ಉಡುಪಿ: ಉದ್ಯೋಗ ಸಿಗಲಿಲ್ಲ ಎಂದು ಮನನೊಂದು ಎಂಬಿಎ ಪದವೀಧರೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾಪು ತಾಲೂಕಿನ ಕಟ್ಟಿಂಗೇರಿ ಎಂಬಲ್ಲಿ ನಡೆದಿದೆ.
ಮೃತ ಯುವತಿಯನ್ನು ಸಹನಾ ಎಂದು ಗುರುತಿಸಲಾಗಿದೆ.
ಈಕೆ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಮೂಲದವರು. ಸಹನಾ ಅಕ್ಕನ ಮನೆಯಾದ ಕಾಪುವಿನ ಕಟ್ಟಿಂಗೇರಿಯಗೆ ಬಂದಿದ್ದು ಅಕ್ಕನ ಮನೆಯಲ್ಲೇ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದಳು.
ತಕ್ಷಣ ಸಹನಾಳನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಒಂದು ವರ್ಷದ ಹಿಂದೆ ಮಂಗಳೂರಲ್ಲಿ ಎಂಬಿಎ ಪದವಿ ಮುಗಿಸಿದ್ದ ಯುವತಿ ನಂತರ ಉದ್ಯೋಗಕ್ಕಾಗಿ ಅಲೆದಾಡಿದ್ದಳು. ಆದರೆ, ಎಲ್ಲಿಯೂ ತನ್ನ ಅರ್ಹತೆಗೆ ತಕ್ಕ ಉದ್ಯೋಗ ದೊರಕದೆ ಇರುವುದೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.