Connect with us

LATEST NEWS

ಮೇಕೆದಾಟು ಪಾದಾಯಾತ್ರೆ ಮೊಟಕುಗೊಳಿಸಿದ ಕಾಂಗ್ರೆಸ್‌

Published

on

ಬೆಂಗಳೂರು: ಮೇಕೆದಾಟು ಪಾದಾಯಾತ್ರೆ ಬಗ್ಗೆ ಕಾಂಗ್ರೆಸ್‌ ಮತ್ತು ಸರ್ಕಾರದ ನಡುವೆ ಹಗ್ಗಜಗ್ಗಾಟ ನಡೆದು. ಇದೀಗ 5ನೇ ದಿನಕ್ಕೆ ಪಾದಯಾತ್ರೆ ಮೊಟಕುಗೊಳಿಸಲಾಗಿದೆ.

ಕೋವಿಡ್‌ ಕಡಿಮೆಯಾದ ಬಳಿಕ ಮತ್ತೆ ಅದೇ ಸ್ಥಳದಿಂದ ಮುಂದುವರೆಸಲು ಕಾಂಗ್ರೆಸ್‌ ಸಭೆಯಲ್ಲಿ ನಿರ್ಧಾರಗೊಂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಘೋಷಿಸಿದ್ದಾರೆ.

ಯಾವ ಸ್ಥಳದಲ್ಲಿ ಮೊಟಕುಗೊಳಿಸಲಾಗಿದೆಯೋ ಅದೇ ಸ್ಥಳದಲ್ಲಿ ಪ್ರಾರಂಭವಾಗಿ ಎಲ್ಲಿ ಅಂತ್ಯವಾಗಬೇಕೋ ಅಲ್ಲಿ ಅಂತ್ಯವಾಗಲಿದೆ ಎಂದಿದ್ದಾರೆ.

ಇಂದು ರಾಮನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಮೇಕೆದಾಟು ಪಾದಯಾತ್ರೆ ರೂವಾರಿ ಡಿಕೆಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಮತ್ತು ಹಿರಿಯ ನಾಯಕರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ.

ನಿನ್ನೆ ಹೈಕೋರ್ಟ್ ಈ ಬಗ್ಗೆ ಪಿಐಎಲ್‌ ಸಲ್ಲಿಕೆಯಾಗಿತ್ತು. ಇದರ ವಿಚಾರಣೆ ನಡೆಸಿದ ಹೈಕೋರ್ಟ್ ಸರ್ಕಾರ ಹಾಗೂ ಕಾಂಗ್ರೆಸ್‌ಗೆ ಛಿಮಾರಿ ಹಾಕಿತ್ತು.

LATEST NEWS

ವಿಶ್ವ ಸಂಸ್ಥೆಗೆ ಗುಡ್ ಬೈ…ಅಧಿಕಾರಕ್ಕೇರುತ್ತಲೇ ಟ್ರಂಪ್ ಸಾಲು ಸಾಲು ಶಾ*ಕಿಂಗ್ ನಿರ್ಧಾರ!

Published

on

ಮಂಗಳೂರು/ ವಾಷಿಂಗ್ಟನ್:  ಯುಸ್‌ನ 47 ನೇ ಅಧ್ಯಕ್ಷನಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಕೆಲವೊಂದು ನಿರ್ಧಾರಗಳನ್ನು ತಾಳಿದ್ದು, ಶಾ*ಕಿಂಗ್ ಆದೇಶಗಳಿಗೆ ಸಹಿ ಹಾಕಿದ್ದಾರೆ.

ವಿಶ್ವಸಂಸ್ಥೆಯಿಂದ ಹೊರಕ್ಕೆ :

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕವನ್ನು ಹಿಂತೆಗೆದುಕೊಳ್ಳುವ ಮೂಲಕ ಶಾ*ಕ್ ಕೊಟ್ಟಿದ್ದಾರೆ. ಕೋ*ವಿಡ್ ಸಮಯದಲ್ಲಿ ಹಾಗೂ ಇತರ ಅಂತಾರಾಷ್ಟ್ರೀಯ ಆರೋಗ್ಯ ಬಿಕ್ಕಟ್ಟುಗಳ ವೇಳೆ ಜಾಗತಿಕ ಆರೋಗ್ಯ ಸಂಸ್ಥೆ ಸರಿಯಾಗಿ ನಿರ್ವಹಿಸಿಲ್ಲ ಎಂಬುದು ಟ್ರಂಪ್ ಆರೋಪ. ಹೀಗಾಗಿ ಟ್ರಂಪ್ ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರಬರುವ ಆದೇಶಕ್ಕೆ ಸಹಿ ಹಾಕಿದ್ದಾರೆ.

ಪ್ಯಾರಿಸ್ ಒಪ್ಪಂದ ಮುರಿದ ಟ್ರಂಪ್ :

2015ರಲ್ಲಿ ವಿಶ್ವದ ದೇಶಗಳು ಪ್ಯಾರೀಸ್ ಒಪ್ಪಂದಕ್ಕೆ ಸಹಿ ಹಾಕಿದ್ದವು. ಇದರನ್ವಯ ಮಾಲಿನ್ಯ ನಿಯಂತ್ರಣಕ್ಕೆ ಜಗತ್ತಿನ ದೇಶಗಳು ತನ್ನದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಆದರೆ, ಟ್ರಂಪ್ 2017 ರಲ್ಲಿ ಈ ಒಪ್ಪಂದವನ್ನು ತಿರಸ್ಕರಿಸಿದ್ದರು. ಚೀನಾ, ಭಾರತದಂತಹ ದೇಶಗಳು ಹೆಚ್ಚು ಮಾಲಿನ್ಯ ಉಂಟು ಮಾಡುತ್ತಿದ್ದು,  ಅಮೆರಿಕ ಹೆಚ್ಚು ಮಾಡಿಲ್ಲ ಎಂದರು. ಹೀಗಾಗಿ ನಿರ್ಬಂಧ ಹೇರುವ ಅಗತ್ಯವಿಲ್ಲ ಎಂದು ಹೇಳಿದ್ದರು. ಇದೀಗ ಒಪ್ಪಂದ ಮುರಿದುಕೊಂಡಿದ್ದಾರೆ.

 ಬೈಡನ್  ನಿರ್ಧಾರ ರದ್ದು, ಬೆಂಬಲಿಗರಿಗೆ ಕ್ಷಮಾದಾನ :

ಭಯೋತ್ಪಾದನೆಯನ್ನು ಪ್ರಾಯೋಜಿಸುವ ರಾಷ್ಟ್ರಗಳ ಕಪ್ಪುಪಟ್ಟಿಯಿಂದ ಕ್ಯೂಬಾವನ್ನು ತೆಗೆದುಹಾಕುವ ಜೋ  ಬೈಡನ್ ಅವರ ನಿರ್ಧಾರವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ರದ್ದುಗೊಳಿಸಿದರು.

ಇದನ್ನೂ ಓದಿ : ಭಾರತದ ಅಳಿಯ ಈಗ ಅಮೆರಿಕದ ಉಪಾಧ್ಯಕ್ಷ; ಸೆಕೆಂಡ್ ಲೇಡಿ ಉಷಾ ಚಿಲುಕುರಿ ಬಗ್ಗೆ ಗೊತ್ತಾ!?

ಅಲ್ಲದೇ, 2020ರ ಚುನಾವಣಾ ಫಲಿತಾಂಶವನ್ನು ರದ್ದು ಮಾಡುವಂತೆ 2021ರ ಜನವರಿ 6 ರಂದು ಟ್ರಂಪ್‌ ಬೆಂಬಲಿಗರು ಕ್ಯಾಪಿಟಲ್‌ ಮೇಲೆ ದಾ*ಳಿ ಮಾಡಿದ್ದರು. ಇದರಲ್ಲಿ ತಮ್ಮ 1500 ಬೆಂಬಲಿಗರಿಗೆ ಅವರು ಕ್ಷಮಾದಾನವನ್ನು ನೀಡುವ ಆದೇಶಕ್ಕೂ ಟ್ರಂಪ್ ಸಹಿ ಹಾಕಿದ್ದಾರೆ.
ಫೆಡರಲ್ ಕೆಲಸಗಾರರು ಪೂರ್ಣ ಸಮಯಕ್ಕೆ ಕಚೇರಿಗೆ ಮರಳುವ ಕಾರ್ಯನಿರ್ವಾಹಕ ಆದೇಶಕ್ಕೆ ಟ್ರಂಪ್ ಸಹಿ ಹಾಕಿದರು. ವೈರಸ್ ಹರಡುವುದನ್ನು ಕಡಿಮೆ ಮಾಡಲು ಕೋ*ವಿಡ್ ಸಮಯದಲ್ಲಿ ಮನೆಯಿಂದ ಕೆಲಸ ಮಾಡುವುದು ಪ್ರವರ್ಧಮಾನಕ್ಕೆ ಬಂದಿತ್ತು.

Continue Reading

LATEST NEWS

ನರೇಂದ್ರ ಮೋದಿ ಸೇರಿದಂತೆ ರಾಜಕೀಯ ಧುರೀಣರು ಮಹಾಕುಂಭ ಮೇಳದಲ್ಲಿ ಭಾಗಿ

Published

on

ಮಂಗಳೂರು/ಪ್ರಯಾಗ್‌ರಾಜ್ : 144 ವರ್ಷಕೊಮ್ಮೆ ನಡೆಯುವ ಮಹಾಕುಂಭ ಮೇಳ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿದೆ. ಇದೊಂದು ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮವಾಗಿದ್ದು, ದೇಶ, ವಿದೇಶಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಜಕೀಯ ಧುರೀಣರು ಸಹ ಮಹಾಕುಂಭದ ಪವಿತ್ರ ಸ್ನಾನಕ್ಕೆ ನಿರ್ಧರಿಸಿದ್ದಾರೆ.

ಪ್ರಧಾನಿ ನಮೋ ಫೆಬ್ರವರಿ 5 ರಂದು ಪ್ರಯಾಗರಾಜ್ ಗೆ ಭೇಟಿ ನೀಡಲಿದ್ದಾರೆ. ಪ್ರಮುಖ ಸರ್ಕಾರಿ ಯೋಜನೆಗಳನ್ನು ಪರಿಶೀಲಿಸುವ ಮತ್ತು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆಯಿದೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಭದ್ರತೆಗಾಗಿ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ. ನಿಗದಿತ ಸಮಯದಲ್ಲಿ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.

 

ಇದನ್ನೂ ಓದಿ : ಏನಿದು ಸಿಂಹಸ್ಥ ಕುಂಭಮೇಳ? ಇದರ ವಿಶೇಷತೆ ಏನು?

 

ಜನವರಿ 22 ರಂದು ಉತ್ತರ ಪ್ರದೇಶದ ಯೋಗಿ ಸರ್ಕಾರ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಮಹಾಕುಂಭ ವಿಚಾರ ಚರ್ಚೆಗೆ ಬರಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 27 ರಂದು ಮಹಾಕುಂಭದಲ್ಲಿ ಭಾಗವಹಿಸಲಿದ್ದಾರೆ. ಫೆಬ್ರವರಿ 1 ರಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ತ್ರಿವೇಣಿ ಸಂಗಮಕ್ಕೆ ಬರಲಿದ್ದಾರೆ. ಫೆಬ್ರವರಿ 10 ರಂದು ರಾಷ್ಟ್ರಪತಿಗಳು ಆಗಮಿಸುವ ನಿರೀಕ್ಷೆ ಇದೆ. ವಿಐಪಿಗಳ ಭೇಟಿ ಗಮನದಲ್ಲಿಟ್ಟುಕೊಂಡು ಉತ್ತರ ಪ್ರದೇಶ ಪೊಲೀಸರು ಭದ್ರತೆಯನ್ನು ಬಿಗಿಗೊಳಿಸಿದ್ದಾರೆ. ಪ್ರಮುಖ ಸ್ಥಳಗಳಲ್ಲಿ ಭದ್ರತಾ ಪಡೆಗಳ ನಿಯೋಜನೆಯನ್ನು ಹೆಚ್ಚಿಸಲಾಗಿದೆ. ವಿಶೇಷ ಭದ್ರತಾ ತಂಡಗಳನ್ನು ಸಕ್ರಿಯಗೊಳಿಸಲಾಗಿದೆ. ಡ್ರೋನ್ ಮತ್ತು ಸಿಸಿಟಿವಿ ಕ್ಯಾಮೆರಾಗಳ ಮೂಲಕ ಕಣ್ಗಾವಲು ಇಡಲಾಗಿದೆ.

Continue Reading

LATEST NEWS

ಭಾರತದ ಅಳಿಯ ಈಗ ಅಮೆರಿಕದ ಉಪಾಧ್ಯಕ್ಷ; ಸೆಕೆಂಡ್ ಲೇಡಿ ಉಷಾ ಚಿಲುಕುರಿ ಬಗ್ಗೆ ಗೊತ್ತಾ!?

Published

on

ಮಂಗಳೂರು/ ವಾಷಿಂಗ್ಟನ್ : 47ನೇ ಯುಎಸ್ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸ್ವೀಕರಿಸಿದರು. ಭಾರತದ ಅಳಿಯ ಜೆಡಿ ವ್ಯಾನ್ಸ್ ಉಪಾಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಅಮೆರಿಕ ಚುನಾವಣೆಯಲ್ಲಿ ಟ್ರಂಪ್ ಅವರ ರಿಪಬ್ಲಿಕನ್ ಪಕ್ಷದ ಪರವಾಗಿ ನಿಂತಿದ್ದ ವ್ಯಾನ್ಸ್ ಇದೀಗ ಉಪಾಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸದ್ಯ ಈ ಜೆಡಿ ವ್ಯಾನ್ಸ್‌ನತ್ತ ಎಲ್ಲರ ಚಿತ್ತ ಹರಿದಿದ್ದು ಜೊತೆಗೆ ಅವರೊಂದಿಗೆ ಕಾಣಿಸಿಕೊಂಡ ಅವರ ಪತ್ನಿ ಉಷಾ ಚಿಲುಕುರಿಯೂ ಪ್ರಮಾಣವಚನ ಕಾರ್ಯಕ್ರಮದಲ್ಲಿ ಗಮನಸೆಳೆದಿದ್ದಾರೆ. ಇದೀಗ ಇವರ ಹಿನ್ನಲೆ ಬಗ್ಗೆ ಸಹಜವಾಗೇ ಕುತೂಹಲ ಹುಟ್ಟಿದೆ.

 

ಜೆಡಿ ವ್ಯಾನ್ಸ್ ಯಾರು?


1984 ಆಗಸ್ಟ್ 2ರಂದು ಓಹಿಯೋದ ಮಿಡಲ್‌ಟೌನ್‌ನಲ್ಲಿ ಜನಿಸಿದ ಜೆಡಿ ವ್ಯಾನ್ಸ್ ಸದ್ಯ ಅಮೆರಿಕಾದ ಉಪಾಧ್ಯಕ್ಷ. ಇವರಿಗೂ ಭಾರತಕ್ಕೂ ಇರುವ ನಂಟು ಆಗಾಗ ಸುದ್ದಿಯಾಗುತ್ತಿರುತ್ತದೆ. ಜೆಡಿ ವ್ಯಾನ್ಸ್ ಬಾಲ್ಯದಲ್ಲಿ ಬಡತನ ಕಂಡವರು. ತಾಯಿಗೆ ದುಷ್ಚಟಗಳಿದ್ದರಿಂದ ವ್ಯಾನ್ಸ್ ತಂದೆಯ ಆಸರೆಯಲ್ಲಿ ಬೆಳೆದರು. ಓಹಿಯೋ ಸ್ಟೇಟ್ ಯೂನಿವರ್ಸಿಟಿ ಮತ್ತು ಯೇಲ್ ಲಾ ಸ್ಕೂಲ್‌ನಲ್ಲಿ ಓದಿದ ವ್ಯಾನ್ಸ್ ಬಳಿಕ,  ಸಿಲಿಕಾನ್ ವ್ಯಾಲಿಯಲ್ಲಿ ವೆಂಚರ್ ಕ್ಯಾಪಿಟಲಿಸ್ಟ್ ಆಗಿ  ಕೆಲಸಕ್ಕೆ ಸೇರಿದರು. ವ್ಯಾನ್ಸ್ ಒಬ್ಬ ರಾಜಕಾರಣಿ, ಲೇಖಕನೂ ಹೌದು. ಓಹಿಯೋದಿಂದ ಜೂನಿಯರ್ ಸೆನೆಟರ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ.

ಭಾರತದೊಂದಿಗಿದೆ ವ್ಯಾನ್ಸ್ ನಂಟು:

ವ್ಯಾನ್ಸ್‌ಗೆ ಭಾರತದೊಂದಿಗೆ ಪ್ರಮುಖ ನಂಟೊಂದು ಬೆಸೆದಿದೆ. ಅವರು  ಭಾರತದ ಅಳಿಯ. ಅವರು ವರಿಸಿರುವುದು ಭಾರತೀಯ ಮೂಲದ ಉಷಾ ಚಿಲುಕುರಿ ಎಂಬವರನ್ನು. ಹಾಗಾಗಿ ಭಾರತದೊಂದಿಗೆ ವ್ಯಾನ್ಸ್ ನಂಟು ದೊಡ್ಡದೆಂದರೆ ತಪ್ಪಾಗಲಾರದು. ಅಂದ್ಹಾಗೆ ವ್ಯಾನ್ಸ್ ಹಾಗೂ ಉಷಾ 2014ರಲ್ಲಿ ಮದುವೆಯಾದರು.  ದಂಪತಿಗೆ ಐವಾನ್, ವಿವೇಕ್ ಮತ್ತು ಮಿರಾಬೆಲ್ ಎಂಬ ಮೂವರು ಮಕ್ಕಳಿದ್ದಾರೆ.

ಇದನ್ನೂ ಓದಿ : ಕಾಂತಾರ ಚಾಪ್ಟರ್ 1 ಗೆ ಸಂಕಷ್ಟ; ಎಡವಟ್ಟು ಮಾಡಿಕೊಂಡ್ರಾ ರಿಷಬ್ ಶೆಟ್ಟಿ!

ಉಷಾ ಚಿಲುಕುರಿ ಭಾರತದ ರಾಜ್ಯವಾದ ಆಂಧ್ರಪ್ರದೇಶ ಮೂಲದವರು. ಉಷಾ ಹಿಂದೂ ಆಗಿದ್ದರೆ, ವ್ಯಾನ್ಸ್ ರೋಮನ್ ಕ್ಯಾಥೋಲಿಕ್. ಆಂಧ್ರದ ಅಳಿಯ ಈಗ ದೊಡ್ಡಣ್ಣನ ಉಪಾಧ್ಯಕ್ಷ. ಹೀಗಾಗಿ ಉಷಾ ಚಿಲುಕುರಿ ಹೆಸರೂ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.

ಉಷಾ  ಎಲ್ಲಿಯವರು?

ರಿಪಬ್ಲಿಕನ್ ಪಕ್ಷದ ಉಪಾಧ್ಯಕ್ಷ ಅಭ್ಯರ್ಥಿ ಜೆಡಿ ವ್ಯಾನ್ಸ್ ಅವರ ಪತ್ನಿ ಉಷಾ ಚಿಲುಕುರಿ ಭಾರತೀಯ ಮೂಲದವರು. ಅವರು ಸ್ಯಾನ್ ಫ್ರಾನ್ಸಿಸ್ಕೋದ ಹಿರಿಯ ವಕೀಲೆ. ಉಷಾ ಅವರ ಪೋಷಕರು ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಪಮಾರು ಗ್ರಾಮದ ನಿವಾಸಿಗಳು. ಅಪ್ಪ ಚಿಲುಕುರಿ ರಾಧಾಕೃಷ್ಣ ಮತ್ತು ತಾಯಿ ಲಕ್ಷ್ಮೀ. 1980ರಲ್ಲಿ ಅವರು ಅಮೆರಿಕಕ್ಕೆ ತೆರಳಿದರು. ಉಷಾ ಹುಟ್ಟಿದ್ದು ಕ್ಯಾಲಿಫೋರ್ನಿಯಾದಲ್ಲಿ. ಅಂದ್ಹಾಗೆ ಉಷಾ ತಂದೆ ಇಂಜಿನಿಯರ್, ತಾಯಿ ಜೀವ ವಿಜ್ಞಾನಿ.

ಉಷಾ ಅವರು ಯೇಲ್ ವಿಶ್ವವಿದ್ಯಾಲಯದಿಂದ ಇತಿಹಾಸವನ್ನು ಅಧ್ಯಯನ ಮಾಡಿದರು. ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಿಂದ ಆಧುನಿಕ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಯೇಲ್ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿದ್ದಾಗ, ಅವರು ಜೆಡಿ ವ್ಯಾನ್ಸ್ ಅವರನ್ನು ಭೇಟಿಯಾದರು. ಉಷಾ ಮತ್ತು ವ್ಯಾನ್ಸ್ ಕೆಂಟುಕಿಯಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ವಿವಾಹವಾದರು.

Continue Reading

LATEST NEWS

Trending

Exit mobile version