Monday, January 24, 2022

ಮೇಕೆದಾಟು ಪಾದಯಾತ್ರೆ: ಸರ್ಕಾರದ ವಿರುದ್ಧ ಹೈಕೋರ್ಟ್ ಕೆಂಡಾಮಂಡಲ-ವಿಪಕ್ಷಕ್ಕೂ ನೊಟೀಸ್‌

ಬೆಂಗಳೂರು: ಮೇಕೆದಾಟು ಪಾದಯಾತ್ರೆ ಬಗ್ಗೆ ಹೈಕೋರ್ಟ್ ಸರಕಾರ ಹಾಗೂ ವಿಪಕ್ಷ ಕಾಂಗ್ರೆಸ್‌ ಅನ್ನು ತರಾಟೆಗೆ ತೆಗೆದುಕೊಂಡಿದೆ. ಜೊತೆಗೆ ಸರ್ಕಾರ ಮತ್ತು ಕೆಪಿಸಿಸಿಗೆ ಕೋರ್ಟ್‌ ಒಂದು ದಿನದ ಗಡುವು ನೀಡಿ, ತಕ್ಷಣ ಉತ್ತರಿಸುವಂತೆ ಸೂಚಿಸಿದೆ.


ಈ ಬಗ್ಗೆ ಪಿಐಎಲ್‌ ಸಲ್ಲಿಸಿದ್ದ ವಕೀಲ ಶ್ರೀಧರ್ ಪ್ರಭು ಅವರ ತುರ್ತು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಮತ್ತು ನ್ಯಾ. ಸೂರಜ್ ಗೋವಿಂದರಾಜ್ ಅವರು ನ್ಯಾಯಪೀಠ ಕಾಂಗ್ರೆಸ್‌ ಪಾದಯಾತ್ರೆ ಬಗ್ಗೆ ಕೆಂಡಾಮಂಡಲಗೊಂಡಿದೆ.

ರಾಜ್ಯ ಸರ್ಕಾರ ಅಸಮರ್ಥವಾಗಿದೆಯೇ ಎಂದೂ ಪ್ರಶ್ನೆ ಮಾಡಿದೆ. ಸರ್ಕಾರ ಮತ್ತು ಕೆಪಿಸಿಸಿಗೆ ಕೋರ್ಟ್‌ ಒಂದು ದಿನದ ಗಡುವು ನೀಡಿ, ತಕ್ಷಣ ಉತ್ತರಿಸುವಂತೆ ಸೂಚಿಸಿದೆ.

ಕರ್ನಾಟಕ ಈಗಾಗಲೇ ಕೋವಿಡ್ ನಿಂದ ತತ್ತರಿಸುತ್ತಿದೆ. ಹೀಗಿರುವಾಗ ಪಾದಯಾತ್ರೆಗೆ ಹೇಗೆ ಅನುಮತಿ ನೀಡಿದ್ದೀರಿ ಎಂದು ಹೈಕೋರ್ಟ್ ವಿಭಾಗೀಯ ಪೀಠ ತೀವ್ರ ಅಸಮಾಧಾನ ಹೊರ ಹಾಕಿದೆ. ಸರ್ಕಾರದ ಮಾರ್ಗಸೂಚಿ ಪಾಲಿಸಲು ಕೆಪಿಸಿಸಿ ಏನು ಕ್ರಮ ಕೈಗೊಂಡಿದೆ ಎಂದೂ ಕಾಂಗ್ರೆಸ್​ ಪಕ್ಷವನ್ನು ಪೀಠ ಪ್ರಶ್ನಿಸಿದೆ.


ಈಗಾಗಲೇ ಪಾದಯಾತ್ರೆ ನಡೆಸುವವರ ಮೇಲೆ ಮೂರು ಎಫ್ಐಆರ್ ದಾಖಲಿಸಿರುವುದಾಗಿ ಎಎಜಿ ಕೋರ್ಟ್​ಗೆ ಮಾಹಿತಿ ನೀಡಿದರು. ಅದಕ್ಕೆ ಸರ್ಕಾರ ಪಾದಯಾತ್ರೆ ತಡೆಯಲು ಅಸಮರ್ಥವಾಗಿದೆಯೇ? ಅನುಮತಿ ಕೊಟ್ಟಿಲ್ಲದಿದ್ದರೆ ಯಾರಿಗಾಗಿ ಕಾಯುತ್ತಿದ್ದೀರಿ?

ಸರ್ಕಾರ ಸಂಪೂರ್ಣ ಅಸಮರ್ಥವಾಗಿದೆಯೇ? ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಿದ್ದರೂ ಅನುಮತಿ ಹೇಗೆ ಸಿಕ್ಕಿತು? ಹೈಕೋರ್ಟ್ ಆದೇಶದವರೆಗೆ ನೀವು ಕ್ರಮ ಕೈಗೊಳ್ಳುವುದಿಲ್ಲವೇ? ಎಂದು ಎಂದು ರಾಜ್ಯ ಸರ್ಕಾರವನ್ನು ಹೈಕೋರ್ಟ್ ವಿಭಾಗೀಯ ಪೀಠ ತರಾಟೆಗೆ ತೆಗೆದುಕೊಂಡಿದೆ.

ಮೇಕೆದಾಟು ಪಾದಯಾತ್ರೆ ವಿಚಾರದ ಬಗ್ಗೆ ಮಾಹಿತಿ ನೀಡವಂತೆ ಕೆಪಿಸಿಸಿಗೆ ಸಹ ಹೈಕೋರ್ಟ್ ಸೂಚನೆ ನೀಡಿದೆ. ಇದೇ ವೇಳೆ ವಿಚಾರಣೆಯನ್ನು ಜನವರಿ 14 ಕ್ಕೆ ಮುಂದೂಡಿದೆ. ರಾಜ್ಯ ಸರ್ಕಾರಕ್ಕೆ ಒಂದು ದಿನ ಕಾಲಾವಕಾಶ ನೀಡಿದ್ದೇವೆ.

ಎಸ್ಒಪಿ ಜಾರಿಗೊಳಿಸಲು ಯಾವ ಕ್ರಮ ಕೈಗೊಳ್ಳಲಾಗಿದೆ. ಕೋವಿಡ್ ಬಿಗಡಾಯಿಸಿರುವ ವೇಳೆ ಪಾದಯಾತ್ರೆಗೆ ಅವಕಾಶ ಏಕೆ? ಎಂಬುದರ ಬಗ್ಗೆ ಉತ್ತರಿಸಲು ಸರ್ಕಾರಕ್ಕೆ ಕೋರ್ಟ್​ ತಾಕೀತು ಮಾಡಿದೆ. ಶ್ರೀಧರ್ ಪ್ರಭು, ಅರ್ಜಿದಾರರ ಪರ ವಕೀಲರಾಗಿದ್ದರೆ ಸುಬ್ರಮಣ್ಯ ಅವರು ಸರ್ಕಾರದ ಪರ ಎಎಜಿ ಆಗಿದ್ದಾರೆ.
ಗೃಹಸಚಿವರ ಸಭೆ
ಹೈಕೋರ್ಟ್ ಗರಂ ಆದಂತೆ ಇತ್ತಕಡೆ ಗೃಹ ಸಚಿವ ಆರಗ ಜ್ಞಾನೇಂದ್ರ ವಿಕಾಸಸೌಧದಲ್ಲಿ ತುರ್ತು ಸಭೆ ಕರೆದಿದ್ದಾರೆ. ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್, ಗೃಹ ಇಲಾಖೆ ಎಸಿಎಸ್​ ಸಭೆಯಲ್ಲಿ ಭಾಗಿಯಾಗಿದ್ದಾರೆ. ಹಿರಿಯ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿ, ಮುಂದಿನ ಕ್ರಮದ ಕುರಿತು ಸಮಾಲೋಚನೆ ನಡೆಸಿದ್ದಾರೆ.
ಇಂದು ಪಾದಯಾತ್ರೆ ನಿಲ್ಲಿಸಬಹುದು
ಕಾಂಗ್ರೆಸ್‌ನವರೇ ಇಂದು ಪಾದಯಾತ್ರೆ ನಿಲ್ಲಿಸಬಹುದು, ಇಲ್ಲದಿದ್ದರೆ ನಾವು ಕ್ರಮಕೈಗೊಳ್ಳುತ್ತೇವೆ: ಹೈಕೋರ್ಟ್ ನಮಗೆ 1 ದಿನ ಕಾಲಾವಕಾಶ ಕೊಟ್ಟಿದೆ. ಹೈಕೋರ್ಟ್‌ಗೆ ಏನು ಉತ್ತರಿಸಬೇಕೆಂದು ಚರ್ಚಿಸುತ್ತಿದ್ದೇವೆ ಎಂದು ಸಭೆಯ ಬಳಿಕ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

Hot Topics

ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿದ ಬಿಜೆಪಿ ಮುಖಂಡರು

ಬಂಟ್ವಾಳ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಇಂದು ಹಿರಿಯ ಮುಖಂಡರಾದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರ ಬಂಟ್ವಾಳದ ನಿವಾಸಕ್ಕೆ ಭೇಟಿ ಮಾಡಿ ಅವರ ಆರ್ಶೀವಾದ ಪಡೆದರು.ಈ ವೇಳೆ ರಾಜ್ಯ...

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ ಕಾರ್ಯಕ್ರಮ ಸುರತ್ಕಲ್ ಗೋವಿಂದದಾದ ಕಾಲೇಜಿನಲ್ಲಿ ಜರಗಿತು‌. ಅಕಾಡಮಿಯ ಅಧ್ಯಕ್ಷ ಡಾ. ಜಿ.ಎಲ್.ಹೆಗಡೆ ಅಧ್ಯಕ್ಷತೆ ವಹಿಸಿದ್ದರು.ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ,ಶಾಸಕ ಡಾ.ವೈ.ಭರತ್...

ಸುಳ್ಯ: ಅಂಗಡಿಗೆ ಬಂದ ಗ್ರಾಹಕನಿಗೆ ಮಾಲಕನಿಂದ ಹಲ್ಲೆ- ದೂರು ದಾಖಲು

ಸುಳ್ಯ: ಬೆಳ್ಳಿಯ ಚೈನಿಗೆ ಲೇಪನ ಮಾಡಲು ಬಂದ ಗ್ರಾಹಕನೊಬ್ಬನಿಗೆ ಅಂಗಡಿ ಮಾಲಕನೇ ಕಬ್ಬಿಣದ ಪೈಪಿನಿಂದ ಹೊಡೆದು ಗಾಯಗೊಳಿಸಿದ ಘಟನೆ ಸುಳ್ಯದಲ್ಲಿ ನಿನ್ನೆ ನಡೆದಿದೆ.ಗಾಯಗೊಂಡ ಗ್ರಾಹಕರನ್ನು ಗೋಪಾಲ ಶೇಟ್ ಕೆ (47) ಎಂದು ಗುರುತಿಸಲಾಗಿದೆ. ಗೋಪಾಲ...