Thursday, December 2, 2021

ಕಚ್ಚಿದ ಹಾವನ್ನು ಬ್ಯಾಗಲ್ಲಿ ಹಾಕಿ ಆಸ್ಪತ್ರೆಗೆ ಬಂದ ಭೂಪ

ಭಟ್ಕಳ: ರೈಲ್ವೆ ನಿಲ್ದಾಣದಲ್ಲಿ ಇದ್ದ ಹೆಬ್ಬಾವು ರಕ್ಷಿಸುವ ವೇಳೆ ವ್ಯಕ್ತಿಯೊಬ್ಬರಿಗೆ ಕಚ್ಚಿದ ಹಾವನ್ನು ಬ್ಯಾಗಿನಲ್ಲಿ ಹಾಕಿ ಆಸ್ಪತ್ರೆಗೆ ಕರೆದೊಯ್ದ ಘಟನೆ ನಿನ್ನೆ ರಾತ್ರಿ ಭಟ್ಕಳದಲ್ಲಿ ನಡೆದಿದೆ.

ಕೆಲ ದಿನಗಳಿಂದ ಮಳೆ ಸುರಿಯುತ್ತಿದ್ದು, ಹೆಬ್ಬಾವೊಂದು ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಇರುವ ಮನೆಯ ಪಕ್ಕದಲ್ಲಿ ಇತ್ತು.

ರಸ್ತೆಯಲ್ಲಿ ಮತ್ಯಾರಿಗಾದರೂ ಕಚ್ಚಿದರೆ ಅಪಾಯವಾಗುತ್ತದೆ ಎಂದು ತಿಳಿದ ಸೀತಾರಾಮ ನಾಯ್ಕ ತನ್ನ ಕೆಲವು ಸ್ನೇಹಿತರ ಸಹಾಯದಿಂದ ಹಾವನ್ನು ಸೆರೆಹಿಡಿಯಲು ಪ್ರಯತ್ನಿಸಿದ್ದಾರೆ.
ಈ ವೇಳೆ ಅವರಿಗೆ ಹಾವು ಕಚ್ಚಿದೆ. ಹೆಬ್ಬಾವಿನಿಂದ ಕಚ್ಚಿಸಿಕೊಂಡ ಇವರು ವಿಚಲಿತಗೊಳ್ಳದೆ ಹಾವನ್ನು ಹೊತ್ತುಕೊಂಡೇ ಆಸ್ಪತ್ರೆಗೆ ದಾಖಲಾಗಿರುವ ಆಶ್ಚರ್ಯಕರ ಘಟನೆಯೊಂದು ಸೋಮವಾರ ರಾತ್ರಿ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ತಮ್ಮ ಸ್ನೇಹಿತರ ಸಹಾಯದೊಂದಿಗೆ ಆರೇಳು ಅಡಿ ಉದ್ದದ ಹೆಬ್ಬಾವನ್ನು ಹಿಡಿದುಕೊಂಡೇ ಚಿಕಿತ್ಸೆ ಬಂದು ಆಸ್ಪತ್ರೆ ದಾಖಲಾಗಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...