Connect with us

DAKSHINA KANNADA

ಕಡಬ: ತನ್ನದೇ ನಿರ್ಮಾಣ ಹಂತದ ಮನೆಯಿಂದ ಬಿದ್ದ ವ್ಯಕ್ತಿ ಸಾವು

Published

on

ಕಡಬ: ತನ್ನದೇ ನಿರ್ಮಾಣ ಹಂತದ ಮನೆಯ ಕಟ್ಟಡದ ಮೇಲಿನಿಂದ ಬಿದ್ದು, ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನೆಲ್ಯಾಡಿ ಗ್ರಾಮದ ಪಡುಬೆಟ್ಟು ಎಂಬಲ್ಲಿ ನಡೆದಿದೆ.


ನೆಲ್ಯಾಡಿ ಗ್ರಾಮದ ಪಡುಬೆಟ್ಟು ತೊಟ್ಟಿಲಗುಂಡಿ ನಿವಾಸಿ, ಕೃಷಿಕ ಸಿಲ್ವೆಸ್ಟರ್ ಡಿ.ಸೋಜ(51) ಮೃತಪಟ್ಟ ದುರ್ದೈವಿ.

ಸಿಲ್ವೆಸ್ಟರ್‌ರವರ ನೂತನ ಮನೆ ನಿರ್ಮಾಣ ಕೆಲಸ ನಡೆಯುತ್ತಿದ್ದು ಗೋಡೆಯ ಹಂತದ ತನಕ ಕಾಮಗಾರಿ ಪೂರ್ಣಗೊಂಡಿತ್ತು.

ಮಾ.6ರಂದು ಸಂಜೆ ವೇಳೆಗೆ ಸಿಲ್ವೆಸ್ಟರ್‌ರವರು ಗೋಡೆಯ ಮೇಲೆ ಹತ್ತಿದವರು ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದರು.

ತಕ್ಷಣ ಅವರನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಉಜಿರೆಯ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು.

ತಲೆಗೆ ಗಂಭೀರ ಗಾಯಗೊಂಡಿದ್ದ ಸಿಲ್ವೆಸ್ಟರ್‌ರವರು ಚಿಕಿತ್ಸೆಗೆ ಸ್ಪಂದಿಸದೆ ಮಾ.9ರಂದು ಸಂಜೆ ವೇಳೆ ಮೃತಪಟ್ಟಿದ್ದಾರೆ.

40 ದಿನದ ಅಂತರದಲ್ಲಿನ ಒಂದೇ ಕುಟುಂಬದಲ್ಲಿ ಮೂವರ ಸಾವು
ತೊಟ್ಟಿಲಗುಂಡಿ ನಿವಾಸಿ ದಿ. ಅಂತೋನಿ ಡಿ.ಸೋಜ ಹಾಗೂ ದಿ.ರೆಖೆಲಾ ದಂಪತಿಗೆ ಸಿಲ್ವೆಸ್ಟರ್ ಸೇರಿ 7 ಮಕ್ಕಳು.

ಸಿಲ್ವೆಸ್ಟರ್ ಸಹೋದರಿ ಬೆಳ್ತಂಗಡಿ ಸವಣಾಲು ನಿವಾಸಿಯಾಗಿದ್ದ ತೆರೆಸಾ ಡಿ.ಸೋಜರವರು ಜ.29ರಂದು ಹೃದಯಾಘಾತದಿಂದ ನಿಧನರಾಗಿದ್ದರು.

ಇದಾದ ಬಳಿಕ ಅನಾರೋಗ್ಯದಿಂದ ಬಳಲುತ್ತಿದ್ದ ಸಹೋದರ ಸೈಮನ್ ಡಿ.ಸೋಜರವರು ಫೆ.26ರಂದು ಮನೆಯಲ್ಲಿಯೇ ನಿಧನರಾಗಿದ್ದರು.

ಇದೀಗ ಸಿಲ್ವೆಸ್ಟರ್‌ರವರು ಆಕಸ್ಮಿಕವಾಗಿ ಮೃತಪಟ್ಟಿದ್ದು ಅವರ ಕುಟುಂಬಕ್ಕೆ 3ನೇ ಆಘಾತವಾಗಿದೆ.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending