Home ಪ್ರಮುಖ ಸುದ್ದಿ ವಿದ್ಯುತ್ ದರ ಏರಿಕೆ ಪ್ರಸ್ತಾವ: ಮೆಸ್ಕಾಂ ನಡೆಗೆ ತೀವ್ರ ವಿರೋಧ

ವಿದ್ಯುತ್ ದರ ಏರಿಕೆ ಪ್ರಸ್ತಾವ: ಮೆಸ್ಕಾಂ ನಡೆಗೆ ತೀವ್ರ ವಿರೋಧ

ವಿದ್ಯುತ್ ದರ ಏರಿಕೆ ಪ್ರಸ್ತಾವ: ಮೆಸ್ಕಾಂ ನಡೆಗೆ ತೀವ್ರ ವಿರೋಧ

ಮಂಗಳೂರು: ಮೆಸ್ಕಾಂ ಎದುರಿಸುತ್ತಿರುವ ಆದಾಯ ಕೊರತೆ ಹಿನ್ನೆಲೆ ವಿದ್ಯುತ್ ದರ ಏರಿಕೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ನೀಡಿರುವ ಪ್ರಸ್ತಾವನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿದ್ಯುತ್ ನಿಯಂತ್ರಣ ಆಯೋಗದ ನೇತೃತ್ವದಲ್ಲಿ ನಡೆದ ಸಾರ್ವಜನಿಕ ವಿಚಾರಣೆ ಸಭೆಯಲ್ಲಿ, ಪ್ರತಿ ಯೂನಿಟ್ ವಿದ್ಯುತ್ ಬಳಕೆಗೆ 62 ಪೈಸೆ ಏರಿಕೆ ಮಾಡುವ ಪ್ರಸ್ತಾವಕ್ಕೆ ಹಲವು ಮುಖಂಡರು ಭಾಗಿಯಾಗಿ ತಮ್ಮ ವಿರೋಧ ವ್ಯಕ್ತಪಡಿಸಿದರು.

ಕೆಲವೆಡೆ ಅನಗತ್ಯ ವಿದ್ಯುತ್ ಸೋರಿಕೆಯಾಗುತ್ತಿದ್ದು ಅದನ್ನು ತಡೆಗಟ್ಟುವಲ್ಲಿ ಮೆಸ್ಕಾಂ ವಿಫಲವಾಗಿದೆ. ಅಲ್ಲದೇ ವಿದ್ಯುತ್ ದುರುಪಯೋಗ ಹಾಗೂ ಬಾಕಿ ವಸೂಲಾತಿಯಲ್ಲಿ ಮೆಸ್ಕಾಂ ಹಿಂದೆ ಬಿದ್ದಿರೋದೆ ಆದಾಯ ಕೊರತೆಗೆ ಕಾರಣ ಅಂತಾ ಕೆಲವು ಮುಖಂಡರು ತಮ್ಮ ವಾದ ಮುಂದಿಟ್ಟರು. ಇನ್ನು ಐಸ್ ಪ್ಲಾಂಟ್, ಕೆನರಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆಯ ಪ್ರಮುಖರು ಕಡಿಮೆ ದರದಲ್ಲಿ ವಿದ್ಯುತ್ ಕಲ್ಪಿಸುವಂತೆ ಮನವಿ ಮಾಡಿಕೊಂಡರು.

ಸಭೆಯಲ್ಲಿ ರೈತ ಮುಖಂಡರು, ಕೈಗಾರಿಕಾ ಕ್ಷೇತ್ರದ ಪ್ರಮುಖರು ಹಾಗೂ ಸಾರ್ವಜನಿಕರು ದರ ಏರಿಕೆ ಪ್ರಸ್ತಾವಕ್ಕೆ ತೀವ್ರ ವಿರೋಧವನ್ನ ವ್ಯಕ್ತಪಡಿಸಿದರು. ಅಭಿಪ್ರಾಯಗಳನ್ನೆಲ್ಲಾ ಆಲಿಸಿದ ವಿದ್ಯುತ್ ನಿಯಂತ್ರಣ ಆಯೋಗದ ಅಧ್ಯಕ್ಷ ಶಂಭು ದಯಾಳ್ ಮೀನಾ ಈ ಕುತು ಪರಿಶೀಲಿಸಿ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದರು.

ವಿಡಿಯೋಗಾಗಿ

RECENT NEWS

ಎಂ ಆರ್‌ ಪಿ ಎಲ್ ಸಿಐಎಸ್‌ಎಫ್ ಅಧಿಕಾರಿ ಕೊರೊನಾಕ್ಕೆ ಬಲಿ..!

ಎಂ ಆರ್‌ ಪಿ ಎಲ್ ಸಿಐಎಸ್‌ಎಫ್ ಅಧಿಕಾರಿ ಕೊರೊನಾಕ್ಕೆ ಬಲಿ..! ಮಂಗಳೂರು : ಇದೇ ಮೊದಲ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಭದ್ರತಾ ಅಧಿಕಾರಿ ಸಾವನ್ನಪ್ಪಿದ್ದಾರೆ. ಮಂಗಳೂರಿನ ಎಂ ಆರ್‌ ಪಿ ಎಲ್‌...

ದಕ್ಷಿಣ ಕನ್ನಡದಲ್ಲಿ ಕೊರೊನಾ ಮರಣಮೃದಂಗ : ಇಂದು ಮತ್ತೆ ಎಂಟು ಬಲಿ ಪಡೆದ ಕೊರೊನಾ..!

ದಕ್ಷಿಣ ಕನ್ನಡದಲ್ಲಿ ಕೊರೊನಾ ಮರಣಮೃದಂಗ : ಇಂದು ಮತ್ತೆ ಎಂಟು ಬಲಿ ಪಡೆದ ಕೊರೊನಾ..! ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಬಾರಿಸುತ್ತಲೇ ಇದೆ. ಬೆಂಗ್ಳೂರು ಬಳಿಕ ಕರಾವಳಿ ನಗರಿ, ಮಂಗಳೂರು...

ಕೊರೊನಾ ಸಮುದಾಯಕ್ಕೆ ಹರಡಿರುವುದು ಸತ್ಯ : ಶಾಸಕ ಯು.ಟಿ. ಖಾದರ್..!

ಕೊರೊನಾ ಸಮುದಾಯಕ್ಕೆ ಹರಡಿರುವುದು ಸತ್ಯ : ಶಾಸಕ ಯು.ಟಿ. ಖಾದರ್..! ಮಂಗಳೂರು : ರಾಜ್ಯದಲ್ಲಿ ಕೊರೊನಾ ಸಮುದಾಯಕ್ಕೆ ಹರಡಿದೆ. ಆದ್ದರಿಂದ ಶೀಘ್ರದಲ್ಲೇ ರಾಂಡಮ್ ಟೆಸ್ಟ್‌ ಗೆ ಸರ್ಕಾರ ಮುಂದಾಗಬೇಕು. ಒಂದು ವೇಳೆ ರಾಂಡಂ ಟೆಸ್ಟ್‌...

ಕೊರೊನಾ ಸೊಂಕಿನ ಭೀತಿ- ಸ್ವಯಂ ಲಾಕ್‌ ಡೌನ್ ಘೋಷಿಸಿದ ಪುದು ಗ್ರಾಮ ಪಂಚಾಯತ್..!

ಕೊರೊನಾ ಸೊಂಕಿನ ಭೀತಿ- ಸ್ವಯಂ ಲಾಕ್‌ ಡೌನ್ ಘೋಷಿಸಿದ ಪುದು ಗ್ರಾಮ ಪಂಚಾಯತ್..! ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ಜನ ಸಾಮಾನ್ಯರಲ್ಲಿ ಚಳಿ ಕೂರಿಸಿದೆ. ಕಳೆದ...
error: Content is protected !!