Monday, January 24, 2022

ಪಾದಯಾತ್ರೆ ಬೆಂಗಳೂರು ಪ್ರವೇಶಿಸದಂತೆ ನೋಡಿಕೊಳ್ಳಿ: ಸಿಎಂಗೆ ಸಚಿವರ ಒತ್ತಡ

ಬೆಂಗಳೂರು: ಮೇಕೆದಾಟು ಪಾದಯಾತ್ರೆ ನಾಲ್ಕನೇ ದಿನಕ್ಕೆ ಮುಗಿಸಿದೆ. ಕೆಲವೇ ದಿನಗಳಲ್ಲಿ ಬೆಂಗಳೂರು ಪ್ರವೇಶಿಸಲಿದೆ. ಆದರೆ ಪಾದಾಯಾತ್ರೆ ಬೆಂಗಳೂರು ಪ್ರವೇಶಕ್ಕೆ ಅನುಮತಿ ನೀಡದಂತೆ ಸಿಎಂಗೆ ಸಚಿವರಿಂದ ಒತ್ತಡ ಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಶಾಸಕರು ಕರೆ ಮಾಡಿ ಸಿಎಂಗೆ ಒತ್ತಡ ಹಾಕಿದ್ದಾರೆ ಎಂದು ಹೇಳಲಾಗಿದೆ.ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಬೆಂಗಳೂರು ಪ್ರವೇಶ ಮಾಡಿದರೆ ಅದನ್ನು ನೀವು ರಾಜಕೀಯವಾಗಿ ಎದುರಿಸಬೇಕು.

ಅದಕ್ಕೆ ನೀವು ಸಿದ್ಧರಾಗಿ ಎಂದು ಬೆಂಗಳೂರಿನ ಸಚಿವರಿಗೆ ಸಿಎಂ ಕಿವಿಮಾತು ಹೇಳಿದ್ದಾರೆ ಎಂಬ ಬಗ್ಗೆಯೂ ತಿಳಿದುಬಂದಿದೆ.

Hot Topics

‘ಸುಳ್ಳುಗಳ ಮೂಲಕ ನಾರಾಯಣಗುರುವಿಗೆ ಮಾಡಿದ ಅಪಚಾರವನ್ನು ಮುಚ್ಚಿಟ್ಟುಕೊಳ್ಳಲಾಗದು’

ಮಂಗಳೂರು: ಸುಳ್ಳುಗಳ ಮೂಲಕ ಸಾಮಾಜಿಕ ಸುಧಾರಣೆಯ ಹರಿಕಾರ  ನಾರಾಯಣ ಗುರು ಅವರಿಗೆ ಮಾಡಿದ ಅಪಚಾರವನ್ನು ಬಿಜೆಪಿ ಮುಚ್ಚಿಟ್ಟುಕೊಳ್ಳಲಾಗದು ಎಂದು ಸಿಪಿಐಎಂ ಹೇಳಿದೆ.ಕೇರಳ ರಾಜ್ಯ ಸರಕಾರ ಸೂಚಿಸಿದ ನಾರಾಯಣಗುರು ಇರುವ ಸ್ಥಬ್ದ ಚಿತ್ರವನ್ನು ಪರಿಗಣಿಸದೇ...

ಮುಡಿಪು: ದ್ವಿಚಕ್ರ ವಾಹನಕ್ಕೆ ಒಂದೇ ತಿಂಗಳಲ್ಲಿ ಬರೋಬ್ಬರಿ 9 ಸಾವಿರ ಟ್ರಾಫಿಕ್ ಫೈನ್-ಬೆಚ್ಚಿಬಿದ್ದ ಮಾಲಕಿ

ಮುಡಿಪು: ಮೆಡಿಕಲ್ ಸ್ಟೋರ್ ಒಂದರ ಎದುರುಗಡೆ ನಿಲ್ಲಿಸಿದ್ದ ಒಂದೇ ದ್ವಿಚಕ್ರ ವಾಹನಕ್ಕೆ ಪೊಲೀಸರು ಒಂದೇ ತಿಂಗಳಲ್ಲಿ ಒಂಭತ್ತು ಸಾವಿರ ದಂಡ ವಿಧಿಸಿರುವ ಘಟನೆ ಮುಡಿಪು ಜಂಕ್ಷನ್‌ನಲ್ಲಿ‌ ನಡೆದಿದೆ.ಗಣೇಶ್ ಕಾಂಪ್ಲೆಕ್ಸ್‌ನಲ್ಲಿರುವ ಸಂಜೀವಿನಿ ಆಯುರ್ವೇದ ಮಡಿಕಲ್...

ಕವಿ ಮುದ್ದಣ ಜನ್ಮದಿನಾಚರಣೆ ಪ್ರಯುಕ್ತ 150 ರೂ. ನಾಣ್ಯ ಬಿಡುಗಡೆಗೊಳಿಸಿದ ಸಂಸದ ನಳಿನ್‌

ಮಂಗಳೂರು: ಹೊಸಗನ್ನಡದ ಮುಂಗೋಳಿ ಎಂದು ಪ್ರಖ್ಯಾತರಾಗಿದ್ದ ಕವಿ ಮುದ್ದಣ ಅವರ 150ನೇ ಜನ್ಮ ವರ್ಷಾಚರಣೆಯ ಪ್ರಯುಕ್ತ 150 ರೂ. ಹೊಸ ನಾಣ್ಯವನ್ನು ಇಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಅನಾವರಣ.ಬಳಿಕ...