Gulf
ಗಲ್ಫ್ ಅನಿವಾಸಿ ಭಾರತೀಯರಿಗೆ ದೇಶೀಯ ಔಷಧ ಮನೆ ಬಾಗಿಲಿಗೆ..!
ದುಬೈ: ಹೊರದೇಶದಲ್ಲಿರುವ ಅನಿವಾಸಿ ಭಾರತೀಯರಿಗೆ ‘ದಿ ಬೆಸ್ಟ್ ಮೆಡಿಕಲ್ಸ್ ಮತ್ತು ಆಪ್ಟಿಕಲ್ಸ್’ ಸಂಸ್ಥೆಯ ವತಿಯಿಂದ ಭಾರತೀಯ ಮೂಲದ ಔಷಧವನ್ನು ಮನೆಬಾಗಿಲಿಗೆ ತಲುಪಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಗಲ್ಫ್ ದೇಶಗಳಾದ ಯುಎಇ, ಸೌದಿ ಅರೇಬಿಯಾ, ಕತ್ತಾರ್, ಕುವೈಟ್, ಬಹರೇನ್ ಹಾಗೂ ಓಮನ್ ದೇಶಗಳಲ್ಲಿ ವಾಸವಿರುವ ಅನಿವಾಸಿ ಭಾರತೀಯರು ಔಷಧ ಬೇಕಾದಲ್ಲಿ ವೈದ್ಯರ ಚೀಟಿ, ಪಾಸ್‌ಪೋರ್ಟ್ ಜೊತೆಗೆ ಆಧಾರ್ ಕಾರ್ಡಿನ ಪ್ರತಿಗಳನ್ನು ನೀಡಿದ್ದಲ್ಲಿ, ಕಾನೂನಾತ್ಮಕವಾಗಿ ಮನೆಬಾಗಿಲಿಗೆ ತಲುಪಿಸಲಾಗುವುದು ಎಂದು ಫಹಾದ್ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ +971553313063, +971556016619 ಸಂಖ್ಯೆಗೆ ವಾಟ್ಸಪ್ ಅಥವಾ ಕರೆ ಮೂಲಕ ಸಂಪರ್ಕಿಸುವುದು.
DAKSHINA KANNADA
ತಾಯ್ನಾಡಿಗೆ ಬಂದು ಸೇರಿದ ಕಡಬದ ಚಂದ್ರಶೇಖರ್ – ಮಗನ ಕಂಡು ತುಂಬಿ ತುಲುಕಿದ ತಾಯಿಯ ಕಣ್ಣಾಲಿ
ಮಂಗಳೂರು: ದುರುದ್ದೇಶಪೂರ್ವಕವಾಗಿ ತನ್ನನ್ನು ಸಿಲುಕಿಸಿ ಹಾಕಲಾದ ಪ್ರಕರಣದಲ್ಲಿ ಸೌದಿ ಅರೇಬಿಯಾದಲ್ಲಿ ಜೈಲು ಪಾಲಾಗಿ ಕೊನೆಗೂ ಬಿಡುಗಡೆಯಾಗಿ ತಾಯ್ನಾಡಿಗೆ ಮರಳಿ ಬಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನಿವಾಸಿ ಚಂದ್ರಶೇಖರ್ಗೆ ಮನೆ ಮಂದಿ ಖುಷಿಯಿಂದ ಸ್ವಾಗತಿಸಿದರು.
ರಿಯಾದ್ ನಿಂದ ಮುಂಬೈಗೆ ಬಂದು ಅಲ್ಲಿಂದ ಮಂಗಳೂರಿಗೆ ಆಗಮಿಸಿದ ಚಂದ್ರಶೇಖರ್ ತಾನು ಮಾಡದ ತಪ್ಪಿಗೆ 11 ತಿಂಗಳಿನಿಂದ ಸೌದಿ ಜೈಲಿನಲ್ಲಿ ಬಂಧಿಯಾಗಿದ್ದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೊರ ಬರುತ್ತಲೇ ಚಂದ್ರು ಭಾವುಕರಾಗಿದ್ದರು.
ಮಗನನ್ನು ಅಪ್ಪಿ ಹಿಡಿದು ಆನಂದ ಭಾಷ್ಪ ಸುರಿಸಿದ ತಾಯಿ ಹೇಮಾವತಿಯನ್ನು ಕಂಡ ಅಲ್ಲಿದ್ದವರ ಕಣ್ಣಾಲಿಗಳಲ್ಲಿಯೂ ನೀರು ತುಂಬಿಕೊಂಡಿತ್ತು.
ಸೌದಿ ಅರೇಬಿಯಾದಲ್ಲಿದ್ದ ವೇಳೆ ಸಿಮ್ ಖರೀದಿಸಲು ಹೋಗಿದ್ದ ಚಂದ್ರು ಬ್ಯಾಂಕ್ ಖಾತೆ ಹ್ಯಾಕ್ ಆಗಿತ್ತು. ಹ್ಯಾಕ್ ಆದ ಖಾತೆಗೆ ಮಹಿಳೆಯೊಬ್ಬರ ಖಾತೆಯಿಂದ 22 ಸಾವಿರ ಹಣ ಜಮೆಯಾಗಿತ್ತು. ಯಾರೋ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು, ಇದನ್ನು ಚಂದ್ರಶೇಖರ್ ಅವರ ತಲೆಗೆ ಕಟ್ಟಲಾಗಿತ್ತು.
ವಂಚನೆ ಪ್ರಕರಣ ಎಸಗಿದ್ದಾರೆ ಎಂದು ಆರೋಪಿಸಿ ಚಂದ್ರಶೇಖರ್ ಅವರನ್ನು ಸೌದಿ ಅರೇಬಿಯಾದ ಪೊಲೀಸರು ಬಂಧಿಸಿದ್ದರು. ಬಳಿಕ ಅವರು ಜೈಲು ಪಾಲಾಗಿದ್ದರು. ಭಾರತೀಯ ವಿದೇಶಾಂಗ ಇಲಾಖೆ ಸೇರಿದಂತೆ ಹಲವರ ಪ್ರಯತ್ನದಿಂದ ಜೈಲಿನಿಂದ ಬಿಡುಗಡೆಯಾಗಿ ಬಂದು ಇದೀಗ ಮರಳಿ ಅವರು ತಾಯ್ನಾಡಿಗೆ ಬಂದಿದ್ದಾರೆ.
DAKSHINA KANNADA
ಸೌದಿಯ ಜೈಲಿನಲ್ಲಿದ್ದ ಕಡಬದ ಚಂದ್ರಶೇಖರ್ ಬಂಧಮುಕ್ತ – ಇಂದು ಮಂಗಳೂರಿಗೆ ಆಗಮಿಸುವ ನಿರೀಕ್ಷೆ
ಕಡಬ: ಬ್ಯಾಂಕ್ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಕಳೆದ 11 ತಿಂಗಳುಗಳಿಂದ ಸೌದಿ ಅರೇಬಿಯಾದ ರಿಯಾದ್‌ನ ಜೈಲಿನಲ್ಲಿ ಬಂಧಿಯಾಗಿದ್ದ ಕಡಬ ತಾಲೂಕು ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್ ಬಂಧಮುಕ್ತನಾಗಿದ್ದು, ಇಂದು ಸ್ವದೇಶಕ್ಕೆ ಆಗಮಿಸುವ ನಿರೀಕ್ಷೆ ಇದೆ.
ರಿಯಾದ್ ನ ಪೊಲೀಸರು ಚಂದ್ರಶೇಖರ್ ಅವರನ್ನು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಡಲಿದ್ದು, ಅಲ್ಲಿಂದ ಅವರು ಸಂಜೆ ವಿಮಾನದಲ್ಲಿ ಮಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಅಲ್ಪಾನರ್ ಸೆರಾಮಿಕ್ಸ್ ಎಂಬ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಚಂದ್ರಶೇಖರ್ ಕೆಲಸದಲ್ಲಿ ಪದೋನ್ನತಿ ಪಡೆದು 2022ರಲ್ಲಿ ಸೌದಿ ಅರೇಬಿಯಾಕ್ಕೆ ತೆರಳಿದ್ದರು. 2022ರ ನವೆಂಬರ್‌ನಲ್ಲಿ ಮೊಬೈಲ್ ಮತ್ತು ಸಿಮ್ ಖರೀದಿಗೆ ರಿಯಾದ್‌ನ ಅಂಗಡಿಗೆ ಭೇಟಿ ನೀಡಿ ಅರ್ಜಿಯೊಂದಕ್ಕೆ ಎರಡು ಬಾರಿ ಹೆಬ್ಬೆಟ್ಟು ಸಹಿ ನೀಡಿದ್ದರು. ವಾರದ ಬಳಿಕ ಅವರಿಗೆ ಅರೇಬಿಕ್ ಭಾಷೆಯಲ್ಲಿ ಹೊಸ ದೂರವಾಣಿ ಸಂಖ್ಯೆಗೆ ಸಂದೇಶ ಬಂದಿತ್ತು. ಅದನ್ನು ತೆರೆದು ಚಂದ್ರಶೇಖರ್ ನೋಡಿದ್ದರು. 2 ದಿನಗಳ ಬಳಿಕ ದೂರವಾಣಿ ಕರೆ ಬಂದು ಸಿಮ್‌ನ ಬಗ್ಗೆ ಮಾಹಿತಿ ಕೇಳಲಾಗಿತ್ತು. ಒಟಿಪಿ ತಿಳಿಸಿದ್ದರು. ವಾರದ ಬಳಿಕ ಅಲ್ಲಿನ ಪೊಲೀಸರು ಬಂದು ಚಂದ್ರಶೇಖರ್ ಅವರನ್ನು ಬಂಧಿಸಿದ್ದರು.
ಚಂದ್ರಶೇಖರ್‌ಗೆ ತಿಳಿಯದಂತೆ ಅಲ್ಲಿನ ಬ್ಯಾಂಕೊಂದರಲ್ಲಿ ಅವರದೇ ಹೆಸರಿನಲ್ಲಿ ಹ್ಯಾಕರ್‌ಗಳು ಖಾತೆ ತೆರೆದಿದ್ದರು. ಅಲ್ಲಿನ ಮಹಿಳೆಯೊಬ್ಬರ ಖಾತೆಯಿಂದ ಚಂದ್ರಶೇಖರ್ ಖಾತೆಗೆ 22 ಸಾವಿರ ಸೌದಿ ರಿಯಾಲ್ ಜಮೆಯಾಗಿ, ಅದರಿಂದ ಕೂಡಲೇ ಬೇರೆ ಯಾವುದೋ ದೇಶಕ್ಕೆ ಆ ಹಣ ವರ್ಗಾವಣೆಯಾಗಿತ್ತು. ಹಣ ಕಳೆದುಕೊಂಡ ಮಹಿಳೆಯು ಚಂದ್ರ ಶೇಖರ್ ಅವರ ಖಾತೆಗೆ ಹಣ ಜಮೆಯಾಗಿರುವುದನ್ನು ಗಮನಿಸಿ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು. ಚಂದ್ರಶೇಖರ್ ಬಂಧನವಾಗಿರುವ ಬಗ್ಗೆ ಅವರ ಗೆಳೆಯರು ಮನೆಮಂದಿಗೆ ಮಾಹಿತಿ ನೀಡಿದ್ದರು.
ಜೈಲಿನಲ್ಲಿ ಇರುವ ವೇಳೆ ದಿನದಲ್ಲಿ ಕೇವಲ 2 ನಿಮಿಷ ಮಾತ್ರ ದೂರವಾಣಿ ಕರೆ ಮಾಡಲು ಚಂದ್ರಶೇಖರ್ ಅವರಿಗೆ ಅವಕಾಶ ನೀಡಲಾಗಿತ್ತು. ಅಲ್ಲಿನ ಸ್ನೇಹಿತರಿಗೂ ಅವರನ್ನು ಭೇಟಿಯಾಗಲು ಅವಕಾಶ ಇರಲಿಲ್ಲ. ಐತ್ತೂರು ಗ್ರಾಮದ ಮೂಜೂರು ನಿವಾಸಿ ದಿ| ಕೆಂಚಪ್ಪ ಗೌಡ – ಹೇಮಾವತಿ ದಂಪತಿಯ ಕೊನೆಯ ಪುತ್ರ ಚಂದ್ರ ಶೇಖರ್ ಅವರಿಗೆ ಜನವರಿಯಲ್ಲಿ ಊರಿನಲ್ಲಿ ಮದುವೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಮದುವೆಯ ದಿನಾಂಕವೂ ಅಂತಿಮವಾಗಿತ್ತು. ಆ ಸಿದ್ಧತೆ ಯಲ್ಲಿ ಇರುವಾಗಲೇ ಅವರ ಬಂಧನವಾಗಿತ್ತು. ಚಂದ್ರಶೇಖರ್ ಅವರ ಸ್ನೇಹಿತರು 10 ಲಕ್ಷ ರೂಪಾಯಿ ಸಂಗ್ರಹಿಸಿ ಅಲ್ಲಿನ ವಕೀಲರಿಗೆ ನೀಡಿದ್ದರು. ಹಣ ಕಳೆದುಕೊಂಡ ಮಹಿಳೆಗೆ ಸುಮಾರು 6 ಲಕ್ಷ ರೂ. ಹಣವನ್ನು ಪಾವತಿಸಲಾಗಿತ್ತು. ಆದರೂ ಬಿಡುಗಡೆ ಸಾಧ್ಯವಾಗಿರಲಿಲ್ಲ, ಮಾಧ್ಯಮ ವರದಿಯ ಬಳಿಕ ಅಲ್ಲಿನ ಕಂಪೆನಿ ಎಚ್ಚೆತ್ತುಕೊಂಡು ನಿರಪರಾಧಿ ಚಂದ್ರಶೇಖರ್ ಅವರ ಬಿಡುಗಡೆಗೆ ಸಹಕರಿಸಿತ್ತು. ಚಂದ್ರಶೇಖರ್ ಬಿಡುಗಡೆಗೆ ಮಡಿಕೇರಿಯ ಬಿ.ಆರ್.ಅರುಣ್‌ಕುಮಾರ್ ಮತ್ತು ಮಂಗಳೂರಿನ ಕಬೀರ್ ನಿರಂತರವಾಗಿ ಪ್ರಯತ್ನಿಸಿದ್ದರು.
DAKSHINA KANNADA
ಹಮಾಸ್ ಉಗ್ರರನ್ನು ‘ದೇಶ ಪ್ರೇಮಿಗಳು’ ಎಂದು ಕರೆದ ಮಂಗಳೂರಿನ ಝಾಕಿರ್..!!
ಮಂಗಳೂರು: ಇಸ್ರೇಲ್ ಮತ್ತು ಪ್ಯಾಲೆಸ್ತೀನ್ನ ಹಮಾಸ್ ಉಗ್ರರ ನಡುವೆ ಯುದ್ಧ ಆರಂಭವಾಗಿ ಏಳು ದಿನಗಳು ಕಳೆದಿವೆ. ಈ ಯುದ್ಧದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಇಸ್ರೇಲ್ನಲ್ಲಿ ನರಮೇಧ ನಡೆಸಿದ ಹಮಾಸ್ ಉಗ್ರರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಮಂಗಳೂರಿನ ವ್ಯಕ್ತಿಯೊಬ್ಬ ವಿಡಿಯೋ ಹರಿಬಿಟ್ಟಿದ್ದಾನೆ.
ಮಂಗಳೂರಿನ ಬಂದರು ಪ್ರದೇಶದಲ್ಲಿ ತಾಲಿಬನ್ ಎಂಬ ಹೆಸರಿನಲ್ಲಿ ಗುರುತಿಸಿಕೊಳ್ಳುವ ಝಾಕಿರ್ “ಹಮಾಸ್ ಉಗ್ರರರನ್ನು ದೇಶ ಪ್ರೇಮಿಗಳು” ಎಂದು ಕರೆದಿದ್ದಾನೆ. ಪ್ಯಾಲೆಸ್ತೀನ್, ಗಾಝಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲಿ. ಹಮಾಸಿಗರು ದೇಶ ಪ್ರೇಮಿ ಯೋಧರು. ವಿಶ್ವ ಕಬರಸ್ಥಾನ್ ಸಂಘದ ಸದಸ್ಯರು ಪ್ರತ್ಯೇಕ ಪ್ರಾರ್ಥನೆ ಸಲ್ಲಿಸಬೇಕು ಎಂದು ಝಾಕಿರ್ ಹೇಳಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಝಾಕಿರ್ ವಿಡಿಯೋ ವೈರಲ್ ಆಗಿದ್ದು, ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಹಿಂದೂ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ಝಾಕಿರ್ನನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದಾರೆ. ಉಗ್ರರಿಗೆ ಬೆಂಬಲ ಕೊಡುವ ಇಂಥವರ ವಿರುದ್ಧ ಮಂಗಳೂರು ಪೊಲೀಸ್ ಇಲಾಖೆ ಕಾನೂನು ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳೇ ದೇಶಪ್ರೇಮಿಗಳು ಎಚ್ಚೆತ್ತುಕೊಂಡು ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ಮಾಡಿಕೊಡಬೇಡಿ. ಕೂಡಲೇ ಈತನನ್ನು ಬಂಧಿಸಿ ಎಂದು ವಿಶ್ವಹಿಂದು ಪರಿಷತ್ ಮುಖಂಡಶರಣ್ ಪಂಪ್ ವೆಲ್ ಆಗ್ರಹಿಸಿದ್ದಾರೆ.
- Ancient Mangaluru6 days ago
ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ
- DAKSHINA KANNADA6 days ago
ಉಡುಪಿ : ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಜೀವಾಂತ್ಯ
- bangalore5 days ago
ಇವ್ರು ಯಾರಂತ ಗೊತ್ತಾಯ್ತ ಫ್ರೆಂಡ್ಸ್? ನ್ಯೂ ಕಪಲ್ಸ್ ಫಾರಿನ್ ಟ್ರಿಪ್ ಅಂತೆ..!
- bangalore4 days ago
ದೈವಕೋಲ ವೀಕ್ಷಣೆಗೆ ಟೂರ್ ಪ್ಯಾಕೇಜ್ – ತುಳುವರ ಧಾರ್ಮಿಕ ಭಾವನೆಗೆ ಪೆಟ್ಟು..!