ಪುತ್ತೂರು: ಕೂಲಿ ಕೆಲಸ ಮಾಡುವ ಮನೆಯಲ್ಲಿ ಕೋಳಿ ಮಾಂಸದೂಟ ಸೇವಿಸಿ ಓರ್ವ ಸಾವನ್ನಪ್ಪಿ ಹಲವು ಮಂದಿ ಅಸ್ವಸ್ಥರಾದ ಘಟನೆ ಕಡಬದ ಗಾಣದಕೊಟ್ಟಿಗೆ ಎಂಬಲ್ಲಿ ಶುಕ್ರವಾರ ನಡೆದಿದೆ.
ಗಾಣದಕೊಟ್ಟಿಗೆ ನಿವಾಸಿ ದೇವಪ್ಪ ಗೌಡ(60) ಮೃತಪಟ್ಟ ವ್ಯಕ್ತಿ. ದೇವಪ್ಪ ಗೌಡ ಕೂಲಿ ಕೆಲಸ ಮಾಡಲು ಇತರ ಸದಸ್ಯರೊಂದಿಗೆ ಬಲ್ಯದ ದೇವಾಡಿಗ ಎಂಬವರು ಮನೆಗೆ ಹೋಗಿದ್ದರು.
ಅಲ್ಲಿ ಮಧ್ಯಾಹ್ನ ಊಟಕ್ಕೆ ಮಾಡಲಾಗಿದ್ದ ಕೋಳಿ ಪದಾರ್ಥ ಸೇವಿಸಿದ್ದರು. ಮತ್ತೆ ಸಂಜೆಯವರೆಗೆ ಅಲ್ಲೆ ಕೆಲಸ ಮಾಡಿದ್ದ ದೇವಪ್ಪರಿಗೆ ಕೆಲಸ ಮುಗಿಸಿ ಮನೆಗೆ ಬಂದ ಬಳಿಕ ವಾಂತಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿದೆ .
ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ.
ಸಂಜೀವ ದೇವಾಡಿಗರ ಮನೆಯಲ್ಲಿ ಊಟಮಾಡಿದ ಆನಂದ ಗೌಡ, ಸಂಜೀವ ದೇವಾಡಿಗರ ಪತ್ನಿ, ಮಕ್ಕಳು ವಾಂತಿ ಮತ್ತು ಹೊಟ್ಟೆ ನೋವಿನ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಮೃತರ ಪುತ್ರಿ ನೀಡಿದ ದೂರಿನ ಆಧಾರದ ಮೇಲೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.