Monday, January 24, 2022

ಸ್ನೇಹಿತನನ್ನೇ ಕೊಲೆಗೈದು ಚಾರ್ಮಾಡಿ ಘಾಟ್​​​ನಲ್ಲಿ ಹೂತಿಟ್ಟ…!

ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟ್​​​ನಲ್ಲಿ 5 ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ನಿನ್ನೆ ಪತ್ತೆಯಾಗಿದ್ದಾನೆ.


ನಾಪತ್ತೆಯಾಗಿದ್ದ ನಾಗೇಶ್ ಆಚಾರ್ (46) ಅವರನ್ನು ಕೊಲೆ ಮಾಡಿ, ಮಣ್ಣಿನಡಿ ಹೂತಿಡಲಾಗಿತ್ತು. 5 ದಿನಗಳ ಹಿಂದೆ ನಾಗೇಶ್‌ರನ್ನು ಜೀಪ್‌ನಲ್ಲಿ ಕರೆದುಕೊಂಡು ಹೋಗಿದ್ದ ಕೃಷ್ಣೇಗೌಡ ಎಂಬಾತನೇ ಕೊಲೆ ಮಾಡಿ,

ಮಣ್ಣಿನಡಿ ಹೂತಿಟ್ಟು ಪೊಲೀಸರು, ಸ್ಥಳೀಯರ ಜೊತೆ ಸೇರಿಕೊಂಡು ಹುಡುಕಾಟದ ನಾಟಕವಾಡಿದ್ದಾನೆ ಎಂದು ತಿಳಿದುಬಂದಿದೆ.


ಬಾಳೂರು ಗ್ರಾಮದ ನಾಗೇಶ್ ಆಚಾರ್ (46) ಮೃತ ದುರ್ದೈವಿಯಾಗಿದ್ದು, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಿದಿರುತಳ ಬಳಿ ಘಟನೆ ನಡೆದಿದೆ.

ಪ್ರಕರಣ ಸಂಬಂಧ ಕೃಷ್ಣೇಗೌಡ, ಉದಯ್, ಪ್ರದೀಪ್ ಎಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಿದಿರುತಳ ಗ್ರಾಮದ ಚಾರ್ಮಾಡಿ ಘಾಟ್ ಅರಣ್ಯಕ್ಕೆ ಹೋಗಿದ್ದ ಬಾಳೂರು ಗ್ರಾಮದ ನಾಗೇಶ್ ಆಚಾರ್ (46) ಕಣ್ಮರೆಯಾಗಿದ್ದರು.

ಐದು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ನಾಗೇಶ್‌ಗಾಗಿ ಚಾರ್ಮಾಡಿ ಘಾಟ್‌ನಲ್ಲಿ ಸ್ಥಳೀಯರಿಂದ ಹುಡುಕಾಟ ನಡೆದಿತ್ತು.


ನಾಗೇಶ್ ಆಚಾರ್ ಕಾಣೆಯಾಗಿದ ಹಿನ್ನೆಲೆಯಲ್ಲಿ ಅವರ ಪತ್ನಿ ಸುಮಾ, ಬಾಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪೊಲೀಸರು ಹಾಗೂ ಸಾರ್ವಜನಿಕರು ಚಾರ್ಮಾಡಿ ಅರಣ್ಯದ ಸುತ್ತಮುತ್ತ ಹುಡುಕಾಟ ನಡೆಸುತ್ತಿರುವ ವೇಳೆ ವೇಳೆ ಮಂಗಳವಾರ ರಾತ್ರಿ ಅವರ ಮೃತದೇಹ ಚಾರ್ಮಾಡಿ ಅರಣ್ಯದಲ್ಲಿ ಪತ್ತೆಯಾಗಿದೆ.

ಕಾಣೆಯಾಗಿದ್ದ ವ್ಯಕ್ತಿಯ ಮೇಲೆ ಗಂಭೀರ ಗಾಯಗಳಾಗಿದ್ದು, ಆತನನ್ನು ಟಾರ್ಪಾಲಿನಲ್ಲಿ ಸುತ್ತಿ, ಗುಂಡಿ ತೆಗೆದು ಹೂಳಲಾಗಿತ್ತು.

Hot Topics

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ ಕಾರ್ಯಕ್ರಮ ಸುರತ್ಕಲ್ ಗೋವಿಂದದಾದ ಕಾಲೇಜಿನಲ್ಲಿ ಜರಗಿತು‌. ಅಕಾಡಮಿಯ ಅಧ್ಯಕ್ಷ ಡಾ. ಜಿ.ಎಲ್.ಹೆಗಡೆ ಅಧ್ಯಕ್ಷತೆ ವಹಿಸಿದ್ದರು.ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ,ಶಾಸಕ ಡಾ.ವೈ.ಭರತ್...

ನೇತಾಜಿ ಸುಭಾಸ್ ಚಂದ್ರ ಬೋಸ್ ಜನ್ಮ ದಿನದ ಪ್ರಯುಕ್ತ ರಕ್ತದಾನ ಶಿಬಿರ

ಮಂಗಳೂರು: ಸ್ವಾತಂತ್ರ ಸೇನಾನಿ ನೇತಾಜಿ ಸುಭಾಸ್ ಚಂದ್ರ ಬೋಸ್ 125 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಸೇವಾಂಜಲಿ ಚ್ಯಾರಿಟೇಬಲ್ ಟ್ರಸ್ಟ್ ಮತ್ತು ಬಿರುವೆರ್ ಕುಡ್ಲ(ರಿ) ನೇತೃತ್ವದಲ್ಲಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ...

ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 1ಕೆ.ಜಿ, 300ಗ್ರಾಂ ಚಿನ್ನ ವಶಕ್ಕೆ

ದೇವನಹಳ್ಳಿ: ದುಬೈನಿಂದ ಬೆಂಗಳೂರಿಗೆ ಬಂದಿಳಿದ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ನಗರದ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಮುಂಬೈಗೆ ಬಂದು ನಂತರ ಮುಂಬೈನಿಂದ ಬೆಂಗಳೂರಿಗೆ...