ಮಂಗಳೂರು: ಭಯೋತ್ಪಾದಕರು ಮಂಗಳೂರು ನಗರದ ಕದ್ರಿ ಮಂಜುನಾಥನ ದೇವಸ್ಥಾನದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂಬ ಮಾಹಿತಿ ಹಿನ್ನಲೆಯಲ್ಲಿ ಕದ್ರಿ ದೇವಸ್ಥಾನಕ್ಕೆ ಭದ್ರತಾ ವ್ಯವಸ್ಥೆಗಳನ್ನು ಅಳವಡಿಸುವ ಸಲುವಾಗಿ ಭಾನುವಾರ ಪೂರ್ವಭಾವಿ ಸಭೆ ನಡೆಯಿತು.
ಸಲಾಯಿತು. ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಒಂದೇ ದ್ವಾರದಲ್ಲಿ ಪ್ರವೇಶಕ್ಕೆ ಅವಕಾಶ ನೀಡುವುದು, ಲೋಹ ಪರಿಶೋಧಕ ಯಂತ್ರ, ಬ್ಯಾಗ್ಗಳ ಸ್ಕ್ರೀನಿಂಗ್ ಯಂತ್ರ ಅಳವಡಿಸುವುದು, ಪಾರ್ಕಿಂಗ್ ಸ್ಥಳದಲ್ಲಿಯೂ ಸುರಕ್ಷತೆಗೆ ಪೂರಕ ವ್ಯವಸ್ಥೆ ಕಲ್ಪಿಸುವ ಬಗ್ಗೆ ಪೊಲೀಸ್ ಅಧಿಕಾರಿಗಳು ಸಲಹೆ ನೀಡಿದರು.
ಪೊಲೀಸರ ಸಲಹೆಯನ್ನು ಅನುಷ್ಥಾನಗೊಳಿಸುವುದಾಗಿ ದೇವಸ್ಥಾನ ಆಡಳಿತ ಮಂಡಳಿಯವರಯ ತಿಳಿಸಿದರು.
ಸಭೆಯಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಡಾ ಎ.ಜೆ.ಶೆಟ್ಟಿ, ದೇವಳದ ಕಾರ್ಯನಿವಾಹಣಾಧಿಕಾರಿ ಪಿ.ಜಯಮ್ಮ, ಟ್ರಸ್ಟಿಗಳು ಮತ್ತಿತರರು ಪಾಲ್ಗೊಂಡಿದ್ದರು.
ಇನ್ನು ಕೆಲವು ದಿನಗಳ ಹಿಂದೆ ಮಂಗಳೂರು ನಗರದಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಪೋಟದ ಆರೋಪಿ ಶಾರೀಕ್ ಗೆ ಕದ್ರಿ ದೇವಸ್ಥಾನದಲ್ಲಿ ಸ್ಪೋಟಿಸುವ ಗುರಿ ಇತ್ತು ಎಂಬ ವಿಚಾರಗಳ ಬೆಳಕಿಗೆ ಬಂದಿತ್ತು. ಹೀಗಾಗಿ ಕದ್ರಿ ದೇವಳ ಆಡಳಿತ ಮಂಡಳಿ ಪೊಲೀಸ್ ಇಲಾಖೆಗೆ ಭದ್ರತೆಗಾಗಿ ಮನವಿ ಮಾಡಲಾಗಿತ್ತು.
ಕದ್ರಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಜಯಮ್ಮ ಅವರು ತನ್ನ ವ್ಯಾಪ್ತಿಯ ಕದ್ರಿ ಪೊಲೀಸ್ ಠಾಣೆಗೆ ಈ ಕುರಿತು ಲಿಖಿತ ದುರೊಂದನ್ನು ನೀಡಿದ್ದಾರೆ. ಅದರಂತೆ ಇದೀಗ ದೇವಸ್ಥಾನಕ್ಕೆ ಪೊಲೀಸ್ ಭದ್ರತೆ ನೀಡುವ ಬಗ್ಗೆ ಸಭೆಯಲ್ಲಿ ಅಂತಿಮ ತೀರ್ಮಾನಕ್ಕೆ ಬರಲಾಗಿದೆ.