Saturday, July 2, 2022

ಮೈಕ್ರೋಸಾಫ್ಟ್ CEO ಸತ್ಯ ನಾದೆಲ್ಲಾ ಪುತ್ರ ಝೈನ್ ನಾದೆಲ್ಲಾ ಇನ್ನಿಲ್ಲ..!

ವಾಷಿಂಗ್ಟನ್‌ : ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಲ್ಲಾ ಅವರ ಪುತ್ರ ಝೈನ್ ನಾದೆಲ್ಲಾ ನಿಧನ ಹೊಂದಿದ್ದಾರೆ. ಈ ಬಗ್ಗೆ ಮೈಕ್ರೋಸಾಫ್ಟ್ ಕಾರ್ಪೊರೇಷನ್ ಮಾಹಿತಿ ನೀಡಿದೆ.

26 ವರ್ಷದ ಝೈನ್ ನಾದೆಲ್ಲಾ ಮೆದುಳಿನ ನರಕ್ಕೆ ಸಂಬಂಧಿಸಿದ ವಿಶೇಷ ಕಾಯಿಲೆಯಿಂದ ಬಳಲುತ್ತಿದ್ದನು.

 

ಮೆದುಳಿನ ನರಕ್ಕೆ ಸಂಬಂಧಿಸಿದ ಸೆರೆಬ್ರಲ್ ಪಾಲ್ಸಿಯೊಂದಿಗೆ (cerebral palsy) ಜನಿಸಿದ್ದರು.

2014ರಲ್ಲಿ ಮೈಕ್ರೋಸಾಫ್ಟ್ ಸಿಇಒ ಆಗಿ ನೇಮಕರಾದ ಸಂದರ್ಭದಿಂದಲೂ ಸತ್ಯ ನಾದೆಲ್ಲಾ ಅವರು ಕಂಪನಿಯ ವಿಶೇಷಚೇತನರ ಬಳಕೆಗೆ ಹೆಚ್ಚು ಅನುಕೂಲಕರವಾಗುವಂತೆ ಉತ್ಪನ್ನಗಳ ವಿನ್ಯಾಸಗೊಳಿಸುವುದಕ್ಕೆ ಒತ್ತು ನೀಡಿದ್ದರು.

ವಿಶೇಷಚೇತನರಾಗಿದ್ದ ಝೈನ್‌ಗೆ ಕಳೆದ ವರ್ಷ ಸಿಯಾಟಲ್ ಚಿಲ್ಡ್ರನ್ಸ್ ಸೆಂಟರ್ ಫಾರ್ ಇಂಟಿಗ್ರೇಟಿವ್ ಬ್ರೈನ್ ರಿಸರ್ಚ್‌ನ ಭಾಗವಾಗಿ ಪೀಡಿಯಾಟ್ರಿಕ್ ನ್ಯೂರೋಸೈನ್ಸ್‌ನಲ್ಲಿ ಎಂಡೋವ್ಡ್ ಚೇರ್ ಅನ್ನು ಸ್ಥಾಪಿಸಲಾಗಿತ್ತು.

LEAVE A REPLY

Please enter your comment!
Please enter your name here

Hot Topics

ಮಳೆ ಹಾನಿ ಪರಿಶೀಲಿಸಿದ ಶಾಸಕ ಡಾ. ಭರತ್‌ ಶೆಟ್ಟಿ

ಸುರತ್ಕಲ್‌: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುರಿದ ಭಾರಿ ಮಳೆಯಿಂದ ಕೆಲವು ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಪರಿಶೀಲಿಸಲು ಶಾಸಕರಾದ ಡಾ.ಭರತ್ ಶೆಟ್ಟಿ ನಿನ್ನೆ ಪಾಲಿಕೆ ವ್ಯಾಪ್ತಿಯ ಕೆಲವು ಪ್ರದೇಶಗಳಿಗೆ ಅಧಿಕಾರಿಗಳೊಂದಿಗೆ...

ಅಗ್ನಿಪಥ್‌ ರಾಜಕೀಯ ಪ್ರೇರಿತ ಬಿಜೆಪಿ ಅಸ್ತ್ರ-ಮಾಜಿ ಶಾಸಕ ಲೋಬೋ

ಮಂಗಳೂರು: ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ನಗರ ಹಾಗು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರಕಾರದ ಅಗ್ನಿಪಥ್‌ ಯೋಜನೆ ವಿರುದ್ದ ಮಂಗಳೂರು ಮಿನಿ ವಿಧಾನ ಸೌಧದ ಮುಂಭಾಗ ಇಂದು...

ದ್ವೇಷದ ಹೇಳಿಕೆ ನೀಡುವ ಮುನ್ನ ಎಚ್ಚರಿಕೆ ಅಗತ್ಯ-ಶಾಸಕ ಖಾದರ್

ಮಂಗಳೂರು: ಪ್ರವಾದಿ ಕುರಿತಂತೆ ನೂಪುರ್ ಶರ್ಮಾ ನೀಡಿದ್ದ ಹೇಳಿಕೆಗೆ ಇದೀಗ ಸುಪ್ರೀಂ ಕೋರ್ಟ್‌ ಛೀಮಾರಿ ಹಾಕಿದೆ. ಈ ಹಿಂದೆಯೇ ಕಾಂಗ್ರೆಸ್‌ ಅವರ ಹೇಳಿಕೆ ಖಂಡಿಸಿದೆ. ಕೇವಲ ಕಾಂಗ್ರೆಸ್ ಮಾತ್ರವಲ್ಲ ಇಂತಹ ಹೇಳಿಕೆಯನ್ನು ಪ್ರತಿಯೊಬ್ಬರೂ...