Thursday, February 9, 2023

ಮಂಗಳೂರು: MCF ಉದ್ಯೋಗಿ ನಾಪತ್ತೆ-ಮರವೂರು ಅಣೆಕಟ್ಟಿನಲ್ಲಿ ದ್ವಿಚಕ್ರ ವಾಹನ ಪತ್ತೆ

ಮಂಗಳೂರು: ನಗರ ಹೊರವಲಯದ ಪಣಂಬೂರಿನಲ್ಲಿರುವ MCF ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆಯಾದ ಬಗ್ಗೆ ಕಾವೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರವೂರಿನ ಅಣೆಕಟ್ಟು ಬಳಿ ಆತನ ಸ್ಕೂಟರ್‌ ಪತ್ತೆಯಾಗಿದೆ.


ನಾಪತ್ತೆಯಾದವನನ್ನು ಆದಿತ್ಯ ವಿ ಅಲಗೂರು(27) ಎಂದು ಗುರುತಿಸಲಾಗಿದೆ.
ಘಟನೆ ವಿವರ
ಆದಿತ್ಯ ವಿ ಅಲಗೂರು ಮೂಲತ: ಯಾದಗಿರಿಯವನಾಗಿದ್ದು, ಪಣಂಬೂರಿನಲ್ಲಿರುವ MCF ಫ್ಯಾಕ್ಟರಿಯಲ್ಲಿ ಪ್ರೊಡಕ್ಷನ್ ಡಿಪಾರ್ಟ್‌ಮೆಂಟ್‌ನಲ್ಲಿ ಉದ್ಯೋಗಿಯಾಗಿದ್ದನು.

ಜು.16 ರಂದು ಕೆಲಸಕ್ಕೆ ಹೋದ ಈತ ರಾತ್ರಿ 7.20 ರ ಸುಮಾರಿಗೆ ಮನೆಗೆ ಬರಲು ಸ್ವಲ್ಪ ತಡವಾಗುತ್ತದೆಂದು ಮನೆಯವರಿಗೆ ತಿಳಿಸಿದ್ದನು.

ಅದಾದ ನಂತರ ಆತನ ಮೊಬೈಲ್‌ ಸ್ವಿಚ್‌ ಆಫ್‌ ಆಗಿತ್ತು. ಈ ಬಗ್ಗೆ ಕಾವೂರು ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದಾಗ ಆತನ ಸ್ಕೂಟರ್‌ ಮಂಗಳೂರು ಹೊರವಲಯದ ಮರವೂರು ಆಣೆಕಟ್ಟಿನಲ್ಲಿ ಪತ್ತೆಯಾಗಿದ್ದು, ವ್ಯಕ್ತಿ ಪತ್ತೆಯಾಗಿಲ್ಲ.

 

LEAVE A REPLY

Please enter your comment!
Please enter your name here

Hot Topics

ಭೂಕಂಪಕ್ಕೆ ನಲುಗಿದ ಟರ್ಕಿ-ಸಿರಿಯಾ: 15,000 ದಾಟಿದ ಮೃತರ ಸಂಖ್ಯೆ-ಏರುತ್ತಲೇ ಇದೆ ಸಾವಿನ ಲೆಕ್ಕ..!

ಟರ್ಕಿ: ಭೂಕಂಪದಿಂದ ನಲುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 15,000ಕ್ಕೆ ಏರಿಕೆಯಾಗಿ. ಈ ಪೈಕಿ ಟರ್ಕಿಯಲ್ಲಿ ಒಂದರಲ್ಲಿಯೇ 12,391 ಮಂದಿ ಸಾವನ್ನಪ್ಪಿದ್ದರೆ, ಸಿರಿಯಾದಲ್ಲಿ 2,992 ಮಂದಿ ಸಾವನ್ನಪ್ಪಿದ್ದಾರೆ.ಈ ಅಂಕಿ...

ಸುರತ್ಕಲ್ ವ್ಯಾಪ್ತಿಯಲ್ಲಿ ಲಘು ಅಪಘಾತ: ಇತ್ತಂಡಗಳ ಮಧ್ಯೆ ಹೊಯ್‌ಕೈ- ಮಾತಿನ ಚಕಮಕಿ..!

ಮಂಗಳೂರು : ಮಂಗಳೂರು ಹೊವಲಯದ  ಸುರತ್ಕಲ್ ಠಾಣಾ ವ್ಯಾಪ್ತಿಯ ಗಣೇಶ್ ಪುರ ಎಂಬಲ್ಲಿ ಬುಧವಾರ ರಾತ್ರಿ ಬೈಕ್- ಕಾರ್ ನಡುವೆ ಲಘು ಅಪಘಾತ ಸಂಭವಿಸಿದ್ದು, ಇದರಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗಿ ಕೆಲ ಕಾಲ...

ಹಾಸನ: ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆ, ಕೊಲೆ ಶಂಕೆ ..!

ಹಾಸನ :  ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆಯಾದ ಘಟನೆ ಹಾಸನ ಜಿಲ್ಲೆಯ ಯೋಗೀಹಳ್ಳಿಯಲ್ಲಿ ನಡೆದಿದೆ.26 ವರ್ಷ ಪ್ರಾಯದ ಲಿಖಿತ್‌ಗೌಡ ಯಾನೆ ಬಂಗಾರಿ ಕೊಲೆಯಾದ ಯುವಕ. ಈತನನ್ನು ಕೊಲೆ...