Connect with us

    DAKSHINA KANNADA

    “ಮಾಧ್ಯಮಗಳಲ್ಲಿ ಪ್ರವೀಣ್‌ ತಾಯಿ-ಪತ್ನಿಯ ಕಣ್ಣೀರಿಗೆ ಇದ್ದ ಬೆಲೆ ಮಸೂದ್‌ ತಾಯಿಗೆ ಯಾಕಿಲ್ಲ”

    Published

    on

    ಮಂಗಳೂರು: ಕೊಲೆಯಾದ ಮಸೂದ್‌ ತಾಯಿಯ ಕಣ್ಣೀರಿಗೆ ಬೆಲೆ ಇಲ್ಲ. ಅದೇ ಪ್ರವೀಣ್‌ ತಾಯಿಯ, ಪತ್ನಿಯ ಕಣ್ಣೀರಿಗೆ ಬೆಲೆ ಇದೆ. ಇದು ಮಾಧ್ಯಮಗಳ ಪಕ್ಷಪಾತ ಧೋರಣೆ ಎಂದು ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಅಥಾವುಲ್ಲಾ ಜೋಕಟ್ಟೆ ಆರೋಪಿಸಿದ್ದಾರೆ.


    ಈ ಬಗ್ಗೆ ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘಪರಿವಾರದ ಆರೋಪಿಗಳಿಂದ ಮಸೂದ್‌ ಕೊಲೆಯಾದಾಗ ಮಾಧ್ಯಮಗಳಲ್ಲಿ ಸುದ್ದಿ, ಚರ್ಚೆ ಇಲ್ಲ.

    ಅದೇ ಮರುದಿನ ನಡೆಯುವ ಪ್ರವೀಣ್‌ ಕೊಲೆ ನಡೆದಾಗ ಮಾಧ್ಯಗಳಲ್ಲಿ ಬಹಳಷ್ಟು ಪ್ರಚಾರ ಇದೆ. ಕೊಲೆಯಾದ ಮಸೂದ್‌ ತಾಯಿಯ ಕಣ್ಣೀರಿಗೆ ಬೆಲೆ ಇಲ್ಲ.

    ಅದೇ ಪ್ರವೀಣ್‌ ತಾಯಿಯ, ಪತ್ನಿಯ ಕಣ್ಣೀರಿಗೆ ಬೆಲೆ ಇದೆ. ನಿನ್ನೆಯ ಫಾಝಿಲ್‌ ಕೊಲೆಯ ಬಗ್ಗೆಯೂ ಪಕ್ಷಪಾತವಾಗಿ ಸುದ್ದಿ ಮಾಡಿದ್ದೀರಿ, ದಯವಿಟ್ಟು ಸಮಾಜದ ಶಾಂತಿ-ಸೌಹಾರ್ದ ತೋಟವನ್ನು ಉಳಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಹೇಳಿದರು.
    ಜಿಲ್ಲೆಯಲ್ಲಿ ನಡೆದಿರುವ ಸರಣಿ ಕೊಲೆಯನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ.

    ಈ ಮೂರು ಹತ್ಯೆಗೆ ರಾಜ್ಯದ ಮುಖ್ಯಮಂತ್ರಿಯ ಕ್ರಿಯೆಗೆ-ಪ್ರತಿಕ್ರಿಯೆ ಸಂದೇಶವೇ ಕಾರಣ. ಸಂವಿಧಾನದ ಮುಂದೆ ಎಲ್ಲರಿಗೂ ಸಮಾನ ನ್ಯಾಯ ಕೊಡುತ್ತೇನೆಂದು ಅಧಿಕಾರ ಸ್ವೀಕರಿಸಿದ ಮುಖ್ಯಮಂತ್ರಿ ಪಕ್ಷಪಾತ ಧೋರಣೆಯ ಮೂಲಕ ಪ್ರಚೋದನಕಾರಿ ಸಂದೇಶ ನೀಡುತ್ತಿದ್ದಾರೆ.

    ಪ್ರವೀಣ್‌ ಹತ್ಯೆಯಾದ ನಂತರ ಆತನ ಮನೆಗೆ ಭೇಟಿ ನೀಡಿ ಪರಿಹಾರ ಘೋಷಣೆ ಮಾಡಿದ್ದಾರೆ. ಆದರೆ 4-5 ದಿನಗಳ ಹಿಂದೆ ಅದೇ ಗ್ರಾಮದಲ್ಲಿ ಹತ್ಯೆಯಾದ ಮಸೂದ್‌ ಮನೆಗೆ ಭೇಟಿ ನೀಡಿಲ್ಲ.

    ಪರಿಹಾರ ಘೋಷಿಸಿಲ್ಲ. ಆರು ಕೋಟಿಯ ಜನರ ಮುಖ್ಯಮಂತ್ರಿಯಾಗಬೇಕಿದ್ದವರು ಇಂದು ಬಿಜೆಪಿ ಮುಖ್ಯಮಂತ್ರಿಯಾಗಿದ್ದಾರೆ.

    ಅವರೊಬ್ಬ ಅಯೋಗ್ಯ ನಾಲಾಯಕ್‌ ಮುಖ್ಯಮಂತ್ರಿ ಎಂದ ಅವರು ಪೊಲೀಸ್‌ ಅಧಿಕಾರಿಗಳು ನಿಪಕ್ಷಪಾತವಾಗಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ, ಆದರೆ ಅಮಾಯಕರನ್ನು ಬಂಧಿಸಬೇಡಿ, ನೈಜ ಆರೋಪಿಗಳು ಯಾವುದೇ ಸಮುದಾಯದವರು ಆದರೂ ಬಂಧಿಸಿ ಎಂದು ಹೇಳಿದರು.

    BIG BOSS

    ಕೊಣಾಜೆ: 3 ವರ್ಷದ ಬಾಲೆಗೆ ಕಿ*ರುಕುಳ ನೀಡಿದ 70ರ ಅಜ್ಜ ಅರೆಸ್ಟ್

    Published

    on

    ಕೊಣಾಜೆ: ಬಾಲಕಿಗೆ ಕಿ*ರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಪ್ಪತ್ತರ ಹರೆಯದ ವೃದ್ಧನನ್ನು ಪೊಲೀಸರು ಬಂಧಿಸಿ,‌ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಆರೋಪಿಯನ್ನು ಅಬ್ದುಲ್ಲಾ (70) ಎಂದು ಗುರುತಿಸಲಾಗಿದೆ.

    ಉಳ್ಳಾಲ ತಾಲೂಕು ಬಾಳೆಪುಣಿ ಗ್ರಾಮದಲ್ಲಿ ಘಟನೆ ನಡೆದಿದೆ. 3 ವರ್ಷದ ಬಾಲಕಿ ಆಟವಾಡುತ್ತಿದ್ದಾಗ ಆರೋಪಿ ಲೈಂ*ಗಿಕ ಕಿ*ರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಬಾಲಕಿಯ ಅಸ್ವಸ್ಥತೆಯನ್ನು ಗಮನಿಸಿದ ತಾಯಿ ವೈದ್ಯಕೀಯ ತಪಾಸಣೆ ನಡೆಸಿದ್ದು ಬಳಿಕ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

    ಈ ಬಗ್ಗೆ ಕೊಣಾಜೆ ಪೊಲೀಸರು ಆರೋಪಿ ವಿರುದ್ಧ ಪೋ*ಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

    Continue Reading

    BIG BOSS

    ಮಂಗಳೂರು: ಮುಂಜಾನೆಯೇ ಸರಣಿ ಅ*ಪಘಾತ; ವಿದ್ಯಾರ್ಥಿಗಳಿದ್ದ ಬಸ್ ಪ*ಲ್ಟಿ

    Published

    on

    ಮಂಗಳೂರು: ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪರದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅ*ಪಘಾತ ಸಂಭವಿಸಿದೆ. ಕುಂದಾಪುರ ಪ್ರವಾಸಕ್ಕೆ ತೆರಳಿ ಹಿಂದಿರುಗುತ್ತಿದ್ದ ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಟೂರಿಸ್ಟ್ ಬಸ್ ಉರುಳಿ ಬಿದ್ದಿದೆ.

    ಇಂದು (ನ.23) ಬೆಳಗಿನ ಜಾವ ಕಾರೊಂದು ಹಿಂದಿನಿಂದ ಬಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿ*ಕ್ಕಿ ಹೊಡೆದಿದೆ. ನಂತರ, ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ಕೆಎಸ್‌ಆರ್‌ಟಿಸಿ ಬಸ್‌ಗೆ ಗು*ದ್ದಿದೆ.

    ಟೂರಿಸ್ಟ್ ಬಸ್ ರಸ್ತೆಗೆ ಉರುಳಿದ್ದು, ವಿದ್ಯಾರ್ಥಿಗಳು ಗಾ*ಯಗೊಂಡಿದ್ದಾರೆ. ಗಾ*ಯಾಳುಗಳನ್ನು ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಉಪ್ಪಿನಂಗಡಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    Continue Reading

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    LATEST NEWS

    Trending