Connect with us

    BANTWAL

    ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ; ಎಲ್ಲೆಲ್ಲಿ?

    Published

    on

    ಮಂಗಳೂರು : ರಾಜ್ಯದ ಹಲವು ಭಾಗಗಳು ಭಾರಿ ಮಳೆಯಿಂದ ಹೈರಾಣಾಗಿದ್ದವು. ಆ ಬಳಿಕ ಕೊಂಚ ವಿರಾಮ ಪಡೆದಿದ್ದ ಮಳೆ ಮತ್ತೆ ಆರ್ಭಟಿಸುವ ಲಕ್ಷಣ ಕಾಣುತ್ತಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
    ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

    ಎಲ್ಲೆಲ್ಲಿ ಮಳೆ ?

    ದಕ್ಷಿಣ ಒಳನಾಡಿನ‌ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ.

    ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಾದ್ಯಂತ ರಭಸವಾಗಿ ಗಾಳಿ ಬೀಸಲಿದೆ. ಜೊತೆಗೆ ಭಾರೀ ಮಳೆ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗಲಿದೆ.

    ಶಿವಮೊಗ್ಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ ನೀಡಿದೆ.

    BANTWAL

    ಬಂಟ್ವಾಳ: ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಕಾರು; ಮಹಿಳೆ ಮೃ*ತ್ಯು, ಚಾಲಕ ಗಂಭೀರ

    Published

    on

    ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳೆತ್ತರದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃ*ತಪಟ್ಟು, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬಿಸಿರೋಡು – ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ.

    ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ (58) ಮೃ*ತಪಟ್ಟ ಮಹಿಳೆಯಾಗಿದ್ದು. ಚಾಲಕ ರೂಪೇಶ್ (40) ಅವರಿಗ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಕಾರನ್ನು ಚಲಾಯಿಸುತ್ತಿದ್ದ ರೂಪೇಶ್ ಅವರ ಪತ್ನಿ ಸುಚಿತ್ರ (33) ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

    ಪುಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದ ಚಾವರ್ ಲೆಟ್ ಸ್ಪಾರ್ಕ್ ಕಾರು ಬೆಳಿಗ್ಗಿನ ಜಾವ ಸುಮಾರು 4.30 ಗಂಟೆಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಅಪಘಾ*ತಕ್ಕೀಡಾಗಿದೆ. ಇನ್ನು ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್. ಐ.ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಮೂಲತಃ ಮಂಗಳೂರು ಕೊಡಿಯಾಲ್ ಬೈಲು ನಿವಾಸಿಯಾದ ಪಿಡಬ್ಲೂಡಿ ಇಂಜಿನಿಯರ್ ಗೋಪಾಲ ಸಹೋದರಿ ಭಾಗೀರಥಿ ಅವರು ಅವರು ಮೃ*ತಪಟ್ಟಿದ್ದಾರೆ. ಭಾಗೀರಥಿ ಅವರ ಮಗಳು ಸುಚಿತ್ರ ಅವರ ಪತಿ ರೂಪೇಶ್ ಅವರು ತುಮಕೂರು ಜಿಲ್ಲೆಯವರಾಗಿದ್ದು, ದಸರಾ ರಜೆಯಲ್ಲಿ ಅಳಿಯ ಮಗಳ ಜೊತೆ ತುಮಕೂರಿಗೆ ಹೋಗಿ ವಾಪಾಸ್ಸು ಮಂಗಳೂರಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

    ಬಾಂಬಿಲ ತಿರುವಿನಲ್ಲಿ ಅನೇಕ ಅಪಘಾತಗಳು ಸಂಭವಿಸಿದ್ದು, ಜೀವಹಾನಿಗಳು ನಡೆದಿವೆ. ಇತ್ತೀಚೆಗೆ ಇದೊಂದು ಆ್ಯಕ್ಸಿಡೆಂಟ್ ಸ್ಪಾಟ್ ಆಗಿ ಪರಿವರ್ತನೆ ಆಗುತ್ತಿದೆ ಎಂದು ಸಾರ್ವಜನಿಕರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    Continue Reading

    BANTWAL

    ಬಂಟ್ವಾಳ: ಮಂಗಳೂರಿನಿಂದ ಪೊಳಲಿಗೆ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಚಾಲನೆ

    Published

    on

    ಬಂಟ್ವಾಳ: ಮಂಗಳೂರಿನಿಂದ ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಶುಕ್ರವಾರ ಚಾಲನೆ ನೀಡಲಾಗಿದೆ.

    ಪೊಳಲಿ ಕ್ಷೇತ್ರದ ವಠಾರದಲ್ಲಿ ಕೆಎಸ್ ಆರ್ ಟಿಸಿಗೆ ಪೂಜೆ ನೆರವೇರಿಸಿದ ಬಳಿಕ ಚಾಲನೆಗೊಂಡಿದೆ.ಶ್ರೀ ಪೊಳಲಿ ಕ್ಷೇತ್ರದಿಂದ ಬೆಂಜನಪದವು, ಕಲ್ಪನೆ ,ಕಡೇಗೋಳಿ, ಫರಂಗಿಪೇಟೆ, ಪಡೀಲಿನ ಮೂಲಕ ಮಂಗಳೂರಿಗೆ ಈ ಸರಕಾರಿ ಬಸ್ ನ ವ್ಯವಸ್ಥೆಯು ಇರಲಿದೆ.

    ಇದರಿಂದಾಗಿ ಈ ಭಾಗದ ಜನರ ಬಹುಕಾಲದ ಕನಸು ನನಸಾಗಿದೆ.ಹಲವು ವರ್ಷದಿಂದ ಈ ರೂಟಿನಲ್ಲಿ ಮಂಗಳೂರಿನಿಂದ ಪೊಳಲಿಗೆ ಸರಕಾರಿ ಬಸ್ ನ ವ್ಯವಸ್ಥೆ ಕಲ್ಪಿಸುವಂತೆ ಇಲ್ಲಿನ ನಾಗರಿಕರು‌ ಕೆಎಸ್ ಆರ್ ಟಿಸಿ ಹಾಗೂ ಜಿಲ್ಲಾಡಳಿತಕ್ಕೆ ಮನವಿ‌ ಸಲ್ಲಿಸಿತ್ತು.ಬ್ರಹ್ಮರಕೊಟ್ಲು ಯಕ್ಷಮಿತ್ರ ಸದಸ್ಯರು ಹಾಗೂ ಸ್ಥಳೀಯ ಮುಖಂಡರ ಮುತುವರ್ಜಿಯಿಂದ ನವರಾತ್ರಿಯ ಶುಭ ಸಂದರ್ಭದಲ್ಲಿಯೇ ಕೆಎಸ್ ಆರ್ ಟಿಸಿ‌ಬಸ್ ಬಸ್ ಆರಂಭಗೊಂಡಿದೆ. ನವರಾತ್ರಿಯ ಬಳಿಕವು ಈ ಬಸ್ ನ ವ್ಯವಸ್ಥೆ ಮುಂದುವರಿಯಲಿದೆ ಎಂದು ಸ್ಥಳೀಯರು‌ ತಿಳಿಸಿದ್ದಾರೆ.

    Continue Reading

    BANTWAL

    ಅಕ್ರಮ ಮರಳು ಅಡ್ಡೆಗೆ ದಾಳಿ; 20 ಬೋಟ್ ವಶಕ್ಕೆ

    Published

    on

    ಬಂಟ್ವಾಳ: ತುಂಬೆ, ಮಾರಿಪಳ್ಳ ಭಾಗದ ನೇತ್ರಾವತಿ ನದಿಯಲ್ಲಿ ದೋಣಿ ಮೂಲಕ ನಡೆಯುತ್ತಿದ್ದ ಅಕ್ರಮ ಮರಳು ಅಡ್ಡೆಗೆ ಶುಕ್ರವಾರ ದ.ಕ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಬಂಟ್ವಾಳ ಕಂದಾಯ ಇಲಾಖೆಯ ಅಧಿಕಾರಿಗಳ ತಂಡ ದ.ಕ ಜಿಲ್ಲಾಧಿಕಾಗಳ ಆದೇಶದಂತೆ 20 ಬೋಟ್‌ಗಳನ್ನು ವಶಪಡಿಸಿಕೊಂಡಿದ್ದರು. ಅಧಿಕಾರಿಗಳ ದಾಳಿಯ ವೇಳೆ ಮರಳುಗಾರಿಕೆ ನಡೆಸುತ್ತಿದ್ದ ಕಾರ್ಮಿಕರು ಪಲಾಯನಗೈದಿದ್ದಾರೆಂದು ವರದಿಯಾಗಿದೆ.


    ದೋಣಿಗಳನ್ನು 4ರಂತೆ ಜೋಡಸಿಕೊಂಡು 5 ತಂಡಗಳ ಮೂಲಕ ನದಿಯಲ್ಲೇ ಮಂಗಳೂರಿನ ಅಡ್ಯಾರ್‌ವರೆಗೆ ಸಾಗಿಸಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವಶಕ್ಕೆ ಒಪ್ಪಿಸಲಾಗಿದೆ. ಬೋಟ್‌ನಲ್ಲಿ ಯಾವುದೇ ರೀತಿಯ ಮರಳು ಪತ್ತೆಯಾಗಿಲ್ಲ. ಮರಳುಗಾರಿಕೆಲ್ಲಿ ತೊಡಗಿದ್ದವರು ಯಾರು, ಬೋಟ್‌ಗಳು ಯಾರಿಗೆ ಸಂಬಂಧಟ್ಟದ್ದು ಎಂಬುವುದರ ಕುರಿತು ಅಧಿಕಾರಿಗಳ ತನಿಖೆಯ ಬಳಿಕ ತಿಳಿದುಬರಬೇಕಷ್ಟೇ.
    ಸಾಕಷ್ಟು ಸಮಯದಿಮದ ಕೇಳಿ ಬರುತ್ತಿದ್ದ ಆರೋಪ:
    ದೋಣಿಗಳ ಸಹಾಯದಿಂದ ನದಿಯಲ್ಲಿ ಉತ್ತರ ಭಾರತದ ಕಾರ್ಮಿಕರನ್ನು ಬಳಸಿಕೊಂಡು ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂಬ ಅರೋಪ ಸಾಕಷ್ಟು ಸಮಯದಿಂದ ಕೇಳಿ ಬರುತ್ತಿದ್ದವು. ಈ ಹಿನನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ದಾಳಿ ನಡೆಸಿ ಆಕ್ರಮವನ್ನು ಮಟ್ಟ ಹಾಕುವಂತೆ ಗಣಿ ಇಲಾಖೆಗೆ ಆದೇಶವನ್ನು ನೀಡಿದ್ದರು.
    ಗಣಿ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿ, ಬಂಟ್ವಾಳ ತಹಶೀಲ್ದಾರ್ ಅರ್ಚನಾ ಡಿ. ಭಟ್, ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಹಿರಿಯ ಭೂ ವಿಜ್ಞಾನಿ ಗಿರಿಶ್ ಮೋಹನ್, ಭೂ ವಿಜ್ಞಾನಿ ಮಹಾದೇಶ್ವರ, ಬಂಟ್ವಾಳ ಕಂದಾಯ ನಿರೀಕ್ಷಕ ಜನಾರ್ಧನ್ ಜೆ., ಗ್ರಾಮಕರಣಿಕರು, ಕಂದಾಯ ಇಲಾಖೆ ಸಿಬ್ಬಂದಿ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

    Continue Reading

    LATEST NEWS

    Trending