Connect with us

DAKSHINA KANNADA

ಮೇಯರ್‌ ಫೋನ್‌ ಇನ್‌ : ಮಂಗಳೂರು ನಗರದ 8 ಕಡೆ ಬಸ್ ಬೇ ನಿರ್ಮಾಣ- ಸುಧೀರ್ ಶೆಟ್ಟಿ

Published

on

ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯಲ್ಲಿ ಒಟ್ಟು 53 ಪ್ರದೇಶಗಳಲ್ಲಿ ಬಸ್ಸು ತಂಗುದಾಣ ನಿರ್ಮಿಸಲು ಮಂಗಳೂರು ಪೊಲೀಸ್ ಕಮಿಷನರ್‌ ಪ್ರಸ್ತಾವನೆ ಸಲ್ಲಿಸಿದ್ದು, ಪ್ರಸ್ತುತ 8 ಪ್ರದೇಶಗಳಲ್ಲಿ ಬಸ್‌ ಬೇ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ತಿಳಿಸಿದ್ದಾರೆ.

ಮೇಯರ್ ಕಚೇರಿಯಲ್ಲಿ ಶನಿವಾರ ನಡೆದ ಮೇಯರ್ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು.

ಮೊದಲ ಹಂತದಲ್ಲಿ ನಾಗರಿಕರಿಂದ ಹೆಚ್ಚು ಬೇಡಿಕೆ ಇರುವ ಬಿಜೈ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣ ಸಮೀಪ, ಲೇಡಿಹಿಲ್‌, ಕಂಕನಾಡಿ ಜಂಕ್ಷನ್‌, ಬಂಟ್ಸ್ ಹಾಸ್ಟೇಲ್ ಸೇರಿದಂತೆ ಒಟ್ಟು 8 ಕಡೆಗಳಲ್ಲಿ ಬಸ್ ಬೇ ನಿರ್ಮಿಸಲಾಗುವುದು.

ಬಳಿಕ ಹಂತ ಹಂತವಾಗಿ ಉಳಿದೆಡೆ ಬಸ್ ಬೇ ನಿರ್ಮಿಸಲಾಗುವುದು ಎಂದರು. ನಗರದಲ್ಲಿ 53 ಬಸ್ಸು ತಂಗುದಾಣಕ್ಕೆ ಪೊಲೀಸರು ಪ್ರಸ್ತಾವನೆ ಸಲ್ಲಿಸಿದ್ದರೂ ಅಧಿಕಾರಿಗಳುಮಾತ್ರ ಕಡತದಲ್ಲೇ ಬಾಕಿ ಇರಿಸಿದ್ದು, ಮನಪಾ ಆಡಳಿತದ ಸಭೆಗೆ ಹಾಜರುಪಡಿಸದಿರುವುದು ಗಮನಕ್ಕೆ ಬಂತು.

ಕೂಡಲೇ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ ಪ್ರಸ್ತಾವನೆಯನ್ನು ಮುಂದಿನ ಸಭೆಗೆ ಹಾಜರುಪಡಿಸುವಂತೆ ಸೂಚನೆ ನೀಡಿದರು.

ಬೀದಿ ಬದಿ ವ್ಯಾಪಾರಸ್ಥರು ನಗರದ ಅನೇಕ ಕಡೆಗಳಲ್ಲಿ ರಸ್ತೆ ಹಾಗೂ ಫುಟ್ಪಾತ್‌ ಅತಿಕ್ರಮಣ ನಡೆಸಿದ್ದಾರೆ.

ಅಗಲಗೊಂಡರಸ್ತೆಯಲ್ಲಿ ವಾಹನಗಳನ್ನು ಪಾರ್ಕ್‌ ಮಾಡಲಾಗುತ್ತಿದೆ.

ಈ ಬಗ್ಗೆ ಪಾಲಿಕೆ ಕ್ರಮ ವಹಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.

Click to comment

Leave a Reply

Your email address will not be published. Required fields are marked *

DAKSHINA KANNADA

ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..! ರಕ್ತಸಿಕ್ತ ಸ್ಥಿತಿಯಲ್ಲಿದ್ದ ಶವ.!!

Published

on

ಮಂಗಳೂರು: ಹೆಸರಾಂತ ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ. ತಲಪಾಡಿಯಲ್ಲಿರುವ ಬಂಟವಾಳದ ಭಂಟರ ಭವನದ ಆವರಣದ ಕಂಪೌಂಡ್‌ ಒಳಗಡೆ ವ್ಯಕ್ತಿಯೋರ್ವನ ಮೃತದೇಹ ರಕ್ತಸಿಕ್ತವಾಗಿ ಇದ್ದ ರೀತಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಉಪ್ಪಿನಂಗಡಿ ವಳಾಲು ಮೂಲದ ನಿವಾಸಿ ಸಂತೋಷ್ ಅವರ ಮೃತದೇಹ ಎಂದು ಗುರುತಿಸಲಾಗಿದೆ.

bantwala death

ಬಂಟರ ಭವನದ ಹೊರಗಡೆ ಸಂತೋಷ್ ಗೆ ಸೇರಿದ್ದ ಬೈಕ್‌ ಪತ್ತೆಯಾಗಿದೆ. ಬೈಕ್ ನಿಲ್ಲಿಸಿ ಕಂಪೌಂಡ್ ಮೇಲೆ ಕುಳಿತು ಕೊಂಡಿದ್ದು ಈ ವೇಳೆ ಕುಸಿದು ಕೆಳಗೆ ಬಿದ್ದು ಈ ಘಟನೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಮುಂದೆ ಓದಿ.. ಧರ್ಮಸ್ಥಳ: ಸರಣಿ ಅಪ*ಘಾತ, 5 ವಾಹನಗಳಿಗೆ ಹಾನಿ

ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Continue Reading

BELTHANGADY

ಧರ್ಮಸ್ಥಳ: ಸರಣಿ ಅಪ*ಘಾತ, 5 ವಾಹನಗಳಿಗೆ ಹಾನಿ

Published

on

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಸರಣಿ ಅಪ*ಘಾತ ಸಂಭವಿಸಿದ್ದು ಹಲವು ವಾಹನಗಳು ಜಖಂಗೊಂಡಿವೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಸೋಮವಾರ 4ರ ಸುಮಾರಿಗೆ ನೇತ್ರಾವತಿಯಿಂದ ಧರ್ಮಸ್ಥಳಕ್ಕೆ ಬರುವ ರಸ್ತೆಯಲ್ಲಿ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿತು. ಅದರ ಹಿಂದೆ ಇದ್ದ ರಿಕ್ಷಾವೊಂದು ಅಪ*ಘಾತ ಸಂಭವಿಸಿದ ರಿಕ್ಷಾಕ್ಕೆ ತಾಗಿ ಜಖಂಗೊಂಡಿತು.

ವೇಗವಾಗಿ ಬರುತ್ತಿದ್ದ ಕಾರು ಮಗುಚಿ ಬಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆಯಿತು. ಅದರ ಹಿಂದಿನಿಂದ ಬರುತ್ತಿದ್ದ ಎರಡು ಕಾರುಗಳು ಒಂದರ ಹಿಂದೆ ಒಂದರಂತೆ ಡಿಕ್ಕಿ ಹೊಡೆದಿವೆ. ಹೀಗೆ ಒಟ್ಟು 2 ರಿಕ್ಷಾಗಳು ಹಾಗೂ 3 ಕಾರುಗಳು ಜಖಂಗೊಂಡಿವೆ. ರಿಕ್ಷಾ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಎಲ್ಲ ಕಾರುಗಳು ಜಖಂಗೊಂಡಿವೆ.

Continue Reading

DAKSHINA KANNADA

ಮಂಗಳೂರು : ಕರಾವಳಿ ಮಾಣಿಕ್ಯ ಸೇವಾ ಸಂಸ್ಥೆಯ ವತಿಯಿಂದ ಪುಸ್ತಕ ವಿತರಣಾ ಕಾರ್ಯಕ್ರಮ

Published

on

ಮಂಗಳೂರು : ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಯುವ ಪೀಳಿಗೆಯ ಯುವ ಮಕ್ಕಳ ಮುಂದಿನ ಉಜ್ವಲ ಭವಿಷ್ಯದ ನಿರ್ಮಾಣಕ್ಕಾಗಿ ಕರಾವಳಿ ಮಾಣಿಕ್ಯ ಸೇವಾ ಸಂಸ್ಥೆಯ ವತಿಯಿಂದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಪಚ್ಚನಾಡಿಯಲ್ಲಿ ನಡೆಯಿತು.

ಈ ಸಂದರ್ಭ ಕರಾವಳಿ ಮಾಣಿಕ್ಯ ಸೇವಾ ಸಂಸ್ಥೆಯ ಅಧ್ಯಕ್ಷ ಸತೀಶ್ ಕುಮಾರ್ ಬಜಾಲ್ ಮಾತನಾಡಿ, ನಾವು ಸಣ್ಣವರಿದ್ದಾಗ ಕಲಿಕಾ ಸಾಮಗ್ರಿಗಳಿಲ್ಲದೇ ಕಷ್ಟಪಟ್ಟಿದ್ದೆವು. ಅಂತಹ ಕಷ್ಟ ಬಡ ವಿದ್ಯಾರ್ಥಿಗಳು ಪಡಬಾರದೆಂದು ಸಮಾಜದ ಎಲ್ಲರಿಗೂ ಪ್ರೇರಣೆಯಾಗುವಂತೆ ಮಂಗಳೂರಿನ ಎಲ್ಲಾ ಕಡೆ ಪ್ರತಿವರ್ಷದಂತೆ ಪುಸ್ತಕ ವಿತರಣೆ ಕಾರ್ಯಕ್ರಮ ಮಾಡುವುದಾಗಿ ಭರವಸೆ ನೀಡಿದರು. ಪುಸ್ತಕ ಪಡೆದ ವಿದ್ಯಾರ್ಥಿಗಳು ಜೀವನದಲ್ಲಿ ಕಲಿತು ಆರ್ಥಿಕವಾಗಿ ಬೆಳೆದರೆ, ನೀವು ಕೂಡ ಈ ರೀತಿ ಕಾರ್ಯಕ್ರಮ ಮಾಡುವುದರ ಮೂಲಕ ಬಡ ವಿದ್ಯಾರ್ಥಿಗಳಿಗೆ ಸಹಾಯಮಾಡಿ ಎಂದರು.

ಇದನ್ನೂ ಓದಿ : ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!

ಗೌರವಾಧ್ಯಕ್ಷ ವಸಂತ್ ಜೆ ಪೂಜಾರಿ, ಉಪಾಧ್ಯಕ್ಷ ಅಕ್ಷಯ್ ಬಂಜನ್, ಕಮಲಾಕ್ಷ ಬಜಾಲ್, ಪ್ರಧಾನ ಕಾರ್ಯದರ್ಶಿ ನಟರಾಜ್ ಪಚ್ಚನಾಡಿ, ಜೊತೆ ಕಾರ್ಯದರ್ಶಿ ಶರತ್ ಕುಂದರ್ ಪದವಿನಂಗಡಿ, ಪ್ರಸಾದ್ ಕುಂಪಲ, ಖಜಾಂಚಿ ಅರುಣ್ ಡಿಸೋಜ, ಸದಸ್ಯ ರಾಕೇಶ್ ಶೆಟ್ಟಿ, ಪಿ ಎಎಫ್ ಸಿ ತಂಡದ ಪ್ರಮುಖರಾದ ಐವನ್ ಆಲ್ವರಿಸ್, ಕೀರ್ತಿ ಪ್ರಸಾದ್, ರಘು, ರಾಕೇಶ್ ಶೆಟ್ಟಿ, ರೂಪೇಶ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

Continue Reading

LATEST NEWS

Trending