Saturday, September 18, 2021

ಒಲಿಂಪಿಕ್ಸ್‌ ಮೊದಲ ದಿನವೇ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ ಮೀರಾ

ಟೋಕಿಯೊ: ಒಲಿಂಪಿಕ್ಸ್‌ನ ಮೊದಲ ದಿನದಂದು ಭಾರತ ಇದೇ ಮೊದಲ ಬಾರಿಗೆ ಪದಕ ಗೆದ್ದುಕೊಂಡಿದೆ. ಮಹಿಳೆಯರ 49 ಕೆ.ಜಿ .ವಿಭಾಗದ ವೇಟ್ ಲಿಫ್ಟಿಂಗ್  ವಿಭಾಗದಲ್ಲಿ  ಮೀರಾಬಾಯಿ ಚಾನು ಬೆಳ್ಳಿ ಜಯಿಸಿ ದಾಖಲೆ ಬರೆದಿದ್ದಾರೆ.

ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಗೆದ್ದ ಮೊದಲ ಭಾರತೀಯ ವೇಟ್ ಲಿಫ್ಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದರೊಂದಿಗೆ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತದ ಪದಕ ಬೇಟೆ ಆರಂಭವಾಗಿದೆ. ಚೀನಾದ ಝಿಹುಯಿ ಸ್ನ್ಯಾಚ್ ಹಾಗೂ  ಕ್ಲೀನ್ ಮತ್ತು ಜೆರ್ಕ್ ಎರಡರಲ್ಲೂ ಒಲಿಂಪಿಕ್ ದಾಖಲೆಯೊಂದಿಗೆ ಚಿನ್ನ ಗೆದ್ದಿದ್ದಾರೆ. ಕ್ಲೀನ್ ಹಾಗೂ ಜರ್ಕ್ ನಲ್ಲಿ ಒಟ್ಟು 110 ಕೆಜಿ ಎತ್ತಿ ಹಿಡಿದಿರುವ ಭಾರತದ ವೇಟ್ ಲಿಫ್ಟರ್ ಮೀರಾಬಾಯಿ ಚಾನು ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕವನ್ನು ದೃಢಪಡಿಸಿದ್ದರು. ಚಾನು 84 ಕೆಜಿ ಹಾಗೂ 87 ಕೆಜಿಯನ್ನು ಯಶಸ್ವಿಯಾಗಿ ಎತ್ತಿದರು. ಆದರೆ 89 ಕೆಜಿ ಭಾರ ಎತ್ತಲು ವಿಫಲರಾದರು. ಚೀನಾದ ಝಿಹುಯಿ ನಂತರ ದ್ವಿತೀಯ ಸ್ಥಾನ ಪಡೆದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...