಆರೋಪಿಸಿ ಹ*ಲ್ಲೆ ನಡೆಸಿದ್ದಾರೆ. ಲೋಕಲ್ ಚಾಲಕನ ಮೇಲೆ ಹ*ಲ್ಲೆಯಾದ ಹಿನ್ನೆಲೆ ಸ್ಥಳೀಯರ ಅಕ್ರೋಶ, ರಿಷಬ್ ಶೆಟ್ಟಿ ಮಧ್ಯವರ್ತಿಯಲ್ಲಿ ಸಂಧಾನ ನಡೆದಿದ್ದು, ಎಲ್ಲರಿಗೂ ಕರೆದು ಮಾತನಾಡುತ್ತೇನೆ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಕಾಂತಾರ ಚಿತ್ರವು ದೈವ ಹಾಗೂ ದೈವಾರಾಧನೆಗೆ ಸಂಬಂಧಿಸಿದ ಕಥಾ ಹಂದರವನ್ನುಹೊಂದಿದ್ದು, ಈ ಚಿತ್ರ ಬಿಡುಗಡೆಗೊಂಡು ಬಹಳಷ್ಟು ಮೆಚ್ಚುಗೆಯನ್ನು ಗಳಿಸಿತ್ತು. ಚಿತ್ರ ಬಿಡುಗಡೆಗೊಂಡ ಬಳಿಕ ಹಲವುಕಡೆ ದೈವದ ವೇಷವನ್ನುಅಸಭ್ಯವಾಗಿ ತೊಟ್ಟು ಅಭಿಮಾನಿಗಳು ನರ್ತಿಸಿ ದೈವಕ್ಕೆ ಅಪಮಾನ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದು, ದೈವಾರಾಧಕರು ಚಿತ್ರದ ವಿರುದ್ಧ ಅಸಮಧಾನ ಹೊಂದಿದ್ದಾರೆ.
ಕಾಂತಾರ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿ ‘ಕಾಂತಾರ ಚಾಪ್ಟರ್ – 1’ ಮಾಡುವುದಾಗಿ ಘೋಷಿಸಿದ ಬಳಿಕ ತುಳುನಾಡಿನ್ಲಿ ತೀವ್ರ ಆಕ್ರೋಷ ಕೇಳಿ ಬಂದಿತ್ತು. ಚಿತ್ರತಂಡವು ಚಿತ್ರೀಕರಣ ನಡೆಸುವ ಈ ಸಂದರ್ಭ ಹಲವು ವಿಘ್ನಗಳು ಎದುರಾಗುತ್ತಿದ್ದು, ಇದು ದೈವದ ಕೋಪವೋ, ಇಲ್ಲ ದೈವನರ್ತಕರ ಶಾಪವಿರಬೇಕು ಎಂಬ ಗುಮನಿಗಳು ಶುರುವಾಗಿದೆ.
ಚಿತ್ರೀಕರಣ ಮುಗಿಸಿ ತೆರಳುವಾಗ ಕೊಲ್ಲೂರು ಮಾರ್ಗದಲ್ಲಿ ಈ ದು*ರ್ಘಟನೆ ಸಂಭವಿಸಿದ್ದು, ಬಸ್‌ನಲ್ಲಿ 25 ಕಲಾವಿದರಿದ್ದರು. ಹಲವರು ಸಣ್ನ ಪುಟ್ಟ ಗಾ*ಯಗಳಿಂದ ಪಾರಾಗಿದ್ದರೆ, ಆರು ಜನರಿಗೆ ಗಂಭೀರ ಗಾ*ಯವಾಗಿದೆ. ಗಾಯಾಳುಗಳನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಸ್ಥಳಕ್ಕೆ ಕೊಲ್ಲೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
DAKSHINA KANNADA
ಉಳ್ಳಾಲ: ಚಲಿಸುತ್ತಿದ್ದ ರಿಕ್ಷಾ ಮರಕ್ಕೆ ಡಿ*ಕ್ಕಿ: ಓರ್ವ ಮೃ*ತ್ಯು, ಮೂವರಿಗೆ ಗಾ*ಯ
Published
6 hours agoon
25/11/2024ಉಳ್ಳಾಲ: ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಮೃ*ತಪಟ್ಟು ಮೂವರು ಗಾ*ಯಗೊಂಡಿರುವ ಘಟನೆ ಉಳ್ಳಾಲ ತಾಲೂಕಿನ ಕೊಣಾಜೆ ಸಮೀಪದ ಪುಳಿಂಚಾಡಿ ಎಂಬಲ್ಲಿ ಭಾನುವಾರ (ನ.24) ಸಂಜೆ ಸಂಭವಿಸಿದೆ.
ಕಾಸರಗೋಡು ಜಿಲ್ಲೆಯ ಕುಂಬಳೆ ಮಂಜತ್ತಡ್ಕ ನಿವಾಸಿ ನಾರಾಯಣ ಗಟ್ಟಿ (50) ಮೃ*ತರು ಎಂದು ಗುರುತಿಸಲಾಗಿದೆ.
ಸಂಬಂಧಿಕರೊಬ್ಬರ ಆರೋಗ್ಯ ವಿಚಾರಿಸಲೆಂದು ಕೊಣಾಜೆ ಪುಳಿಂಚಾಡಿಯ ಕಲ್ಕಾರ್ ಎಂಬಲ್ಲಿಗೆ ನಾರಾಯಣ ಗಟ್ಟಿ ಅವರು ರಿಕ್ಷಾದಲ್ಲಿ ತೆರಳಿದ್ದರು. ಅಲ್ಲಿ ಇಳಿಜಾರು ಪ್ರದೇಶದಲ್ಲಿ ರಿಕ್ಷಾ ಇಳಿಯುತ್ತಿದ್ದಂತೆ ಬ್ರೇಕ್ ವೈಫಲ್ಯಕ್ಕೀಡಾಗಿ ಮರವೊಂದಕ್ಕೆ ಡಿ*ಕ್ಕಿ ಹೊಡೆದಿದೆ.
ಈ ಸಂದರ್ಭ ಗಂಭೀರ ಗಾಯಗೊಂಡ ನಾರಾಯಣ ಗಟ್ಟಿ ಅವರು ಮೃ*ತಪಟ್ಟಿದ್ದು, ಘಟನೆಯಲ್ಲಿ ರಿಕ್ಷಾದೊಳಗಿದ್ದ ಸಂಬಂಧಿ ಮಹಿಳೆ, ಅವರ ಪುತ್ರ ಹಾಗೂ ಇನ್ನೋರ್ವರಿಗೆ ಗಾ*ಯಗಳಾಗಿವೆ. ನಾರಾಯಣ ಗಟ್ಟಿ ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮಂಗಳೂರು ದಕ್ಷಿಣ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
ಚಾರ್ಜರ್ ಕೇಬಲ್ ಗೆ ಗಮ್ ಟೇಪ್ ಸುತ್ತಿ ಚಾರ್ಜ್ ಮಾಡುವವರು ಇದನ್ನು ಓದಲೇ ಬೇಕು !
ಕಾಮೆಂಟ್ ಮೂಲಕ ಹಿಂದೂ ಧರ್ಮದ ದೇವರುಗಳ ಬಗ್ಗೆ ಅವಹೇಳನ: ದೂರು ದಾಖಲು
ಬಿಗ್ ಬಾಸ್ ನಿಂದ ಧರ್ಮ ಎಲಿಮಿನೆಟ್ ಆಗಿದ್ದು ಯಾಕೆ ಗೊತ್ತಾ ?
ಸ್ನೇಹಿತನಿಗೆ ಥಳಿಸಿ ಅ*ಪ್ರಾಪ್ತೆ ಮೇಲೆ ಅ*ತ್ಯಾಚಾ*ರ ಎಸಗಿದ ಟ್ರಕ್ ಚಾಲಕ
ನಿನ್ನೆಯ ಹರಾಜಿನಲ್ಲಿ ಆರ್ ಸಿಬಿ ಖರೀದಿಸಿದ ಆಟಗಾರರು ಇವರೇ !
ಎಲನ್ ಮಸ್ಕ್ ಗೆ ಇಷ್ಟವಾದ ಭಾರತದ ಚುನಾವಣಾ ಪ್ರಕ್ರಿಯೆ!
Trending
- LATEST NEWS5 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- Baindooru3 days ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
- LIFE STYLE AND FASHION4 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- LATEST NEWS7 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!