Thursday, September 29, 2022

ಬಿಸಿಯೂಟ ಅಡುಗೆ ತಯಾರಕರು ಕನಿಷ್ಠ ವೇತನ ಕಾಯ್ದೆಯಡಿ ವೇತನ ಪಡೆಯಲು ಅರ್ಹರಲ್ಲ: ಹೈಕೋರ್ಟ್

ಬೆಂಗಳೂರು: ರಾಜ್ಯ ಸರ್ಕಾರ ನಡೆಸುತ್ತಿರುವ ಮಧ್ಯಾಹ್ನ ಬಿಸಿಯೂಟ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಮುಖ್ಯ ಅಡುಗೆ ತಯಾರಕರು ಮತ್ತು ಅಡುಗೆ ತಯಾರಕರು ಕನಿಷ್ಠ ವೇತನ ಕಾಯಿದೆಯಡಿ ವೇತನ ಪಡೆಯಲು ಅರ್ಹರಾಗಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.


ಬಿಸಿಯೂಟ ತಯಾರಿಸುವ ಮುಖ್ಯ ಅಡುಗೆ ತಯಾರಕರು ಮತ್ತು ಅಡುಗೆ ಸಹಾಯಕರಿಗೆ ಕನಿಷ್ಠ ವೇತನ ಕಾಯಿದೆ ಅಡಿ ಸೂಕ್ತ ವೇತನ ನಿಗದಿಪಡಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತರಾದ ಎಂ ಎಸ್ ನೌಹೇರಾ ಶೇಖ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾಯಮೂರ್ತಿ ಅನಿಲ್‌ ಬಿ ಕಟ್ಟಿ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ಕನಿಷ್ಠ ವೇತನ ಕಾಯಿದೆಯಲ್ಲಿ ಉಲ್ಲೇಖಿಸಲಾಗಿರುವ ಅಧಿಸೂಚಿತ ಉದ್ಯೋಗಗಳಿಗೆ ಮಾತ್ರ ಕಾಯಿದೆಯ ನಿಯಮಗಳು ಅನ್ವಯಿಸುತ್ತವೆ. ಬಿಸಿಯೂಟ ಯೋಜನೆಯಡಿಯ ದಿನಕ್ಕೆ ನಾಲ್ಕು ಗಂಟೆಯಷ್ಟು ಸೀಮಿತ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಉದ್ಯೋಗ ಮಾಡುತ್ತಿರುವ ಮುಖ್ಯ ಅಡುಗೆ ತಯಾರಕರು ಮತ್ತು ಅಡುಗೆ ತಯಾರಕರಿಗೆ ಕನಿಷ್ಠ ವೇತನ ಕಾಯಿದೆಯ ನಿಯಮಗಳು ಅನ್ವಯಿಸುವುದಿಲ್ಲ ಎಂದು ಪೀಠವು ತೀರ್ಪಿನಲ್ಲಿ ಹೇಳಿದೆ.

ಅಲ್ಲದೆ, ಕರ್ನಾಟಕ ಕನಿಷ್ಠ ವೇತನ ನಿಯಮಗಳು-1958ರ ಪ್ರಕಾರ ದಿನದ ಕೆಲಸದ ಅವಧಿ 9 ಗಂಟೆಯಾಗಿರಬೇಕು. ಈ ಮಾನದಂಡ ಮುಖ್ಯ ಅಡುಗೆ ತಯಾರಕರ ಮತ್ತು ಅಡುಗೆ ತಯಾರಕರ ವಿಚಾರದಲ್ಲಿ ಪಾಲನೆಯಾಗಿಲ್ಲ. ಹೀಗಾಗಿ, ಅವರಿಗೆ ಕನಿಷ್ಠ ವೇತನ ನೀಡಬೇಕು ಎಂಬ ವಿಚಾರವು ಕಾಯಿದೆಯ ನಿಯಮಗಳ ವ್ಯಾಪ್ತಿಗೆ ಬರುವುದಿಲ್ಲ.

ಕನಿಷ್ಠ ವೇತನ ಕಾಯಿದೆಯಡಿ ಸೂಕ್ತ ಕನಿಷ್ಠ ವೇತನ ವಿತರಿಸಲು ಸರ್ಕಾರಕ್ಕೆ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಪೀಠ ಹೇಳಿದೆ.
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 2018ರಲ್ಲಿ ಬಿಸಿಯೂಟ ಕಾರ್ಯಕರ್ತರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದ ಆವರಣದಲ್ಲಿ ಹಗಲು-ರಾತ್ರಿ ಧರಣಿ ಕೈಗೊಂಡಿದ್ದರು.

LEAVE A REPLY

Please enter your comment!
Please enter your name here

Hot Topics

ತ್ರಿಶೂಲ ವಿತರಣೆ ಮಾಡಿ ಗಲಭೆಗೆ ಕುಮ್ಮಕ್ಕು ನೀಡುವ ಭಜರಂಗದಳ ಮಾಡುತ್ತಿರುವುದು ಸರಿಯೇ..?

ಮಂಗಳೂರು: ಇಲ್ಲಿ ಗಲಭೆಗೆ ಕಾರಣವಾಗುತ್ತಿರುವುದು ಕೇವಲ ಈ ಒಂದು ಸಂಘಟನೆ ಮಾತ್ರವೇ...? ಭಜರಂಗದಳದವರು ತ್ರಿಶೂಲ ವಿತರಣೆ ಮಾಡಿ ಗಲಭೆಗೆ ಕುಮ್ಮಕ್ಕು ನೀಡಿಲ್ಲವೇ ಎಂದು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ ಅಶ್ರಫ್‌ ಪ್ರಶ್ನಿಸಿದ್ದಾರೆ.ಕೇಂದ್ರ ಗೃಹ...

ಅಪರಿಚಿತರಿಂದ ಕಾಲಿವುಡ್‌ ‘ಆ್ಯಕ್ಷನ್‌ ಸ್ಟಾರ್’ ವಿಶಾಲ್ ಮನೆಗೆ ಕಲ್ಲು ತೂರಾಟ

ಚೆನ್ನೈ: ಕಾಲಿವುಡ್‌ನ 'ಆ್ಯಕ್ಷನ್‌ ಸ್ಟಾರ್' ನಟ ವಿಶಾಲ್ ಅವರ ಮನೆಗೆ ಯಾರೋ ಅಪರಿಚಿತ ಗನ್‌ಮ್ಯಾನ್‌ಗಳು ನುಗ್ಗಿ ಆಕ್ರಮಣ ಮಾಡಿ ಕಲ್ಲುತೂರಾಟ ಮಾಡಿದ್ದಾರೆ. ಅದರ ಪರಿಣಾಮವಾಗಿ ಮನೆಯ ಕಿಟಕಿ ಗಾಜುಗಳು ಒಡೆದಿರುವ ಘಟನೆ ಚೆನ್ನೈಯಲ್ಲಿ...

ದ್ವೇಷದ ಕಿಚ್ಚು ಹಚ್ಚುವ ಸಂಘಟನೆಗಳ ವಿರುದ್ಧ ತಾರತಮ್ಯವಿಲ್ಲದೇ ಕ್ರಮ ಕೈಗೊಳ್ಳಿ: ಖಾದರ್‌ ಕಿಡಿ

ಮಂಗಳೂರು: ಸರ್ಕಾರ ಕೆಲವು ನೀತಿಗಳಲ್ಲಿ ತಾರತಮ್ಯ ಮಾಡುತ್ತದೆ. ಪರಿಹಾರ ಕೊಡುವುದರಲ್ಲಿ ಕೂಡಾ ಸರ್ಕಾರ ಭೇಧಭಾವ ಮಾಡಿದೆ. ಈ ರೀತಿಯ ತಾರತಮ್ಯ ಧೋರಣೆಯನ್ನು ನಾವು ಸಹಿಸುವುದಿಲ್ಲ. ಪಿಎಫ್‌ಐ ಬ್ಯಾನ್ ಮಾಡಿದಂತೆ ಯಾವ ಸಂಘಟನೆಗಳು ದೇಶದಲ್ಲಿ...