ಮಂಗಳೂರು/ಮುಂಬೈ : ಟೀಮ್ ಇಂಡಿಯಾ ಸ್ಪೀನ್ನರ್ ಯಜುವೇಂದ್ರ ಚಾಹಲ್ ಮತ್ತು ಅವರ ಪತ್ನಿ ಧನಶ್ರೀ ವರ್ಮಾ ಕಳೆದ ಕೆಲವು ದಿನಗಳಿಂದ ಭಾರಿ ಸುದ್ದಿಯಲ್ಲಿದ್ದಾರೆ. ಸೆಲೆಬ್ರಿಟಿ ದಂಪತಿಗಳು ಬೇರೆಯಾಗುತ್ತಿದ್ದಾರೆ ಎಂಬ ಸುದ್ದಿ ಹುಟ್ಟಿಕೊಂಡಿದೆ.
ಚಾಹಲ್ ಮತ್ತು ಧನಶ್ರೀ ಇನ್ ಸ್ಟಾ ಗ್ರಾಮ್ ನಲ್ಲಿ ಒಬ್ಬರನ್ನೊಬ್ಬರು ಅನ್ ಫಾಲೋ ಮಾಡಿದ್ದರು. ಚಾಹಲ್ ಅವರು ತಮ್ಮ ಪತ್ನಿಯೊಂದಿಗಿನ ಎಲ್ಲ ಫೋಟೋಗಳನ್ನು ಡಿಲೀಟ್ ಮಾಡಿದ್ದರು. ಅಲ್ಲದೇ, ಚಹಾಲ್ ಅವರು ಇನ್ ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದ ಮಾರ್ಮಿಕ ಪೋಸ್ಟ್ ಕೂಡ ವಿಚ್ಛೇದನದ ಸುದ್ದಿಗೆ ಇನ್ನಷ್ಟು ಪುಷ್ಠಿ ನೀಡಿದೆ.
ಕಠಿಣ ಪರಿಶ್ರಮವು ವ್ಯಕ್ತಿಯ ವ್ಯಕ್ತಿತ್ವವನ್ನು ಬಹಿರಂಗಪಡಿಸುತ್ತದೆ. ನಿಮ್ಮ ಜೀವನದ ಪ್ರಯಾಣ ನಿಮಗೆ ಮಾತ್ರ ಗೊತ್ತಿರುತ್ತದೆ. ನೀವೀಗ ಎತ್ತರದಲ್ಲಿದ್ದೀರಿ. ನಿಮ್ಮ ತಂದೆ-ತಾಯಿ ಹೆಮ್ಮೆ ಪಡುವಂತೆ ಶ್ರಮಿಸಿದ್ದೀರಿ. ಹೆಮ್ಮೆಯ ಮಗನಂತೆ ಯಾವಾಗಲೂ ಉಳಿಯಿರಿ ಎಂದು ಯಜುವೇಂದ್ರ ಚಾಹಲ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಇದನ್ನು ನೋಡಿದರೆ, ವೈವಾಹಿಕ ಜೀವನದಲ್ಲಿ ಬಿರುಕು ಮೂಡಿರುವುದು ಸ್ಪಷ್ಟವಾಗುತ್ತದೆ.
ಇದುವರೆಗೂ ಧನಶ್ರೀ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೀಗ ಕೊನೆಗೂ ಮೌನ ಮುರಿದಿರುವ ಧನಶ್ರೀ, ಇನ್ ಸ್ಟಾಗ್ರಾಂ ಸ್ಟೋರಿ ಶೇರ್ ಮಾಡಿಕೊಂಡಿದ್ದಾರೆ. ಕಳೆದ ಕೆಲವು ದಿನಗಳಿಂದ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳಿಂದ ತಾವು ಮಾನಸಿಕ ಯಾತನೆಯನ್ನು ಅನುಭವಿಸುತ್ತಿರುವುದಾಗಿ ಹೇಳಿದ್ದಾರೆ.
ನನಗೆ ಮತ್ತು ನನ್ನ ಕುಟುಂಬಕ್ಕೆ ಕಳೆದ ಕೆಲ ದಿನಗಳು ತುಂಬಾ ಕಠಿಣ ದಿನಗಳಾಗಿವೆ. ಆಧಾರರಹಿತ ಬರವಣಿಗೆ, ಸತ್ಯ-ಪರಿಶೋಧವಿಲ್ಲದ ಬರಹಗಳು ಮತ್ತು ದ್ವೇಷವನ್ನು ಹರಡುವ ಟ್ರೋಲ್ ಗಳಿಂದ ನನ್ನ ಗೌರವವನ್ನು ಕೊಲ್ಲುವ ಪ್ರಯತ್ನ ಮಾಡುತ್ತಿದ್ದಾರೆ.
ಈ ಹೆಸರುಗಳಿಸಲು ಮತ್ತು ಖ್ಯಾತಿಯನ್ನು ಪಡೆಯಲು ನಾನು ಹಲವು ವರ್ಷಗಳಿಂದ ಶ್ರಮಿಸಿದ್ದೇನೆ. ನನ್ನ ಮೌನ ನನ್ನ ದೌರ್ಬಲ್ಯವಲ್ಲ. ಅದು ನನ್ನ ಶಕ್ತಿ. ನಕಾರಾತ್ಮಕತೆಯು ಆನ್ ಲೈನ್ ನಲ್ಲಿ ಸುಲಭವಾಗಿ ಹರಡುತ್ತದೆ. ಇದು ಇತರರನ್ನು ಮೇಲಕ್ಕೆತ್ತಲು ಧೈರ್ಯ ನೀಡುತ್ತದೆ.
ನಾನು ನನ್ನ ಸತ್ಯದ ಮೇಲೆ ಕೇಂದ್ರೀಕರಿಸಲು ಮತ್ತು ನನ್ನ ಮೌಲ್ಯಗಳನ್ನು ಹಿಡಿದಿಟ್ಟುಕೊಂಡು ಮುಂದುವರಿಯುವುದನ್ನು ಆಯ್ಕೆ ಮಾಡುತ್ತೇನೆ. ಯಾವುದೇ ಪುರಾವೆಗಳಿಲ್ಲದಿದ್ದರೂ ಸತ್ಯವು ಅದರ ಸ್ಥಾನದಲ್ಲಿ ದೃಢವಾಗಿ ನಿಂತಿದೆ. ಓಂ ನಮಃ ಶಿವಾಯ… ಎಂದು ಧನಶ್ರೀ ವರ್ಮಾ ಬರೆದುಕೊಂಡಿದ್ದಾರೆ.
ಈ ಪೋಸ್ಟ್ ವೈರಲ್ ಬೆನ್ನಲ್ಲೇ ಮತ್ತೆ ಧನಶ್ರೀ ವರ್ಮಾ ಹಾಗೂ ಯುಜ್ವೇಂದ್ರ ಚಹಲ್ ನಡುವಣ ಸಂಬಂಧದ ಬಗ್ಗೆ ಮತ್ತೆ ಪ್ರಶ್ನೆಗಳು ಎದ್ದಿವೆ.
ಅಂದಹಾಗೆ ಯುಜ್ವೇಂದ್ರ ಚಹಲ್ ಹಾಗೂ ಧನಶ್ರೀ ವರ್ಮಾ 2020ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ನಾಲ್ಕು ವರ್ಷಗಳ ವೈಯಕ್ತಿಕ ಜೀವನದ ಬಳಿಕ ಇಬ್ಬರು ಬೇರ್ಪಡುತ್ತಿದ್ದಾರೆ ಎಂಬ ಊಹಾಪೋಹಗಳು ಕೂಡ ಹರಡಿವೆ.
ಮಂಗಳೂರು/ನವದೆಹಲಿ : ಮೊಸಳೆಯ ತಲೆಬುರುಡೆ ಕಳ್ಳಸಾಗಣೆಗೆ ಯತ್ನಿಸಿದ ಆರೋಪದಲ್ಲಿ ಕೆನಡಾ ಮೂಲದ ವ್ಯಕ್ತಿಯನ್ನು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಟರ್ಮಿನಲ್ 3ರಲ್ಲಿ ಕೆನಡಾ ಮೂಲದ ವ್ಯಕ್ತಿ ಮಾಂಟ್ರಿಯಲ್‌ಗೆ ವಿಮಾನ ಹತ್ತಲು ಯತ್ನಿಸುತ್ತಿದ್ದಾಗ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಮೊಸಳೆಯ ಮರಿಯನ್ನು ಹೋಲುವ ಸುಮಾರು 770 ಗ್ರಾಂ ತೂಕದ ಚೂಪಾದ ಹಲ್ಲುಗಳನ್ನು ಹೊಂದಿರುವ ತಲೆಬುರುಡೆ ಪತ್ತೆಯಾಗಿದೆ.
ದೆಹಲಿ ಸರ್ಕಾರದ ಅಧೀನದಲ್ಲಿರುವ ಅರಣ್ಯ ಮತ್ತು ವನ್ಯಜೀವಿ ಇಲಾಖೆಯು ನಡೆಸಿದ ಶೋಧ ಕಾರ್ಯದಲ್ಲಿ ಅದು ಮೊಸಳೆ ಮರಿಯ ತಲೆಬುರುಡೆ ಎಂಬುದಾಗಿ ದೃಢಪಟ್ಟಿದೆ. 1972ರ ವನ್ಯ ಜೀವಿ ಕಾಯ್ದೆಯಡಿಯಲ್ಲಿ ಸಂರಕ್ಷಿತ ಜಾತಿಗೆ ಸೇರಿದ ತಲೆಬುರುಡೆ ಇದಾಗಿದೆ. ಹೆಚ್ಚಿನ ವೈಜ್ಞಾನಿಕ ತಪಾಸಣೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.
ಬೆಂಗಳೂರು: ಸಮಾಜದ ಮುಖ್ಯ ವಾಹಿನಿಗೆ ಬರಲು ನಿರ್ಧರಿಸಿ ನಿನ್ನೆ ಮೋಸ್ಟ್ ವಾಂಟೆಡ್ 6 ಜನ ನಕ್ಸಸಲರು ಬೆಂಗಳೂರಿನ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾದರು. ಬಳಿಕ ಅವರನ್ನ ವಶಕ್ಕೆ ಪಡೆದ ಪೊಲೀಸರು ಇಂದು ಅವರನ್ನು ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟಿಗೆ ಹಾಜರುಪಡಿಸಿದ್ದಾರೆ.
ಹೌದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಸಂಕಿರಣದ ಎನ್ಐಐ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ನಕ್ಸಲರನ್ನು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಪೊಲೀಸರು ಇದೀಗ ಹಾಜರುಪಡಿಸಿದ್ದಾರೆ. ಇದಕ್ಕೂ ಮೊದಲು 6 ಜನರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಎನ್ಐಎ ವಿಶೇಷ ಕೋರ್ಟ್ ಮುಂದೆ ಇದೀಗ ಹಾಜರುಪಡಿಸಿದ್ದಾರೆ.
ಮಂಗಳೂರು/ಬೆಂಗಳೂರು : ಅತ್ಯಾ*ಚಾರ, ಅಶ್ಲೀ*ಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ನೀಡಿದೆ. ಈ ಮೂಲಕ ಹಲವು ತಿಂಗಳುಗಳ ಬಳಿಕ ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲಾಯಿತು.
ಈ ಸಂದರ್ಭ ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ. ಮುಂದಿನ ಆದೇಶದ ವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿ, ಜ.16ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಅ*ತ್ಯಾಚಾರ ಆರೋಪ ಹಾಗೂ ಪೆನ್ ಡ್ರೈವ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಜನವರಿ 13ಕ್ಕೆ ವಿಚಾರಣಾಧೀನ ಕೋರ್ಟ್‌ನಲ್ಲಿ ಆರೋಪ ನಿಗದಿ ಮಾಡುವುದಕ್ಕೆ ನಿಗದಿಯಾಗಿತ್ತು. ಇದನ್ನು ಪ್ರಶ್ನಿಸಿ ಪ್ರಜ್ವಲ್ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ಪ್ರಜ್ವಲ್‌ಗೆ ಸ್ವಲ್ಪ ರಿಲೀಫ್ ಕೊಟ್ಟಿದೆ.
2024ರಲ್ಲಿ ಲೋಕಸಭೆ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದಂತೆ ಅಶ್ಲೀ*ಲ ವೀಡಿಯೋಗಳು ವೈರಲ್ ಆಗಿದ್ದವು. ಇದು ದೇಶವನ್ನೇ ಬೆಚ್ಚಿ ಬೀಳಿಸಿತ್ತು. ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು.