Tuesday, August 16, 2022

ಮದುವೆಯಾಗುತ್ತೇನೆಂದು ಲೈಂಗಿಕವಾಗಿ ಬಳಸಿ 3 ಬಾರಿ ಅಬಾರ್ಷನ್ ಮಾಡಿಸಿದ ಯುವಕನ ವಿರುದ್ಧ ಪೊಲೀಸ್‌ ಠಾಣೆ ಮೆಟ್ಟಲೇರಿದ ಯುವತಿ

ರೋಹ್ಟಾಸ್: ಸುಮಾರು 8 ವರ್ಷಗಳ ಕಾಲ ಪ್ರೀತಿ ಮಾಡಿ ಯುವತಿಯನ್ನು ನಂಬಿಸಿ, ಲೈಂಗಿಕವಾಗಿ ಬಳಸಿಕೊಂಡು ಮದುವೆಯಾಗಲು ನಿರಾಕರಿಸಿದ ಯುವಕನ ವಿರುದ್ಧ ಸಂತ್ರಸ್ತೆ ಮಹಿಳಾ ಪೊಲೀಸ್ ಠಾಣೆಯ ಮೊರೆಹೋಗಿದ್ದಾಳೆ. ಉತ್ತರಪ್ರದೇಶದ ದಾಲ್ಮಿಯಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ತನ್ನ ಮತ್ತು ದೆಹಲಿಯ ನಿವಾಸಿ ರವಿಕುಮಾರ್ ಎಂಬಾತನ ನಡುವೆ ಸುಮಾರು 8 ವರ್ಷಗಳಿಂದ ಪ್ರೇಮ ಸಂಬಂಧವಿದೆ. ಇಬ್ಬರೂ ಆಗಾಗ ಭೇಟಿಯಾಗುತ್ತಿದ್ದೆವು.

ಆಗಾಗ ರವಿಕುಮಾರ್ ನನ್ನನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದನು ಎಂದು ಭೋಜ್‌ಪುರ್ ಜಿಲ್ಲೆಯ ಸಂತ್ರಸ್ತ ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

ಮದುವೆಯ ವಿಚಾರವನ್ನು ಯುವತಿ ಪ್ರಸ್ತಾಪಿಸುತ್ತಿದ್ದರೂ, ಆತ ನೆಪ ಹೇಳುತ್ತಿದ್ದ.
ಈ ಮಧ್ಯೆ ಆಕೆ ಮೂರು ಬಾರಿ ಗರ್ಭಿಣಿಯಾಗಿದ್ದಳು.

ಆದರೆ ರವಿಕುಮಾರ್​ ಅಬಾರ್ಷನ್ ಮಾಡಿಸಿದ್ದನು.

ಕೆಲವು ದಿನಗಳ ನಂತರ ಮದುವೆ ವಿಚಾರ ಪ್ರಸ್ತಾಪಿಸಿದಾಗ ಆರೋಪಿ ಮದುವೆಯಾಗಲು ನಿರಾಕರಿಸಿದನು. ರವಿಕುಮಾರ್ ಮದುವೆಯಾಗಲು ನಿರಾಕರಿಸಿದ ನಂತರ, ಇದನ್ನು ಕೇಳಲು ಯುವತಿ ತಯಾರಿರಲಿಲ್ಲ. ನೇರವಾಗಿ ರವಿಕುಮಾರ್ ಮನೆಗೆ ತೆರಳಿ, ಆತನ ಕುಟುಂಬಸ್ಥರಿಗೆ ಈ ವಿಚಾರ ತಿಳಿಸಿದ್ದಳು.

ಆದರೆ ರವಿ ಕುಟುಂಬಸ್ಥರು ಯುವತಿ ಮಾತನ್ನು ಕೇಳಲು ಸಿದ್ಧರಿರಲಿಲ್ಲ. ಯುವತಿಯ ಮೇಲೆ ಹಲ್ಲೆ ನಡೆಸಿದ್ದಾರೆ.

ಈಗ ಯುವತಿ ರೋಹ್ಟಾಸ್ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ರವಿಕುಮಾರ್​ ಕುಟುಂಬಸ್ಥರಿಂದ ಪ್ರಾಣ ಬೆದರಿಕೆ ಇದೆ ಎಂದೂ ಆರೋಪಿಸಿದ್ದಾಳೆ.

ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಸಂತ್ರಸ್ತೆಯ ಹೇಳಿಕೆಯ ಆಧಾರದ ಮೇಲೆ ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆ ಕೆಂಪು ಕೋಟೆಯಲ್ಲಿ ಹಾರಾಡಿದ ತಿರಂಗಾ

ನವದೆಹಲಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಧ್ವಜಾರೋಹಣ ಮಾಡಿದರು. ಪ್ರಧಾನಿಯಾದ ಬಳಿಕ ಅವರು ಇಂದು 9ನೆ ಬಾರಿ ರಾಷ್ಟ್ರಧ್ವಜಾರೋಹಣ ಮಾಡಿದರು.ಬಳಿಕ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ...

ಮಂಗಳೂರು: ಗುರುಪುರದ ಅಡ್ಡೂರು ಜಂಕ್ಷನ್‌ನಲ್ಲಿ ಸ್ವಾತಂತ್ರ್ಯ ಸಂಭ್ರಮ

ಮಂಗಳೂರು: 75ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮಂಗಳೂರು ನಗರ ಹೊರವಲಯದ ಗುರುಪುರದ ಅಡ್ಡೂರು ಜಂಕ್ಷನ್‌ನಲ್ಲಿ ಫ್ರೆಂಡ್ಸ್ ಕ್ಲಬ್ ಅಡ್ಡೂರು ಇದರ ವತಿಯಿಂದ ಧ್ವಜಾರೋಹಣ ನಡೆಯಿತು.ಮೊದಲಿಗೆ ಅಡ್ಡೂರು ಜಂಕ್ಷನ್‌ನಲ್ಲಿ ನಿರ್ಮಿಸಲಾಗಿರುವ ನೂತನ ಧ್ವಜಸ್ತoಭವನ್ನು ನಿಕಟಪೂರ್ವ...

ಬೆಳ್ತಂಗಡಿ: ಮರೋಡಿಯಲ್ಲಿ ಆಟಿಡೊಂಜಿ ಕೆಸರ್‍ದ ಕೂಟ ಸಂಭ್ರಮ

ವೇಣೂರು: ಮರೋಡಿ ಅರುಣೋದಯ ಯುವಕ ಮಂಡಲದ ಆಶ್ರಯದಲ್ಲಿ ಆಟಿಡೊಂಜಿ ಕೆಸರ್‍ದ ಕೂಟ ಕಾರ್ಯಕ್ರಮವು ಮರೋಡಿಯ ಬೊವೂರಿ ಜಯ ಪೂಜಾರಿಯವರ ಗದ್ದೆಯಲ್ಲಿ ಭಾನುವಾರ ನಡೆಯಿತು.ಶಾಸಕ ಹರೀಶ್ ಪೂಂಜ ಕ್ರೀಡಾಕೂಟವನ್ನು ಉದ್ಘಾಟಿಸಿ, ನಮ್ಮ ಮಣ್ಣಿನ ಕ್ರೀಡೆಯನ್ನು...