ಮಥುರಾ: ಬಾಬರಿ ಮಸೀದಿ ಧ್ವಂಸ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಅಖಿಲ ಭಾರತ ಹಿಂದೂ ಮಹಾ ಸಭಾವು ಶಾಹಿ ಈದ್ಗಾ ಮಸೀದಿಯೊಳಗೆ ಇರುವ ದೇವರ “ನಿಜವಾದ ಜನ್ಮಸ್ಥಳ” ದಲ್ಲಿ ಶ್ರೀಕೃಷ್ಣನ ವಿಗ್ರಹವನ್ನು ಸ್ಥಾಪಿಸಲು ಅನುಮತಿ ಕೋರಿದ ನಂತರ ಮಥುರಾದಲ್ಲಿ ಭಾರೀ ಸಂಖ್ಯೆಯ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 3 ಸಾವಿರ ಪೊಲೀಸ್ ಸಿಬ್ಬಂದಿಯನ್ನು ಬಂದೋಬಸ್ತ್‌ಗೆ ನೇಮಿಸಲಾಗಿದೆ.
ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿರುವ ಆಡಳಿತವು ಕತ್ರಾ ಕೇಶವ್ ದೇವ್ ದೇವಸ್ಥಾನ ಮತ್ತು ಶಾಹಿ ಈದ್ಗಾ ವ್ಯಾಪ್ತಿ ಪ್ರದೇಶವನ್ನು ಮೂರು ವಲಯಗಳಾಗಿ ವಿಂಗಡಿಸಿದೆ.
ದೇವಾಲಯ ಮತ್ತು ಮಸೀದಿಯನ್ನು ರೆಡ್ ಝೋನ್ ಎಂದು ಗುರುತಿಸಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭದ್ರತೆ ಏರ್ಪಡಿಸಲಾಗಿದೆ.
“ಮಥುರಾದ ಪ್ರತಿ ಪ್ರವೇಶ ಸ್ಥಳಗಳಲ್ಲಿಯೂ ಸಾಕಷ್ಟು ಪಡೆಗಳನ್ನು ನಿಯೋಜಿಸಲಾಗಿದೆ” ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಗ್ರೋವರ್ ಹೇಳಿದ್ದಾರೆ. “ಸೆಕ್ಷನ್ 144 ಇಲ್ಲಿ ಜಾರಿಯಲ್ಲಿದೆ.
ಯಾವುದೇ ಧರ್ಮ ಅಥವಾ ಸಮುದಾಯದ ಯಾವುದೇ ವ್ಯಕ್ತಿ ವದಂತಿಗಳನ್ನು ಹರಡಲು ಅಥವಾ ಧಾರ್ಮಿಕ ಭಾವೋದ್ರೇಕವನ್ನು ಪ್ರಚೋದಿಸಲು ಸಾಮಾಜಿಕ ಮಾಧ್ಯಮವನ್ನು ಬಳಸಿದರೆ, ನಾವು ಕಠಿಣ ಕ್ರಮವನ್ನು ತೆಗೆದುಕೊಳ್ಳುತ್ತೇವೆ” ಎಂದು ಮಥುರಾ ಎಸ್ಪಿ ತಿಳಿಸಿದ್ದಾರೆ.
ನಗರ ಪೊಲೀಸರು ಎಲ್ಲಾ ಪ್ರವೇಶ ದ್ವಾರಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ. ಮಥುರಾ ಆಡಳಿತವು ಸಿಆರ್ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಿತ ಆದೇಶಗಳನ್ನು ವಿಧಿಸಿದೆ.
ಒಂದು ಪ್ರದೇಶದಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದೆ. ಡಿಸೆಂಬರ್ 6 ರಂದು ಮಸೀದಿಯಲ್ಲಿ ಕೃಷ್ಣನ ವಿಗ್ರಹವನ್ನು ಪ್ರತಿಷ್ಠಾಪಿಸುವುದಾಗಿ ಬಲಪಂಥೀಯ ಗುಂಪುಗಳ ಬೆದರಿಕೆಯ ವಿರುದ್ಧ ಅದರ ಸನ್ನದ್ಧತೆಯನ್ನು ಪರಿಶೀಲಿಸಲು ಮಥುರಾ ಪೊಲೀಸರು ಡಿಸೆಂಬರ್ 5 ರಂದು ಗಲಭೆ ವಿರೋಧಿ ಕವಾಯತು ನಡೆಸಿದರು.
ವಿಶ್ವ ಹಿಂದೂ ಪರಿಷತ್ ಡಿಸೆಂಬರ್ 6 ರಂದು ಯಾವುದೇ ಪ್ರಮುಖ ಕಾರ್ಯಕ್ರಮವನ್ನು ನಡೆಸುವುದಿಲ್ಲ ಎಂದು ಘೋಷಿಸಿದೆ. ವಿಹಿಂಪ ಈ ದಿನವನ್ನು ‘ಶೌರ್ಯ ದಿವಸ್’ ಎಂದು ಆಚರಿಸುತ್ತದೆ.
ಡಿಸೆಂಬರ್ 6, 1992 ರಂದು ಅಯೋಧ್ಯೆಯಲ್ಲಿ ಕರಸೇವಕರು ಬಾಬರಿ ಮಸೀದಿಯನ್ನು ಧ್ವಂಸ ಮಾಡಿದ್ದರು. ಈ ಬಗ್ಗೆ ಐಎಎನ್‌ಎಸ್‌ಗೆ ಜತೆ ಮಾತನಾಡಿದ ಬಿಜೆಪಿ ನಾಯಕ ವಿನಯ್ ಕಟ್ಯಾರ್,
ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸಗೊಳಿಸಿದ ಬಗ್ಗೆ ನನಗೆ ಯಾವುದೇ ವಿಷಾದವಿಲ್ಲ ಎಂದು ಹೇಳಿದ್ದರು.
ಸಾವಿರಾರು ನೀರಿಕ್ಷೆಗಳೊಂದಿಗೆ ಜನರು ದಾಂಪತ್ಯ ಜೀವನಕ್ಕೆ ಕಾಲಿಡುವುದು ಸಾಮಾನ್ಯ. ಆದರೆ ನಿರೀಕ್ಷೆಗಳೆಲ್ಲವೂ ಯಾವಾಗಲೂ ನನಸಾಗುವುದಿಲ್ಲ, ಹೂವಿನ ಜೊತೆಗೆ ಮುಳ್ಳು ಇರುವಂತೆಯೇ ಸುಖದ ಜೊತೆ ಕಷ್ಟವೂ ಇರುತ್ತದೆ. ಅವೆಲ್ಲವನ್ನು ಸರಿದೂಗಿಸಿಕೊಂಡು ಹೋದರಷ್ಟೇ ಜೀವನ ಸುಖಕರವಾಗಿರುತ್ತದೆ. ಹಾಗಂತ ಎಲ್ಲವನ್ನು ಸಹಿಸಿಕೊಂಡು ಹೋಗಲೇಬೇಕೆಂದೆನಿಲ್ಲ, ಆದರೆ ಕೆಲವು ತಾಳ್ಮೆಯಿಂದ ತೆಗೆದುಕೊಂಡ ನಿರ್ಧಾರಗಳು ನಮ್ಮ ಬದುಕನ್ನು ಹಸನಾಗಿಸಬಹುದು. ಹೀಗಿರುವಾಗ ನೂರೆಂಟು ಕನಸುಗಳನ್ನು ಹೊತ್ತು ಹೊಸದಾಗಿ ಮದುವೆಯಾದವರಿಗೆ, ಮದುವೆಯಾಗುತ್ತಿರುವವರಿಗೆ, ಮದುವೆಯಾಗಲು ತುದಿಗಾಲಲ್ಲಿ ನಿಂತಿರುವವರಿಗೆ ಕೆಲ ಕಿವಿಮಾತುಗಳು ಇಲ್ಲಿವೆ.
ಸೌಂದರ್ಯ ಹಾಗೂ ಬ್ಯಾಂಕ್ ಬ್ಯಾಲೆನ್ಸ್‌ಗಿಂತಲೂ ಹೆಚ್ಚಾಗಿ ಸಂಗಾತಿಯ ಗುಣನಡವಳಿಕೆಗಳು ಸುಮಧುರ ದಾಂಪತ್ಯಕ್ಕೆ ಬಹಳ ಮುಖ್ಯವಾಗಿರುತ್ತದೆ. ಚೆಂದ, ಬ್ಯಾಂಕ್ ಬ್ಯಾಲೆನ್ಸ್ ಎಲ್ಲವೂ ಇದ್ದು, ಅವರು ನಮ್ಮಲ್ಲಿ ಗೌರವಯುತವಾಗಿ ನಡೆಸಿಕೊಳ್ಳುವುದಿಲ್ಲವೆಂದರೆ ಎಲ್ಲವೂ ನಿಷ್ಪ್ರಯೋಜಕ.ಸರಿ ತಪ್ಪುಗಳ ಪ್ರಶ್ನೆಗಳಿಗಿಂತ ಹೊಂದಾಣಿಕೆ ಬಹಳ ಮುಖ್ಯವಾಗುತ್ತದೆ. ಯಾರು ತಪ್ಪು ಯಾರು ಸರಿ ಎಂದು ಹೋರಾಟ ಮಾಡುವವರಿಗಿಂತ ಚೆನ್ನಾಗಿ ಜೀವನ ಮಾಡುತ್ತಿರುವುದು ಅನೇಕ ಪ್ರಕರಣಗಳಲ್ಲಿ ಸಾಬೀತಾಗಿದೆ.ರೋಮ್ಯಾನ್ಸ್ ದಾಂಪತ್ಯದ ಭಾಗವಷ್ಟೇ ಅದೇ ಎಲ್ಲವೂ ಅಲ್ಲ, ಕೆಲವೊಂದು ರಹಸ್ಯಗಳಾಗಿದ್ದರೆಯೇ ಚಂದ. ಭಾರತದಲ್ಲಿ ಮದುವೆ ಕೇವಲ ಇಬ್ಬರು ಗಂಡು ಹೆಣ್ಣಿಗೆ ಸಂಬಂಧಿಸಿದ್ದಲ್ಲ, ಇದು ಸಂಪೂರ್ಣವಾಗಿ ಕುಟುಂಬ, ಉದ್ಯೋಗ ಜೀವನ, ಬದುಕಿನ ವಾಸ್ತವತೆ, ಸಾಮಾಜಿಕ ಸಾಂಸ್ಕೃತಿಕ ನಂಬಿಕೆಗೆ ಸಂಬಂಧಿಸಿದ ವಿಚಾರವಾಗಿದೆ.
ಮದುವೆಯಾದ ತಕ್ಷಣ ಅದೇಕೆ ಇದೇಕೆ ಅಂತ ಪ್ರಶ್ನಿಸುತ್ತಾ ಮನೆಯವರನ್ನೆಲ್ಲಾ ಎದುರು ಹಾಕಿಕೊಳ್ಳಬಾರದು. ಯಶಸ್ವಿ ಮದುವೆಗೆ ಸಂಬಂಧಿಸಿದಂತೆ ಯಾವುದೇ ವೈಜ್ಞಾನಿಕ ಫಾರ್ಮುಲಾಗಳಿಲ್ಲ. ಪ್ರತಿಯೊಂದು ಜೋಡಿಯೂ ವಿಭಿನ್ನ, ಈ ಆತ್ಮ ಸಮ್ಮಿಲನಕ್ಕೆ ಏನು ಕಾರಣವಿರಬಹುದು ಎಂಬುದನ್ನು ಕೇವಲ ತಿಳಿದುಕೊಳ್ಳಲು ಪ್ರಯತ್ನಿಸಬೇಕು. ಬಹಳ ಮುಖ್ಯವಾಗಿ ತಿಳಿದುಕೊಳ್ಳಬೇಕಾದ ವಿಚಾರ ಎಂದರೆ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ತೋರಿಸುವಂತೆಯೇ ಮದುವೆ ಜೀವನ ಇರುವುದಿಲ್ಲ, ಸಾಮಾಜಿಕ ಜಾಲತಾಣದಲ್ಲಿ ಸುಂದರ ಫೋಟೊಗಳನ್ನು ಹಾಕಿಕೊಂಡು ಎಂಜಾಯ್ ಮಾಡುತ್ತಿರುವ ಜೋಡಿಯ ಜೀವನದ ಜೊತೆ ನಮ್ಮನ್ನು ಹೊಂದಾಣಿಕೆ ಮಾಡಿಕೊಳ್ಳಬಾರದು. ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಾಕಿ ಶೋಕಿ ಮಾಡುವವರು ವಾಸ್ತವದಲ್ಲಿ ಇತರರಿಗಿಂತ ಬಹಳ ಕೆಟ್ಟದಾಗಿ ಹೊಡೆದಾಡಿಕೊಂಡಿರುತ್ತಾರೆ. ಜೊತೆಯಾಗಿ ಸಾಗಲು ಕಷ್ಟಪಡುತ್ತಿರುತ್ತಾರೆ. ಕಿತ್ತಾಟವನ್ನು ಯಾವ ದಂಪತಿಯೂ ಸಾಮಾಜಿಕ ಜಾಲತಾಣದಲ್ಲಿ ಹಾಕುವುದಿಲ್ಲ. ಸುಖಿ ದಾಂಪತ್ಯ ಜೀವನಕ್ಕಾಗಿ ಈ ವಿಚಾರಗಳು ಸಣ್ಣ ವಿಚಾರಗಳನ್ನು ನೆನಪಿಟ್ಟು ಬಾಳುವುದು ಉತ್ತಮ.
ಮಂಗಳೂರು/ಮೈದುಗುರಿ (ನೈಜೀರಿಯಾ) : ಉತ್ತರ ನೈಜೀರಿಯಾದಲ್ಲಿ ಶನಿವಾರ ಪೆಟ್ರೋಲ್ ಟ್ಯಾಂಕರ್ ಸ್ಪೋ*ಟಗೊಂಡ ಪರಿಣಾಮ ಕನಿಷ್ಠ 70 ಜನ ಮೃ*ತಪಟ್ಟು, ಹಲವರು ಗಾಯಗೊಂಡಿದ್ದಾರೆ ಎಂದು ದೇಶದ ರಾಷ್ಟ್ರೀಯ ತುರ್ತು ಏಜೆನ್ಸಿ ತಿಳಿಸಿದೆ.
ವರದಿಗಳ ಪ್ರಕಾರ, ಘಟನೆಯಲ್ಲಿ 70ಕ್ಕೂ ಹೆಚ್ಚು ಮಂದಿ ಸಾ*ವಿಗೀಡಾಗಿದ್ದು, 56 ಜನ ಗಾಯಗೊಂಡಿದ್ದಾರೆ. 15ಕ್ಕೂ ಹೆಚ್ಚು ಅಂಗಡಿಗಳು ನಾಶವಾಗಿವೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ರಾಷ್ಟ್ರೀಯ ತುರ್ತು ನಿರ್ವಹಣಾ ಪ್ರಾಧಿಕಾರ ಹೇಳಿಕೆಯಲ್ಲಿ ತಿಳಿಸಿದೆ.
ಮಂಗಳೂರು/ಥಾಣೆ : ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲಿನ ದಾ*ಳಿಯ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ . ಮಹಾರಾಷ್ಟ್ರದ ಥಾಣೆಯಲ್ಲಿ ಆರೋಪಿ ಮೊಹಮ್ಮದ್ ಇಲಿಯಾಸ್ ಅಲಿಯಾಸ್ ವಿಜಯ್ ದಾಸ್ ಯಾನೆ ಬಿಜೋಯ್ ದಾಸ್‌ನನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿ ಬಾಂಗ್ಲಾದೇಶದವನಾಗಿದ್ದು, ಭಾರತಕ್ಕೆ ಬಂದ ಮೇಲೆ ತನ್ನ ಹೆಸರನ್ನು ಮೊಹಮ್ಮದ್ ಶರೀಫುಲ್ ಇಸ್ಲಾಂ ಶೆಹಜಾದ್‌ನಿಂದ ಜಿಜೋಯ್ ದಾಸ್ ಎಂದು ಬದಲಾಯಿಸಿಕೊಂಡಿದ್ದ ಎನ್ನಲಾಗಿದೆ. ಅಲ್ಲದೇ, ವಿಜಯ್ ದಾಸ್, ಬಿಜೋಯ್ ದಾಸ್ ಮತ್ತು ಮೊಹಮ್ಮದ್ ಇಲಿಯಾಸ್ ಸೇರಿದಂತೆ ಹಲವು ಇಲಿಯಾಸ್‌ಗಳನ್ನು ಆತ ಬಳಸುತ್ತಿದ್ದ ಎಂದು ತಿಳಿದುಬಂದಿದೆ. ಸದ್ಯ ಆರೋಪಿ ಕೃ*ತ್ಯ ಎಸಗಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ. ಸ್ಥಳೀಯ ರೆಸ್ಟೋರೆಂಟ್‌ನಲ್ಲಿ ವೇಟರ್ ಆಗಿ ಆತ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಕಳೆದ ಗುರುವಾರ(ಜ.16) ಬೆಳಗಿನ ಜಾವ 2 ಗಂಟೆಗೆ ನಟ ಸೈಫ್ ಅಲಿ ಖಾನ್ ನಿವಾಸಕ್ಕೆ ನುಗ್ಗಿದ್ದ ಆರೋಪಿ ನಟನ ಮೇಲೆ ಹ*ಲ್ಲೆ ನಡೆಸಿದ್ದ. ಈ ಹ*ಲ್ಲೆಯಿಂದ ಸೈಫ್ ಅವರ ಕುತ್ತಿಗೆ ಹಾಗೂ ಬೆನ್ನಿನ ಭಾಗದಲ್ಲಿ ಗಾಯಗಳಾಗಿತ್ತು. ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂದು ತಿಳಿದು ಬಂದಿದೆ.