Connect with us

DAKSHINA KANNADA

ನವರಾತ್ರಿ ಉತ್ಸವಗಳು ಹೊಸಚೇತನ ಮೂಡಿಸಲಿ : ವೇದವ್ಯಾಸ್‌ ಕಾಮತ್‌

Published

on

ನವರಾತ್ರಿ ಉತ್ಸವಗಳು ಹೊಸಚೇತನ ಮೂಡಿಸಲಿ : ವೇದವ್ಯಾಸ್‌ ಕಾಮತ್‌

ನಮ್ಮ ಕುಡ್ಲದ ದಸರಾ ವೈಭವದ ಮೂರನೇ ದಿನದ ಕಾರ್ಯಕ್ರಮ

ಮಂಗಳೂರು : ನವರಾತ್ರಿ ಉತ್ಸವಗಳು ನಮ್ಮ ಬದುಕಿನಲ್ಲಿ ಹೊಸ ಚೇತನವನ್ನು ಮೂಡಿಸಬೇಕು. ನಮ್ಮ ಕುಡ್ಲ ವಾಹಿನಿ ನಿರಂತರವಾಗಿ ಇಂತಹ ಕೆಲಸವನ್ನು ಮಾಡಿಕೊಂಡು ಬಂದಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹೇಳಿದರು.

ನಮ್ಮ ಕುಡ್ಲ ವಾಹಿನಿ ವತಿಯಿಂದ ನಿರಂತರ 10 ದಿನಗಳ ಕಾಲ ನಡೆಯುತ್ತಿರುವ ದಸರಾ ವೈಭವದ ಸಾಂಸ್ಕೃತಿಕ ಕಾರ್ಯಕ್ರಮದ ಮೂರನೇ ದಿನದ ಕಾರ್ಯಕ್ರಮದ ದೀಪಪ್ರಜ್ವಲನೆಗೊಳಿಸಿ ಮಾತನಾಡಿದರು.

ಕೋವಿಡ್ ಹಿನ್ನೆಲೆಯಲ್ಲಿ ಮಂಗಳೂರು ದಸರಾ ಈ ಬಾರಿ ಸರಳವಾಗಿ ಆಚರಿಸಲಾಗುತ್ತಿದೆ. ಕೋವಿಡ್ ಮಾರ್ಗ ಸೂಚಿಗಳನ್ನು ಪಾಲಿಸಿಕೊಂಡು ಈ ಬಾರಿಯ ದಸರಾ ಕಾರ್ಯಕ್ರಮ ರೂಪಿಸಬೇಕಾಗಿದೆ.

ಈ ನಿಟ್ಟಿನಲ್ಲಿ ಕಾರ್ಯಕ್ರಮಗಳಿಂದ ವಂಚಿತರಾಗಿದ್ದ ಜನತೆಗೆ ಮನೆಯಲ್ಲೇ ಕುಳಿತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೋಡುವಂತೆ ಮಾಡಿದ ನಮ್ಮ ಕುಡ್ಲ ವಾಹಿನಿಯ ಕಾರ್ಯ ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಪಾಲ್ಗೊಂಡು ಮಾತನಾಡಿದ ಲೆಕ್ಕ ಪರಿಶೋಧಕ ಸಿಎ ಎಸ್‌ ಎಸ್‌ ನಾಯಕ್‌ , ಜಗತ್ತಿನಾದ್ಯಂತ ಜನತೆ ನವರಾತ್ರಿಯನ್ನು ಸಂಭ್ರಮಿಸುತ್ತಿದ್ದಾರೆ.

ನಮ್ಮ ಸಂಸ್ಕೃತಿಯನ್ನು ಬಿಂಬಿಸುವ ಕೆಲಸವನ್ನು ನಮ್ಮ ಕುಡ್ಲ ವಾಹಿನಿ ಮಾಡುತ್ತಿದೆ. ಯಾರ ಮಾತುಗಳು ಸವಿಯಾಗಿರುತ್ತದೆಯೋ ಅವರು ಎಲ್ಲರಿಗೂ ಪ್ರಿಯರಾಗುತ್ತಾರೆ. ಅದೇ ರೀತಿ ಉತ್ತಮ ಕಾರ್ಯಕ್ರಮ ನೀಡುವ ಮೂಲಕ ನಮ್ಮ ಕುಡ್ಲ ವಾಹಿನಿ ಎಲ್ಲರಿಗೂ ಪ್ರಿಯವಾಗಿದೆ ಎಂದರು.

ಕೆಎಂಸಿ ಆಸ್ಪತ್ರೆಯ ಉಪವೈದ್ಯಕೀಯ ಮುಖ್ಯಸ್ಥ ದೀಪಕ್‌,  ಹಬ್ಬಗಳನ್ನು ನಾವು ನಮ್ಮ ಎಚ್ಚರಿಕೆಯಲ್ಲಿ ಆಚರಿಸೋಣ. ಸಾಮಾಜಿಕ ಅಂತರ, ಮಾಸ್ಕ್ ಧರಿಸುವ ಮೂಲಕ ನಾವು ಜಾಗೃತರಾಗಿರಬೇಕು ಎಂದರು. ಮಾಸ್ಕ್‌ ಧರಿಸುವಾಗಲೂ ಸೂಕ್ತ ರೀತಿಯಲ್ಲಿ ಧರಿಸಬೇಕು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ.ಪಿ.ಎಸ್.ಯಡಪಡಿತ್ತಾಯ ಅವರು ವಿಶ್ವ ವಿಖ್ಯಾತ ಮಂಗಳೂರು ದಸರಾದ ಪ್ರಮುಖ ರೂವಾರಿ ಕೇಂದ್ರ ಸಚಿವ ಬಿ ಜನಾರ್ದನ ಪೂಜಾರಿಯವರ ಕಾರ್ಯವನ್ನು ಪ್ರಶಂಸಿಸಿದರು.

ಪಸಕ್ತ ಕೊರೊನಾ ಭೀತಿ ಆತಂಕ ದೇಶದಾದ್ಯಂತ ಮನೆ ಮಾಡಿದ್ದು, ಆದಷ್ಟು ಬೇಗ ದೇಶ ಕೊರೊನಾ ಮುಕ್ತವಾಗಲಿ ಮತ್ತು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಕೈಗೆಟಕುವ ಕಡಿಮೆ ಬೆಲೆಯಲ್ಲಿ ಲಸಿಕೆ ದೊರೆಯುವಂತಾಗಲಿ ಎಂದು ಹಾರೈಸಿದರು.

ಮರಿಯಾನ್ ಪ್ರಾಜೆಕ್ಟ್ಸ್ ಪ್ರೈ.ಲಿ. ಆಡಳಿತ ನಿರ್ದೇಶಕರಾದ ನವೀನ್ ಕಾರ್ಡೋಜಾ, ದಿವ್ಯರೂಪ ಕನ್ಸ್ಟ್ರಕ್ಷನ್. ಮಾಲಕರಾದ  ಯಾದವ ಕೋಟ್ಯಾನ್,  ಮೊಗವೀರ ಮಹಾಜನ ಸಂಘ ಉಚ್ಚಿಲ ಮತ್ತು ಬೋಳೂರು ಮೊಗವೀರ ಮಹಾಸಭಾದ ಉಪಾಧ್ಯಕ್ಷರಾದ ದೇವದಾಸ್ ಬೋಳೂರು, ನಮ್ಮ ಕುಡ್ದ ನಿರ್ದೇಶಕರಾದ ಮೋಹನ್ ಬಿ ಕರ್ಕೇರಾ, ಲೀಲಾಕ್ಷ ಬಿ ಕರ್ಕೇರಾ , ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಾಹಿಲ್ ರೈ ಕಾರ್ಯಕ್ರಮ ನಿರೂಪಿಸಿದರು.

Click to comment

Leave a Reply

Your email address will not be published. Required fields are marked *

DAKSHINA KANNADA

‘ನಾಟು ನಾಟು’ ರೀತಿಯ ಸಾಂಗ್‌..! ಕುತೂಹಲ ಮೂಡಿಸಿದ ‘ವಾರ್ 2’

Published

on

2019 ರಲ್ಲಿ ಸೂಪರ್ ಹಿಟ್ ಆಗಿದ್ದ ‘ವಾರ್’ ಸಿನೆಮಾದ ಸೆಕಂಡ್ ವರ್ಷನ್‌ ‘ವಾರ್ 2’ ತೆರೆ ಮೇಲೆ ಬರಲು ಭರದ ಸಿದ್ಧತೆ ನಡೆಸಿದೆ. ‘ವಾರ್’ ಸಿನೆಮಾದಲ್ಲಿ ‘ ಜೈ ಜೈ ಶಿವಶಂಕರ್’ ಹಾಡು ಸುಪರ್ ಹಿಟ್ ಆಗಿದ್ದು ಫ್ಯಾನ್ಸ್‌ಗಳು ಹಾಡಿಗೆ ಫಿದಾ ಆಗಿದ್ರು. ಟೈಗರ್ ಶ್ರಾಫ್ ಹಾಗೂ ಹೃತಿಕ್ ರೋಷನ್ ನಟನೆಯ ‘ವಾರ್’ ಸಿನೆಮಾ ಬಳಿಕ ಈಗ ‘ವಾರ್‌ 2’ ರೆಡಿ ಆಗ್ತಾ ಇದೆ. ಇದರಲ್ಲಿ ಹೃತಿಕ್ ರೋಷನ್ ಹಾಗೂ ಜ್ಯೂನಿಯರ್ ಎನ್‌ಟಿಆರ್ ಜೊತೆಯಾಗಿದ್ದಾರೆ.

ಅದ್ಧೂರಿಯಾಗಿ ನಿರ್ಮಾಣ ಆಗ್ತಾ ಇರೋ ‘ವಾರ್ 2’ ಸಿನೆಮಾಗೆ ದೊಡ್ಡ ಮಟ್ಟದಲ್ಲಿ ಹೂಡಿಕೆ ಮಾಡಲಾಗ್ತಾ ಇದೆ. ಯಶ್‌ ರಾಜ್ ಫಿಲಂಸ್‌ ಸಂಸ್ಥೆ ಈ ‘ವಾರ್ 2’ ಸಿನೆಮಾಗೆ ಬಂಡವಾಳ ಹಾಕುತ್ತಿದೆ. ‘ವಾರ್’ ಸಿನೆಮಾದಂತೆ ಈ ಸಿನೆಮಾದಲ್ಲೂ ವಿಶೇಷ ಹಾಡನ್ನ ಸಿನೆಮಾ ತಂಡ ಪ್ಲ್ಯಾನ್ ಮಾಡಿದೆ. ಜೂನಿಯರ್ ಎನ್‌ಟಿಆರ್ ಅವರ ಆಸ್ಕರ್ ಅವಾರ್ಡ್‌ ವಿನ್ ಆಗಿದ್ದ ‘ನಾಟು ನಾಟು” ಹಾಡಿನಂತೆ ಇರೋ ಹಾಡಿಗೆ ಹೃತಿಕ್ ಹಾಗೂ ಜ್ಯೂನಿಯರ್ ಎನ್‌ಟಿಆರ್‌ ಹೆಜ್ಜೆ ಹಾಕಲಿದ್ದಾರೆ ಎನ್ನಲಾಗಿದೆ. ‘ನಾಟು ನಾಟು’ ರೀತಿಯ ಹಾಡು ಹಾಗೂ ಡ್ಯಾನ್ಸ್‌ ‘ವಾರ್ 2’ ಸಿಎನಮಾದ ಹೈಲೈಟ್ ಆಗಲಿದೆ ಎಂದು ಬಾಲಿವುಡ್ ಹಂಗಾಮ ವರದಿ ಮಾಡಿದೆ.


ಈಗಾಗಲೇ ‘ವಾರ್ 2’ ಚಿತ್ರದ ಶೂಟಿಂಗ್ ಆರಂಭವಾಗಿದೆ. ಚಿತ್ರದ ಸೆಟ್​ ಫೋಟೋಗಳು ಕೂಡಾ ಲೀಕ್ ಆಗಿವೆ. ಅಯಾನ್ ಮುಖರ್ಜಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಆದಿತ್ಯ ಚೋಪ್ರಾ ಅವರು ದೊಡ್ಡ ಬಜೆಟ್​ನಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ‘ವಾರ್ 2’ ಚಿತ್ರದಲ್ಲಿ ಕಿಯಾರಾ ಅಡ್ವಾಣಿ ನಟಿಸುತ್ತಿದ್ದಾರೆ. ಈ ಸಿನಿಮಾ 2025ರಲ್ಲಿ ಆಗಸ್ಟ್ 14ರಂದು ರಿಲೀಸ್ ಆಗಲಿದೆ.

Continue Reading

DAKSHINA KANNADA

ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!

Published

on

ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.

ಅಸ್ಥಿಪಂಜರ

ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.

Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!

ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್‌:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

DAKSHINA KANNADA

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್

Published

on

ಬಂಟ್ವಾಳ : ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಪೋರೇಟರ್‌ ಆಗಿ ಮೇಯರ್ ಆಗಿದ್ದ ಕವಿತಾ ಸನಿಲ್ ಇದೀಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮುಂಚೂಣಿಯಲ್ಲಿದ್ದ ಕವಿತಾ ಸನಿಲ್‌ ವಿಧಾನ ಸಭಾ ಚುನಾವಣೆಯಲ್ಲೂ ಸಾಕಷ್ಟು ಪ್ರಚಾರ ಮಾಡಿದ್ರು. ಸಿಎಂ ಸಿದ್ದರಾಮಯ್ಯ ಅವರಿಗೂ ಉತ್ತಮ ಒಡನಾಟ ಇಟ್ಟುಕೊಂಡಿದ್ದ ಕವಿತಾ ಸನಿಲ್ ಸದ್ಯ ಪಕ್ಷದ ನಾಯಕರ ಬಗ್ಗೆ ಅಸಮಾಧಾನಗೊಂಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೂ ತನಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂದು ಪಕ್ಷ ಚಟುವಟಿಕೆಯಿಂದ ದೂರ ಉಳಿದಿದ್ದರು. ಯಾವುದಾದರು ಒಂದು ನಿಗಮ ಸಿಗಬಹುದು ಎಂಬ ಅವರ ನಿರೀಕ್ಷೆ ಹುಸಿಯಾದ ಹಿನ್ನಲೆಯಲ್ಲಿ ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಂಟ್ವಾಳಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಂದ ಬಿಜೆಪಿ ಬಾವುಟ ಪಡೆದು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ : ಸೂಪರ್ ಹಿಟ್ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ಡೇಟ್ ಫಿಕ್ಸ್!

Continue Reading

LATEST NEWS

Trending